News and photo date: 15---09---2017

News and photo date: 15---09---2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo date: 15---09---2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo date: 15---09---2017
ಲಿಂಕ್ : News and photo date: 15---09---2017

ಓದಿ


News and photo date: 15---09---2017

ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ: ವಾರದೊಳಗೆ ವರದಿ ನೀಡಲು ಸೂಚನೆ
********************************************************************
ಕಲಬುರಗಿ,ಸೆ.15.(ಕ.ವಾ.)-ಚಿಂಚೋಳಿ ತಾಲೂಕಿನ ಗರಗಪಳ್ಳಿ, ಕರ್ಚಖೇಡ್ ಮತ್ತು ಗಡಿಕೇಶ್ವರ ಗ್ರಾಮ ಪಂಚಾಯತಿಗಳಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಕಲಬುರಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ 8ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತಿಯಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೆ ಪದೇ ಸದಸ್ಯರು ದೂರು ನೀಡುತ್ತಿದ್ದು, ಮತ್ತಷ್ಟು ವಿಳಂಬ ಮಾಡದೆ ಕೂಡಲೇ ವರದಿ ನೀಡಬೇಕು ಹಾಗೂ ಜೇವರ್ಗಿ ತಾಲೂಕಿನ ಗ್ರಾಮ ಪಂಚಾಯತಿಯ ಅವ್ಯವಹಾರಗಳಲ್ಲಿ ಕೆಳ ಹಂತದ ಸಿಬ್ಬಂದಿಗಳ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪಕ್ಕೆ ಜೇವರ್ಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯ ಮೇಲೆಯೂ ಕಾನೂನಿನ್ವಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿ ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಶಿಶು ಮರಣ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಪ್ರಾಥಮಿಕ ಹಂತದಲ್ಲಿ ತಡೆಗಟ್ಟಬೇಕಾದ ಅಂಗನವಾಡಿ ಕಾರ್ಯಕರ್ತೆಯರ ಖಾಲಿ ಹುದ್ದೆಗಳ ನೇಮಕಾತಿ ಕೂಡಲೇ ಮಾಡಬೇಕು ಎಂದು ಸಭೆಯ ಗಮನಕ್ಕೆ ತಂದರು. ಕಳೆದ ಜೂನ್ ತಿಂಗಳಲ್ಲಿಯೆ ನೇಮಕಾತಿ ಸಂಬಂಧ ಸಭೆ ನಡೆಸಲಾಗಿದ್ದು, ಒಂದು ವಾರದಲ್ಲಿ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ನೇಮಕಾತಿಗೆ ಸಂಬಂಧಿಸಿದಂತೆ ಸಭಾ ನಡಾವಳಿ ಸಿದ್ದಪಡಿಸಿ ಜಿಲ್ಲಾಧಿಕಾರಿಗಳು ಅನುಮೋದನೆ ಪಡೆಯದೆ ನೇಮಕಾತಿಗೆ ವಿಳಂಬ ನೀತಿ ಅನುಸರಿಸಿದ ಆಳಂದ, ಚಿಂಚೋಳಿ ಮತ್ತು ಅಫಜಲಪುರ ತಾಲೂಕಿನ ಶಿಶು ಅಬೀವೃದ್ಧಿ ಯೋಜನಾಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ನೇಮಕಾತಿಯನ್ನು ಸಹ ಶೀಘ್ರಗತಿಯಲ್ಲಿ ಮಾಡುವಂತೆ ಡಿ.ಎಚ್.ಓ. ಅವರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೋರ್ಲಪಾಟಿ ತಿಳಿಸಿದರು.
