ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ

ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ
ಲಿಂಕ್ : ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ

ಓದಿ


ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ


ಕೊಪ್ಪಳ ಸೆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸರಕಾರಿ ಬಾಲಕೀಯರ ವಸತಿನಿಲಯದಲ್ಲಿ ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು.  
 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ ಅವರು ಮಾತನಾಡಿ, ಭಾರತ ದೇಶವು ಸಹ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿಹಾಕಿದ್ದು, ದೇಶದ ಎಲ್ಲಾ ಮಕ್ಕಳಿಗೂ ಅವರ ಹಕ್ಕುಗಳನ್ನು ಅವರಿಗೆ ಒದಗಿಸಲು ಕಟಿಬದ್ದವಾಗಿದೆ.  ಮಕ್ಕಳಿಗೆ ಬದುಕುವ ಹಕ್ಕು, ಅಭಿವೃದ್ಧಿ ಮತ್ತು ವಿಕಾಸ ಹೊಂದುವ ಹಕ್ಕು, ಶೋಷಣೆಯ ವಿರುದ್ಧ ಸಂರಕ್ಷಣೆ ಹಕ್ಕು ಮತ್ತು ಭಾಗವಹಿಸುವ ಹಕ್ಕುಗಳನ್ನು ನೀಡಿರುವುದಷ್ಟೇ ಅಲ್ಲದೇ ಈ ಹಕ್ಕುಗಳನ್ನು ಅವರಿಗೆ ತಲುಪಿಸಲು ಹಲವಾರು ಕಾನೂನುಗಳನ್ನು  ಮತ್ತು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.  ಬಾಲ ನ್ಯಾಯ (ಆರೈಕೆ ಮತ್ತು ಪೋಷಣೆ) ಕಾಯ್ದೆ-2000ರನ್ವಯ ಜಿಲ್ಲೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ  ಸ್ಥಾಪಿಸಲಾಗಿದೆ.  ಅಲ್ಲದೇ ಪೊಲೀಸ್ ಠಾಣೆಯ ಠಾಣಾಧಿಕಾರಿಗಳನ್ನು ಮಕ್ಕಳ ಕಲ್ಯಾಣಾಧಿಕಾರಿಗಳೆಂದು ನೇಮಿಸಿದ್ದು, ಆರೈಕೆ ಮತ್ತು ಪೋಷಣೆ ಅವಶ್ಯಕತೆಯಿರುವ ಯಾವುದೇ ಮಗುವನ್ನು ಯಾರೇ ವ್ಯಕ್ತಿಗಳು ಆರೈಕೆ ಮತ್ತು ಪೋಷಣೆಗಾಗಿ ಮಕ್ಕಳನ್ನು ಹಾಜರುಪಡಿಸಬಹುದಾಗಿದೆ. ನಂತರ ಮಕ್ಕಳಿಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಸೂಕ್ತ ಪುರ್ನವಸತಿಯನ್ನು ಕಲ್ಪಿಸಲಾಗುತ್ತದೆ.   ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2012 (ಪಿ.ಓ.ಸಿ.ಎಸ್.ಓ-2012) ಪ್ರಕಾರ ಯಾವುದೇ 18 ವರ್ಷದೊಳಗಿನವರ ಮೇಲೆ ದೌರ್ಜನ್ಯಗಳಂತಹ ಪ್ರಕರಣಗಳು ಕಂಡುಬಂದರೆ ಕನಿಷ್ಟ 3 ವರ್ಷದಿಂದ ಜೀವಾವಧಿವರೆಗಿನ ಶಿಕ್ಷೆಯನ್ನು ಸಹ ಈ ಕಾನೂನಿನಡಿ ವಿಧಿಸಬಹುದಾಗಿದೆ.  ಆದ ಕಾರಣ ಎಲ್ಲರೂ ಜಾಗೃತರಾಗಿರಲು ಕರೆ ನೀಡಿದರು.
ಮಕ್ಕಳ ಪ್ರಶ್ನೆಗಳು : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಗಳು ತಡೆಯಲು ಏನು  ಮಾಡಬೇಕು? ಎಂದು ಮಕ್ಕಳು ಪ್ರಶ್ನೆ ಕೇಳಿದರು.  ಇದಕ್ಕೆ ಸಂಪನ್ಮೂಲ ವ್ಯಕ್ತಿಗಳು ಉತ್ತರಿಸಿ, ಮಕ್ಕಳು ಯಾವಾಗಲೂ  ಜನನಿಬಿಡ ಪ್ರದೇಶದಲ್ಲಿ ಸಂಚರಿಸಬೇಕು, ಅಪರಿಚಿತ ಸ್ಥಳಕ್ಕೆ ಮತ್ತು ಅಪರಿಚಿತರು ಕರೆದಾಗ ತೆರಳಬಾರದು ಎಂದು ತಿಳಸಿದರು. ಹೀಗೆ ಮಕ್ಕಳ ಮೇಲಿನ ಹಲವಾರು ರೀತಿಯಲ್ಲಿ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳ ಕುರಿತು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡರು.
ಕಾರ್ಯಕ್ರಮದಲ್ಲಿ ಯಲಬುರ್ಗಾ ಆರೋಗ್ಯ ಇಲಾಖೆ ಮಂಜುಳಾ ರಾಟಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಜಯಶ್ರೀ ಪಾಟೀಲ, ಮಹಿಳಾ ಸಾಂತ್ವನ ಕೇಂದ್ರದ ವಿಜಯಲಕ್ಷ್ಮೀ, ಸಹ ಶೀಕ್ಷಕರಾದ ಜೆ.ವೈ.ಗದ್ಯಾಳ,


ಹೀಗಾಗಿ ಲೇಖನಗಳು ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/09/blog-post_589.html

Subscribe to receive free email updates:

0 Response to "ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