ಶೀರ್ಷಿಕೆ : news and photo 01-09-2017
ಲಿಂಕ್ : news and photo 01-09-2017
news and photo 01-09-2017
ಸೆಪ್ಟೆಂಬರ್ ಅಂತ್ಯದೊಳಗಾಗಿ
ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳ ವರದಿ ಸಲ್ಲಿಸಲು ಸೂಚನೆ
ಕಲಬುರಗಿ,ಸೆ.01(ಕ.ವಾ.)-ಜಿಲ್ಲೆಯಲ್ಲಿ 2013ರಿಂದ ಹಾಗೂ ಆಚೆಗೆ ಮ್ಯಾನುವೆಲ್ ಸ್ಕ್ಯಾವೆಂಜರ್ ಎಂದು ಕೆಲಸ ನಿರ್ವಸಿದವರನ್ನು ಗುರುತಿಸಿ ಇದೇ ಸೆಪ್ಟೆಂಬರ್ ಅಂತ್ಯದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ತೆಲಂಗಾಣಾ ಮತ್ತು ಕರ್ನಾಟಕ ರಾಜ್ಯದ ಸದಸ್ಯ ಜಗದೀಶ ಹಿರೇಮನಿ ಅವರು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜರ್, ಸಫಾಯಿ ಕರ್ಮಚಾರಿಗಳ ಸ್ಥಿತಿ-ಗತಿಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರವು 2022ರೊಳಗೆ ದೇಶದಲ್ಲಿರುವ ಮ್ಯಾನುವೆಲ್ ಸ್ಕ್ಯಾವೆಂಜರ್ ಮತ್ತು ಸಫಾಯಿ ಕರ್ಮಚಾರಿಗಳಿಗೆ ಅವಶ್ಯಕವಿರುವ ಸೌಲಭ್ಯಗಳನ್ನು ಒದಗಿಸಿ ಅವರನ್ನು ಮುಖ್ಯವಾಹಿನಿಗೆ ತರಲು ಯೋಜನೆ ರೂಪಿಸಿದೆ ಎಂದರು.
ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳಾಗಿ ಕೆಲಸ ನಿರ್ವಹಿಸಿದವರನ್ನು ಗುರುತಿಸಬೇಕು. ಅವರಿಗೆ ಕೇಂದ್ರ ಸರ್ಕಾರದ 40 ಸಾವಿರ ರೂ. ಮತ್ತು ರಾಜ್ಯ ಸರ್ಕಾರದ 1 ಲಕ್ಷ ರೂ. ಗಳನ್ನು ತಕ್ಷಣ ಸಹಾಯಧನವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪೌರ ಕಾರ್ಮಿಕರ ಅವಲಂಭಿತರಿಗೆ 25 ಲಕ್ಷ ರೂ.ಗಳ ವರೆಗೆ ಸಾಲ ಸೌಲಭ್ಯ ಒದಗಿಸಿ ಸ್ವಂತ ಉದ್ಯೋಗ ಕೈಗೊಳ್ಳಲು ಸಹಾಯ ನೀಡಲಾಗುವುದು. ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆಗೆ ಸರ್ಕಾರ ಹಲವಾರು ಕಾನೂನುಗಳನ್ನು ರೂಪಿಸಿದೆ. ಮ್ಯಾನುವೆಲ್ ಸ್ಕ್ಯಾವೆಂಜಿಂಗ್‍ಗೆ ಪ್ರೋತ್ಸಾಹ ನೀಡುವವರ ವಿರುದ್ದ ನಿರ್ದಾಕ್ಷೀಣ್ಯ ಕ್ರಮ ಜರುಗಿಸುವಂತೆ ತಿಳಿಸಿದರು.
ಮ್ಯಾನುವೆಲ್ ಸ್ಕ್ಯಾವೆಂಜರ್ ಮತ್ತು ಸಫಾಯಿ ಕರ್ಮಚಾರಿಗಳ ಮಕ್ಕಳು ತಮ್ಮ ಪೂರ್ವಜರಂತೆ ಮಲ ಹೊರುವ ಮತ್ತು ಗುಂಡಿಯಿಂದ ಮಲ ತೆಗೆಯುವ ಪದ್ದತಿಗೆ ಮರಳಬಾರದೆಂಬ ಉದ್ದೇಶದಿಂದ ಸಫಾಯಿ ಕರ್ಮಚಾರಿ ಹಣಕಾಸು ಮತ್ತು ಅಭಿವೃದ್ಧಿ ನಿಗಮದಿಂದ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಏರ್ಪಡಿಸಿ ತರಬೇತಿ ನೀಡಲು ಅನುದಾನ ನೀಡಲಾಗಿದೆ. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಗಳನ್ನು ದೊರಕಿಸಿ ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತಿಗಳಿಗೆ ಬೇಕಾಗುವ ಯಂತ್ರೋಪಕರಣಗಳನ್ನು ಸಫಾಯಿ ಕರ್ಮಚಾರಿಗಳ ಮೂಲಕ ಖರೀದಿಸಿ ಆ ಉಪಕರಣಗಳನ್ನು ಬಳಸಬೇಕು. ಇದರಿಂದ ಅವರಿಗೆ ಉದ್ಯೋಗ ನೀಡಿದಂತಾಗುವುದು ಹಾಗೂ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಂತಾಗುತ್ತದೆ ಎಂದು ತಿಳಿಸಿದರು.
ಸಫಾಯಿ ಕರ್ಮಚಾರಿಗಳ ಮಕ್ಕಳು ವಿದ್ಯಾಭಾಸ ಮಾಡುತ್ತಿದ್ದರೆ ಅವರಿಗೆ ರಾಜ್ಯ ಸರ್ಕಾರ ನೀಡುವ ಸವಲತ್ತುಗಳ ಜೊತೆಗೆ ಕೇಂದ್ರ ಸರ್ಕಾರ ವಿಶೇಷ ಸ್ಕಾಲರ್‍ಶಿಪ್ ನೀಡುವುದು. ಸಫಾಯಿ ಕರ್ಮಚಾರಿಗಳ ಆರೋಗ್ಯದ ಹೆಚ್ಚಿನ ಚಿಕಿತ್ಸೆಗೆ 4 ಲಕ್ಷ ರೂ.ಗಳ ವರೆಗೆ ಸೌಲಭ್ಯ ನೀಡಲು ಅವಕಾಶವಿದ್ದು, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಲ್ಲಿಸಬೇಕು. ಚಿಕಿತ್ಸೆಗೆ ಖಾರ್ಚಾಗುವ ಅನುದಾನವನ್ನು ನೇರವಾಗಿ ಆಯಾ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಲಾಗುವುದು ಎಂದರು.
ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ್ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮಹಾನಗರ ಪಾಲಿಕೆಯ ಎಲ್ಲ ಪೌರ ಕಾರ್ಮಿಕರಿಗೆ ಮೂರು ಹಂತದ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಹೆಪಟೈಟಿಸ್ ಬಿ., ಮಾಸ್ಟರ್ ಚೆಕಪ್ ಮಾಡಿಸಲು 10 ಲಕ್ಷ ರೂ.ಗಳ ಅನುದಾನ ಕಾಯ್ದಿರಿಸಲಾಗಿದೆ. 1024 ಪೌರ ಕಾರ್ಮಿಕರಿಗೆ ಪ್ರಧಾನಮಂತ್ರಿ ಜೀವನ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಡಿ.ಯು.ಡಿ.ಸಿ. ಯೋಜನಾಧಿಕಾರಿ ಸಾಜಿದ್ ಅಹ್ಮದ್ ಮುಲ್ಲಾ, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು, ಪೌರ ಕಾರ್ಮಿಕರ ಮುಖಂಡರು ಪಾಲ್ಗೊಂಡಿದ್ದರು.
15 ಕೋಟಿ ರೂ. ವೆಚ್ಚದಲ್ಲಿ ಎರಡು ಅಂತಸ್ತಿನ ಬಸ್‍ನಿಲ್ದಾಣ ನಿರ್ಮಾಣ
ಕಲಬುರಗಿ,ಸೆ.01.(ಕ.ವಾ.)-ನಗರದ ಸುಪರ್ ಮಾರ್ಕೆಟ್ ಪ್ರದೇಶದಲ್ಲಿರುವ ಸಿಟಿ ಬಸ್ ನಿಲ್ದಾಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಎರಡು ಅಂತಸ್ತಿನ ನೂತನ ಬಸ್‍ನಿಲ್ದಾಣ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಶುಕ್ರವಾರ ನೂತನವಾಗಿ ನಿರ್ಮಿಸಲಾಗುವ ಬಸ್‍ನಿಲ್ದಾಣ ಸ್ಥಳದ ಪರಿಶೀಲನೆ ಮಾಡಿದ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ 10 ಕೋಟಿ ರೂ.ಗಳು ಹಾಗೂ ಹೆಚ್.ಕೆ.ಆರ್.ಡಿ.ಬಿ.ಯಿಂದ 5 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಆದಷ್ಟು ಬೇಗ ನೂತನ ಬಸ್‍ನಿಲ್ದಾಣ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು.
ಸುಪರ್ ಮಾರ್ಕೆಟಿನಲ್ಲಿ ಸಿಟಿ ಬಸ್ ನಿಲ್ದಾಣಕ್ಕಾಗಿ ಈಗಾಗಲೇ 1.36 ಎಕರೆ ಭೂಮಿ ಲಭ್ಯವಿದೆ. ಇದೇ ಪ್ರದೇಶದಲ್ಲಿ ಅಂದರೆ ಬಿ.ಎಸ್.ಎನ್.ಎಲ್. ಕಚೇರಿ ಪಕ್ಕದಲ್ಲಿ 10 ಗುಂಟೆ ಭೂಮಿ ಹೆಚ್ಚುವರಿಯಾಗಿ ಬೇಕೆಂಬ ಬೇಡಿಕೆ ಎನ್.ಇ.ಕೆ.ಆರ್.ಟಿ.ಸಿ. ಸಂಸ್ಥೆಯವರದಾಗಿದ್ದು, 10 ಗುಂಟೆ ಭೂಮಿಯನ್ನು ನೀಡಿ ಬಸ್ ನಿಲ್ದಾಣ ನಿರ್ಮಿಸಲು ಕ್ರಮ ಜರುಗಿಸಲಾಗುವುದು ಎಂದರು.
ಸುಪರ್ ಮಾರ್ಕೆಟ್ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ ಬಹಳಷ್ಟು ಭೂಮಿ ಲಭ್ಯವಿದ್ದು, ಅನಧಿಕೃತವಾಗಿ ಅತಿಕ್ರಮಣವಾಗುತ್ತಿದೆ. ಸುಪರ ಮಾರ್ಕೆಟ್ ಪ್ರದೇಶದ ಸಂಪೂರ್ಣ ಆಸ್ತಿಯನ್ನು ಮರು ಸರ್ವೆ ಕೈಗೊಂಡು ನಿಖರ ಮಾಹಿತಿ ಸಂಗ್ರಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಧ್ಯದ ಸಿಟಿ ಬಸ್‍ನಿಲ್ದಾಣ ಹಾಗೂ ಸಬ್ ಅರ್ಬನ್ ಬಸ್‍ನಿಲ್ದಾಣದ ಮಧ್ಯದಿಂದ ಎಸ್.ಬಿ.ಐ. ಬ್ಯಾಂಕ್‍ವರೆಗೆ ರ್ಯಾಂಪ್ ನಿರ್ಮಿಸಿಕೊಂಡು ಎಸ್.ಬಿ.ಐ. ಬ್ಯಾಂಕ್ ಮುಂದಿನ ರಸ್ತೆಯನ್ನು ಬಳಸಿಕೊಳ್ಳಲಾಗುವುದು. ಇದರಿಂದಾಗಿ ಎರಡು ಮಹಡಿಯ ಬಸ್ ನಿಲ್ದಾಣ ನಿರ್ಮಿಸಿದಂತಾಗುವುದು. ಇದರಿಂದ ಬಸ್ ಸಂಚಾರ ಸುಗಮವಾಗುವುದು. ನೂತನ ಬಸ್‍ನಿಲ್ದಾಣ ನಿರ್ಮಿಸಲು ಟೆಂಡರ್ ಕರೆದು ಡಿಸೆಂಬರ್ ಮಾಹೆಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಇಂಜಿನಿಯರ್ ಪಿ. ಮೂರ್ತಿ ಅವರು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ನಗರದಲ್ಲಿರುವ ಮಾಂಸ ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸಲು ಸುಪರ ಮಾರ್ಕೆಟ್ ಪ್ರದೇಶದ ಸಧ್ಯದ ಮಟನ್ ಮಾರ್ಕೆಟ್ ಹತ್ತಿರ 94.6 ಲಕ್ಷ ರೂ. ವೆಚ್ಚದಲ್ಲಿ 38 ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದರಲ್ಲಿ 30 ಮಟನ್, 4 ಫಿಶ್ ಹಾಗೂ 4 ಚಿಕನ್ ಮಾರಾಟ ಮಳಿಗೆಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು. ಸಧ್ಯದ ಮಟನ್ ಮಾರ್ಕೆಟ್ ಹತ್ತಿರ 6000 ಚದರ ಅಡಿ ಪ್ರದೇಶ ಲಭ್ಯವಿದೆ. ಈ ಹಿಂದೆ ಚಪ್ಪಲ್ ಬಜಾರ್ ಹತ್ತಿರ ಹಳೆಯ ಮಟನ್ ಮಾರ್ಕೆಟ್ ನಿರ್ಮಿಸಲು ಒಂದು ಅಂತಸ್ತಿನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಕಾರಣಾಂತರಗಳಿಂದ ಕಟ್ಟಡ ಪೂರ್ಣಗೊಂಡಿಲ್ಲ. ಈ ಕಟ್ಟಡವನ್ನು ಪೂರ್ಣಗೊಳಿಸಲು ಒಂದು ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ವಿವರಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ. ಜಾಧವ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಜೀಜುದ್ದೀನ್, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮೆಹಬೂಬ್‍ಸಾಬ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಾಹೀನ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ನಂತರ ಜಿಲ್ಲಾಧಿಕಾರಿಗಳು ಗಣೇಶ ಪ್ರತಿಮೆ ವಿಸರ್ಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪೌರ ಕಾರ್ಮಿಕರ ಖಾಯಂಗೊಳಿಸಲು ಕ್ರಮ
--ಜಗದೀಶ ಹಿರೇಮನಿ
ಕಲಬುರಗಿ,ಸೆ.01.(ಕ.ವಾ)-ಸ್ವಚ್ಛತೆಯ ನಿಜವಾದ ರಾಯಭಾರಿಗಳಾಗಿರುವ ಹಾಗೂ ವೃತ್ತಿಯಲ್ಲಿ ಕಟ್ಟಕಡೆಯ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಪೌರಕಾರ್ಮಿಕರನ್ನು ತನ್ನ ಉಳಿದ ಅವಧಿಯಲ್ಲಿ ಖಾಯಂಗೊಳಿಸಲು ಎಲ್ಲಾ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಷ್ಟ್ರೀಯ ಸಪಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಹೇಳಿದರು.
ಅವರು ಶುಕ್ರವಾರ ಕಲಬುರಗಿ ಮಹಾನಗರ ಪಾಲಿಕೆಯ ಟೌನ್ ಹಾಲ್‍ನಲ್ಲಿ ಸಫಾಯಿ ಕರ್ಮಚಾರಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.
ರಾಜ್ಯದಲ್ಲಿ ಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡಲು ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದ್ದು, ಅನುದಾನ ಕೊರತೆÀಯಾದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಪ್ರಸ್ತುತ 11000 ಕಾರ್ಮಿಕರನ್ನು ಖಾಯಂ ಮಾಡಲು ಕರ್ನಾಟಕ ಸರ್ಕಾರ ತೀಮಾನಿಸಿದ್ದು, ಒಳ್ಳೆಯ ಬೆಳವಣಿಕೆಯಾಗಿದೆ ಎಂದರು.
ಪೌರ ಕಾರ್ಮಿಕರು ಮತ್ತು ಅವರ ಅವಲಂಭಿತರು ಸ್ವ-ಇಚ್ಛಯಂತೆ ಸ್ವಯಂ ಉದ್ಯೋಗ ಮಾಡಲು ಮುಂದೆ ಬಂದಲ್ಲಿ ಅಂಥವರಿಗೆ ಕೇಂದ್ರ ಸರ್ಕಾರದಿಂದ 10000 ರೂ. ಗಳಿಂದ 25 ಲಕ್ಷದ ವರೆಗೆ ಸಾಲ ನೀಡಲಾಗುತ್ತಿದೆ. ಹೀಗಾಗಿ ಪೌರ ಕಾರ್ಮಿಕರ ಮಕ್ಕಳಿಗೆ ಉನ್ನತ ವಿಧ್ಯಾಭಾಸ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ತಿಳುವಳಿಕೆ ನೀಡುವ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಾಗೂ ಪೌರ ಕಾರ್ಮಿಕರಿಗೆ ಮತ್ತು ಅವಲಂಭಿತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವÀ ಹತ್ತು-ಹಲವು ಯೋಜನೆಗಳ ಬಗ್ಗೆ ಸ್ಥಳೀಯ ಸಂಸ್ಥೆಗಳಿಂದ ಮಾಹಿತಿ ನೀಡುವ ಕಾರ್ಯಾಗಾರ ಏರ್ಪಡಿಸುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು. ಇದಲ್ಲದೇ ಪೌರ ಕಾರ್ಮಿಕರು ಸಹ ತಮ್ಮ ಮಕ್ಕಳನ್ನು ಅದೇ ವೃತ್ತಿಗೆ ತಳ್ಳದೆ ಸರ್ಕಾರದ ಸವಲತ್ತುಗಳನ್ನು ಉಪಯೋಗಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮುಂದಿನ ಪೀಳಿಗೆಯಾದರು ಮುಖ್ಯ ವಾಹಿನಿಗೆ ಬರಲು ಶ್ರಮಿಸಬೇಕು ಎಂದು ಜಗದೀಶ ಹಿರೇಮನಿ ಹೇಳಿದರು.
