ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ

ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ
ಲಿಂಕ್ : ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ

ಓದಿ


ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ

ಕೊಪ್ಪಳ ಸೆ. 17 (ಕರ್ನಾಟಕ ವಾರ್ತೆ): ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರದಂದು ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

     ನಂತರ ಸಾರ್ವಜನಿಕರನ್ನುದ್ದೇಶಿಸಿ ಸಂದೇಶ ನೀಡಿದ ಅವರು, ದೇಶದ ಎಲ್ಲ ಭಾಗಗಳಲ್ಲಿ ಆಗಸ್ಟ್ 15 ರಂದು ಮಾತ್ರ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರೆ, ಕೊಪ್ಪಳ ಜಿಲ್ಲೆಯೂ ಸೇರಿದಂತೆ ಹೈದ್ರಾಬಾದ್-ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಾತ್ರ ಆಗಸ್ಟ್ 15 ಮತ್ತು ಸೆಪ್ಟಂಬರ್ 17 ರಂದು ಹೀಗೆ ಎರಡೆರಡು ದಿನಗಳಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.  ಹೈದರಾಬಾದ್ ನಿಜಾಮರ ಆಳ್ವಿಕೆಯ ಭಾಗವಾಗಿದ್ದ ಕೊಪ್ಪಳ, ರಾಯಚೂರು, ಗುಲಬರ್ಗಾ, ಯಾದಗಿರಿ, ಬೀದರ್ ಹಾಗೂ ಇತರ ಪ್ರದೇಶಗಳು ಸ್ವಾತಂತ್ರ್ಯಕ್ಕಾಗಿ ಒಂದು ವರ್ಷ ಹೆಚ್ಚು ಕಾಯಬೇಕಾಯಿತು. ಬ್ರಿಟೀಷರ ಕುಮ್ಮಕ್ಕಿನಿಂದ ಹೈದರಾಬಾದ್ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು, ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿದರು.  ಸ್ವತಂತ್ರ ಭಾರತದಲ್ಲಿ ವಿಲೀನಗೊಳ್ಳದೆ ತಾನು ಪ್ರತ್ಯೇಕವಾಗಿ ಉಳಿದು, ತಮ್ಮದೇ ಒಂದು ದೇಶವನ್ನಾಗಿ ಆಳ್ವಿಕೆ ನಡೆಸುವ ಹಠಮಾರಿ ಧೋರಣೆಯಲ್ಲಿದ್ದರು ಹೈದ್ರಾಬಾದ ನಿಜಾಮರು.  ಭಾರತದ ಆಗಿನ ಕೇಂದ್ರ ಗೃಹ ಸಚಿವರಾಗಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರು, ದಿಟ್ಟತನದಿಂದ ಕೈಗೊಂಡ ಸೈನಿಕ ಕಾರ್ಯಾಚರಣೆಯಲ್ಲಿ, ನಿಜಾಮರು ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ ಹೈದ್ರಾಬಾದ್-ಕರ್ನಾಟಕ 1948 ಸೆಪ್ಟಂಬರ್ 17 ರಂದು ಸ್ವಾತಂತ್ರ್ಯ ಪಡೆಯಿತು. ಈ ಪ್ರದೇಶ  ಮೊಗಲಾಯಿ ನಿಜಾಮಶಾಹಿ ಹಿಡಿತದಿಂದ ಪಾರಾಗಲು ಒಂದು ವರ್ಷ 1 ತಿಂಗಳು ಹೆಚ್ಚು ಕಾಯಬೇಕಾಯಿತು.   ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜನತೆ ದೇಶಕ್ಕಾಗಿ ಹಾಗೂ ಮೊಗಲಾಯಿ ಗಳ ವಿರುದ್ಧ ಹೀಗೆ ಎರಡೆರಡು ಬಾರಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು, ಈ ಭಾಗದ ಜನರ ದೇಶಪ್ರೇಮ ಮತ್ತು ಕೆಚ್ಚೆದೆಯನ್ನು ಬಿಂಬಿಸುತ್ತದೆ.  ಸ್ವಾತಂತ್ರ್ಯ ಹೋರಾಟದ ರೋಚಕ ಇತಿಹಾಸ ಹಾಗೂ ಅದರ ಮಹತ್ವವನ್ನು ನಾವೆಲ್ಲರೂ ಅರಿತು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿ, ಗೌರವಿಸಬೇಕಾದ್ದು, ನಮ್ಮೆಲ್ಲರ ಕರ್ತವ್ಯವಾಗಿದೆ.   

