NEWS AND PHOTO DATE: 07--09-2017

NEWS AND PHOTO DATE: 07--09-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 07--09-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 07--09-2017
ಲಿಂಕ್ : NEWS AND PHOTO DATE: 07--09-2017

ಓದಿ


NEWS AND PHOTO DATE: 07--09-2017

ಕೃಷಿ ಸಚಿವರ ಪ್ರವಾಸ ರದ್ದು 
ಕಲಬುರಗಿ.ಆಗಸ್ಟ್.07.(ಕ.ವಾ.)-ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಸೆಪ್ಟೆಂಬರ್ 8ರಂದು ಹಮ್ಮಿಕೊಂಡಿದ್ದ ಕಲಬುರಗಿ ಜಿಲ್ಲೆಯ ಪ್ರವಾಸ ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದ  ರದ್ದಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಜಿಲಾನಿ. ಹೆಚ್. ಮೊಕಾಶಿ ತಿಳಿಸಿದ್ದಾರೆ.  
ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ--ಡಾ|| ಶರಣಪ್ರಕಾಶ್ ಪಾಟೀಲ್
ಕಲಬುರಗಿ,ಸೆ.07.(ಕ.ವಾ.)-ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಳಜಿಯಿಂದ ಕಂಡು ಅವರಿಗೆ ಮೌಲ್ಯಧಾರಿತ ಶಿಕ್ಷಣ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಅವರು ಗುರುವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ 2017-18ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.  ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಿಲ್ಲ ಎಂಬ ಭಾವನೆ ಇದೆ. ಹೀಗಾಗಿ ಶಿಕ್ಷಕರು ಸರ್ಕಾರಿ ಶಾಲೆಯ ಮಕ್ಕಳನ್ನು ಪಠ್ಯ ಶಿಕ್ಷಣದ ಜೊತೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಮೌಲ್ಯಾಧಾರಿತ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವ ಮೂಲಕ ಜನರಲ್ಲಿ ಸರ್ಕಾರಿ ಶಾಲೆ ಬಗ್ಗೆ ಉತ್ತಮ ಭಾವನೆ ಹೊಂದಲು ಶ್ರಮಿಸಬೇಕು. ಮಕ್ಕಳು ಸಾಮಾಜಿಕ ಜೀವಿಯಾಗಿ ಬದುಕಲು ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳನ್ನು ಭೋದಿಸುವುದಲ್ಲದೇ ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕøತಿಕ, ಕ್ರೀಡೆ ಕ್ಷೇತ್ರಗಳಲ್ಲಿಯೂ ಮಕ್ಕಳನ್ನು ತೊಡಗಿಸಿಕೊಂಡು ಮುಂದಿನ ಜವಾಬ್ದಾರಿಯುತ ಪ್ರಜೆಗಳನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಮೂಲ. ಶಿಕ್ಷಣದಿಂದ ಮಾತ್ರ ಬದಲಾವಣೆ ಮತ್ತು ಪರಿವರ್ತನೆ ಸಾಧ್ಯ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿವೆ. ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿಹೊಂದಿರುವ ರಾಜ್ಯದ ಮುಖ್ಯಮಂತ್ರಿಗಳು ಕ್ಷೀರಭಾಗ್ಯ, ಶೂ ಭಾಗ್ಯ, ಬಿಸಿಯೂಟ ದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಶಿಕ್ಷಣದ ಪ್ರಾರಂಭಿಕ ಹಂತವಾದ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಪೈಕಿ 10 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಈಗಾಗಲೆ ಅಧಿಸೂಚನೆ ಹೊರಡಿಸಿದ್ದು, ಇದರಲ್ಲಿ ಹೈದ್ರಾಬಾದ ಕರ್ನಟಕ ಭಾಗದ 5 ಸಾವಿರ ಹುದ್ದೆಗಳು ಇವೆ ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಮಾತನಾಡಿ ಶಾಲೆಗಳು ದೇವಸ್ಥಾನವಿದ್ದಂತೆ ಶಿಕ್ಷಣ, ಮೌಲ್ಯ, ಸಂಸ್ಕಾರ ಇಲ್ಲಿಯೆ ಸಿಗುತ್ತದೆ. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಿಸಲು ಪ್ರಾಥಮಿಕ ಶಿಕ್ಷಣಕ್ಕೆ ಶಿಕ್ಷಕರು ಹೆಚ್ಚಿನ ಒತ್ತು ನೀಡಬೇಕು ಎಂದರು.
