News and photos Date: 21--09--2017

News and photos Date: 21--09--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photos Date: 21--09--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photos Date: 21--09--2017
ಲಿಂಕ್ : News and photos Date: 21--09--2017

ಓದಿ


News and photos Date: 21--09--2017

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ,ಸೆ.21.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಗದಗದಿಂದ ರಸ್ತೆ ಮೂಲಕ ಸೆಪ್ಟೆಂಬರ್ 22ರಂದು  ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.  
  ಸೆಪ್ಟೆಂಬರ್ 23ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 24ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಆತ್ಮಹತ್ಯೆ ಮಾಡಿಕೊಂಡ ರೈತರಿಗೆ 
ಸೂಕ್ತ ಪರಿಹಾರ ನೀಡಲು ಜಿ.ಪಂ. ಅಧ್ಯಕ್ಷರ ಸೂಚನೆ
ಕಲಬುರಗಿ,ಸೆ.21(ಕ.ವಾ.)-ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸೂಕ್ತ ಪರಿಹಾರವನ್ನು ಸೂಕ್ತ ಸಮಯದಲ್ಲಿ ನೀಡಲು ಕ್ರಮ ಜರುಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ತಿಳಿಸಿದರು. 
ಅವರು ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ಜಿಲ್ಲೆಯಲ್ಲಿ  ಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಬೇಕು. ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದರೆ ಗುತ್ತಿಗೆದಾರರ ಬಿಲ್ಲನ್ನು ತಡೆಹಿಡಿಯಬೇಕು. ಕೆಲವು ರಸ್ತೆಗಳು ಪೂರ್ಣಗೊಂಡು ಕೆಲವೇ ತಿಂಗಳುಗಳಲ್ಲಿ ಕೆಟ್ಟಿರುತ್ತವೆ. ಅಧಿಕಾರಿಗಳು ಈ ಕುರಿತು ಎಚ್ಚರಿಕೆ ವಹಿಸುವಂತೆ ತಿಳಿಸಿದರು. 
ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಿಗೆ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಗ್ರಾಮ ಪಂಚಾಯಿತಿಯಿಂದ ಅಂಗನವಾಡಿ ನಿರ್ಮಿಸುತ್ತಿರುವ ಸಂಸ್ಥೆಗಳಿಗೆ ಹಣ ನೀಡದ ಕಾರಣ ಅಂಗನವಾಡಿ ನಿರ್ಮಿಸಿದ ಗುತ್ತಿಗೆದಾರರಿಗೆ ಬಿಲ್ಲು ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಪಂಚಾಯತ್‍ರಾಜ್ ಇಂಜಿನಿಯರಿಂಗ್ ಅಧಿಕಾರಿಗಳು ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸೂಚಿಸಿದರು. 
ಜಿಲ್ಲೆಯಲ್ಲಿ 600 ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸುವಂತೆ ಶಿಕ್ಷಣ ಇಲಾಖೆಯು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಗೆ ವರದಿ ಸಲ್ಲಿಸಿದೆ. ಕಟ್ಟಡ ದುರಸ್ತಿ ಮತ್ತು ನಿರ್ವಹಣೆಗಾಗಿ 60 ಲಕ್ಷ ರೂ.ಗಳ ಅನುದಾನ ಲಭ್ಯವಿದ್ದು, ಆದಷ್ಟು ಬೇಗ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯಿಂದ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆಯಬೇಕು. ಈ ಅನುದಾನ ಬಳಸಿಕೊಂಡಲ್ಲಿ ಹೆಚ್ಚಿನ ಅನುದಾನ ಪಡೆಯಲು ಅನುಕೂಲವಾಗುವುದು ಎಂದು ಅವರು ತಿಳಿಸಿದರು. 
ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ಹತ್ತನೇ ತರಗತಿಯ ಅರ್ಧ ವಾರ್ಷಿಕ ಪರೀಕ್ಷೆಯ ಫಲಿತಾಂಶ ಆಧಾರದ ಮೇಲೆ ಶಾಲೆಗಳನ್ನು ಗುರುತಿಸಿ ಕಡಿಮೆ ಅಂಕ ಪಡೆಯುವ ಶಾಲೆಯ ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ವಿಶೇಷ ತರಗತಿಗಳನ್ನು ಏರ್ಪಡಿಸಲಾಗುತ್ತಿದೆ. ವಿಶೇಷವಾಗಿ ವಿಜ್ಞಾನ, ಗಣಿತ, ಇಂಗ್ಲೀಷ ವಿಷಯಗಳ ಶಿಕ್ಷಕರ ಹೆಚ್ಚುವರಿ ಸೇವೆಯನ್ನು ಪಡೆಯಲಾಗುತ್ತಿದ್ದು, ಮುಂದಿನ ಆರು ತಿಂಗಳು ಕಾಲ ಈ ಶಿಕ್ಷಕರು ವಿಶೇಷ ತರಗತಿಗಳನ್ನು ಏರ್ಪಡಿಸುವರು. 2017ರ ನವೆಂಬರ್‍ದಿಂದ 2018ರ ಫೆಬ್ರವರಿವರೆಗೆ  ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ರೇಡಿಯೋ ಕಾರ್ಯಕ್ರಮಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಂದ ನೇರ ಸಂವಾದ ಮಾಡಲಾಗುವುದು. ಪ್ರತಿ ಶಾಲೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಈ ಅಧಿಕಾರಿಗಳು ವಿಶೇಷವಾಗಿ ಎಸ್.ಎಸ್.ಎಸ್.ಎಲ್. ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ಅವರಿಗಿರುವ ತೊಂದರೆಗಳನ್ನು ವರದಿ ಮಾಡುವಂತೆ ಸೂಚಿಸಿದ ಸಿಇಓ ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಯಾರಾದರೂ ಅತಿಥಿ ಶಿಕ್ಷಕರಾಗಿ ಕೆಲಸ ನಿರ್ವಹಿಸಲು ಸಿದ್ದರಿದ್ದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದರು.  
ಜಂಟಿ ಕೃಷಿ ನಿರ್ದೇಶಕ ಜಿಲಾನಿ ಹೆಚ್. ಮೊಕಾಶಿ ಮಾತನಾಡಿ, ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ರೈತರು ಕಡಿಲೆ ಬೀಜ ಬಿತ್ತಲು ಅನುವಾಗುವಂತೆ 20,000 ಕ್ವಿಂಟಲ್ ಕಡಿಲೆ ಬೀಜ ದಾಸ್ತಾನು ಮಾಡಲಾಗಿದೆ. ಈಗಾಗಲೇ 11000 ಕ್ವಿಂಟಲ್ ವಿತರಣೆಯಾಗಿದೆ. ಇವು ಪ್ರಮಾಣಿತ ಬೀಜಗಳಾಗಿವೆ. ಇದರೊಂದಿಗೆ ಸಮರ್ಪಕ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 57 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ 30 ರೈತ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ. ಈ ವರ್ಷ 23 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 6 ರೈತರ ವರದಿಗಳು ಬಂದಿವೆ ಎಂದು ಸಭೆಗೆ ಮಾಹಿತಿ ನೀಡಿದರು.  
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲ ಹಿರೇಮಠ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ರಮೇಶ ಯಾಕಾಪುರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. 
ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ 
ಕಲಬುರಗಿ,ಸೆ.21.(ಕ.ವಾ.)-ರಾಜ್ಯ ಸರ್ಕಾರವು 2017 ನೇ ಸಾಲಿನಲ್ಲಿ ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ 05 ಜನ  ಸಹಕಾರಿ ಶ್ರೇಷ್ಟರಿಗೆ ಗುರುತಿಸಿ ಸಹಕಾರಿ ರತ್ನ ಪ್ರಶಸ್ತಿ, 50,000ರೂ. ನಗದು, ಪದಕ, ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತಿದೆ. ಇದಕ್ಕಾಗಿ ಅರ್ಹ ಕಲಬುರಗಿ ಜಿಲ್ಲೆಯ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಟಿ. ಫೈರೋಜ್ ತಿಳಿಸಿದ್ದಾರೆ.  
ಸರ್ಕಾರವು ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ‘ಸಹಕಾರ ರತ’್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲು  ಕಲಬುರಗಿ-ಯಾದಗಿರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು  ರಚಿಸಲಾಗಿದೆ. ಸರ್ಕಾರವು ಗೊತ್ತುಪಡಿಸಿದ ಮಾನದಂಡಗಳನ್ವಯ ಈ ಸಮಿತಿಯು ಅರ್ಹ ಸಹಕಾರಿಗಳನ್ನು ಆಯ್ಕೆ ಮಾಡಲಿದೆ. 