 
ನಮ್ಮ ಸರ್ಕಾರ ಯಶಸ್ವಿ ನಾಲ್ಕು ವರ್ಷಗಳನ್ನು ಪೂರೈಸಿದ್ದು,  ಐದನೆ ವರ್ಷದೆಡೆಗೆ ಭರವಸೆಯ ದಾಪುಗಾಲನ್ನಿಟ್ಟಿದೆ.  ನಮ್ಮ ಸರ್ಕಾರ ಜನಪರ ನೀತಿ, ಸಾಮಾಜಿಕ ನ್ಯಾಯ ಮತ್ತು ರೈತರ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.   ಪ್ರಸಕ್ತ ವರ್ಷದ ಮುಂಗಾರು ಮಳೆ ಆರಂಭದಲ್ಲಿ ಕೊಂಚ ಆತಂಕ ತರುವಂತೆ ಮಾಡಿತ್ತು.  ಆದರೆ, ವರುಣನ ಕೃಪೆಯಿಂದಾಗಿ ಕೊಪ್ಪಳ ಜಿಲ್ಲೆಯೂ ಸೇರಿದಂತೆ ರಾಜ್ಯದೆಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ರೈತರಲ್ಲಿ ಹರ್ಷವನ್ನು ಮೂಡಿಸಿದೆ.   ಮುಂಗಾರು ವೈಫಲ್ಯದಿಂದ ತುಂಗಭದ್ರಾ ಜಲಾಶಯದಲ್ಲಿ ಈ ವರ್ಷ ನೀರಿನ ಸಂಗ್ರಹದಲ್ಲಿ ಕೊರತೆ ಕಂಡುಬಂದ ಕಾರಣದಿಂದ, ಕಾಲುವೆಗಳಿಗೆ ನೀರು ಹರಿಸುವುದು ತಡವಾಯಿತು.  ಇದೀಗ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಉತ್ತಮ ಒಳಹರಿವು ಕಂಡುಬರುತ್ತಿದ್ದು, ಹೆಚ್ಚು ನೀರು ಸಂಗ್ರಹವಾಗುವ ಆಶಾಭಾವನೆ ಇದೆ.  ಕೊಪ್ಪಳ ಜಿಲ್ಲೆಯಲ್ಲಿ ಕುಕನೂರು, ಕನಕಗಿರಿ ಮತ್ತು ಕಾರಟಗಿ ಸೇರಿದಂತೆ ಒಟ್ಟು 03 ಹೊಸ ತಾಲೂಕುಗಳು ರಚನೆಯಾಗಲಿದ್ದು, ನೂತನ ತಾಲೂಕುಗಳು 2018 ರ ಜನವರಿ 01 ರಿಂದ ಅಸ್ತಿತ್ವಕ್ಕೆ ಬರಲಿವೆ.  ಹೊಸ ತಾಲೂಕುಗಳ ರಚನೆಗಾಗಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪ್ರಾರಂಭಿಸಲು ಸರ್ಕಾರ ಈಗಾಗಲೆ ಕ್ರಮ ಕೈಗೊಂಡಿದೆ.  ಜಿಲ್ಲೆಯಲ್ಲಿ ಶಿಶುಮರಣ ಮತ್ತು ತಾಯಿ ಮರಣ ತಡೆಗಟ್ಟಲು ಅಕ್ಟೋಬರ್ 02 ರಿಂದ ಮಾತೃಪೂರ್ಣ ಯೋಜನೆ ಜಾರಿಗೊಳ್ಳಲಿದೆ.  ಇದೇ ಸೆ. 22 ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ಅಂದು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.

     ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗಿತು.  ಅಲ್ಲದೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಸ್ವಾತಂತ್ರ್ಯ ಯೋಧರಿಗೆ ಸನ್ಮಾನಿಸಲಾಯಿತು.  

     ಸಮಾರಂಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ

ಎಲ್ಲಾ ಲೇಖನಗಳು ಆಗಿದೆ ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ ಲಿಂಕ್ ವಿಳಾಸ https://dekalungi.blogspot.com/2017/09/blog-post_54.html

Subscribe to receive free email updates:

0 Response to "ಹೈ-ಕ ವಿಮೋಚನಾ ದಿನಾಚರಣೆ :ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಧ್ವಜಾರೋಹಣ"

ಕಾಮೆಂಟ್‌‌ ಪೋಸ್ಟ್‌ ಮಾಡಿ