ಚಿಂಚೋಳಿ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಹಾಗೂ ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ಜಿಲ್ಲಾ ಉಪನಿರ್ದೇಶಕ ಶಾಂತಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಮ್ಮ ಚನ್ನಮಲ್ಲಯ್ಯ ಹಿರೇಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತಾಲಯದ ನಿರ್ದೇಶಕಿ ಫಾತೀಮಾ ಬಿ., ಕಮಲಾಪುರ ಡಯಟ್ ಪ್ರಾಂಶುಪಾಲ ಶಸಿಕಾಂತ ಮರ್ತುಳೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಮಲ್ಲಣ್ಣ ಮಡಿವಾಳ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಕಟ್ಟೀಮನಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಬಿ. ಗುತ್ತೇದಾರ್, ಕಲಬುರಗಿ ಉತ್ತರ ತಾಲೂಕಿನ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರುಗಳಾದ ಡಾ. ಭೀಮಸಿಂಗ್ ರಾಠೋಡ, ಶರಣಬಸಪ್ಪ ಎಂ. ಜೋಗದ, ಕಲಬುರಗಿ ದಕ್ಷಿಣ ತಾಲೂಕಿನ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರುಗಳಾದ ತುಕಾರಾಮ ಚಿತ್ತಾಪುರ, ಮಹಾಲಿಂಗಪ್ಪ ಮೂಲಗೆ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ಶಿಕ್ಷಕರಲ್ಲಿ ವೃತ್ತಿ ಕೌಶಲ್ಯವನ್ನು ಹೆಚ್ಚಿಸುವ “ಗುರು ಚೇತನ” ಕಾರ್ಯಕ್ರಮದ ಲೋಗೊ ಬಿಡುಗಡೆ ಮಾಡಿದರು. ಪ್ರಸಕ್ತ 2017-18ನೇ ಸಾಲಿನಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕಿಯರಾದ ಶಿವಲೀಲಾ ಸೂರ್ಯಪ್ರಕಾಶ್, ಸುರೇಖಾ ಜಗನ್ನಾಥ ಹಾಗೂ ಜಿಲ್ಲೆಯ ಪ್ರೌಢ ಮತ್ತು ಪ್ರಾಥಮಿಕ ವಿಭಾಗದಿಂದ ತಲಾ 8 ಜನ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಸಂಚಾರಿ ತಾರಾಲಯಕ್ಕೆ ಜಿಲ್ಲಾ ಸಚಿವರಿಂದ ಚಾಲನೆ
ಕಲಬುರಗಿ,ಸೆ.07.(ಕ.ವಾ.)-ಖಗೋಳ ವಿಜ್ಞಾನ ಮತ್ತು ಇತರೆ ವೈಜ್ಞಾನಿಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಶಾಲೆಯ ಅಂಗಳದಲ್ಲಿಯೆ ಮನೋರಂಜನೆಯೊಂದಿಗೆ ಮಾಹಿತಿ ನೀಡುವ ಸಂಚಾರಿ ತಾರಾಲಯಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಗುರುವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಚಾಲನೆ ನೀಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಚಲಿತ ಖಗೋಳ ವಿಜ್ಞಾನದ ಬಗ್ಗೆ ಮಾಹಿತಿ ತಿಳಿದುಕೊಳ್ಳುವ, ನಿರ್ದಿಷ್ಟ ಸ್ಥಳದಲ್ಲಿರುವ ತಾರಾಲಯಗಳಿಗೆ ಭೇಟಿ ನೀಡುವುದು ಕಷ್ಟಕರವಾಗಿರುವುದನ್ನು ಮನಗಂಡು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮುಖಾಂತರ ಸಂಚಾರಿ ತಾರಾಲಯ ವಾಹನ ಸಿದ್ದಪಡಿಸಿದೆ. ಈ ತಾರಾಲಯವು ಕಲಬುರಗಿ ಸೇರಿದಂತೆ ವಿಭಾಗದ ಎಲ್ಲಾ ಜಿಲ್ಲೆಯ ಪೌಢಶಾಲೆಗಳಿಗೆ ತೆರಳಿ ಶಾಲೆಯ ಅಂಗಳದಲ್ಲಿಯೆ ಅತ್ಯಾಧುನಿಕ ಪ್ರೊಜೆಕ್ಟರ್ ಸಹಾಯದಿಂದ ವಿಶೇಷ ಗೋಳಾಕಾರದ ಗೊಮ್ಮಟದಲ್ಲಿ ಅದ್ಭುತ ಕಾಲ್ಪನಿಕ ಅಕಾಶವನ್ನು ಸೃಷ್ಠಿಸಿ ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನ ಮತ್ತು ಇತರೆ ವೈಜ್ಞಾನಿಕ ವಿಷಯಗಳ ಕುರಿತು ಮಾಹಿತಿ ನೀಡಲಿದೆ. 
ಈ ಸಂದರ್ಭದಲ್ಲಿ ಚಿಂಚೋಳಿ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಮ್ಮ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಸಂಚಾರಿ ತಾರಾಲಯದ ವ್ಯವಸ್ಥಾಪಕ ಅನುಪ್ ಪಟವಾಲ ಉಪಸ್ಥಿತರಿದ್ದರು.
ಚನ್ನೂರ ಗ್ರಾಮದ ಬಾವಿ ಜಿಲ್ಲಾಡಳಿತದ ವಶಕ್ಕೆ 
ಕಲಬುರಗಿ,ಸೆ.07.(ಕ.ವಾ.)-ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚನ್ನೂರ ಗ್ರಾಮದಲ್ಲಿ ದಲಿತರು ಕುಡಿಯುವ ನೀರಿಗಾಗಿ ಬಳಸುವ ಬಾವಿಯನ್ನು ಜಿಲ್ಲಾಡಳಿತದ ಅಧೀನಕ್ಕೆ ಪಡೆಯಲಾಗುವುದು. ಈ ಬಾವಿಯಿಂದ ಚನ್ನೂರ ಗ್ರಾಮದ ಎಲ್ಲ ಸಾರ್ವಜನಿಕರಿಗೆ ನೀರು ದೊರಕುವ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎ. ಮುನಿಯಪ್ಪ ಜೇವರ್ಗಿ ತಹಶೀಲ್ದಾರರಿಗೆ ಸೂಚಿಸಿದರು. 
ಅವರು ಗುರುವಾರ ಚನ್ನೂರ ಗ್ರಾಮಕ್ಕೆ ಭೇಟಿ ನೀಡಿ ದಲಿತರು ಕುಡಿಯುವ ನೀರಿಗಾಗಿ ಬಳಸುವ ಬಾವಿಯಲ್ಲಿ ವಿಷ ಬೆರೆಸಿರುವ ಪ್ರಕರಣ ಪರಿಶೀಲಿಸಿ ಮಾತನಾಡಿ, ಬಾವಿಯಲ್ಲಿ ವಿಷ ಬೆರೆಸಿದವರನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಗುಂಡಾ ಕಾಯ್ದೆ ಅಡಿ ಶಿಕ್ಷೆ ವಿಧಿಸಬೇಕು. ಅಂಥವರನ್ನು  ಸಮಾಜಘಾತಕರೆಂದು ಗುರುತಿಸಿ ಗಡಿಪಾರು ಮಾಡಲು ಆಯೋಗದಿಂದ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಬೇಕೆಂದು ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ತಿಳಿಸಿದರು. 
