ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ

ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ
ಲಿಂಕ್ : ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ

ಓದಿ


ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ


ಕೊಪ್ಪಳ ಸೆ. 01 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಹಾಗೂ ವಿಶ್ವಕರ್ಮ ಅವರ ಜಯಂತ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಅವರು ಹೇಳಿದರು.
     ಬ್ರಹ್ಮಶ್ರೀ ನಾರಾಯಣ ಗುರುಗಳು ಹಾಗೂ ವಿಶ್ವಕರ್ಮ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ :
*********** ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರದ ಸೂಚನೆಯಂತೆ ಸೆ. 06 ರಂದು ಆಚರಿಸಬೇಕಾಗಿದೆ.  ಆದರೆ, ಸಮಾಜದ ಮುಖಂಡರ ಮನವಿಯ ಮೇರೆಗೆ ಸೆ. 14 ಅಥವಾ 15 ರಂದು ಆಚರಿಸಲು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.  ಕಾರ್ಯಕ್ರಮದ ಅಂಗವಾಗಿ ಅಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ 09 ಗಂಟೆಗೆ ನಗರದ ಗವಿಮಠದಿಂದ ಪ್ರಾರಂಭವಾಗಲಿದ್ದು, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಮೆರವಣಿಗೆ ನೆರವೇರಲಿದೆ.  ವೇದಿಕೆ ಸಮಾರಂಭ ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜರುಗಲಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು.  ಮೆರವಣಿಗೆ ಸಾಗಿ ಬರುವ ದಾರಿಯನ್ನು ಸ್ವಚ್ಛಗೊಳಿಸಬೇಕು, ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು, ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
     ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರಾದ ರಾಘವೇಂದ್ರ ಹುಯಿಲಗೋಳ, ಈರಣ್ಣ ಹುಲಿಗಿ, ರವಿ ಗಿಣಿಗೇರಿ, ವೆಂಕಟೇಶ, ಶಿವಾನಂದ ಹೊದ್ಲೂರ, ಮಂಜುನಾಥ ಗೊಂಡಬಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಶ್ವಕರ್ಮರ ಜಯಂತ್ಯೋತ್ಸವ :
************ ವಿಶ್ವಕರ್ಮ ಅವರ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ನಿರ್ದೇಶನದಂತೆ ಸೆ. 17 ರಂದು ಏರ್ಪಡಿಸಬೇಕಿದೆ.  ಆದರೆ ಅಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭ ಜರುಗುವುದರಿಂದ, ಸಮಾಜದ ಮುಖಂಡರ ಮನವಿಯಂತೆ ಸೆ. 17 ರ ಬದಲಿಗೆ ಸೆ. 18 ರಂದು ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಲಾಗುವುದು.  ಕಾರ್ಯಕ್ರಮದ ಅಂಗವಾಗಿ ಸೆ. 18 ರಂದು ಬೆಳಿಗ್ಗೆ 09 ಗಂಟೆಗೆ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆ ನಗರದ ಸಿರಸಪ್ಪಯ್ಯನ ಮಠ ದಿಂದ ಪ್ರಾರಂಭಗೊಂಡು, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ನೆರವೇರಲಿದೆ.  ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 11-30 ಗಂಟೆಗೆ ಸಾಹಿತ್ಯ ಭವನದಲ್ಲಿ ಜರುಗಲಿದೆ.  ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅವರ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು.  ಮೆರವಣಿಗೆ ಸಾಗಿ ಬರುವ ದಾರಿಯನ್ನು ಸ್ವಚ್ಛಗೊಳಿಸಬೇಕು, ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು, ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
     ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರುದ್ರಪ್ಪ ಬಡಿಗೇರ, ಶಿವಾನಂದ ಹೊದ್ಲೂರ, ಮಂಜುನಾಥ ಗೊಂಡಬಾರ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ

ಎಲ್ಲಾ ಲೇಖನಗಳು ಆಗಿದೆ ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ ಲಿಂಕ್ ವಿಳಾಸ https://dekalungi.blogspot.com/2017/09/blog-post_66.html

Subscribe to receive free email updates:

0 Response to "ವಿಜೃಂಭಣೆಯಿಂದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ವಿಶ್ವಕರ್ಮ ಜಯಂತ್ಯೋತ್ಸವಗಳ ಆಚರಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