ಶೀರ್ಷಿಕೆ : ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ
ಲಿಂಕ್ : ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ
ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ
ಕೊಪ್ಪಳ ಸೆ. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಯಲಬುರ್ಗಾ ತಾಲೂಕಿನ ಶಿರೂರು ಗ್ರಾಮದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ ಅವರು ಮಾತನಾಡಿ, ಮಕ್ಕಳ ಮೇಲಿನ ಲೈಗಿಂಕ ದೌರ್ಜನ್ಯ ತಡೆ ಕಾಯ್ದೆ-2012ನ್ನು ಸರ್ಕಾರವು ಜಾರಿಗೊಳಿಸಿದ್ದು, ಈ ಕಾಯ್ದೆಯ ಮುಖ್ಯ ಉದ್ದೇಶವೆಂದರೆ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದಾಗಿದೆ. ಈ ಕಾಯ್ದೆಯಡಿಯಲ್ಲಿ 18 ವರ್ಷದೂಳಗಿನ ಹೆಣ್ಣು ಅಥವಾ ಗಂಡು ಮಕ್ಕಳಿಗೆ ಸಂಜ್ಞೆ, ಶಾಬ್ದಿಕವಾಗಿ ಕಿರುಕುಳನ್ನು ನೀಡುವುದು ಸಹ ದೌರ್ಜನ್ಯವೆಂದು ಪರಿಗಣಿಸಲಾಗುತ್ತದೆ. ಈ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾದಲ್ಲಿ ಅದು ವಿಚಾರಣಾ ಅರ್ಹ ಮತ್ತು ಜಾಮೀನುರಹಿತ ಪ್ರಕರಣ ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ 18 ವರ್ಷದೂಳಗಿನ ಬಾಲಕಿಯು ತಾನೇ ಸ್ವತಃ ಇಚ್ಛೇಪಟ್ಟು ಯುವಕನೊಂದಿಗೆ ದೈಹಿಕ ಸಂಪರ್ಕವನ್ನು ಹೊಂದಿದ್ದರೂ ಸಹ ಸದರಿ ಕಾಯ್ದೆಯಡಿ ಆ ಯುವಕನದೇ ಅಪರಾಧ ಎಂದು ಪರಿಗಣಿಸಲಾಗುತ್ತದೆ ಅಲ್ಲದೇ ಸದರಿ ಅಪರಾಧಕ್ಕೆ 7ರಿಂದ ಜೀವಾವಧಿ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಆದ್ದರಿಂದ ಯುವಕ/ಯುವತಿಯರು ಪ್ರೀತಿ ಪ್ರೇಮ ಎಂದು ತಮ್ಮ ಜೀವನವನ್ನು ಹಾಳುಮಾಡಿಕೊಳ್ಳದೇ ವಿದ್ಯಾಭ್ಯಾಸದ ಕಡೇ ಗಮನವನ್ನು ಹರಿಸಿ ಹಾಗೂ ಎಲ್ಲರೂ ಮಕ್ಕಳ ಹಕ್ಕುಗಳನ್ನು ಗೌರವಿಸಿ ಎಂದು ವಿನಂತಿಸಿದರು. ಬಾಲ ನ್ಯಾಯ (ಆರೈಕೆ ಮತ್ತು ಪೋಷಣೆ) ಕಾಯ್ದೆ-2000ರನ್ವಯ ಜಿಲ್ಲೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಲಾಗಿದೆ. ಅಲ್ಲದೇ ಪೊಲೀಸ್ ಠಾಣೆಯ ಠಾಣಾಧಿಕಾರಿಗಳನ್ನು ಮಕ್ಕಳ ಕಲ್ಯಾಣಾಧಿಕಾರಿಗಳೆಂದು ನೇಮಿಸಿದ್ದು, ಆರೈಕೆ ಮತ್ತು ಪೋಷಣೆ ಅವಶ್ಯಕತೆಯಿರುವ ಯಾವುದೇ ಮಗುವನ್ನು ಯಾರೇ ವ್ಯಕ್ತಿಗಳು ಆರೈಕೆ ಮತ್ತು ಪೋಷಣೆಗಾಗಿ ಮಕ್ಕಳನ್ನು ಹಾಜರಪಡಿಸಬಹುದಾಗಿದೆ. ನಂತರ ಮಕ್ಕಳಿಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಸೂಕ್ತ ಪುರ್ನವಸತಿಯನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರ ಅವರು ಮಾತನಾಡಿ ಭಾರತ ದೇಶವು ಸಹ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿಹಾಕಿದ್ದು ದೇಶದ ಎಲ್ಲಾ ಮಕ್ಕಳಿಗೂ ಅವರ ಹಕ್ಕುಗಳನ್ನು ಅವರಿಗೆ ಒದಗಿಸಲು ಕಟಿಬದ್ದವಾಗಿದೆ. ಮಕ್ಕಳಿಗೆ ಬದಕುವಹಕ್ಕು, ಅಭಿವೃದ್ಧಿ ಮತ್ತು ವಿಕಾಸಹೊಂದುವ ಹಕ್ಕು, ಶೋಷಣೆಯ ವಿರುದ್ಧ ಸಂರಕ್ಷಣೆ ಹಕ್ಕು ಮತ್ತು ಭಾಗವಹಿಸುವ ಹಕ್ಕುಗಳನ್ನು ನೀಡಿರುವುದಷ್ಟೇ ಅಲ್ಲದೇ ಈ ಹಕ್ಕುಗಳನ್ನು ಅವರಿಗೆ ತಲುಪಿಸಲು ಹಲವಾರು ಕಾನೂನುಗಳನ್ನು ಮತ್ತು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸರ್ಕಾರವು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಜಿಲ್ಲೆಯಲ್ಲಿ ಗುರುತಿಸಿದ ತೀವ್ರ ಸಂಕಷ್ಠದಲ್ಲಿರುವ ಎಚ್.ಐ.ವಿ ಭಾದಿತ ಹಾಗೂ ಸೋಂಕಿತ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಗಾಗಿ “ವಿಶೇಷ ಪಾಲನಾ ಯೋಜನೆಯಡಿಯಲ್ಲಿ” ಪ್ರತಿ ಮಾಹೆ ರೂ.650ರಂತೆ ಮತ್ತು ಮಗು ಶಾಲೆಗೆ ತೆರಳುತ್ತಿದ್ದಲ್ಲಿ ಶೈಕ್ಷಣಿಕ ವೆಚ್ಚವಾಗಿ ರೂ.500 ವಾರ್ಷಿಕವಾಗಿ ಅನುದಾವನ್ನು ಬಿಡುಗಡೆ ಮಾಡಲಾಗುತ್ತದೆ.
ಅಲ್ಲದೇ ತೀವ್ರ ಸಂಕಷ್ಠದಲ್ಲಿರುವ ಅನಾಥ, ಏಕಪೋಷಕ ಮಕ್ಕಳ ಆರೈಕೆ ಮತ್ತು ಪೋಷಣೆಗಾಗಿ ಹಾಗೂ ಶೈಕ್ಷಣಿಕ ವೆಚ್ಚಕ್ಕಾಗಿ ಪ್ರಾಯೋಜಕತ್ವ ಯೋಜನೆಯನ್ನು ಜಾರಿಗೊಳಿಸಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿದರು.ಮಕ್ಕಳ ಸಹಾಯವಾಣಿಯ ಮಕ್ಕಳ ರಕ್ಷಣೆಗಾಗಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ “ಮಕ್ಕಳ ಸಹಾಯವಾಣಿ 1098”ಯನ್ನು ಆರಂಭಿಸಿದ್ದು ಸಂಕಷ್ಠದಲ್ಲಿರುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿಗೆ ಕರೆಮಾಡಿ, ನೀವು ಕರೆ ಮಾಡಿದ ಸದರಿ ಮಗುವನ್ನು ರಕ್ಷಿಸಿ ಅಗತ್ಯ ಪುನರವಸತಿಯನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರ ಅವರು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರೂರು ಗ್ರಾಮ ಪಂಚಾಯತ ಸದಸ್ಯೆ ನಿರ್ಮಲಾ ಅವರು ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕೆ.ಆರ್.ಕರಿಗಾರ, ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ರಾಜೇಶ್ವರಿ, ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಆಪ್ತಸಮಾಲೋಚಕರಾದ ಶಿಲ್ಪಾ, ಚಂದ್ರು ರೇವಡಿ, ರವಿ ಬಡಿಗೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ
ಎಲ್ಲಾ ಲೇಖನಗಳು ಆಗಿದೆ ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ ಲಿಂಕ್ ವಿಳಾಸ https://dekalungi.blogspot.com/2017/09/blog-post_50.html
0 Response to "ಮಕ್ಕಳ ಹಕ್ಕುಗಳ ಕುರಿತು ಶಿರೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಯಶಸ್ವಿ"
ಕಾಮೆಂಟ್ ಪೋಸ್ಟ್ ಮಾಡಿ