ಜಿಲ್ಲೆಯಲ್ಲಿ ಹಾಗೂ ಕಲಬುರಗಿ ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಸೂಕ್ತ ಮುನ್ನೆಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು. ಕಲಬುರಗಿ ನಗರದಲ್ಲಿ ಡೆಂಗ್ಯೂವಿನ ಸೊಂಕು ತಡೆಗಟ್ಟಲು ಮುನ್ನೆಚರಿಕೆ ಕ್ರಮವಾಗಿ ನಗರದಾದ್ಯಂತ ಫಾಗಿಂಗ್ ಮಾಡುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ ಮಾತನಾಡಿ ಜೂನ್ ಎರಡನೇ ವಾರದಲ್ಲಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆಯಾದರೂ ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ಡೆಂಗ್ಯೂ ಸೊಳ್ಳೆಗಳ ನಿಯಂತ್ರಣಕ್ಕೆ ಸಮೂಹ ಮಾಧ್ಯಮ, ಕರಪತ್ರಗಳ ಹಂಚಿಕೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮೂಲಕ ಜನರಿಗೆ ಮುನ್ನೇಚ್ಚರಿಕೆ ಕ್ರಮದ ಮಾಹಿತಿ ನೀಡಲಾಗುತ್ತಿದೆ. ಈ ಸಂಬಂಧ ಸೊಳ್ಳೆ ಉತ್ಪತ್ತಿಯ ಮೂಲ ಚಟುವಟಿಕೆಗಳ ನಿಯಂತ್ರಣಕ್ಕಾಗಿ ಮಾಹಿತಿ ನೀಡಲು (ಸೋರ್ಸ್ ಡಿಡಕ್ಷನ್ ಎಕ್ಟಿವಿಟೀಸ್) 27 ಜನರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗಳಿಗೆ ಪ್ರತ್ಯೇಕ ವಾರ್ಡ್‍ನಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾನ್ಯವಾಗಿ ನೀರು ಸಂಗ್ರಹಣೆ ಇರುವ ಸ್ಥಳದಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳ ನಿಯಂತ್ರಣಕ್ಕೆ ಜಿಲ್ಲೆಯ 42 ಇತರೆ ಸ್ಥಳದಲ್ಲಿ ಹಾಗೂ 212 ಕಲ್ಲು ಗಣಿ ಪ್ರದೇಶದಲ್ಲಿ ಗಪ್ಪಿ ಮೀನುಗಳು ಬಿಡಲಾಗಿದ್ದು, ಆಯಾ ಸ್ಥಳದಲ್ಲಿ ಫಾಗಿಂಗ್ ಸಹ ಮಾಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಸ್ಟಾಫ್ ನರ್ಸ್ ನೇಮಕಕ್ಕೆ 2017-18ನೇ ಸಾಲಿನಲ್ಲಿ 50 ಜನರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು, ತಿಂಗಳಾಂತ್ಯದಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದೆಂದು ಸಭೆಯ ಗಮನಕ್ಕೆ ತಂದರು.
ಜೇವರ್ಗಿ ತಾಲೂಕಿನ ಅನೇಕ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ಸಮಸ್ಯೆ ಇದ್ದು, ಈ ಬಗ್ಗೆ ಗಮನ ಹರಿಸಬೇಕು ಹಾಗೂ ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 10 ಕೋಟಿ ರೂ.ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲಯ್ಯ ಹಿರೇಮಠ ಸಭೆಗೆ ಕೋರಿದರು. ಜಿಲ್ಲೆಯ ಶಾಲೆಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು “ಸಿರಿ” ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದು ಈಗಾಗಲೆ ಪ್ರಗತಿಯಲ್ಲಿದೆ. ಶಾಲೆಗಳಲ್ಲಿನ ಶೌಚಾಲಯಗಳ ನಿರ್ಮಾಣಕ್ಕೆ ಹಾಗೂ ಗಂಭೀರ ಸಮಸ್ಯೆಗಳಿಗೆ ಹೆಚ್.ಕೆ.ಆರ್.ಡಿ.ಬಿ. ಮ್ಯಾಕ್ರೋ ಅನುದಾನವನ್ನು ಬಳಸಿಕೊಳ್ಳಲು ಕ್ರಿಯಾ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
ಜೇವರ್ಗಿ ತಾಲೂಕಿನ 2014-15ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಅರ್ಹರಿಗೆ ಯೋಜನೆ ಲಭಿಸಿಲ್ಲ. ನಿಯಮಾವಳಿಯನ್ವಯ ಫಲಾನುಭವಿಗಳ ಆಯ್ಕೆ ಮಾಡಿಲ್ಲವಾದರಿಂದ ಈ ಕುರಿತು ತನಿಖೆ ಮಾಡಿ ಎಂಬ ಸದಸ್ಯರ ಆರೋಪಕ್ಕೆ ಸಂಬಂಧಿಸಿದಂತೆ ಈ ಕುರಿತು ವರದಿ ನೀಡುವಂತೆ ಹಾಗೂ ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ಸೂಚನಾ ಫಲಕ ಮೂಲಕ ಪ್ರದರ್ಶಿಸುವಂತೆ ಹಾಗೂ ಯೋಜನೆ ಬಗ್ಗೆ ಸದಸ್ಯರಿಗೆ ಮಾಹಿತಿ ಒದಗಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಲಾಯಿತು. ಆಳಂದ ತಾಲೂಕಿನ ಕುಡಿಯುವ ನೀರು ಯೋಜನೆ ಕಾಮಗಾರಿಗಳ ಕುರಿತು ಜಂಟಿ ಕೃಷಿ ನಿರ್ದೇಶಕರು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪರಿಶೀಲಿಸಬೇಕೆಂದು ತಿಳಿಸಲಾಯಿತು.