ಚನ್ನೂರ ಗ್ರಾಮದ ದಲಿತರು ಸುಮಾರು 60 ವರ್ಷಗಳಿಂದ ಸಮೀಪದ ಪಟ್ಟಾ ಭೂಮಿಯಲ್ಲಿ ಹೆಣಗಳನ್ನು ಹೂಳುತ್ತಿದ್ದಾರೆ. ಅವರಿಗಾಗಿ ಪ್ರತ್ಯೇಕ ಸ್ಮಶಾನ ಭೂಮಿ ಇರುವುದಿಲ್ಲ. ಸಧ್ಯ ಸ್ಮಶಾನವನ್ನಾಗಿ ಮಾಡಿಕೊಂಡಿರುವ ಭೂಮಿಯನ್ನು ಖರೀದಿಸಿ  ಅದನ್ನು  ಸ್ಮಶಾನ ಭೂಮಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು. 
ದಲಿತರು ಸಹ ದೇಶದ ನಾಗರಿಕರಾಗಿದ್ದು, ಅವರನ್ನು ನಾಗರಿಕರಂತೆ ನೋಡಿಕೊಳ್ಳಬೇಕು. ದಲಿತ ಜನಾಂಗಕ್ಕೆ ಪದೇ ಪದೇ ತೊಂದರೆ ನೀಡದೇ ಸರಿಸಮಾನವಾಗಿ ನೋಡಿಕೊಳ್ಳಬೇಕು. ಇದಕ್ಕಾಗಿ ಸಂವಿಧಾನದಲ್ಲಿ ಹಲವಾರು ಕಾನೂನುಗಳನ್ನು ರೂಪಿಸಲಾಗಿದೆ ಎಂದರು. 
ಚನ್ನೂರ ಗ್ರಾಮದ ದಲಿತ ದೌಲಪ್ಪ ಗುರುಲಿಂಗಪ್ಪ ಹೊಸಮನಿ ಮಾತನಾಡಿ, ದಲಿತರು ಕುಡಿಯುವ ನೀರಿಗಾಗಿ ಉಪಯೋಗಿಸುವ ಬಾವಿಯಲ್ಲಿ ಈ ಹಿಂದೆ ಹಾವು, ನಾಯಿ, ಚಪ್ಪಲಿ ಹಾಕುವುದರ ಮೂಲಕ ತೊಂದರೆ ನೀಡಿದ್ದಾರೆ. ಸಧ್ಯ ಬಾವಿಯಲ್ಲಿ ವಿಷ ಬೆರೆಸಿರುವುದು ನಾಲ್ಕನೇ ಘಟನೆಯಾಗಿದ್ದು, ಇಲ್ಲಿಯವರೆಗೆ ಯಾರ ಮೆಲೂ ಕ್ರಮ ಜರುಗಿಸಿಲ್ಲ ಎಂದು ತಮ್ಮ ಅಳಲನ್ನು ತೊಡಿಕೊಂಡರು. 
ಚನ್ನೂರ ಗ್ರಾಮದ ದಲಿತರು ಸಮೀಪದ ಖಾಸಗಿ ಜಮೀನಿನಲ್ಲಿ ಸುಮಾರು 60 ವರ್ಷಗಳಿಂದ ಅಂತ್ಯ ಸಂಸ್ಕಾರ ನಡೆಸುತ್ತಾ ಬಂದಿದ್ದಾರೆ. ಆದರೆ ಅಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸುತ್ತಿಲ್ಲ ಹಾಗೂ ಹರಿಜನ ಕೆರಿಯಲ್ಲಿ ಕುಡಿಯುವ ನೀರಿನ ತೊಂದರೆಯಿದ್ದು, ಅಲ್ಲಿ ನೀರಿನ ಟ್ಯಾಂಕ್ ನಿರ್ಮಿಸಿ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಮಾದೇವಿ ಜಾನಕರ ಅಧ್ಯಕ್ಷರಿಗೆ ತಿಳಿಸಿದರು.