ಪೌರಕಾರ್ಮಿಕರು ಕೆಲಸದ ಸಮಯದಲ್ಲಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಕೆಲಸದ ಸಮಯದಲ್ಲಿ ನೀಡಲಾಗುವ ಬೂಟ್, ಶೂಸ್, ಹ್ಯಾಂಡ್ ಗ್ಲೋವ್ಸ್, ಮಾಸ್ಕ್ ಸೇರಿದಂತೆ ಇನ್ನೀತರ ರಕ್ಷಾ ಕವಚಗಳನ್ನು ಉಪಯೋಗಿಸಿಕೊಂಡು ಕೆಲಸ ನಿರ್ವಹಿಸಬೇಕು. ಪೌರಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಮಾಸ್ಕ್ ಪೂರೈಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಗುತ್ತಿಗೆದಾರರಿಂದ ಯಾವುದೇ ತೊಂದರೆಯಾದಲ್ಲಿ ಪೌರಕಾರ್ಮಿಕರು ನೇರವಾಗಿ ರಾಜ್ಯ ಮತ್ತು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗಕ್ಕು ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಒಟ್ಟಾರೆಯಾಗಿ ಸಫಾಯಿ ಕರ್ಮಚಾರಿ ಸಮುದಾಯಕ್ಕೆ ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಮತ್ತು ವಸತಿ ಸೌಲಭ್ಯ ಕಲ್ಪಿಸಿ ಅವರೆಲ್ಲರನ್ನು 2022ರ ಹೊತ್ತಿಗೆ ಮುಖ್ಯ ವಾಹಿನಿಗೆ ತರುವುದೇ ಕೇಂದ್ರ ಸರ್ಕಾರದ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮಹಾನಗರ ಪಾಲಿಕೆ ಆಯುಕ್ತ ಸುನೀಲ್ ಕುಮಾರ್ ಪಿ. ಮಾತನಾಡಿ 200 ಖಾಯಂ ಪೌರ ಕಾರ್ಮಿಕರಿಗೆ ಜಿ+2 ಫ್ಲ್ಯಾಟ್‍ನಲ್ಲಿ ಮನೆ ನೀಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಯೋಗದ ಸದಸ್ಯರ ಗಮನಕ್ಕೆ ತಂದರು.
ಸಿಂಗಾಪೂರ್ ದೇಶದಲ್ಲಿನ ಸ್ವಚ್ಛತಾ ಕಾರ್ಯಕ್ರಮಗಳನ್ನು ತಿಳಿದುಕೊಳ್ಳಲು ತೆರಳುತ್ತಿರುವ 13 ಪೌರ ಕಾರ್ಮಿಕರೊಂದಿಗೆ ಆಯೋಗದ ಸದಸ್ಯರು ಸಮಾಲೋಚಿಸಿದರು. ತಿಂಗಳಿಗೆ 25 ಸಾವಿರ ರೂ. ಸಂಬಳ ನಿಯಮಿತವಾಗಿ ದೊರೆಯುತ್ತಿದ್ದು, ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಶುಲ್ಕವನ್ನು ಮಹಾನಗರ ಪಾಲಿಕೆಯಿಂದ ಭರಿಸಲಾಗಿದೆ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದ್ದು, ಆರೋಗ್ಯ ರಕ್ಷಣೆಗೆ ಅವಶ್ಯಕವಿರುವ ಎಲ್ಲಾ ಸಲಕರಣೆಗಳನ್ನು ಮಹಾನಗರ ಪಾಲಿಕೆ ಒದಗಿಸಿದೆ ಎಂದು ಪೌರ ಕಾರ್ಮಿಕರು ಸzಸ್ಯರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲವಾಯ್, ಪಾಲಿಕೆ ಅಧಿಕಾರಿ-ಸಿಬ್ಬಂದಿ ವರ್ಗ ಮತ್ತು ನೂರಾರು ಸಂಖ್ಯೆಯಲ್ಲಿ ಪೌರ ಕಾರ್ಮಿಕರು ಉಪಸ್ಥಿತರಿದ್ದರು.
ಜಲಸಂಪನ್ಮೂಲ ಸಚಿವರ ಪ್ರವಾಸ
ಕಲಬುರಗಿ,ಸೆ.01.(ಕ.ವಾ)-ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಿಂದ ಕೆ.ಕೆ.ಎಕ್ಸ್‍ಪ್ರೆಸ್ ರೈಲಿನ ಮೂಲಕ ಕಲಬುರಗಿ ನಗರಕ್ಕೆ ಸೆಪ್ಟೆಂಬರ್ 2 ರಂದು ಬೆಳಿಗ್ಗೆ 5.45ಕ್ಕೆ ಆಗಮಿಸುವರು. 6 ಗಂಟೆಗೆ ರಸ್ತೆ ಮೂಲಕ ವಿಜಯಪುರ ಜಿಲ್ಲೆಗೆ ಪ್ರಯಾಣಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಯೆ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 3 ರಂದು ಬೆಳಿಗ್ಗೆ 8.30 ಕ್ಕೆ ವಿಜಯಪುರದಿಂದ ಮಹಾರಾಷ್ಟ್ರ ರಾಜ್ಯದ ಲಾತೂರ್‍ನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಯಾಣಿಸುವ ಸಚಿವರು ನಂತರ ಸಾಯಂಕಾಲ 4 ಗಂಟೆಗೆ ಮರಳಿ ಕಲಬುರಗಿ ಆಗಮಿಸುವರು. ಸಾಯಂಕಾಲ 4.30 ಕ್ಕೆ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಜಿಲ್ಲೆಯ ಜನಪ್ರತಿನಿಧಿ ಮತ್ತು ಮುಖಂಡರುಗಳೊಂದಿಗೆ ಭೇಟಿ ಮತ್ತು ಚರ್ಚೆ ನಡೆಸಿ ರಾತ್ರಿ 9 ಗಂಟೆ ಸೋಲಾಪುರ-ಎಕ್ಸ್‍ಪ್ರೆಸ್ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಕರ್ಕಶವಾಗಿ ಧ್ವನಿ ವರ್ಧಕ ಬಳಸದಂತೆ ಜಿಲ್ಲಾಧಿಕಾರಿಗಳ ಮನವಿ
ಕಲಬುರಗಿ,ಸೆ.01.(ಕ.ವಾ.)-ಗಣೇಶ ವಿಸರ್ಜನೆ ಸಮಯದಲ್ಲಿ ಧ್ವನಿ ವರ್ಧಕಗಳನ್ನು ಕರ್ಕಶವಾಗಿ ಹಾಗೂ ರಾತ್ರಿ 10 ಗಂಟೆಯ ನಂತರ ಬಳಸದಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಗಣೇಶ ಮಹಾಮಂಡಳದ ಸದಸ್ಯರಿಗೆ ಮನವಿ ಮಾಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶ ಮಹಾಮಂಡಳದ ಸದಸ್ಯರೊಂದಿಗೆ ಕರೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ನಗರದ ಬಹಳಷ್ಟು ಹಿರಿಯ ನಾಗರಿಕರು ಡಿ.ಜೆ. ಧ್ವನಿ ವರ್ಧಕಗಳ ಬಳಕೆಯಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರು ನೀಡುತ್ತಿರುವ ಹಿನ್ನೆಲೆಯಲ್ಲಿ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಧ್ವನಿ ವರ್ಧಕಗಳಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.