ಜಂಟಿ ಕೃಷಿ ನಿರ್ದೇಶಕ ಜಿಲಾನಿ ಹೆಚ್. ಮೊಕಾಶಿ ಮಾತನಾಡಿ ಕಳೆದ ಜುಲೈ ಮತ್ತು ಆಗಸ್ಟ್ ಮಾಹೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು ಬೆಳೆ ಇಳುವರಿ ಇಳಿಮುಖವಾಗಿದೆ. ಆದರೆ ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ತೊಗರಿ, ಹತ್ತಿ, ಸೂರ್ಯಕಾಂತಿ ಬೆಳೆಗಳಿಗೆ ಉತ್ತಮವಾಗಿದೆ. ಚಿತ್ತಾಪುರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಕಳೆದ ಸೆ.8 ಮತ್ತು 14ರ ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಕಂದಾಯ ಮತ್ತು ಕೃಷಿ ಇಲಾಖೆಯ ಜಂಟಿ ಸರ್ವೇ ಮಾಡಿ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸೆ.8ರ ಮಳೆಗೆ ಆದ ಬೆಳೆ ಹಾನಿಗೆ ಬೆಳೆ ವಿಮೆ ಪರಿಹಾರಕ್ಕಾಗಿ 20 ಜನ ರೈತರು ಅರ್ಜಿ ಸಲ್ಲಿಸಿದ್ದು, ಪರಿಹಾರಕ್ಕಾಗಿ ವಿಮಾ ಕಂಪನಿಗೆ ಮಾಹಿತಿ ನೀಡಲಾಗಿದೆ. ಒಂದು ವಾರದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಆರಂಭವಾಗಲಿದ್ದು, ಸುಮಾರು 4.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಪ್ರಸ್ತುತ ಕಡಲೆ, ಜೋಳ, ಸೋಯಾಬಿನ್ 10 ಸಾವಿರ ಕ್ಟಿಂಟಾಲ್ ಬೀಜ ದಾಸ್ತಾನು ಮಾಡಲಾಗಿದ್ದು, ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 50 ಸಾವಿರ ಕ್ವಿಂಟಾಲ್ ಕಡಲೆ ಬೀಜ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. 20 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದ್ದು ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಿಲ್ಲ. ನವೆಂಬರ್-ಡಿಸೆಂಬರ್ ಮಾಹೆಯಲ್ಲಿ ಗೋಧಿ ಬೆಳೆಗೆ ಸೆಪ್ಟೆಂಬರ್ ಅಂತ್ಯಕ್ಕೆ ಗೋಧಿ ಬೀಜಗಳು ಲಭ್ಯವಾಗಲಿದೆ ಎಂದು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಭಾಗವಹಿಸಿದ್ದರು.
ಸಭೆ ಆರಂಭಕ್ಕೂ ಮುನ್ನ ಇತ್ತೀಚೆಗೆ ನಿಧನ ಹೊಂದಿದ ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.

ಸೆಪ್ಟೆಂಬರ್ 25ರೊಳಗಾಗಿ ಸಂಘದ ಮಹಾಸಭೆ ಜರುಗಿಸಲು ಸೂಚನೆ
************************************************************
ಕಲಬುರಗಿ,ಸೆ.15.(ಕ.ವಾ.)-ಕಲಬುರಗಿ ಉಪವಿಭಾಗದಲ್ಲಿ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವಿಧವಾದ ಸಹಕಾರ ಸಂಘಗಳು ಸಹಕಾರ ಶಿಕ್ಷಣ ನಿಧಿಯನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಮೂಲ ಅಧಿನಿಯಮ ಕಲಂ 57(2ಎ) ಪ್ರಕಾರ ಪ್ರತಿಯೊಂದು ಸಹಕಾರ ಸಂಘವು ತಮ್ಮ ನಿವ್ವಳ ಲಾಭದಲ್ಲಿ ಕಾಯ್ದಿಟ್ಟ ನಿಧಿಯನ್ನು ಕಳೆದ ನಂತರ ಶೇ. 2ರಷ್ಟು ಸಹಕಾರ ಶಿಕ್ಷಣ ನಿಧಿ ಪಾವತಿಸಬೇಕು. ಸಂಘದ ವಾರ್ಷಿಕ ಸಾಮಾನ್ಯ ಸಭೆ ನಡೆದ 30 ದಿನದೊಳಗಾಗಿ ಸಹಕಾರ ಮಹಾಮಂಡಳಕ್ಕೆ ಸಂದಾಯ ಮಾಡಬೇಕೆಂದು ಕಲಬುರಗಿ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ತಿಳಿಸಿದ್ದಾರೆ.