ಆಗಸ್ಟ್ 30ರಂದು ಬಾವಿಯಲ್ಲಿ ವಿಷ ಬೆರೆಸಿರುವ ಘಟನೆ ನಡೆದ ನಂತರ ಸದರಿ ಬಾವಿಯನ್ನು ಮೂರು ಬಾರಿ ಸಂಪೂರ್ಣವಾಗಿ ಖಾಲಿ ಮಾಡಿ ಬ್ಲಿಚಿಂಗ್ ಪೌಡರ್‍ದಿಂದ ಸ್ವಚ್ಛಗೊಳಿಸಲಾಗಿದೆ. ನಂತರ ನೀರಿನ ಸ್ಯಾಂಪಲ್ ಪಡೆದು ತಪಾಸಣೆಗೆ ಕಳುಹಿಸಲಾಗಿದೆ. ನೀರು ಕುಡಿಯಲು ಯೋಗ್ಯವಾದಿದ್ದರೆ ಸರಬರಾಜು ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಿಳಿಸಿದರು. 
ಈ ಸಂದರ್ಭದಲ್ಲಿ ಆಯೋಗದ ಸದಸ್ಯ ಆನಂದ ಎಲ್. ಸಂದ್ರಿಮನಿ, ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಜೇವರ್ಗಿ ತಹಶೀಲ್ದಾರ ಯಲ್ಲಪ್ಪ, ಜೇವರ್ಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಮಾನೆ, ಚನ್ನೂರ ಗ್ರಾಮಸ್ಥರು ಸೇರಿದಂತೆ ಮತ್ತಿತರರು ಹಾಜರಿದ್ದರು. 
ಪರಿಶಿಷ್ಟ ಜಾತಿ-ಪಂಗಡದ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಸೂಚನೆ 
ಕಲಬುರಗಿ,ಸೆ.07.(ಕ.ವಾ.)-ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎ. ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು. 
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ, ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳಿಗೆ ನೀಡಿರುವ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಂಡು ಸಮಾಜದಲ್ಲಿ ತುಳಿತಕ್ಕೊಳಗಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಎಲ್ಲರೂ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು. 
ಜೇವರ್ಗಿ ತಾಲೂಕಿನ ಚನ್ನೂರ ಗ್ರಾಮದಲ್ಲಿ ದಲಿತರು ಕುಡಿಯುವ ನೀರಿಗಾಗಿ ಬಳಸುವ ಬಾವಿಯಲ್ಲಿ ವಿಷ ಬೆರೆಸಿರುವ ಪ್ರಕರಣ ನಡೆದು ನಾಲ್ಕೈದು ದಿನಗಳಾದರೂ ಯಾರ ಮೆಲೂ ಕ್ರಮ ಜರುಗಿಸಿಲ್ಲ. ಇದು ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯ ಬೇಜವಾಬ್ದಾರಿತನವಾಗಿದೆ. ಈ ಹಿಂದೆ ನಡೆದ ಘಟನೆಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿದ್ದಲ್ಲಿ ಈ ಪ್ರಕರಣ ನಡೆಯುತ್ತಿರಲಿಲ್ಲ. ಇನ್ನೂ ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸಭೆಗೆ ತಿಳಿಸಿದರು.