ಸೆಪ್ಟೆಂಬರ್ 2ರಂದು ನಡೆಯುವ 9 ದಿನದ ಹಾಗೂ ಸೆಪ್ಟೆಂಬರ್ 5ರಂದು ನಡೆಯುವ 11 ದಿನದ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿ.ಜೆ. ಧ್ವನಿ ವರ್ಧಕಗಳನ್ನು ಬಳಸಬಾರದು. ಒಂದು ವೇಳೆ ಬಳಸಿದರೆ ಕಡಿಮೆ ಶಬ್ದದೊಂದಿಗೆ ಬಳಸುವಂತೆ ತಿಳಿಸಿದರು. ಡಿ.ಜೆ. ಧ್ವನಿ ವರ್ಧಕಗಳನ್ನು ಹಾಗೂ ರಾತ್ರಿ 10 ಗಂಟೆಯ ನಂತರ ಧ್ವನಿ ವರ್ಧಕಗಳನ್ನು ಬಳಸದಂತೆ ಸುಪ್ರಿಂಕೋರ್ಟ್ ಆದೇಶಿಸಿದ್ದು, ಈ ಆದೇಶವನ್ನು ಎಲ್ಲರೂ ಪಾಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಹಾಗೂ ಸಂಭ್ರಮದಿಂದ ಗಣೇಶ ಹಬ್ಬ ಆಚರಿಸಲಾಗುತ್ತಿದೆ. ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಗರ್ಭಿಣಿ ಮಹಿಳೆಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದ್ದು, ಮೆರವಣಿಗೆ ಸಂದರ್ಭದಲ್ಲಿ ಕರ್ಕಶ ಶಬ್ದ ಹೊರಸೂಸುವ ಧ್ವನಿ ವರ್ಧಕಗಳನ್ನು ಬಳಸದಂತೆ ತಿಳಿಸಿದರು.
ಗಣೇಶ ಮಹಾಮಂಡಳದ ಅಧ್ಯಕ್ಷ ಬಾಬುರಾವ್ ಜಹಾಗೀರದಾರ್ ಮಾತನಾಡಿ, ಜಿಲ್ಲಾಡಳಿತ ಸಾರ್ವಜನಿಕರ ಹಿತರಕ್ಷಣೆಗಾಗಿ ಕೈಗೊಳ್ಳುವ ಎಲ್ಲ ಕ್ರಮಗಳಿಗೆ ನಮ್ಮ ಸಹಕಾರ ಇದ್ದು, ಮೆರವಣಿಗೆಯಲ್ಲಿ ಹೆಚ್ಚಿಗೆ ಶಬ್ದ ಮಾಡುವ ಧ್ವನಿ ವರ್ಧಕಗಳನ್ನು ಬಳಸದಂತೆ ಸದಸ್ಯರಲ್ಲಿ ಮನವಿ ಮಾಡಿದರು. ಗಣೇಶ ಪ್ರತಿಷ್ಠಾಪನೆಯನ್ನು ಚತುರ್ಥಿಯಂದು ಮಾಡಿದರೆ ಹನ್ನೊಂದನೇ ದಿನದ ಗಣೇಶ ವಿಸರ್ಜನೆಯನ್ನು ಸೆ.5 ಅನಂತ ಚತುರ್ಥಿಯಂದು ವಿಸರ್ಜಿಸುವಂತೆ ತಿಳಿಸಿದರು.
ಸಭೆಯಲ್ಲಿ ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಗಣೇಶ ಮಹಾಮಂಡಳದ ಸದಸ್ಯರು ಪಾಲ್ಗೊಂಡಿದ್ದರು.
ಸೆಪ್ಟೆಂಬರ್ 06ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಕಲಬುರಗಿ,ಸೆ.01.(ಕ.ವಾ.)-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಉತ್ಸವ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಯ ಸಮಾರಂಭವನ್ನು ಸೆಪ್ಟೆಂಬರ್ 6ರಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ, ಕಲಬುರಗಿ ಜಿಲ್ಲಾ ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಸುಭಾಷ ಆರ್. ಗುತ್ತೇದಾರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಚಿತ್ತಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಾಹಿತಿ ಕಾಶೀನಾಥ ಗುತ್ತೇದಾರ್ ವಿಶೇಷ ಉಪನ್ಯಾಸ ನೀಡುವರು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಜರುಗುವುದು.
ಸೆಪ್ಟೆಂಬರ್ 12ರಂದು ಮಾಜಿ ಸೈನಿಕರ ಕುಂದುಕೊರತೆ ಆಲಿಕೆ
ಕಲಬುರಗಿ,ಸೆ.01.(ಕ.ವಾ.)-ಜಿಓಸಿ ತೆಲಂಗಾಣ ಮತ್ತು ಆಂಧ್ರ ಸಬ್ ಏರಿಯಾದವರು 2017ರ ಸೆಪ್ಟೆಂಬರ್ 12ರಂದು ಬೆಳಗಿನ 8 ಗಂಟೆಗೆ ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ಕಣ್ಣಿ ಮಾರ್ಕೆಟ್ ಬಳಿ ಇರುವ ಇ.ಸಿ.ಎಸ್.ಹೆಚ್. ಪಾಲಿಕ್ಲಿನಿಕ್‍ಗೆ ಭೇಟಿ ನೀಡಿ ಮಾಜಿ ಸೈನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಮಾಜಿ ಸೈನಿಕರು/ವೀರ ನಾರಿಯರು ಹಾಗೂ ಸೈನಿಕರ ಅವಲಂಬಿತರು ತಮ್ಮ ಕುಂದುಕೊರತೆಗಳೇನಾದರೂ ಇದ್ದಲ್ಲಿ ಇ.ಎಸ್.ಎಸ್.ಹೆಚ್. ಪಾಲಿಕ್ಲಿನಿಕ್ಕಿಗೆ ಖುದ್ದಾಗಿ ಭೇಟಿ ನೀಡಿ ಚರ್ಚಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇ.ಎಸ್.ಎಸ್.ಹೆಚ್. ಪಾಲಿಕ್ಲಿನಿಕ್ ದೂರವಾಣಿ ಸಂಖ್ಯೆ 08472-266677ನ್ನು ಸಂಪರ್ಕಿಸಬೇಕೆಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
90 ಮರಗಳ ಬಹಿರಂಗ ಹರಾಜು