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ಕಲಂ 27ರ ಅನುಸಾರ ಕಲಬುರಗಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವಿಧದ ಸಹಕಾರ ಸಂಘಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 25ರೊಳಗಾಗಿ ಜರುಗಿಸಿ ವರದಿಯನ್ನು ಕಲಬುರಗಿ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಗೆ ಸಲ್ಲಿಸಬೇಕೆಂದು ಕಲಬುರಗಿ ಉಪವಿಭಾಗದ ಎಲ್ಲ ಸಹಕಾರ ಸಂಘಗಳಿಗೆ ಅವರು ತಿಳಿಸಿದ್ದಾರೆ

ಸೆಪ್ಟೆಂಬರ್ 17ರಂದು ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ
****************************************************************
ಕಲಬುರಗಿ,ಸೆ.15.(ಕ.ವಾ.)-ಕಲಬುರಗಿ ಜಿಲ್ಲಾಡಳಿತ ಮತ್ತು ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯಿಂದ ಕಲಬುರಗಿಯಲ್ಲಿ ಸೆಪ್ಟೆಂಬರ್ 17ರಂದು ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಗುತ್ತಿದೆ.
ಅಂದು ರವಿವಾರ ಬೆಳಿಗ್ಗೆ 8.30 ಗಂಟೆಗೆ ಕಲಬುರಗಿಯ ಸರ್ಧಾರ ವಲ್ಲಭ ಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ನಂತರ ಬೆಳಿಗ್ಗೆ 9 ಗಂಟೆಗೆ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಹೆಚ್.ಕೆ.ಆರ್.ಡಿ.ಬಿ. ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಧ್ವಜಾರೋಹಣ ನೇರವೇರಿಸುವರು. ಪ್ರವಾಸೋದ್ಯಮ, ಜೈವಿಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ. ಗುತ್ತೇದಾರ್, ವಿಧಾನಸಭಾ ಶಾಸಕರುಗಳಾದ ಡಾ.ಖಮರುಲ್ ಇಸ್ಲಾಂ, ದತ್ತಾತ್ರೇಯ ಸಿ.ಪಾಟೀಲ್ ರೇವೂರ್, ಜಿ.ರಾಮಕೃಷ್ಣ, ಬಿ.ಆರ್.ಪಾಟೀಲ್, ಡಾ|| ಅಜಯಸಿಂಗ್, ವಿಧಾನÀ ಪರಿಷತ್ತಿನ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ್, ಅಮರನಾಥ ಪಾಟೀಲ್, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣ ಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಾಗಣ್ಣಗೌಡ ಸಂಕನೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕ ಕುಮಾರ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಸೆಪ್ಟೆಂಬರ್ 16, 17 ರಂದು ಕುಡಿಯುವ ನೀರಿನ ವ್ಯತ್ಯಯ
**************************************************
ಕಲಬುರಗಿ,ಸೆ.15.(ಕ.ವಾ.)-ಕಲಬುರ್ಗಿ ನಗರಕ್ಕೆ ನೀರು ಸರಬರಾಜು ಮಾಡುವ ಭೀಮಾ ನದಿಯ ಸರಡಗಿ ಮೂಲ ಸ್ಥಾವರಕ್ಕೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ದಿಂದ 11ಕೆವಿ ಫೀಡರ್ ಮೇಲೆ ಸುಧಾರಣೆ ಕಾರ್ಯಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಸೆಪ್ಟೆಂಬರ್ 16 ಹಾಗೂ 17 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.

ಗಂಡೋರಿನಾಲಾ ಪ್ರವಾಹ ಮುನ್ನೆಚ್ಚರಿಕೆ
***********************************
ಕಲಬುರಗಿ,ಸೆ.15.(ಕ.ವಾ.)-ಕಲಬುರಗಿ ತಾಲೂಕಿನ ಬೆಳಕೋಟಾ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಗಂಡೋರಿನಾಲಾ ನೀರಾವರಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನಿರಂತರವಾಗಿ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಸಂದರ್ಭದಲ್ಲಿ ಗಂಡೋರಿನಾಲಾ ಜಲಾಶಯವು ಭರ್ತಿಯಾಗುವ ಹಂತದಲ್ಲಿದೆ.
