ಶೀರ್ಷಿಕೆ : NEWS AND PHOTO DATE: 01--09--2017
ಲಿಂಕ್ : NEWS AND PHOTO DATE: 01--09--2017
NEWS AND PHOTO DATE: 01--09--2017
ಸೆಪ್ಟೆಂಬರ್ 16ರಂದು ಹೋಬಳಿ ಮಟ್ಟದ ಜನಸ್ಪಂದನ ಸಭೆಗಳು
ಕಲಬುರಗಿ,ಆ.31.(ಕ.ವಾ.)-ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ 2017ರ ಸೆಪ್ಟೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆಗಳನ್ನು ನಡೆಸಲಾಗುವುದು ಎಂದು ಹೆÀಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ. ತಾಲೂಕುವಾರು ನಡೆಯುವ ಜನಸ್ಪಂದನಗಳ ಹೋಬಳಿ, ಗ್ರಾಮ ಮತ್ತು ಸಭೆ ಸ್ಥಳಗಳ ವಿವರ ಇಂತಿದೆ.
ಕಲಬುರಗಿ-ಮಹಾಗಾಂವ ಹೋಬಳಿಯ ಹೊಳಕುಂದಾ ಗ್ರಾಮ ಪಂಚಾಯಿತಿ ಕಾರ್ಯಾಲಯ. ಆಳಂದ-ನಿಂಬರ್ಗಾ ಹೋಬಳಿಯ ಹಿತ್ತಲಶೀರೂರ ಗ್ರಾಮ ಪಂಚಾಯಿತಿ ಕಾರ್ಯಾಲಯ. ಅಫಜಲಪುರ-ಕರಜಗಿ ಹೋಬಳಿಯ ಭಂಕಲಗಾ ಗ್ರಾಮ ಪಂಚಾಯಿತಿ ಕಾರ್ಯಾಲಯ. ಜೇವರ್ಗಿ-ಜೇವರ್ಗಿ ಹೋಬಳಿಯ ಗವನಳ್ಳಿ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ. ಸೇಡಂ-ಕೋಡ್ಲಾ ಹೋಬಳಿಯ ಮದನಾ ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿತ್ತಾಪುರ-ಗುಂಡಗುರ್ತಿ ಹೋಬಳಿಯ ಮಂಗಳನಾಗಾಂವ ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿಂಚೋಳಿ-ಐನಾಪುರ ಹೋಬಳಿಯ ನರನಾಳ ಸರ್ಕಾರಿ ಶಾಲಾ ಆವರಣ.
ಸೆಪ್ಟೆಂಬರ್ 5ರಂದು ಎನ್.ಟಿ.ಎಸ್.ಇ. ಹಾಗೂ ಎನ್.ಎಂ.ಎಂ.ಎಸ್. ಪರೀಕ್ಷೆ
ಕಲಬುರಗಿ,ಆ.31.(ಕ.ವಾ.)-ಪ್ರಸಕ್ತ 2017-18ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಎನ್.ಟಿ.ಎಸ್.ಇ. ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಎನ್.ಎಂ.ಎಂ.ಎಸ್. ಪರೀಕ್ಷೆಯು 2017ರ ನವೆಂಬರ್ 5ರಂದು ಕಲಬುರಗಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ ಎಂದು ಡಯಟ್ ಕಮಲಾಪುರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೆಶಕರು ತಿಳಿಸಿದ್ದಾರೆ.
ಪರೀಕ್ಷಾ ಅರ್ಜಿಗಳು ಹಾಗೂ ಓ.ಎಂ.ಆರ್. ಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದ್ದು, ಜಿಲ್ಲೆಯ ಎಲ್ಲ ಶಾಲೆಯ ಮುಖ್ಯಗುರುಗಳು ಸದರಿ ಪರೀಕ್ಷೆಯಲ್ಲಿ ತಮ್ಮ ಶಾಲೆಯ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿಕೊಳ್ಳಲು ಕ್ರಮ ವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08478-221346ನ್ನು ಸಂಪರ್ಕಿಸಲು ಕೋರಿದೆ.
