ಶೀರ್ಷಿಕೆ : ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ
ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಸೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಗಂಗಾವತಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ನಲ್ಮ್ ಯೋಜನೆಯ ಇ.ಎಸ್.ಟಿ.ಪಿ ಉಪಯೋಜನೆಯಡಿ ಭಾರಿ ವಾಹನ ಚಾಲನಾ ತರಬೇತಿ ಹಾಗೂ ಲಘು ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಲ್ಮ್ ಯೋಜನೆಯ ಇ.ಎಸ್.ಟಿ.ಪಿ ಉಪಯೋಜನೆಯ ಅಡಿಯಲ್ಲಿ ತರಬೇತಿ ವಿಷಯಗಳನ್ನು ಬದಲಾವಣೆ ಮಾಡಿ ಸ್ಥಳೀಯ ಬೇಡಿಕೆಗಳನುಸಾರ ಮಂಜೂರಾತಿ ನೀಡಲಾಗಿರುತ್ತದೆ. ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿರುವ ಬಿ.ಪಿ.ಎಲ್ ಕುಟುಂಬಗಳ ಸದಸ್ಯರಿಗೆ ಭಾರಿ ವಾಹನ ಚಾಲನಾ ಹಾಗೂ ಲಘು ವಾಹನ ಚಾಲನಾ ತರಬೇತಿ ನೀಡಲಾಗುವುದು.
ಅರ್ಜಿ ನಮೂನೆಯನ್ನು ನಗರಸಭೆ ಕಾರ್ಯಾಲಯದ ಡೇ-ನಲ್ಮ್ ವಿಭಾಗದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಭಾವಚಿತ್ರವಿರುವ ಕಾರ್ಡ್, ಬಿ.ಬಿ.ಎಲ್ ರೇಶನ್ ಕಾರ್ಡ್, ಆಧಾರ ಕಾರ್ಡ್ ಹಾಗೂ ಭಾರಿ ವಾಹನ ಚಾಲನಾ ತರಬೇತಿಗೆ ಲಘುವಾಹನ ಚಾಲನಾ ಪರವಾನಿಗೆ (ಒಂದು ವರ್ಷ ಪೂರ್ಣಗೊಂಡಿರುವ), ಇತ್ಯಾದಿ ದಾಖಲೆಗಳನ್ನು ಕಡ್ಡಾಯವಾಗಿ ಸ್ವಯಂ ದೃಢೀಕರಿಸಿ ಲಗತ್ತಿಸಿ, ಸೆ. 28 ರ ಸಾಯಂಕಾಲ 04-00 ಗಂಟೆಯೊಳಗಾಗಿ ಸಲ್ಲಿಸಬೇಕು. ತರಬೇತಿಯನ್ನು ಗಂಗಾವತಿ ನಗರದಲ್ಲಿಯೇ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ನಲ್ಮ್ ವಿಭಾಗದ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_76.html
0 Response to "ಗಂಗಾವತಿ: ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