ಜಲಾಶಯದ ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆಯ ಕೋಡಿ ಬಾಗಿಲುಗಳ ಮೂಲಕ ಯಾವುದೇ ಸಮಯದಲ್ಲಿ ಮತ್ತು ಯಾವುದೇ ಮುನ್ಸೂಚನೆ ನೀಡದೆ ನದಿಯ ಪಾತಳಿಗೆ ಹರಿ ಬಿಡಲಾಗುವುದು. ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ಗ್ರಾಮಸ್ಥರು ನದಿ ಪಾತಳಿಯ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ಆಸ್ತಿ ಹಾಗೂ ದನಕರುಗಳಿಗೆ ಹಾನಿಯಾಗದಂತೆ ಮುನ್ನೇಚ್ಚರಿಕೆ ವಹಿಸಬೇಕೆಂದು ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಕಲಬುರಗಿ ಐ.ಪಿ.ಸಿ. ವಿಭಾಗ ನಂ.1ರ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಮರ್ಜಾ ಯೋಜನೆ ಜಲಾಶಯ ಪ್ರವಾಹ ಮುನ್ನೆಚ್ಚರಿಕೆ
***********************************************
ಕಲಬುರಗಿ,ಸೆ.15.(ಕ.ವಾ.)-ಅಮರ್ಜಾ ಯೋಜನೆಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನಿರಂತರವಾಗಿ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಸಂದರ್ಭದಲ್ಲಿ ಅಮರ್ಜಾ ಯೋಜನೆ ಜಲಾಶಯವು ಭರ್ತಿಯಾಗುವ ಹಂತದಲ್ಲಿದೆ.
ಜಲಾಶಯದ ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆಯ ಕೋಡಿ ಬಾಗಿಲುಗಳ ಮೂಲಕ ಯಾವುದೇ ಸಮಯದಲ್ಲಿ ಮತ್ತು ಯಾವುದೇ ಮುನ್ಸೂಚನೆ ನೀಡದೆ ನದಿಯ ಪಾತಳಿಗೆ ಹರಿ ಬಿಡಲಾಗುವುದು. ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ಗ್ರಾಮಸ್ಥರು ನದಿ ಪಾತಳಿಯ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ಆಸ್ತಿ ಹಾಗೂ ದನಕರುಗಳಿಗೆ ಹಾನಿಯಾಗದಂತೆ ಮುನ್ನೇಚ್ಚರಿಕೆ ವಹಿಸಬೇಕೆಂದು ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಕಲಬುರಗಿ ಐ.ಪಿ.ಸಿ. ವಿಭಾಗ ನಂ.1ರ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೈಗಾರಿಕಾ ಸ್ಪಂದನ ಕಾರ್ಯಕ್ರಮ
******************************
ಕಲಬುರಗಿ,ಸೆ.15.(ಕ.ವಾ.)-ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಕೈಗಾರಿಕೋದ್ಯಮಗಳು/ಉದ್ದಿಮೆಶೀಲರು ಎದುರಿಸುತ್ತಿರುವ ಸಮಸ್ಯೆಗಳ ಮತ್ತು ಅವುಗಳ ಪರಿಹಾರಕ್ಕಾಗಿ ಕೈಗಾರಿಕಾ ಸ್ಪಂದನ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಈ ಕೈಗಾರಿಕಾ ಸ್ಪಂದನ ಕಾರ್ಯಕ್ರಮದಲ್ಲಿ ಕೆ.ಐ.ಎ.ಡಿ.ಬಿ. ಮತ್ತು ಕೆ.ಎಸ್.ಎಸ್.ಐ.ಡಿ.ಸಿ. ನಿಗಮ ಮಂಡಳಿಗಳ ಮೂಲಭೂತ ಸೌಕರ್ಯ, ಜೆಸ್ಕಾಂನ ವಿದ್ಯುತ್ ಸಮಸ್ಯೆ ಪರಿಹಾರ, ಪರಿಸರ ಮಾಲಿನ್ಯ ಇಲಾಖೆಯ ಪರವಾನಿಗೆ, ನಗರಸಭೆ/ ಗ್ರಾಮ ಪಂಚಾಯಿತಿ ಮತ್ತು ಕಂದಾಯ ಇಲಾಖೆ ಸಮಸ್ಯೆಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ನಗರ ಯೋಜನಾ ಶಾಖೆ, ಕಾರ್ಮಿಕ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಆಗ್ನಿ ಶಾಮಕ ಇಲಾಖೆ, ಬಾಯ್ಲರ್ ಮತ್ತು ಫ್ಯಾಕ್ಟರೀಸ್ ಇಲಾಖೆ, ಕೆ.