ಪರಮೇಶ್ವರ ಅವರಿಗೆ ಪಿಹೆಚ್.ಡಿ. ಪದವಿ
ಗುಲಬರ್ಗಾ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡಾ. ಎಂ.ಬಿ.ಸುಲೋಚನಾ ಅವರ ಮಾರ್ಗದರ್ಶನದಲ್ಲಿ ಪರಮೇಶ್ವರ ಅಂತೇಶ್ವರ ಅವರು ಪ್ರಬಂಧ ಮಂಡಿಸಿದ್ದರು.
ಸೆಪ್ಟೆಂಬರ್ 7ರಂದು ಹಿರಿಯ ನಾಗರಿಕರ ಕ್ರೀಡಾಕೂಟ
ಕಲಬುರಗಿ.ಆ.31.(ಕ.ವಾ.)-ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚಾರಣೆ ಅಂಗವಾಗಿ ಹಿರಿಯ ನಾಗರಿಕರಿಗಾಗಿ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯನ್ನು ಸೆಪ್ಟೆಂಬರ್ 7ರಂದು ಕಲಬುರಗಿ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಆಸಕ್ತಿಯುಳ್ಳ 60 ವರ್ಷ ರಿಂದ 80 ವರ್ಷದೊಳಗಿನ ಹಿರಿಯ ನಾಗರಿಕರು ಸೆಪ್ಟೆಂಬರ್ 5 ರೊಳಗಾಗಿ ಕಲಬುರಗಿಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಬೆಣ್ಣೆತೋರಾ ಪ್ರವಾಹ ಮುನ್ನೆಚ್ಚರಿಕೆ
ಕಲಬುರಗಿ,ಆ.31.(ಕ.ವಾ.)-ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಬೆಣ್ಣೆತೋರಾ ನೀರಾವರಿ ಯೋಜನೆಯ ಜಲಾಶಯವು ಭರ್ತಿಯಾಗುತ್ತಿದ್ದು, ಜಲಾಶಯದ ಒಳಹರಿವು ಹೆಚ್ಚಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುವ ಹೆಚ್ಚುವರಿ ನೀರನ್ನು ಆಣೆಕಟ್ಟೆಯ ಕೋಡಿ ಬಾಗಿಲುಗಳ ಮೂಲಕ ಯಾವುದೇ ಸಮಯದಲ್ಲಿ ಮತ್ತು ಯಾವುದೇ ಮುನ್ಸೂಚನೆ ನೀಡದೆ ನದಿಯ ಪಾತಳಿಗೆ ನೀರು ಹರಿ ಬಿಡಲಾಗುವುದು.
ಈ ಹಿನ್ನೆಲೆಯಲ್ಲಿ ಯೋಜನೆಯ ಕೆಳಭಾಗದಲ್ಲಿರುವ ನದಿಯ ಎರಡೂ ದಂಡೆಗಳಲ್ಲಿರುವ ಗ್ರಾಮಗಳ ರೈತರು, ಸಾರ್ವಜನಿಕರು, ರೈತ ಮಹಿಳೆಯರು ಹಾಗೂ ದನಕರುಗಳನ್ನು ಮೇಯಿಸುವವರು ನದಿಯಲ್ಲಿ ಇಳಿಯುವುದಾಗಲಿ, ಬಟ್ಟೆ ತೊಳೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು.
ನದಿಯ ಎರಡೂ ದಂಡೆಗಳಲ್ಲಿರುವ ಜನರು ಮತ್ತು ರೈತರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಸುರಕ್ಷಿತ ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕೆಂದು ಬೆಣ್ಣೆತೋರಾ ಆಣೆಕಟ್ಟು ಯೋಜನೆಯ ಹೆಬ್ಬಾಳ ವಿಭಾಗ-4ರ ಕಾರ್ಯನಿರ್ವಾಹಕ ಇಂಜಿನಿಯರರು ಅಧಿಸೂಚನೆ ಹೊರಡಿಸಿದ್ದಾರೆ.