ಕಲಬುರಗಿ,ಸೆ.01.(ಕ.ವಾ.)-ಕಲಬುರಗಿ ಪ್ರಾದೇಶಿಕ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿವಿಧ ಜಾತಿಯ ಒಟ್ಟು 90ಮರಗಳ ಬಹಿರಂಗ ಹರಾಜು ಸೆಪ್ಟೆಂಬರ್ 7ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಕಲಬುರಗಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿನ ಪ್ಯಾಕೇಜ್ ನಂ. 1ರ ಸಂತ್ರಾಸ್‍ವಾಡಿ ಕ್ರಾಸ್‍ದಿಂದ ಶ್ರೀ ರಂಗನಾಥ ದೇಸಾಯಿ ಮನೆಯವರೆಗಿನ ರಸ್ತೆ ಕಾಮಗಾರಿಯ ಹಾಗೂ ಪ್ಯಾಕೇಜ್ ನಂ. 2ರ ವಿಜಯಕುಮಾರ ಮನೆಯಿಂದ ರಿಂಗ್ ರಸ್ತೆಯವರೆಗಿನ ವಾಯಾ ಆದರ್ಶ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಯ ರಸ್ತೆಯ ಎಡಬದಿ ಮತ್ತು ಬಲಬದಿ ನಿಂತಿರುವ ಬೇವು, ಗುಲ್‍ಮೋರ್, ಪೆಲ್ಟೋಫಾರಂ, ಹೊಂಗೆ ನಿಂತ ಮರಗಳನ್ನು ಹರಾಜು ಮಾಡಲಾಗುವುದು. ಇಚ್ಛೆಯುಳ್ಳವರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಇ.ಎಂ.ಡಿ. ಮೊತ್ತ, ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಐ.ಟಿ.ಐ. ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಲಬುರಗಿ,ಸೆ.01.(ಕ.ವಾ.)-ಕಲಬುರಗಿಯ ಮಹಿಳೆಯರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2017-18ನೇ ಸಾಲಿನ ಎನ್.ಸಿ.ವಿ.ಟಿ. ವೃತ್ತಿಯ ಪಿ.ಪಿ.ಪಿ. ಯೋಜನೆಯಡಿ ಒಂದು ವರ್ಷದ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕ್ ಮೆಂಟೆನನ್ಸ್-52 ಸೀಟುಗಳು ಲಭ್ಯವಿರುತ್ತದೆ. ಈ ಸ್ಥಾನಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಸದರಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 6ರೊಳಗಾಗಿ ಮೇಲ್ಕಂಡ ವೃತ್ತಿಗೆ ನೇರ ಪ್ರವೇಶ (ಡುನೇಶನ್ ಸೀಟು) ಮೂಲಕ ಪಡೆಯಬಹುದಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮಾದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸದರಿ ತರಬೇತಿ ಸಂಸ್ಥೆಯ ದೂರವಾಣಿ ಸಂಖ್ಯೆ 08472-236753 ಅಥವಾ ಕಿರಿಯ ತರಬೇತಿ ಅಧಿಕಾರಿ ಎಸ್.ಬಿ. ಕುಂಬಾರ್ ಅವರ ಮೊಬೈಲ್ ಸಂಖ್ಯೆ 9972910066ನ್ನು ಸಂಪರ್ಕಿಸಲು ಕೋರಲಾಗಿದೆ.
ಪತ್ರಿಕೋದ್ಯಮ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ, ಸೆ.01, (ಕರ್ನಾಟಕ ವಾರ್ತೆ)-ಯಾದಗಿರಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2017-18ನೇ ಸಾಲಿನ ಎಸ್‍ಸಿಪಿ ವಿಶೇಷ ಘಟಕ ಯೋಜನೆಯಡಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಇಬ್ಬರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪಡೆದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಯ್ಕೆ ಮಾಡಿಕೊಂಡು ಅಪ್ರೆಂಟಿಸ್ ತರಬೇತಿ ನೀಡುವ ಕಾರ್ಯಕ್ರಮವಾಗಿರುತ್ತದೆ. ಅಪ್ರೆಂಟಿಸ್ ತರಬೇತಿ ಅವಧಿ ಸೆಪ್ಟೆಂಬರ್ 2017 ರಿಂದ ಮಾರ್ಚ್ 2018ರವರೆಗೆ 07 ತಿಂಗಳಾಗಿದ್ದು, ಮಾಹೆಯಾನ ತಲಾ (ಒಬ್ಬ ಅಭ್ಯರ್ಥಿಗೆ) ರೂ. 20,000/- ನೀಡಲಾಗುವುದು.
ಆಯ್ಕೆಯ ಷರತ್ತುಗಳು:- ಯಾದಗಿರಿ ಜಿಲ್ಲಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಸ್ಥಳೀಯ ಅಭ್ಯರ್ಥಿ ದೊರೆಯದಿದ್ದಲ್ಲಿ ಪಕ್ಕದ ಜಿಲ್ಲಾ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಕನ್ನಡ ಹಾಗೂ ಗಣಕಯಂತ್ರದ ಜ್ಞಾನ ಹೊಂದಿರಬೇಕು. ವಯೋಮಿತಿ 22 ವರ್ಷದಿಂದ 38 ವರ್ಷ ವಯಸ್ಸಿನವರಾಗಿರಬೇಕು. ಬೇರೆ ಯಾವುದೇ ಉದ್ಯೋಗದಲ್ಲಿ ಇರಬಾರದು.
ಸೆಪ್ಟಂಬರ್ 04 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ, ಮೆರಿಟ್ ಆಧಾರದ ಮೇಲೆ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸಿದ್ದೇಶ್ವರಪ್ಪ.ಜಿ.ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, (ಮಿನಿ ವಿಧಾನಸೌಧ),“ಬಿ” ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ: ಬಿ2ಎ, ಬಿ2ಬಿ ಹಾಗೂ ಬಿ3, ಚಿತ್ತಾಪುರ ರಸ್ತೆ, ಯಾದಗಿರಿ ಅಥವಾ ಮೊಬೈಲ್ ಸಂಖ್ಯೆ: 9480841247, ದೂರವಾಣಿ ಸಂಖ್ಯೆ 08473-253722ಗಳನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಅತ್ತುತ್ಯಮ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ.