ಸಹಕಾರ ಕ್ಷೇತ್ರದಲ್ಲಿ 10 ವರ್ಷಗಳ ಸೇವೆ ಸಲ್ಲಿಸಿರಬೇಕು. ಸಹಕಾರ ಕ್ಷೇತ್ರದಲ್ಲಿ ಗಣನೀಯವಾಗಿ ಹಾಗೂ ನಿಷ್ಕಳಂಕವಾಗಿ ಸೇವೆ ಸಲ್ಲಿಸಿರಬೇಕು. ಸಹಕಾರ ಕ್ಷೇತ್ರದಲ್ಲಿ ಪ್ರಾಥಮಿಕ ಹಂತದಿಂದ ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸಿದವರಿಗೆ, ಸಹಕಾರಿ ಕಾನೂನು ತತ್ವ ಮತ್ತು ಪರಿಣಿತ ಹೊಂದಿದವರಿಗೆ ಮತ್ತು ಸಹಕಾರ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿದವರಿಗೆ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳೆಯರ ಮತ್ತು ಆರ್ಥಿಕ ದುರ್ಬಲ ವರ್ಗದವರಿಗೆ ಏಳಿಗೆಗಾಗಿ ಸಹಕಾರಿ ಕ್ಷೇತ್ರದ ಮೂಲಕ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಈ ಪ್ರಶಸ್ತಿಯನ್ನು ನೀಡಿದ ಬಳಿಕ ಅವರ ಚಾರಿತ್ರ್ಯ ಹಾಗೂ ಸೇವೆ ಕಳಂಕಿತವಾಗಿದೆ ಎಂದು ಕಂಡುಬಂದಲ್ಲಿ ಈ ಪ್ರಶಸ್ತಿಯನ್ನು ಹಿಂದಕ್ಕೆ ಪಡೆದುಕೊಳ್ಳುವ ಅಧಿಕಾರವು ಸರ್ಕಾರಕ್ಕೆ ಇರುತ್ತದೆ.
ಕಲಬುರಗಿ ಜಿಲ್ಲೆಯ ಸಹಕಾರಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕಲಬುರಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಸೆಪ್ಟೆಂಬರ್ 28ರೊಳಗಾಗಿ ಸಲ್ಲಿಸಬೇಕೆಂದು ಅವರು ಕೋರಿದ್ದಾರೆ.  
  ಪೀಠೋಪಕರಣ ಸರಬರಾಜಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಸೆ.21.(ಕ.ವಾ.)-ಕಲಬುರಗಿಯ ಜಿಲ್ಲೆಯ ಚಿಂಚೋಳಿ ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರ ಕಚೇರಿ ಉಪಯೋಗಕ್ಕಾಗಿ ಸಾಗುವಾನಿ ಡಯಾಸ್ ಟೇಬಲ್, ವುಡನ್ ಚೇರ್, ವುಡನ್ ಟೇಬಲ್ ದೊಡ್ಡದು, ಗ್ಲಾಸ್ ಡೋರ್ ಅಲಮಾರಿ, ಸ್ಟೀಲ್ ಅಲಮಾರಿ ಹಾಗೂ ರಿವಾಲ್ವಿಂಗ್ ಬುಕ್ ಸ್ಟ್ಯಾಂಡ್ ಫೀಠೋಪಕರಣಗಳನ್ನು ಸರಬರಾಜು ಮಾಡಲು ಕೆ.ಟಿ.ಪಿ.ಪಿ. ಕಾಯ್ದೆ 1999 ನಿಯಮ 2000ರನ್ವಯ ಅರ್ಹ ತಯಾರಕರು, ಡೀಲರ್ ಮತ್ತು ಸರಬರಾಜುದಾರರಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ತಿಳಿಸಿದ್ದಾರೆ.  