ಎಸ್.ಎಫ್.ಸಿ. ಇಲಾಖೆಗಳ ಸಮಸ್ಯೆ ಕುರಿತು ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಲು ಕೈಗಾರಿಕೋದ್ಯಮಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಕೈಗಾರಿಕೋದ್ಯಮಿಗಳಿಗೆ ಪರವಾನಿಗೆ, ನೋಂದಣಿ ಮತ್ತು ಮಂಜೂರಾತಿ ಅನುಮೋದನೆ ಕೊಡಿಸುವುದು, ಕೈಗಾರಿಕಾ ವಸಾಹತು ಮತ್ತು ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಹಾಗೂ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಭೆಯಲ್ಲಿ ಅನುಮೋದನೆಗೊಂಡ ಯೋಜನೆಗಳ ಅನುಷ್ಠಾನಕ್ಕೆ ಬೆಂಗಾವಲು ಸೇವೆ ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಈ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ವಿವಿಧ ಸಂಘ ಸಂಸ್ಥೆಗಳು ಮತ್ತು ವಿವಿಧ ಕೈಗಾರಿಕಾ ನಿಗಮ, ಮಂಡಳಿಗಳ ಮುಖ್ಯಸ್ಥರು ಈ ಕಾರ್ಯಕ್ರಮದ ಸದಸ್ಯರಾಗಿರುತ್ತಾರೆ. ತಮ್ಮ ಕುಂದುಕೊರತೆಗಳೇನಾದರೂ ಇದ್ದಲ್ಲಿ ಸೆಪ್ಟೆಂಬರ್ 28ರೊಳಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ರಾಷ್ಟ್ರಪತಿ ವೃತ್ತ, ಹೊಸ ಜೇವರ್ಗಿ ಕ್ರಾಸ್, ಕಲಬುರಗಿ ಕಚೇರಿಯಲ್ಲಿ ಲಿಖಿತವಾಗಿ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗದವರಿಗೆ ವೃತ್ತಿ ನಿರೂಪಣಾ
**************************************
ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿಗೆ ಅರ್ಜಿ ಆಹ್ವಾನ
********************************************
ಕಲಬುರಗಿ,ಸೆ.15.(ಕ.ವಾ.)-ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಿಂದುಳಿದ ವರ್ಗದ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ, ಪಿ.ಜಿ. ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗಾಗಿ ಆರು ದಿವಸಗಳ ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಅಥವಾ ಇಲಾಖೆಯ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿiಟಿಜಿoಡಿಚಿmಣioಟಿ.gov.iಟಿ ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ, ಶೇಕಡಾವಾರು ಅಂಕ, ಉದ್ಯೋಗ ವಿವರ ಹಾಗೂ ಈ ಹಿಂದೆ ಯಾವುದಾದರೂ ತರಬೇತಿ ಪಡೆದ ವಿವರ ಮತ್ತು ವಿಶೇಷ ಸಾಧನೆಗಳನ್ನೊಳಗೊಂಡ ಸ್ವವಿವರಗಳ ಮಾಹಿತಿಗಳನ್ನು ಭರ್ತಿ ಮಾಡಿ ಸ್ವ ವಿಳಾಸ ಇರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ವಿಳಾಸ ಹಾಗೂ ವಯಸ್ಸನ್ನು ಧೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಅಕ್ಟೋಬರ್ 03 ರ ಸಂಜೆ 5 ಗಂಟೆಯೊಳಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು 560001 ಇವರಿಗೆ ಸಲ್ಲಿಸಬೇಕು.