ಕಲಬುರಗಿ, ಸೆ.01, (ಕರ್ನಾಟಕ ವಾರ್ತೆ)-ಭಾರತ ಸರಕಾರ, ನೆಹರು ಯುವ ಕೇಂದ್ರ, ಕಲಬುರಗಿ 2015-16ನೇ ಹಾಗೂ 2016-17ನೇ ಸಾಲಿನ ಜಿಲ್ಲಾ ಮಟ್ಟದ ಒಂದು ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಆಯ್ಕ್ಕೆಗಾಗಿ ಅರ್ಹ ಯುವಕ/ಯುವತಿ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಯುವಕ/ಯುವತಿ ಸಂಘಗಳು 2015-16ನೇ ಹಾಗೂ 2016-17ನೇ ಸಾಲಿನ ವಿವಿಧ ಕ್ಷೇತ್ರಗಳಾದ ರಾಷ್ಟ್ರೀಯ ಭಾವೈಕ್ಯತೆ, ಕೋಮು ಸೌಹಾರ್ದತೆ, ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ನೈರ್ಮಲ್ಯ, ಮಹಿಳಾ ಸಶಕ್ತಿಕರಣ, ಸ್ವಾವಲಂಬನೆ, ಸಾಕ್ಷರತೆ ಸ್ವಯಂ ಉದ್ಯೋಗ, ಸಾಂಸ್ಕøತಿಕ, ಕ್ರೀಡೆ, ಸಮುದಾಯ ಆಸ್ತಿ ನಿರ್ಮಾಣ, ವಿವಿಧ ಪ್ರಮುಖ ದಿನಾಚರಣೆಗಳ ಆಚರಣೆ, ಸಮಾಜ ಕಲ್ಯಾಣ ಕಾರ್ಯಚಟುವಟಿಕೆಗಳು, ಸಾಮಾಜಿಕ ಪಿಡುಗುಗಳ ನಿವಾರಣೆ, ಗ್ರಾಮೀಣಾಭಿವೃದ್ದಿಯಂತಹ ಕ್ಷೇತ್ರಗಳಲ್ಲಿ ಕೈಗೊಂಡ ಕಾರ್ಯಚಟುವಟಿಕೆಗಳು ಆಯ್ಕೆಗಾಗಿ ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಸುವ ಯುವ ಸಂಘ, ಕರ್ನಾಟಕ ರಾಜ್ಯ ನೋಂದಣೆ ಕಾಯ್ದೆ 1960 ಅಥವಾ ಅದಕ್ಕೆ ಸಮಾನಂತರ ಕಾಯ್ದೆ ಪ್ರಕಾರ ನೋಂದಣೆಯಾಗಿರಬೇಕು ಹಾಗೂ ನೆಹರು ಯುವ ಕೇಂದ್ರ, ಕಲಬುರಗಿಯಲ್ಲಿ ಸಂಯೋಜನೆ ಹೊಂದಿರಬೇಕು. ಸದರಿ ಆಯ್ಕೆಯಲ್ಲಿ ಅಯ್ಕೆ ಸಮಿತಿಯ ನಿರ್ಣಯವೇ ಅಂತಿಮ. ಇದಕ್ಕೆ ಸಂಬಂಧಪಟ್ಟ ಮೂಲ ದಾಖಲಾತೆಗಳು ಕೇಳಿದಾಗ ಸಲ್ಲಿಸಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಒಂದು ಅತ್ತುತ್ಯಮ ಯುವ ಸಂಘಕ್ಕೆ 25,000 ರೂ.ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸಂಘವು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹರಾಗಿರುತ್ತಾರೆ.
ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ನೆಹರು ಯುವ ಕೇಂದ್ರದ ವೇಳೆಯಲ್ಲಿ ಪಡೆದು ಎಲ್ಲಾ ವಿವರಗಳನ್ನು ತುಂಬಿ ಜೊತೆಯಲ್ಲಿ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲÁ್ಲ ಯುವ ಸಮನ್ವಯಾಧಿಕಾರಿಗಳು, ನೆಹರು ಯುವ ಕೇಂದ್ರ ನಂ. 01/886/8213 ವಾಸವಿ ಬಿಲ್ಡಿಂಗ್, ಭಗವತಿ ನಗರ, ಸಂಗಮೇಶ್ವರ ಆಸ್ಪತ್ರೆ ಹಿಂದುಗಡೆ, ಎಂ.ಎಸ್.ಕೆ. ಮಿಲ್ ರೋಡ ಕಲಬುರಗಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-248528ನ್ನು ಸಂಪರ್ಕಿಸಲು ಕೋರಿದೆ.
ಸೆಪ್ಟೆಂಬರ್ 3 ಹಾಗೂ 4ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ.ಸೆ.01.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ಸಿನಿಮಾ, 11ಕೆ.ವಿ. ಗಾಜಿಪುರ, 11ಕೆ.ವಿ. ಐ.ಟಿ. ಪಾರ್ಕ್, 11 ಕೆ.ವಿ. ನೃಪತುಂಗಾ, ಫೀಡರುಗಳ ವ್ಯಾಪ್ತಿಯಲ್ಲಿ ನಿರ್ವಹಣ ಕಾರ್ಯ ಕೈಗೊಳ್ಳುವ ಪ್ರಯುಕ್ತ ಸೆಪ್ಟೆಂಬರ್ 3ರಂದು ಬೆಳಗಿನ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಅದರಂತೆ 11 ಕೆ.ವಿ. ಶಕ್ತಿನಗರ, 11ಕೆ.ವಿ. ಐವಾನ್-ಎ-ಶಾಹಿ ವ್ಯಾಪ್ತಿಯ ಫೀಡರಿನಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಮತ್ತು 11 ಕೆ.ವಿ. ಪೊಲೀಸ್ ಕಾಲೋನಿಯ ಫೀಡರಿನ ಮೇಲೆ ರಸ್ತೆ ಅಗಲೀಕರಣ ಕಾರ್ಯ ಮತ್ತು ವಿದ್ಯುತ್ ಕಂಬಗಳನ್ನು ಸ್ಥಳಾಂತರ ಕಾರ್ಯ ಕೈಗೊಳ್ಳುವ ಪ್ರಯುಕ್ತ ಸೆಪ್ಟೆಂಬರ್ 4ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ ಸಿನಿಮಾ: ಸೂಪರ ಮಾರ್ಕೆಟ್, ಶಹಾಬeóÁರ್ ಜಿ.ಡಿ.ಎ., ಕಟಗರಪುರ, ಪ್ರಕಾಶ ಟಾಕೀಸ್, ಲೋಹಾರಗಲ್ಲಿ, ಐಯ್ಯರವಾಡಿ, ಸಿಟಿ ಬಸ್ ನಿಲ್ದಾಣ, ಬಂಬೂ ಬeóÁರ್, ಮಹಾಲಕ್ಷ್ಮೀ ಲೇಔಟ್, ಕಿರಾಣ ಬeóÁರ್, ಮಾರವಾಡಿ ಗಲ್ಲಿ, ಚೌಕ್ ಪೊಲೀಸ್ ಸ್ಟೇಷನ್, ರ್ಫೋಟ್ ರಸ್ತೆ, ಬಾಂಡಾ ಬeóÁರ್, ಸರಸ್ವತಿ ಗೋದಾಮು, ಪುಟಾಣಿ ಗಲ್ಲಿ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ ಗಾಜಿಪುರ: ಜಿ.ಡಿ.ಎ., ಗೋಕುಲ ನಗರ, ಜಿಲ್ಲಾಧಿಕಾರಿಗಳ ಕಚೇರಿ, ಮಾಲಿ ಪಾಟೀಲ್ ಟಿ.ಸಿ, ಬಸವಣ್ಣ ಟೆಂಪಲ್, ವಿಲನ್ ಚೌಕ್, ಶಂಕರಲಿಂಗ ಟೆಂಪಲ್, ಮಟನ ಮಾರ್ಕೆಟ್, ಕಾವೇರಿ ನಗರ, ತಹಶೀಲ್ದಾರ ಕಚೇರಿ, ಚನ್ನಮಲ್ಲೇಶ್ವರ ನಗರ, ಮಜಗಿ ಲೇಔಟ್, ಸುಪರ ಮಾರ್ಕೆಟ್ ರೇಮಾಂಡ್ ಟಿ.ಸಿ. ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.