ಶ್ರೀ ಮಹರ್ಷಿ ವಾಲ್ಮೀಕಿ ಕುರಿತು ಗುಲಬರ್ಗಾ ವಿವಿಯಲ್ಲಿ ರಾಷ್ಟ್ರೀಯ ವಿಚಾರ
ಸಂಕಿರಣ- ಶ್ರೀ ಮಹರ್ಷಿ ವಾಲ್ಮೀಕಿ ಅವರ ಸಂದೇಶಗಳು ಇಂದಿಗೂ ಪ್ರಸ್ತುತ
- ಶ್ರೀ ವಿ.ಎಸ್. ಉಗ್ರಪ್ಪ
ಕಲಬುರಗಿ.ಆ.31.(ಕ.ವಾ.)-ದೇಶ ಮತ್ತು ವಿಶ್ವಕ್ಕೆ ರಾಮಾಯಣ ಮಹಾಕಾವ್ಯವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರ ಸಂದೇಶಗಳು ಇಂದಿಗೂ ಪ್ರಸ್ತುತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಅವರು ಅಭಿಪ್ರಾಯಪಟ್ಟರು.
ಅವರು ಗುರುವಾರ ಗುಲಬರ್ಗಾ ವಿಶ್ವವಿದ್ಯಾಲಯದ ಅಂಬೇಡ್ಕರ ಭವನದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯ, ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ “ಭಾರತೀಯ ಸಮಾಜಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಮತ್ತು ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು” ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಆಶಯ ಭಾಷಣ ಮಾಡಿದರು. ಆದರೆ, ವಿಶ್ವಕ್ಕೆ ಇಂತಹ ಮಹಾನ್ ಕೊಡುಗೆ ನೀಡಿರುವ ಮಹರ್ಷಿ ವಾಲ್ಮೀಕಿಯ ಹೆಸರನ್ನು ಹೇಳಲು ಇಂದು ಹಿಂದೇಟು ಹಾಕಲಾಗುತ್ತಿದೆ ಎಂದು ಉಗ್ರಪ್ಪ ಅವರು ವಿಷಾದ ವ್ಯಕ್ತಪಡಿಸಿದರು.
ವಾಲ್ಮೀಕಿ ರಚಿಸಿದ ರಾಮಾಯಣವಲ್ಲದೇ, ರಾಷ್ಟ್ರಕವಿ ಕುವೆಂಪು ರಚಿಸಿದ ರಾಮಾಯಣ ದರ್ಶನಂ, ಹಾಗೆಯೇ ತಮಿಳಿನಲ್ಲಿ ರಚಿಸಿರುವ ರಾಮಾಯಣ ಗ್ರಂಥಗಳನ್ನು ಓದಿದ್ದೇನೆ. ಎಲ್ಲೂ ವಾಲ್ಮೀಕಿಯನ್ನು ಕೊಲೆಗುಡುಕ, ಕೆಟ್ಟವ ಎಂದು ಬರೆದಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದರು.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದಲ್ಲಿ ಒಂದು ಲಕ್ಷ ಶ್ಲೋಕಗಳನ್ನು ಬರೆದಿದ್ದಾರೆ. ಆದರೆ, ಲಭ್ಯವಾಗುವುದು ಕೇವಲ 28 ಸಾವಿರ ಶ್ಲೋಕ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಮಹರ್ಷಿ ರಚಿಸಿದ ರಾಮಾಯಣ ವಿಶ್ವದ 300 ಭಾಷೆಗಳಿಗೆ ಭಾಷಾಂತಗೊಂಡ ಕಾವ್ಯ. ಇಷ್ಟೊಂದು ಭಾಷೆಗೆ ತರ್ಜುಮೆಗೊಂಡ ಗ್ರಂಥ ಮತ್ತೊಂದಿಲ್ಲ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ರಾವಣನಿಂದ ನಡೆದ ಸೀತಾಮಾತೆಯ ಅಪಹರಣ ಪ್ರಸಂಗ ಪ್ರಾಸ್ತಾಪಿಸಿದ ಉಗ್ರಪ್ಪ ಅವರು, ಹೆಣ್ಣನ್ನು ಶೋಷಣೆ ಮಾಡಿದರೆ, ಸೋಲು ಅಥವಾ ಸಾವು ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.
ಹಾಗೆಯೇ ಪರಿಸರ ಸಂರಕ್ಷಣೆ, ದುರ್ಬಲಪರ ಮುಂತಾದವುಗಳ ಬಗ್ಗೆ ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಕಾವ್ಯದಲ್ಲಿ ಸಂದೇಶ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಬಸವ, ಬುದ್ಧ, ಅಂಬೇಡ್ಕರ, ಗಾಂಧೀಜಿ ಅವರಿಗೆಲ್ಲ ಗುರುಸ್ಥಾನದಲ್ಲಿ ನಿಲ್ಲುವವರೇ ವಾಲ್ಮೀಕಿ ಮಹರ್ಷಿಗಳು ಎಂದು ಅವರು ಗುಣಗಾನ ಮಾಡಿದರು.