ಲಕೋಟೆಯ ಮೇಲ್ಬಾಗದಲ್ಲಿ "ವೃತ್ತಿ ನಿರೂಪಣಾ ಕೌಶಲ್ಯ/ ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ (ಹಿಂದುಳಿದ ವರ್ಗ)" ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ, ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080- 22028037/87 ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಸೆಪ್ಟೆಂಬರ್ 25ರಂದು ಕೆಸರಟಗಿಯಲ್ಲಿ ಚಿಗುರು ಮಕ್ಕಳ ಸಾಂಸ್ಕøತಿಕ ಉತ್ಸವ
*******************************************************************
ಕಾರ್ಯಕ್ರಮ
***********
ಕಲಬುರಗಿ,ಸೆ.15.(ಕ.ವಾ.)-ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕೆಸರಟಗಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ “ಚಿಗುರು-2017 ಮಕ್ಕಳ ಸಾಂಸ್ಕøತಿ ಉತ್ಸವ” ಕಾರ್ಯಕ್ರಮವನ್ನು ಸೆಪ್ಟೆಂಬರ್ 25ರಂದು ಸಂಜೆ 6 ಗಂಟೆಗೆ ಕಲಬುರಗಿ ತಾಲೂಕಿನ ಕೆಸರಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೆಸರಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಮಹಾದೇವಪ್ಪ ಮಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಖಾನ್, ಶಿಕ್ಷಣ ಸಂಯೋಜಕಿ ಉಮಾ ಪಾಟೀಲ, ಬಿ.ಆರ್.ಪಿ. ಮಹೇಶ ಹೂಗಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಎಸ್.ಪಿ. ಸುಳ್ಳದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಗಂಗಾಧರ ಸಾವಳಗಿ, ಸರ್ಕಾರಿ ನೌಕರರ ಗೃಹ ಮಂಡಳಿ ಅಧ್ಯಕ್ಷ ನಾಗಪ್ಪ ಹೋನ್ನಳ್ಳಿ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಕಟ್ಟೀಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ್, ಜಿಲ್ಲಾ ಉಪಾಧ್ಯಕ್ಷ ಸುನೀಲದತ್ತ ದೇವಕೂಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧರಾಮ ಗುಣಾರಿ, ರಾಜ್ಯ ಉಪಾಧ್ಯಕ್ಷ ಪರಮೇಶ್ವರ ದೇಸಾಯಿ, ಜಿಲ್ಲಾ ಗೌರವಾಧ್ಯಕ್ಷ ಸುಭಾಷಚಂದ್ರ ಮಾನಾಜಿ, ಹಿರಿಯ ಸಾಹಿತಿ ಮತ್ತು ಸಂಶೋಧಕ ಗುಂಡೇರಾವ್ ಮುಡಬಿ, ಕರ್ನಾಟಕ ರಾಜ್ಯ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವಯ್ಯ ಸ್ವಾಮಿ ಬಿಬಳ್ಳಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಣ್ಣ ಮೇತ್ರೆ, ನಂದೂರ(ಕೆ) ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗಮ್ಮ ಕಟ್ಟಿಮನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನುಪಮಾ, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಕಾಂತ ಗುರುಮಿಠಕಲ್, ನಂದಿನಿ ವಿದ್ಯಾಸಾಗರ, ಸಿ.ಆರ್.ಪಿ.ರಾದ ಬಸವರಾಜ ಸಜ್ಜನ್, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಬಂಡೆಪ್ಪ ಹೆಬ್ಬಾಳ ಪಾಲ್ಗೊಳ್ಳುವರು.
ಚಿಗುರು ಕಾರ್ಯಕ್ರಮದ ಅಂಗವಾಗಿ ಹಿಂದೂಸ್ತಾನಿ ಶಾಸ್ತ್ರೀ ಸಂಗೀತ, ಹಿಂದೂಸ್ತಾನಿ ವಾದ್ಯ ಸಂಗೀತ(ತಬಲ), ಸಮೂಹ ನೃತ್ಯ, ಭರತ ನಾಟ್ಯ, ಸುಗಮ ಸಂಗೀತ, ನಾಟಕ, ಜಾನಪದ ಗೀತೆಗಳು ಹಾಗೂ ಏಕ ಪಾತ್ರಾಭಿನಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ಸೆಪ್ಟೆಂಬರ್ 16ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
******************************************************
ಕಲಬುರಗಿ,ಸೆ.15.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ “ಮತದಾನದ ಮಹತ್ವ ಬಗ್ಗೆ, ಹೆಣ್ಣು ಮಕ್ಕಳ ಮಾರಾಟ ಮತ್ತು ಅಕ್ರಮ ಸಾಗಾಣಿಕೆ ನಿಷೇಧ ಯೋಜನೆ 2015 ಮತ್ತು ಸಂತ್ರಸ್ಥ ಪರಿಹಾರ ಯೋಜನೆ 2012” ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸೆಪ್ಟೆಂಬರ್ 16ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನೀಲಾಂಬಿಕಾ ಪೊಲೀಸ್‍ಪಾಟೀಲ್ ಅಧ್ಯಕ್ಷತೆವಹಿಸಲಿದ್ದಾರೆ. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ, ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ಸಂಚಾಲಕಿ ಡಾ. ಸೀಮಾ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಅವರು ಮತದಾನದ ಮಹತ್ವ ಕುರಿತು ಹಾಗೂ ನ್ಯಾಯವಾದಿ ಸರಸಿಜಾ ರಾಜನ್ ಅವರು ಹೆಣ್ಣು ಮಕ್ಕಳ ಅಕ್ರಮ ಸಾಗಾಣಿಕೆ ಮತ್ತು ಮಾರಾಟ ನಿಷೇಧ ಯೋಜನೆ 2015ರ ಕುರಿತು ಮಾತನಾಡುವರು.