ಟೆಂಡರ್ ಅರ್ಜಿಗಳನ್ನು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಕಚೇರಿಯಿಂದ ಕಾರ್ಯದಿನದ ಬೆಳಿಗ್ಗೆ 10.30 ರಿಂದ ಸಾಯಂಕಾಲ 5 ಗಂಟೆಯವರೆಗೆ ಪಡೆದು ಭರ್ತಿ ಮಾಡಿ ಅದರೊಂದಿಗೆ ಇ.ಎಂ.ಡಿ 3,000 ರೂ. ಡಿ.ಡಿ./ಎಫ್‍ಡಿಆರ್ ಯನ್ನು ಲಗತ್ತಿಸಿದ ಭದ್ರಪಡಿಸಿದ ಅರ್ಜಿಯ  ಎರಡು ಲಕೋಟೆಗಳನ್ನು ಅಕ್ಟೋಬರ್ 12ರ ಸಾಯಂಕಾಲ 4ಗಂಟೆಯೊಳಗಾಗಿ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಗೆ ಸಲ್ಲಿಸಬೇಕು. ಲಕೋಟೆ ಒಂದರಲ್ಲಿ ಡಿ.ಡಿ./ಎಫ್‍ಡಿಆರ್ ಮತ್ತು ಲಕೋಟೆ ಎರಡರಲ್ಲಿ ಟೆಂಡರ್ ಸಂಬಂಧಪಟ್ಟ ಅರ್ಜಿ, ಪ್ರಮಾಣ ಪತ್ರಗಳು, ಜಿ.ಎಸ್.ಟಿ. ನೋಂದಣಿ ಪತ್ರ ಸೇರಿದಂತೆ ಅಗತ್ಯ ದಾಖಲಾತಿಗಳು ಇರಬೇಕು.
ಅರ್ಜಿದಾರರ ಸಮಕ್ಷಮದಲ್ಲಿ ಭದ್ರಪಡಿಸಿದ ಅರ್ಜಿ ಲಕೋಟೆಗಳನ್ನು ಅಕ್ಟೋಬರ್ 13ರಂದು ಸಂಜೆ 5 ಗಂಟೆಗೆ ತೆರೆಯಲಾಗುವುದು.  ಪೀಠೋಪಕರಣಗಳ ವಿವರ, ಷರತ್ತು, ನಿಬಂಧನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಸೆಪ್ಟೆಂಬರ್ 23ರಂದು ವಿದ್ಯುತ್ ಗ್ರಾಹಕರ ಜನಸ್ಪಂದನ ಸಭೆ 
ಕಲಬುರಗಿ,ಸೆ.21.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ಕಲಬುರಗಿ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಕೆಳಕಂಡ ಉಪವಿಭಾಗಗಳಲ್ಲಿ ಸೆಪ್ಟೆಂಬರ್ 23ರಂದು ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಗ್ರಾಹಕರ ಜನಸ್ಪಂದನ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ವಿಭಾಗ-1ರ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ. 
ಅಫಜಲಪುರ ಉಪವಿಭಾಗಕ್ಕೆ ಸಂಬಂಧಿಸಿದಂತೆ ಚಿನಮಳ್ಳಿಯಲ್ಲಿ, ಕಡಗಂಚಿಯ ಉಪವಿಭಾಗಕ್ಕೆ ಸಂಬಂಧಿಸಿದಂತೆ ಕಡಗಂಚಿಯಲ್ಲಿ, ಆಳಂದ ಉಪವಿಭಾಗಕ್ಕೆ ಸಂಬಂಧಿಸಿದಂತೆ ಅಳಂದದಲ್ಲಿ ಹಾಗೂ ಕಲಬುರಗಿ ಗ್ರಾಮೀಣ ಉಪವಿಭಾಗಕ್ಕೆ ಸಂಬಂಧಿಸಿದಂತೆ ಬೇಲೂರ (ಜೆ) ರಸ್ತೆಯ ಉತ್ತರ ಶಾಖೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಏರ್ಪಡಿಸಲಾಗಿದೆ. ಈ ವಿದ್ಯುತ್ ಗ್ರಾಹಕರ ಜನಸ್ಪಂದನ ಸಭೆಯನ್ನು ಆಯಾ ಉಪವಿಭಾಗದ ಸಂಬಂಧಪಟ್ಟ ಅಧಿಕಾರಿಗಳಾದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರು ನಡೆಸಿಕೊಡಲಿದ್ದಾರೆ. ಸಂಬಂಧಪಟ್ಟ ಗ್ರಾಹಕರು ಈ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.  