ಹಂಪಿ ವಿಶ್ವವಿದ್ಯಾಲಯದ ಪ್ರೊ. ಮಂಜುನಾಥ ಬೇವಿನಕಟ್ಟಿ ಅವರು ಮಾತನಾಡಿ, ವಾಲ್ಮೀಕಿ ಮಹರ್ಷಿಗಳ ರಾಮಾಯಣ ಕಾವ್ಯದ ಮೂಲಕ ಬದುಕಲ್ಲಿ ಏನೇನು ಇರಬೇಕೆಂಬ ಅಂಶಗಳನ್ನು ಕಟ್ಟಿಕೊಡುವ ಮುಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕೊಂಡಾಡಿದರು.
ಕಾವ್ಯದಲ್ಲಿ ಬರುವ ಅಧಿಕಾರ ರಾಜಕಾರಣ, ಯುದ್ಧ ರಾಜಕಾರಣ ಹಾಗೂ ಸಾಂಸ್ಕøತಿಕ ರಾಜಕಾರಣ ಕುರಿತ ಅಂಶಗಳನ್ನು ರಾಮಾಯಣ ಕಥೆಗಳನ್ನು ಉದಾಹರಿಸಿ ವಿವರಿಸಿದರು.
ರಾಮಾಯಣ ಕಾವ್ಯದಲ್ಲಿ ಈ ಹಿಂದೆ ಬೇಕಾದ ಕೆಲ ಅಂಶಗಳನ್ನು ತೆಗೆದು, ಬೇಡವಾದ ಅಂಶಗಳನ್ನು ಒಂದು ಗುಂಪು ಸೇರಿತು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಸ್.ಆರ್. ನಿರಂಜನ್ ಅವರು ಮಾತನಾಡಿ, ವಾಲ್ಮೀಕಿ ಮಹರ್ಷಿಗಳಂತೆ, ಗಾಂಧೀಜಿ, ಬಸವ, ಬುದ್ಧ ಕುರಿತಂತೆ ಹೆಚ್ಚು ಹೆಚ್ಚು ವಿಚಾರ ಸಂಕಿರಣಗಳು ನಡೆಯಬೇಕು ಎಂದು ಅವರು ಪ್ರತಿಪಾದಿಸಿದರು.
ಪಾಠ-ಪ್ರವಚನ ಜೊತೆಗೆ ಇಂತಹ ವಿಚಾರ ಸಂಕಿರಣಗಳಲ್ಲಿ ಹೆಚ್ಚು ಪಾಲ್ಗೊಂಡು ಮಹಾನ್ ವ್ಯಕ್ತಿಗಳ ಆಚಾರ-ವಿಚಾರ ತಿಳಿದುಕೊಂಡು ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.
ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಪ್ರೊ.ಜಿ. ಶ್ರೀರಾಮುಲು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾರಾಯಣರಾವ್ ಕಾಳೆ, ವಿದ್ಯಾವಿಷಯಕ ಪರಿಷತ್ ಸದಸ್ಯ ನಾಗೇಶ ಕೊಳ್ಳಿ, ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಶಿವರಾಜ ಬಿ. ಪಾಟೀಲ, ಗುಲಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಸಿ.ಎಸ್. ಪಾಟೀಲ ಮುಂತಾದವರು ವೇದಿಕೆ ಮೇಲಿದ್ದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ದಯಾನಂದ ಅಗಸರ ಅವರು ಸ್ವಾಗತಿಸಿದರು. ಡಾ. ಎಂ.ಬಿ.ಕಟ್ಟೀಮನಿ ಅವರು ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸುಶ್ರವ್ಯವಾಗಿ ವಾಲ್ಮೀಕಿ ಮಹರ್ಷಿ ಕುರಿತ ಶ್ಲೋಕವÀನ್ನು ಹಾಡಿದರು.
ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸೂಚನೆ
ನಂತರ ಅವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಗಳು 200 ಶೌಚಾಲಯಗಳನ್ನು 2017ರ ಅಕ್ಟೋಬರ 2ರೊಳಗಾಗಿ ನಿರ್ಮಿಸಬೇಕೆಂದು ಶಿಕ್ಷಕರಿಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೆವಿಡ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಕಾಂತ ಜೀವಣಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬುರಾವ ರಾಠೋಡ, ಸಿ.ಆರ್.ಪಿ. ನವೀನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಾ ಹಾಗೂ ಶಿಕ್ಷಕರು, ನಾಗರಿಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ವಿದ್ಯಾರ್ಥಿಗಳ ಕುಂದುಕೊರತೆ ಆಲಿಕೆ
ಕಲಬುರಗಿ.ಆ.31.(ಕ.ವಾ.)-ಬೆಂಗಳೂರಿನ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀ ಎನ್. ಸಿ. ಶ್ರೀನಿವಾಸ ಮತ್ತು ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಎಚ್. ಕೆ. ಜಗದೀಶ್ ಅವರು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿರುವ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿಗೆ ಬುಧವಾರ ಭೇಟಿ ನೀಡಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಆಲಿಸಿದರಲ್ಲದೇ ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸುವ ಭರವಸೆ ನೀಡಿದರು.
ಬೋಧಕ, ಬೋಧಕೇತರ ಸಿಬ್ಬಂದಿಗಳ ಕಾರ್ಯಕ್ಷಮತೆ ಬಗ್ಗೆ ಮತ್ತು ಒಟ್ಟಾರೆ ಕಾಲೇಜಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಆ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಸಿ. ಪಿ. ಬಮ್ಮನಪಾಡ್ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಶಿವಾನಂದ. ಎಚ್. ಲೇಂಗಟಿ ಸೇರಿದಂತೆ ಎಲ್ಲ ಅಧಿಕಾರಿಗಳನ್ನು ಉಪಸ್ಥಿತರಿದ್ದರು.
ಕಲಬುರಗಿಯಲ್ಲಿ ಸೈನ್ಯ ಭರ್ತಿ ರ್ಯಾಲಿ: ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕಲಬುರಗಿ.ಆ.31.(ಕ.ವಾ.)-ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ 2017ರ ಅಕ್ಟೋಬರ್ 4 ರಿಂದ 14 ರವರೆಗೆ ಆಯೋಜಿಸಲಾಗಿರುವ ಸೇನಾ ಭರ್ತಿ ರ್ಯಾಲಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಯೋಜಿಸಲಾಗಿದೆ.
ಈ ಸೈನ್ಯ ಭರ್ತಿ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಯುವಕರು ಸೆಪ್ಟೆಂಬರ್ 15ರೊಳಗಾಗಿ ತಿತಿತಿ.iಟಿಜiಚಿಟಿಚಿಡಿmಥಿ.ಟಿiಛಿ.iಟಿವೆಬ್‍ಸೈಟ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ನಂತರ ಅಡ್ಮಿಟ್ ಕಾರ್ಡ್‍ನ್ನು ಪಡೆದು ಈ ರ್ಯಾಲಿಯಲ್ಲಿ ಭಾಗವಹಿಸಬೇಕೆಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ.ಆ.31.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಹೈದ್ರಾಬಾದಿನಿಂದ ರಸ್ತೆ ಮೂಲಕ ಸೆಪ್ಟೆಂಬರ್ 1ರಂದು ಸಂಜೆ 4 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 2ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 3ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಮಕ್ಕಳು ಮತ್ತು ಮಹಿಳಾ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಬೇಕು--- ವಿ.ಎಸ್. ಉಗ್ರಪ್ಪ
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರುಗಳಾದ ಶರಣಪ್ಪ ಮಟ್ಟೂರು, ವಿನೀಶ ನೀರೊ, ಪ್ರಫುಲ್ಲ ಮಧುಕರ್, ಡಾ. ವಸುಂಧರಾ ಭೂಪತಿ, ಹೆಚ್.ಆರ್. ರೇಣುಕಾ, ಕೆ.ಎಸ್. ವಿಮಲಾ, ಜ್ಯೋತಿ ಎ., ಪ್ರಭಾ ಎನ್,
ಡಾ. ಲೀಲಾ ಸಂಪಿಗೆ ಅವರು ಹಾಜರಿದ್ದರು.
ಡಾ. ಲೀಲಾ ಸಂಪಿಗೆ ಅವರು ಹಾಜರಿದ್ದರು.
ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿ ಸಭೆ
ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಿ ವರದಿ ನೀಡಲು ಸೂಚನೆ
ಕಲಬುರಗಿ,ಆ.31.(ಕ.ವಾ)- ಸರ್ಕಾರಿ ಕಚೇರಿಗಳಲ್ಲಿ 10ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದರೆ ಅಂತಹ ಕಚೇರಿಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ಮತ್ತು ಅತ್ಯಾಚಾರ ನಿಯಂತ್ರಿಸುವ ಆಂತರಿಕ ದೂರು ಸಮಿತಿ ರಚಿಸಿ ಸೆಪ್ಟೆಂಬರ್ ಅಂತ್ಯದ ವರೆಗೆ ಸಮಿತಿಗೆ ವರದಿ ನೀಡಬೇಕು ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿ ಅಧ್ಯಕ್ಷರಾದ ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಹೇಳಿದರು.
ಅವರು ಗುರುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಹುತೇಕ ಕಚೇರಿಗಳಲ್ಲಿ ಆಂತರಿಕ ಸಮಿತಿ ರಚನೆ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೆ ಸಮಿತಿ ರಚನೆ ಮಾಡಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಮಿತಿ ಸದಸ್ಯರಿಗೆ ಕಾರ್ಯಾಗಾರ ಏರ್ಪಡಿಸಿ ಕಾಯ್ದೆ ಬಗ್ಗೆ ಮಾಹಿತಿ ನೀಡಬೇಕು. ಸಮಿತಿಯಲ್ಲಿ ಶೇ.50 ಸದಸ್ಯರು ಮಹಿಳೆಯರು ಇರಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ನೊಂದವರಿಗೆ ನ್ಯಾಯ ಮತ್ತು ಪರಿಹಾರ ನೀಡುವುದು ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡಲು ಸಮಿತಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಿತಿ ರಚನೆ ಮಾಡದಿದ್ದ ಅಧಿಕಾರಿಗಳಿಗೆ 50 ಸಾವಿರ ರೂ. ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಗಳಲ್ಲಿನ ಶಿಶು ಮರಣಕ್ಕೆ ಪೌಷ್ಠಿಕಾಂಶದ ಆಹಾರ, ಅವಧಿ ಪೂರ್ವ ಜನನ, ಕಡಿಮೆ ತೂಕ, ಜನನದ ನಂತರ ಉಸಿರಾಟ ತೊಂದರೆ ಮುಖ್ಯ ಕಾರಣವಾಗಿದೆ. 2011ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ ಪ್ರತಿ 1000 ಪುರುಷರಿಗೆ 973 ಮಹಿಳೆಯರಿದ್ದು, ಜಿಲ್ಲೆಯಲ್ಲಿ ಲಿಂಗಾನುಪಾತ ಪ್ರತಿ 1000 ಪುರುಷರಿಗೆ 971 ಮಹಿಳೆಯರಿದ್ದಾರೆ. ರಾಜ್ಯಕ್ಕೆ ಹೋಲಿಸಿದಲ್ಲಿ ಜಿಲ್ಲೆಯಲ್ಲಿ ಶೇ.2ರಷ್ಟು ಮಾತ್ರ ಲೈಂಗಿಕ ಅನುಪಾತ ಕಡಿಮೆ ಇದ್ದು, ಉತ್ತಮ ಬೆಳವಣಿಗೆಯಾಗಿದೆ. ಜಿಲ್ಲೆಯಲ್ಲಿ 98 ಸ್ಕ್ಯಾನಿಂಗ್ ಸೆಂಟರ್‍ಗಳಿದ್ದು, ಇದರಲ್ಲಿ ನೊಂದಾವಣಿಯಾದ ಸ್ಕ್ಯಾನಿಂಗ್ ಮಶೀನ್‍ಗಳ ಸಂಖ್ಯೆ 128 ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ ಸಜ್ಜನಶೆಟ್ಟಿ ಸಭೆಯ ಗಮನಕ್ಕೆ ತಂದರು.