ಚನ್ನೂರ ಗ್ರಾಮದಲ್ಲಿ ದಲಿತರು ಕುಡಿಯುವ ನೀರಿಗೆ ಬಳಸುವ ಬಾವಿಯಿರುವ ಹೊಲದ ಮಾಲೀಕರು ಬಾವಿಯಿಂದ ನೀರು ತೆಗೆದು ಬಟ್ಟೆ ಒಗೆಯುವುದು, ಜಾನುವಾರು ತೊಳೆಯುವುದರಿಂದ ಬೇರೆ ಭೂ ಪ್ರದೇಶ ಹಾಳಾಗುತ್ತಿದೆ. ಅದನ್ನು ತಡೆಯಬೇಕು ಅಥವಾ ಅದಕ್ಕೆ ಪರ್ಯಾಯ ಭೂಮಿ ನೀಡಲು ಕೋರಿದ್ದಾರೆ. ಸ್ಮಶಾನಕ್ಕಾಗಿ ಬಳಸುತ್ತಿರುವ ಹೊಲದ ಮಾಲೀಕರು ಸಹಿತ ಸ್ಮಶಾನಕ್ಕಾಗಿ ಭೂಮಿ ನೀಡಲು ಸಿದ್ಧರಿದ್ದಾರೆ. ಈ ಪ್ರಕರಣಗಳನ್ನು ಪರಿಶೀಲಿಸಿ ಭೂಮಿ ಖರೀದಿಸಿ ಕ್ರಮ ಜರುಗಿಸುವಂತೆ ತಿಳಿಸಿದರು. 
ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನೌಕರಿ ನೀಡಬೇಕೆನ್ನುವುದು ಸರ್ಕಾರದ ಆಶಯವಾಗಿದೆ. ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 12 ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಕೇವಲ 3 ಪ್ರಕರಣಗಳಲ್ಲಿ ನೌಕರಿ ನೀಡಲಾಗಿದೆ. ಡಾ. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ  ಭೂಮಿಯಿಲ್ಲದ ಪರಿಶಿಷ್ಟರಿಗೆ ಭೂಮಿ ಒದಗಿಸುವ ಯೋಜನೆ ಇದೆ. ಸ್ವ ಉದ್ಯೋಗ ಕೈಗೊಳ್ಳುವವರಿಗೆ ಸಾಲ ಸೌಲಭ್ಯದ ನೆರವು ಸಹ ನೀಡಲಾಗುವುದು. ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ಒದಗಿಸಲಾಗುವುದು. ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಟ್ರಾಸಿಟಿಯಿಂದ ಸಂಬಂಧಗಳು ಕೆಡುತ್ತವೆ. ದಲಿತರು ಅಟ್ರಾಸಿಟಿ ಹಕ್ಕನ್ನು ಸಣ್ಣ ಪುಟ್ಟ ವಿಚಾರಗಳಿಗೆ ಬಳಸಿಕೊಳ್ಳಬಾರದು. ಇದನ್ನು ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕೆಂದರು. 
ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಮಾತನಾಡಿ, ಜೇವರ್ಗಿ ತಾಲೂಕಿನ ಚನ್ನೂರ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಿಸಲಾಗಿದ್ದು, ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ. ಈಗಾಗಲೇ ವಿಷ ಬೆರೆಸಿದ ಬಾವಿಯನ್ನು ಮೂರು ಬಾರಿ ಸ್ವಚ್ಛಗೊಳಿಸಲಾಗಿದೆ. ಸ್ಮಶಾನ ಭೂಮಿಗೆ ಸಂಬಂಧಿಸಿದಂತೆ ಸಧ್ಯ ಸ್ಮಶಾನಕ್ಕಾಗಿ ಬಳಸುತ್ತಿರುವ ಭೂಮಿಯನ್ನು ಮಾಲೀಕರು ನೀಡಲು ಒಪ್ಪಿದಲ್ಲಿ ಅದನ್ನು ಖರೀದಿಸಿ ಸ್ಮಶಾನ ಭೂಮಿಯಾಗಿ ಅಭಿವೃದ್ದಿಪಡಿಸಲಾಗುವುದು. ಯಾವುದೇ ಗ್ರಾಮದಲ್ಲಿ ದಲಿತರಿಗಾಗಿ ಸ್ಮಶಾನ ಇಲ್ಲದಿದ್ದಲ್ಲಿ ಭೂಮಿಯನ್ನು ನೇರವಾಗಿ ಖರೀದಿಸಲು ಅವಕಾಶಗಳಿದ್ದು, ಭೂಮಿ ಲಭ್ಯವಿರುವ ಮಾಹಿತಿಯನ್ನು ನೀಡಬೇಕು. ಆದಷ್ಟು ಬೇಗ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಪ್ರವಾಸೋದ್ಯಮ ಇಲಾಖೆಗಳ ಸಭೆ ಕರೆದು ಪರಿಶಿಷ್ಟ ಜನಾಂಗಕ್ಕೆ ಸಿಗಬೇಕಾಗಿರುವ ಸವಲತ್ತುಗಳನ್ನು ದೊರಕಿಸಲಾಗುವುದು ಎಂದರು. 
