ಶೀರ್ಷಿಕೆ : ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಸೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 3.50 ಲಕ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷವಾಗಿರಬೇಕು ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪೂರ್ಣಗೊಳಿಸಿ 2 ವರ್ಷವಾಗಿರಬೇಕು. ಅಭ್ಯರ್ಥಿಗಳು ಸಲ್ಲಿಸುವ ಮಾಹೆಯಾನ ದಿನಚರಿಯನ್ನು ಪರಿಶೀಲಿಸಿ ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು. ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲಿ ಬಿಡುವಂತಿಲ್ಲ, ಈ ಬಗ್ಗೆ ಒಂದು ಮುಚ್ಚಳಿಗೆ ಪತ್ರ ನೀಡಬೇಕು. ಒಂದು ವೇಳೆ ಸರ್ಕಾರಿ ಉದ್ಯೋಗ ದೊರಕಿದಲ್ಲಿ ಅಥವಾ ನ್ಯಾಯಾಧಿಕಾರಿಯಾಗಿ ನೇಮಕಾತಿ ಹೋಂದಿದಲ್ಲಿ ಜಿಲ್ಲಾ ಸಮಿತಿಯ ಗಮನಕ್ಕೆ ತಂದು ತರಬೇತಿಯನ್ನು ಬಿಡಬಹುದು. ವಿಶೇಷ ಸಂದರ್ಭದಲ್ಲಿ ತರಬೇತಿ ಬಿಡಬೇಕಾದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಕಾನೂನು ತರಬೇತಿಗೆ ಎರಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಇದರಲ್ಲಿ ಒಂದು ಮುಸ್ಲಿಂ ಹಾಗೂ ಇನ್ನೊರ್ವ ಅಭ್ಯರ್ಥಿಯನ್ನು ಇತರೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಅಥವಾ ಆಯಾ ತಾಲೂಕ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯದಿಂದ ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. 30 ರೊಳಗಾಗಿ ಸಲ್ಲಿಸಬೇಕು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_68.html
0 Response to "ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