11 ಕೆ.ವಿ ಐ.ಟಿ ಪಾರ್ಕ್: ಸಂತೋಷ ಕಾಲೋನಿ, ವರ್ಗಿಸ್ ಅಪಾರ್ಟ್‍ಮೆಂಟ್, ಮಾಣಿಕಪ್ರಭು ಕಾಲೋನಿ, ಐ.ಟಿ.ಪಾರ್ಕ್, ನಂದ ಗೋಕುಲ ಮತ್ತು ಜಯತೀರ್ಥ ಕಲ್ಯಾಣ ಮಂಟಪ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ನೃಪತುಂಗಾ: ಜಿ.ಡಿ.ಎ. ಕೋಟನೂರ ಪ್ರದೇಶ, ನ್ಯೂ ಓಝಾ ಲೇಔಟ್, ಧನಶೆಟ್ಟಿ ನಗರ, ಸ್ಲಮ್ ಬೋರ್ಡ್ ವಸತಿ ಗೃಹಗಳು ಹಾಗೂ ಸುತ್ತಮುತ್ತಲ್ಲಿನ ಪ್ರದೇಶಗಳು.
11 ಕೆ.ವಿ ಶಕ್ತಿ ನಗರ: ಸೆಪ್ಟೆಂಬರ್ 04ರಂದು ಬೆಳಗಿನ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಗೋದುತಾಯಿ ನಗರ, ಭಗವತಿ ನಗರ, ಕೋತಂಬರಿ ಲೇಔಟ್, ಸಿದ್ದಾರ್ಥ ನಗರ, ಕಾಂತಾ ಕಾಲೋನಿ, ಘಾಟಗೆ ಲೇಔಟ್, ಕೊತಂಬರಿ ಲೇಔಟ್, ಶಕ್ತಿ ನಗರ, ಸಿ.ಐ.ಬಿ. ಕಾಲೋನಿ, ಕೇಡೆಕರ ಲೇಔಟ್, ಎಂ.ಎಸ್.ಕೆ. ಮಿಲ್ ಜಿ.ಡಿ.ಎ., ಎಂ.ಎಸ್.ಕೆ. ಮಿಲ್ ರೆಸಿಡೆನ್ಸ್, ವಿದ್ಯಾನಗರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ. ಐವಾನ್-ಶಾಹಿ: ಅಂದು ಬೆಳಗಿನ 10 ರಿಂದ ಸಂಜೆ 4 ಗಂಟೆಯವರೆಗೆ ಹಳೆಯ ಗೇಸ್ಟ್ ಹೌಸ್, ನೀಚೆಗಲ್ಲಿ, ಕಮರ್ಶಿಯಲ್ ಟ್ಯಾಕ್ಸ್ ಕಚೇರಿ, ವಿಜಯ ವಿದ್ಯಾಲಯ, ಲಾಹೋಟಿ ಪೆಟ್ರೋಲ್ ಪಂಪ್, ಹೆಚ್.ಕೆ.ಇ. ಕಚೇರಿ, ಏಶಿಯನ್ ಪ್ಲಾಜಾ, ಪರಿವಾರ ಹೋಟೆಲ್, ತಿಮ್ಮಾಪುರಿ ಚೌಕ್, ವಿಜು ವುಮ್ಯಾನ್ಸ ಕಾಲೇಜ್, ಪಿಡಿಎ ಇಂಜಿನಿಯರಿಂಗ್ ಕಾಲೇಜ್ ರಸ್ತೆ, ಬಿ.ಎಸ್.ಎನ್.ಎಲ್. ಎಕ್ಸ್‍ಚೇಂಜ್, ಪಿಡಬ್ಲ್ಯೂಡಿ ಕ್ವಾರ್ಟಸ್, ಮಿನಿ ವಿಧಾನಸೌಧ ಎದುರು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಪೊಲೀಸ್ ಕಾಲೋನಿ: ಅಂದು ಬೆಳಗಿನ 10 ರಿಂದ ಸಂಜೆ 4.30 ಗಂಟೆಯವರೆಗೆ ಪೋಲಿಸ್À ಕಾಲೋನಿ, ಜಿ.ಡಿ.ಎ. ರಿಂಗ್ ರೋಡ್, ಪ್ರಶಾಂತ ನಗರ, ಶಾಹಬಾದ, ಶಕ್ತಿ ನಗರ ನೃಪತುಂಗಾ ಕಾಲೋನಿ, ಬಂಜಾರ ಲೇಔಟ್, ರಾಜಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹೀಗಾಗಿ ಲೇಖನಗಳು news and photo 01-09-2017
ಎಲ್ಲಾ ಲೇಖನಗಳು ಆಗಿದೆ news and photo 01-09-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo 01-09-2017 ಲಿಂಕ್ ವಿಳಾಸ https://dekalungi.blogspot.com/2017/09/news-and-photo-01-09-2017.html
0 Response to "news and photo 01-09-2017"
ಕಾಮೆಂಟ್ ಪೋಸ್ಟ್ ಮಾಡಿ