ಸಭೆಯಲ್ಲಿ ಆಯೋಗದ ಸದಸ್ಯ ಆನಂದ ಎಲ್. ಸಂದ್ರಿಮನಿ, ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಂದೇನವಾಜ್, ಜೇವರ್ಗಿ ತಹಶೀಲ್ದಾರ ಯಲ್ಲಪ್ಪ, ಜೇವರ್ಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಮಾನೆ,  ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.   
ಸೇನಾ ಭರ್ತಿ ರ್ಯಾಲಿಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ 
ಕಲಬುರಗಿ.ಆಗಸ್ಟ್.07.(ಕ.ವಾ.)-ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ 2017ರ ಅಕ್ಟೋಬರ್ 5ರಿಂದ 14ರವರೆಗೆ ನಡೆಯುವ ಸೇನಾ ಭರ್ತಿ ರ್ಯಾಲಿ ಸಂದರ್ಭದಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದರು. 
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಸೇನಾ ಭರ್ತಿ ರ್ಯಾಲಿ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,  ಸೇನಾ ಭರ್ತಿ ರ್ಯಾಲಿ ಸುಗಮವಾಗಿ ಮತ್ತು ಅಚ್ಚುಕಟ್ಟಾಗಿ ನೆರವೇರಿಸಲು ಚಂದ್ರಶೇಖರ ಪಾಟೀಲ ಕ್ರೀಡಾಂಗಣವನ್ನು ಅಕ್ಟೋಬರ್ 1ರಿಂದ 15ರವರೆಗೆ ಕಾಯ್ದಿರಿಸಬೇಕು. ಸೇನಾ ಭರ್ತಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಮತ್ತು ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಜನರೇಟರ್ ವ್ಯವಸ್ಥೆ, ಶೌಚಾಲಯ, ಸ್ನಾನದ ಕೋಣೆಗಳ, ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರು ಸೇನಾ ಭರ್ತಿ ರ್ಯಾಲಿಯ ಆರಂಭದಿಂದ ಮುಗಿಯುವರೆಗೆ ವೈದ್ಯರ ತಂಡದ ಜೊತೆಗೆ ಅಂಬ್ಯುಲೆನ್ಸ್ ಸೇವೆ ಒದಗಿಸಬೇಕೆಂದರು.  