ಅದೇ ರೀತಿ ಸೆಪ್ಟೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಗ್ರಾಮೀಣ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಮತ್ತು ಕಾಳಗಿ ಉಪವಿಭಾಗಗಳಲ್ಲಿ ಗ್ರಾಹಕರ ಸಮಸ್ಯೆಗಳ ನಿವಾರಣೆಗಾಗಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ. ವಿದ್ಯುತ್ ಗ್ರಾಹಕರು ತಮ್ಮ ಸಮಸ್ಯೆಗಳೇನಾದರೂ ಇದ್ದಲ್ಲಿ ಈ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ  ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಸತಿ ಕಾರ್ಯಾಗಾರಕ್ಕಾಗಿ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ 
ಕಲಬುರಗಿ,ಸೆ.21.(ಕ.ವಾ.)-ಜಿಲ್ಲಾ ಕೈಗಾರಿಕಾ ಕೇಂದ್ರವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 2017-18ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗ್ರಾಮೀಣ ಅರ್ಹ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರಗಳ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ವಿವಿಧ ಕಾರ್ಯನಿರತ ಪೂರ್ಣ ಪ್ರಮಾಣದ ಕುಶಲಕರ್ಮಿಗಳಿಂದ ವಸತಿ ಕಾರ್ಯಾಗಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. 
ವಿಶೇಷ ಘಟಕ ಯೋಜನೆಯಡಿ 34 ಮತ್ತು ಗಿರಿಜನ ಉಪಯೋಜನೆಯಡಿ 02 ವಸತಿ ಕಾರ್ಯಾಗಾರಗಳನ್ನು ಮಂಜೂರು ಮಾಡುವ ಗುರಿ ಹೊಂದಿದೆ. ಬಿದಿರು, ಬಡಿಗತನ, ಚರ್ಮಗಾರಿಕೆ, ಕರಕುಶಲ ವಸ್ತು ತಯಾರಿಕೆ, ಕಮ್ಮಾರಿಕೆ, ಕುಂಬಾರಿಕೆ, ಬೆಳ್ಳಿ/ಬಂಗಾರ ಆಭರಣ ತಯಾರಿಕೆ, ಜನರಲ್ ಇಂಜಿನಿಯರಿಂಗ್, ಚಾಪೆ ಮತ್ತು ಬುಟ್ಟಿ ಹೆಣೆಯುವಿಕೆ ವೃತ್ತಿಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಸೆಪ್ಟೆಂಬರ್ 22ರಿಂದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಅಕ್ಟೋಬರ್ 10ರೊಳಗೆ ಇಲ್ಲಿಗೆ ಸಲ್ಲಿಸಬೇಕು. 
ಅರ್ಜಿದಾರರು ವಸತಿ ರಹಿತರಾಗಿದ್ದು, ಕುಶಲಕರ್ಮಿ ವೃತ್ತಿಯ ಆದಾಯದಿಂದ ಉಪಜೀವನ ನಡೆಸುತ್ತಿರಬೇಕು. ಈ ಹಿಂದೆ ಯಾವುದೇ ಸರ್ಕಾರದ ಆಶ್ರಯ, ಅಂಬೇಡ್ಕರ, ಬಸವ ಮತ್ತಿತರ ಯೋಜನೆಡಿ ಮನೆ ಪಡೆದಿರಬಾರದು. ಅರ್ಜಿದಾರರು ಸ್ವಂತ ಹೆಸರಿನಲ್ಲಿ (ಕನಿಷ್ಠ 399 ಚ.ಅ.) ಅಳತೆಯ ನಿವೇಶನ ಹೊಂದಿರಬೇಕು. ಕುಶಲಕರ್ಮಿಗಳಿಗೆ ಸಂದರ್ಶನ ನಡೆಸಿ, ಸ್ಥಳ ಪರಿಶೀಲಿಸಿ ಆಯ್ಕೆ ಮಾಡಲಾಗುವುದು.  ಷರತ್ತು ಹಾಗೂ ಮತ್ತಿತರ ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ  ನಿರ್ದೇಶಕರು ಕಲಬುರಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08472-223988,221637ಗಳನ್ನು ಸಂಪರ್ಕಿಸಬಹುದು.
ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿ: 
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕಲಬುರಗಿ,ಸೆ.21.(ಕ.ವಾ.)-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಯೋಜನೆ/ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ, ಪಿ.ಜಿ. ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗಾಗಿ ಆರು ದಿವಸಗಳ ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 3ರವರೆಗೆ ವಿಸ್ತರಿಸಲಾಗಿದೆ. 
ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು.  ಇಲ್ಲವೆ ಇಲಾಖೆಯ ವೆಬ್‍ಸೈಟ್ http://ift.tt/2wEs18b  ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080-22028037/87 ರ ಮೂಲಕ ಸಂಪರ್ಕಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 21 ನಿಗದಿಪಡಿಸಲಾಗಿತ್ತೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಎನ್.ಎಂ.ಎಂ.ಎನ್. ಪರೀಕ್ಷೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಗಮನಕ್ಕೆ 
ಕಲಬುರಗಿ,ಸೆ.21.(ಕ.ವಾ.)-ಡಿ.ಎಸ್.ಇ.ಆರ್.ಟಿ. ಯಿಂದ 2013, 2014, 2015, 2016ರಲ್ಲಿ ನಡೆಸಲಾದ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‍ಶಿಪ್ (ಎನ್.ಎಂ.ಎಂ.ಎನ್) ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳ ವಿವರವನ್ನು shcolarshilp.gov.in(nsp2.0) ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಬೇಕೆಂದು ಕಲಬುರಗಿ ಡಯಟ್‍ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸದರಿ ವಿವರವನ್ನು ವೆಬ್‍ಸೈಟ್‍ನಲ್ಲಿ ಅಪಲೋಡ್ ಮಾಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಂದಿರುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ತಾವು ಆಯ್ಕೆಯಾಗಿರುವ ಶಾಲೆಯ ಮುಖ್ಯ ಗುರುಗಳಿಗೆ ಸಂಪರ್ಕಿಸಿ ತಮ್ಮ ಮಾಹಿತಿಯನ್ನು ಮೇಲ್ಕಂಡ ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಲು ತಿಳಿಸಲಾಗಿದೆ. 
ಮಹೇಶ್ವರಿಗೆ ಪಿಹೆಚ್.ಡಿ. ಪದವಿ 
ಕಲಬುರಗಿ,ಸೆ.21.(ಕ.ವಾ.)-ಸೋಶಿಯಲ್ ವರ್ಕ್ ವಿಷಯದಲ್ಲಿ “ವುಮೆನ್ ಎಟ್ ವರ್ಕ್: ಎ ಸೋಶಿಯಲ್ ವರ್ಕ್ ಸ್ಟಡಿ ಆನ್ ಪೊಲೀಸ್ ಕಾನ್ಸ್‍ಸ್ಟೇಬಲ್ (WOMEN AT WORK: A SOCIAL WORK STUDY ON POLICE CONSTABLES)  ಎಂಬ ವಿಷಯದ ಪ್ರಬಂಧ ಮಂಡನೆಗೆ ಗುಲಬರ್ಗಾ ವಿಶ್ವವಿದ್ಯಾಲಯವು ಮಹೇಶ್ವರಿ ಸುಭಾಶಚಂದ್ರ ಕಾಚಾಪುರ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ. 
ಗುಲಬರ್ಗಾ ವಿಶ್ವವಿದ್ಯಾಲಯದ  ಸೋಶಿಯಲ್ ವರ್ಕ್ ಸಂಶೋಧನಾ ವಿಭಾಗದ ಡಾ. ಕೆ.ಎಸ್. ಮಾಲಿ ಪಾಟೀಲ ಅವರ ಮಾರ್ಗದರ್ಶನದಲ್ಲಿ ಮಹೇಶ್ವರಿ ಸುಭಾಷಚಂದ್ರ ಕಾಚಾಪುರ ಅವರು ಪ್ರಬಂಧ ಮಂಡಿಸಿದ್ದರು. 