ಶಿಶು ಮರಣ ಪ್ರಮಾಣ ಇನ್ನು ತಗ್ಗಿಸಲು ಜಿಲ್ಲಾ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ವಾರ್ಮರ್, ಇನ್‍ಕ್ಯೂಬೇಟರ್ ಹೆಚ್ಚಿನ ಸಂಖ್ಯೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಹಾಗೂ 500-1000 ಗ್ರಾಂ ಕಡಿಮೆ ತೂಕದಲ್ಲಿ ಜನನವಾಗುವ ಶಿಶುಗಳ ಜೀವ ಉಳಿಸುವತ್ತ ವೈದ್ಯರು ಹೆಚ್ಚು ಗಮನಹರಿಸಬೇಕು ಹಾಗೂ ಲಿಂಗ ಅನುಪಾತವನ್ನು ಸರಿದೂಗಿಸಲು ಜಿಲ್ಲೆಯಲ್ಲಿ ವ್ಯಾಪಕ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಸಮಿತಿಯ ಅಧ್ಯಕ್ಷರು ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೋರ್ಲಪಾಟಿ ಮಾತನಾಡಿ, ಶಿಶು ಮರಣ ಪ್ರಮಾಣ ಹೆಚ್ಚಳಕ್ಕೆ ಗರ್ಭಿಣಿ ಮಹಿಳೆಯರಿಗೆ ಸೂಕ್ತ ಶೌಚಾಲಯದ ಕೊರತೆ ಹಾಗೂ ಪೌಷ್ಠಿಕಾಂಶ ಆಹಾರ ಮುಖ್ಯ ಕಾರಣವಾಗಿರುವುದನ್ನು ಗಮನಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಹೆರಿಗೆ ಆಗುವ ಆಸ್ಪತ್ರೆಗಳ ಆವರಣದಲ್ಲಿಯೇ ಪೌಷ್ಠಿಕ ಆಹಾರ ಒದಗಿಸಲು ಅಂಗನವಾಡಿ ಕೇಂದ್ರ ಮತ್ತು ನವಜಾತ ಶಿಶುಗಳಿಗೆ ಸೋಂಕು ಬಾರದಂತೆ ಸೂಕ್ತ ಪ್ರತಿರೋಧಕ ಹನಿಗಳು ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ “ಸಿರಿ” ಮತ್ತು “ಕೂಸು” ಎಂಬ ಹೆಸರಿನ ನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 60 ಸಾವಿರ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಇದೂವರೆಗೆ 21 ಸಾವಿರ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈ ಪೈಕಿ 11 ಸಾವಿರ ಶೌಚಾಲಯಗಳನ್ನು ಗರ್ಭಿಣಿಯರಿಗಾಗಿ ನಿರ್ಮಿಸಿರುವುದು ಮಾದರಿ ಕಾರ್ಯಕ್ರಮವಾಗಿದೆ ಎಂದು ಸಮಿತಿ ಗಮನಕ್ಕೆ ತಂದರು.
ನೂತನ ಪರಿಣಾಮಕಾರಿ ಈ ಯೋಜನೆ ಬಗ್ಗೆ ಪೂರಕವಾಗಿ ರಾಜ್ಯ ಸರ್ಕಾರವು ಅಕ್ಟೋಬರ್ 1 ರಿಂದ ಮಾತೃಪೂರ್ಣ ಯೋಜನೆ ಜಾರಿಗೊಳಿಸÀುತ್ತಿದೆ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದರು.
ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಕೆ.ಬಿ. ಶಾಣಪ್ಪ, ಶರಣಪ್ಪ ಮಟ್ಟೂರು, ವಿನೀಶ ನೀರೊ, ಪ್ರಫುಲ್ಲ ಮಧುಕರ್, ಡಾ. ವಸುಂಧರಾ ಭೂಪತಿ, ಹೆಚ್.ಆರ್. ರೇಣುಕಾ, ಕೆ.ಎಸ್. ವಿಮಲಾ, ಜ್ಯೋತಿ ಎ., ಪ್ರಭಾ ಎನ್, ಡಾ. ಲೀಲಾ ಸಂಪಿಗೆ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೀಗಾಗಿ ಲೇಖನಗಳು NEWS AND PHOTO DATE: 01--09--2017
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 01--09--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 01--09--2017 ಲಿಂಕ್ ವಿಳಾಸ https://dekalungi.blogspot.com/2017/09/news-and-photo-date-01-09-2017.html
0 Response to "NEWS AND PHOTO DATE: 01--09--2017"
ಕಾಮೆಂಟ್ ಪೋಸ್ಟ್ ಮಾಡಿ