ರ್ಯಾಲಿ ಸಂದರ್ಭದಲ್ಲಿ ಪ್ರತಿದಿನ ವಿವಿಧ ಜಿಲ್ಲೆಗಳ ಸುಮಾರು 2 ರಿಂದ 3 ಸಾವಿರ ಅಭ್ಯರ್ಥಿಗಳ ಹಾಗೂ 90 ಜನರು ನೇಮಕಾತಿ ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ ಸ್ಟೇಡಿಯಂನಲ್ಲಿರುವ ವಸತಿ ನಿಲಯದಲ್ಲಿ ಹಾಗೂ ವಿದ್ಯಾರ್ಥಿಗಳ ವಾಸ್ತವ್ಯಕ್ಕಾಗಿ ಬಂಜಾರ ಭವನವನ್ನು  ಗುರುತಿಸಲಾಗಿದೆ.  ರ್ಯಾಲಿ ನಡೆಯುವ ಸ್ಥಳ ಹಾಗೂ ವಾಸ್ತವ್ಯ ಮಾಡಿರುವ ಸ್ಥಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಪ್ರಮಾಣಪತ್ರ ಪರಿಶೀಲನೆ ಮಾಡಲು ಓರ್ವ ವಿಶೇಷ ತಹಸೀಲ್ದಾರರನ್ನು ನೇಮಕ ಮಾಡಬೇಕು. ಅಭ್ಯರ್ಥಿಗಳ ಪ್ರಮಾಣಪತ್ರಗಳ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ ಅಧಿಕಾರಿಗಳನ್ನು ನೇಮಿಸಬೇಕೆಂದರು.  ಸೈನಿಕ ಅಧಿಕಾರಿಗಳಿಗೆ ನಾಲ್ಕು ವಾಹನ ವ್ಯವಸ್ಥೆ ಮಾಡಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬ್ಯಾರಿಕೇಡಿಂಗ್, ಶ್ಯಾಮಿಯಾನ, ಸ್ಟೇಟ್ ಜೊತೆಗೆ ಪ್ಲಾಟ್ ಫಾರ್ಮ, ವೈದ್ಯಕೀಯ ತಪಾಸಣೆ ಮಳಿಗೆ ಸೇರಿದಂತೆ ಮತ್ತಿತರ ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.  
ಅಭ್ಯರ್ಥಿಗಳು ವಾಸ್ತವ್ಯ ಮಾಡುವ ಸ್ಥಳದಲ್ಲಿ ಮಹಾನಗರ ಪಾಲಿಕೆಯಿಂದ ಫುಡ್ ಮಳಿಗೆ, ಜಿರಾಕ್ಸ್ ಅಂಗಡಿಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಬೇಕಲ್ಲದೇ ಸೇನಾ ಭರ್ತಿ ರ್ಯಾಲಿ ನಡೆಯುವ ಸ್ಥಳವನ್ನು ಸ್ವಚ್ಛಗೊಳಿಸಲು ಸಫಾಯಿ ಕರ್ಮಚಾರಿಗಳನ್ನು ನೇಮಕ ಮಾಡಬೇಕು. ರ್ಯಾಲಿ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‍ಗಾಗಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲ ಅಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿ ವಹಿಸಲಾಗಿದ್ದು, ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು. ಅಕ್ಟೋಬರ್ 3ರವರೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಅವರು ಸೂಚಿಸಿದರು.  ಅಭ್ಯರ್ಥಿಗಳು ವಾಸ್ತವ್ಯ ಮಾಡುವ ಸ್ಥಳದಲ್ಲಿ ಹಾಗೂ ರ್ಯಾಲಿ ನಡೆಯುವ ಸ್ಥಳದಲ್ಲಿ ವಿದ್ಯುತ್ ಕಡಿತವಾಗದಂತೆ ಜೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು. ರ್ಯಾಲಿಯಲ್ಲಿ ಭಾಗವಹಿಸಲು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ರೈಲು ನಿಲ್ದಾಣ ಹಾಗೂ ಬಸ್‍ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಬೇಕೆಂದರು. ಸಭೆಯಲ್ಲಿ ಬೆಳಗಾವಿಯ ಆರ್ಮಿ ರಿಕ್ರೂಟ್‍ಮೆಂಟ್ ಆಫೀಸಿನ ಸುಬೇದಾರ್ ಮೇಜರ್ ಎನ್.ಕೆ. ಶರ್ಮಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಅಂಬಾದಾಸ್ ಬಜಂತ್ರಿ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. 



ಹೀಗಾಗಿ ಲೇಖನಗಳು NEWS AND PHOTO DATE: 07--09-2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 07--09-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 07--09-2017 ಲಿಂಕ್ ವಿಳಾಸ https://dekalungi.blogspot.com/2017/09/news-and-photo-date-07-09-2017.html

Subscribe to receive free email updates:

0 Response to "NEWS AND PHOTO DATE: 07--09-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