ವಾಹನ ಬಾಡಿಗೆಗಾಗಿ ಟೆಂಡರ್ ಅರ್ಜಿ ಆಹ್ವಾನ
***************************************
ಕಲಬುರಗಿ,ಸೆ.15.(ಕ.ವಾ.)-ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಶಾಖಾ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಪರಿವೀಕ್ಷಣೆ ಹಾಗೂ ಪುಸ್ತಕ ಸಾಗಾಣಿಕೆಗಾಗಿ ಟಾಟಾಸುಮೋ/ಬೊಲೋರೋ/ಇತರೆ ವಾಹನವನ್ನು ಬಾಡಿಗೆ ಆಧಾರದ ಮೇಲೆ ಪಡೆಯಲು ವಿವಿಧ ಟ್ರಾವೆಲ್ ಏಜೆನ್ಸಿಯವರಿಂದ ಇ-ಟೆಂಡರ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೇಂದ್ರದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.
ಇಚ್ಛೆಯುಳ್ಳ ಟ್ರಾವೆಲ್ ಇಜೆನ್ಸಿಯವರು ಟೆಂಡರ್ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 28ರ ಮಧ್ಯಾಹ್ನ 3 ಗಂಟೆಯೊಳಗಾಗಿ ಸಲ್ಲಿಸಬೇಕು. ಅಕ್ಟೋಬರ್ 3ರಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಯಲ್ಲಿ ಟೆಂಡರ್ ತೆರೆಯಲಾಗುವುದು. ಅರ್ಹತೆ, ನಿಬಂಧನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಸೆಪ್ಟೆಂಬರ್ 16ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ಸೆ.15.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗ-1ದಿಂದ 110 ಕೆ.ವಿ. ಕಡಗಂಚಿ ಉಪ ವಿತರಣಾ ಕೇಂದ್ರದಿಂದ ಹೊರಹೋಗುವ ಸಕ್ರ್ಯೂಟ್ ಮೇಲೆ ಸುಧಾರಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 16ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಸದರಿ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮ ಮತ್ತು ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂದು ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
ವಿದ್ಯುತ್ ವ್ಯತ್ಯಯವಾಗುವ ಫೀಡರ್ ಹಾಗೂ ಅದರ ವ್ಯಾಪ್ತಿಯ ಗ್ರಾಮಗಳ ವಿವರ ಇಂತಿದೆ:- 11ಕೆವಿ ಬ್ಯಾಂಕ್ ಯುನಿವರ್ಸಿಟಿ, ಕೂಡಲ್ ಹಂಗರಗಾ ಎನ್‍ಜೆವಾಯ್, ಕ್ಷೇತ್ರ ಎನ್‍ಜೆವಾಯ್, ಲಾಡ ಚಿಂಚೊಳಿ, ಧರ್ಮವಾಡಿ ಎನ್‍ಜೆವಾಯ್, ಜಲ ನಿರ್ಮಲ ಎನ್‍ಜೆವಾಯ್.


ಹೀಗಾಗಿ ಲೇಖನಗಳು News and photo date: 15---09---2017

ಎಲ್ಲಾ ಲೇಖನಗಳು ಆಗಿದೆ News and photo date: 15---09---2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo date: 15---09---2017 ಲಿಂಕ್ ವಿಳಾಸ https://dekalungi.blogspot.com/2017/09/news-and-photo-date-15-09-2017_15.html

Subscribe to receive free email updates:

0 Response to "News and photo date: 15---09---2017"

ಕಾಮೆಂಟ್‌‌ ಪೋಸ್ಟ್‌ ಮಾಡಿ