ಸೆಪ್ಟೆಂಬರ್ 22ರಂದು ವಿದ್ಯುತ್ ಗ್ರಾಹಕರ ಜನಸಂಪರ್ಕ ಸಭೆ 
  ಕಲಬುರಗಿ,ಸೆ.21.(ಕ.ವಾ.)-ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿಯ (ಕೆ.ಇ.ಆರ್.ಸಿ.) ನಿರ್ದೇಶನದ ಮೇರೆಗೆ  ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಕಲಬುರಗಿ ನಗರ ವಿಭಾಗದ ವ್ಯಾಪ್ತಿಗೆ ಬರುವ ಉಪ ವಿಭಾಗಗಳ ಗ್ರಾಹಕರ ಸಂಪರ್ಕ ಸಭೆಯನ್ನು ಕಲಬುರಗಿ ವೃತ್ತದ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಅಧೀಕ್ಷಕ ಅಭಿಯಂತರರವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 22 ರಂದು ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.   
ಕಲಬುರಗಿ ನಗರ ಉಪ ವಿಭಾಗ-1 ಮತ್ತು ನಗರ ಉಪ ವಿಭಾಗ-3ಕ್ಕೆ ಸಂಬಂಧಿಸಿದಂತೆ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ನಗರ ಉಪ ವಿಭಾಗ-2 ಮತ್ತು ನಗರ ಉಪ ವಿಭಾಗ-4ಕ್ಕೆ ಸಂಬಂಧಿಸಿದಂತೆ ಜನಸಂಪರ್ಕ ಸಭೆಯು ಅಂದು ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿಯ ಸ್ಟೇಶನ್ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಮಂಡಳಿಯ ಕಚೇರಿ ಸಭಾಂಗಣದಲ್ಲಿ ಜರುಗಲಿದೆ. 
ಈ ಜನಸಂಪರ್ಕ ಸಭೆಯಲ್ಲಿ ವಿದ್ಯುತ್ ಗ್ರಾಹಕರು ತಮ್ಮ ಯಾವುದೇ ತರಹದ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಕುಂದುಕೊರತೆಗಳೇನಾದರೂ ಇದ್ದಲ್ಲಿ ಸಲ್ಲಿಸಬಹುದಾಗಿದೆ. ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 22ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
ಕಲಬುರಗಿ,ಸೆ.21.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಎಂ.ಎಸ್. ಇರಾನಿ ಮಹಾವಿದ್ಯಾಲಯ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಹಾಗೂ ಎನ್.ಎಸ್.ಎಸ್. ಘಟಕ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಪೊಲೀಸ್ ದೂರು ಪ್ರಾಧಿಕಾರ ಮತ್ತು ಗ್ರಾಹಕರ ಹಿತರಕ್ಷಣಾ ಕಾಯ್ದೆ” ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸೆಪ್ಟೆಂಬರ್ 22ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಎಂ.ಎಸ್. ಇರಾನಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ. 
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಎಂ.ಎಸ್. ಇರಾನಿ ಮಹಾವಿದ್ಯಾಲಯದ ಪ್ರಾಂಶುಪಾಲ ಜಿ.ಜಿ. ಗೌಡಪ್ಪಗೋಳ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ನ್ಯಾಯವಾದಿ ಸಂಘದ ಅಧ್ಯಕ್ಷ ಎಸ್.ಕೆ. ಹಿರೇಮಠ, ಎಂ.ಎಸ್. ಇರಾನಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಸಂಚಾಲಕ ಮಹೇಶ ಗಾಂವಕರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಅವರು ಪೊಲೀಸ್ ದೂರು  ಪ್ರಾಧಿಕಾರದ ಬಗ್ಗೆ ಹಾಗೂ ನ್ಯಾಯವಾದಿ ಸಂಜೀವಕುಮಾರ ಎಸ್. ಡೊಂಗರಗಾಂವ ಅವರು ಗ್ರಾಹಕರ ಹಿತರಕ್ಷಣಾ ಕಾಯ್ದೆ ಕುರಿತು ಮಾತನಾಡುವರು.



ಹೀಗಾಗಿ ಲೇಖನಗಳು News and photos Date: 21--09--2017

ಎಲ್ಲಾ ಲೇಖನಗಳು ಆಗಿದೆ News and photos Date: 21--09--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photos Date: 21--09--2017 ಲಿಂಕ್ ವಿಳಾಸ https://dekalungi.blogspot.com/2017/09/news-and-photos-date-21-09-2017.html

Subscribe to receive free email updates:

0 Response to "News and photos Date: 21--09--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