News Date: 11-9-2017

News Date: 11-9-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News Date: 11-9-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News Date: 11-9-2017
ಲಿಂಕ್ : News Date: 11-9-2017

ಓದಿ


News Date: 11-9-2017

ಕ್ರೀಡಾಪಟುಗಳು ಸೋಲು-ಗೆಲವು ಸಮಾನವಾಗಿ ಸ್ವೀಕರಿಸಲು ಸಲಹೆ
ಕಲಬುರಗಿ,ಸೆ.11.(ಕ.ವಾ.)-ಕ್ರೀಡಾಪಟುಗಳು ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಸೋಲು-ಗೆಲುವನ್ನು ಜೀವನದಲ್ಲಿ ಸಮಾನವಾಗಿ ಸ್ವೀಕರಿಸಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು. 
ಅವರು ಸೋಮವಾರ ಸೇಡಂದಲ್ಲಿ ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮಕ್ಕಳು ಜೀವನದಲ್ಲಿ ಪ್ರಯತ್ನವಾದಿಗಳಾಗಿ ಕ್ರೀಡೆ ಹಾಗೂ ಓದಿನಲ್ಲಿ ಪರಿಶ್ರಮ ಪಟ್ಟು ಮುಂದೆ ಉನ್ನತ ಗುರಿಯನ್ನು ಸಾಧಿಸಬೇಕು. ಕ್ರೀಡೆಗಳಲ್ಲಿ ಒಳ್ಳೆಯ ಮನೋಭಾವದಿಂದ ಪಾಲ್ಗೊಂಡು ನಿರ್ಣಾಯಕರ ನಿರ್ಣಯಗಳಿಗೆ ಬದ್ಧರಾಗಿ ಶಾಲೆಗೆ, ತಾಲೂಕಿಗೆ ಕೀರ್ತಿ ತರಬೇಕೆಂದು ತಿಳಿಸಿದರು. 
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಚ್ಟುಕಟ್ಟು ಪ್ರದೇಶ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ವಲಯ ಪ್ರಾಧಿಕಾರದ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಮಾತನಾಡಿ, ಸೇಡಂ ತಾಲೂಕಿನಿಂದ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷ ವಿಷಯ. ಕ್ರೀಡಾಪಟುಗಳಿಗೆ ಹೆಚ್ಚಿನ ತರಬೇತಿ ನೀಡಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸುವ ಹಾಗೆ ಸಿದ್ಧತೆ ಮಾಡಬೇಕು. ಶಿಕ್ಷಕರು ಪ್ರತಿ ಹಂತದಲ್ಲೂ ಮಕ್ಕಳಿಗೆ ತರಬೇತಿ ನೀಡಿ, ಅವರಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು. ಸೇಡಂ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮಕ್ಕಳು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು. 
ಜಿಲ್ಲಾ ಪಂಚಾಯಿತಿ ಸದಸ್ಯ ದಾಮೋದರರೆಡ್ಡಿ ವೆಂಕಟರೆಡ್ಡಿ ಪಾಟೀಲ ಮಾತನಾಡಿ, ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವದಿಂದ ಅವರಲ್ಲಿ ಏಕಾಗ್ರತೆ ವೃದ್ಧಿಯಾಗುವುದು ಜೊತೆಗೆ ಆರೋಗ್ಯವೂ ಸದೃಢವಾಗಿರುತ್ತದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಈ ಭಾಗದ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವ ಹಾಗೆ ಆಗಬೇಕೆಂದು ಆಶಿಸಿದರು. 
ಕ್ರೀಡಾಕೂಟದಲ್ಲಿ ಆಡಕಿ, ಕೋಡ್ಲಾ, ಮೋತಕಪಲ್ಲಿ, ಮುಧೋಳ, ಸೇಡಂ, ಕುರಕುಂಟಾ, ಮಳಖೇಡ, ಮದನಾ, ಕೋಲಕುಂದಾ ವಿಭಾಗದ ಸುಮಾರು 300ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಸಚಿವರು ಕ್ರೀಡಾಪಟುಗಳಿಂದ ವಂದನೆ ಸ್ವೀಕರಿಸಿ ಕ್ರೀಡಾಜ್ಯೋತಿಯನ್ನು ಬರಮಾಡಿಕೊಂಡರು. 
ಕಾರ್ಯಕ್ರಮದಲ್ಲಿ ಸೇಡಂ ತಾಲೂಕು ಪಂಚಾಯಿತಿ ಅಧ್ಯಕ್ಷೆ ಸುರೇಖಾ ರಾಜಶೇಖರ ಪುರಾಣಿಕ, ತೋಟಗಾರಿಕೆ ಮಹಾಮಂಡಳಿ ರಾಜ್ಯಾಧ್ಯಕ್ಷ ಬಸವರಾಜ ಆರ್. ಪಾಟೀಲ ಊಡಗಿ, ಸೇಡಂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುದರ್ಶನರೆಡ್ಡಿ ಪಾಟೀಲ, ಸೇಡಂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸೇಡಂ ತಾಲೂಕು ಅಧ್ಯಕ್ಷ ಶಿವಶಂಕರಯ್ಯ ಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರವಿಕುಮಾರ ಟಿ. ಕೋಡ್ಲಾ, ಕರ್ನಾಟಕ ರಾಜ್ಯ ಮುಖ್ಯ ಗುರುಗಳ ಸಂಘದ ಸೇಡಂ ತಾಲೂಕು ಅಧ್ಯಕ್ಷ ಮಾನಪ್ಪ ವಿಶ್ವಕರ್ಮ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ವಗ್ಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಿರಾದಾರ್ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. 
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರದಿಂದ ಸೂಕ್ತ ಕ್ರಮ
ಕಲಬುರಗಿ,ಸೆ.11.(ಕ.ವಾ.)-ಸರ್ಕಾರವು ಅಲ್ಪಸಂಖ್ಯಾತರ ಏಳ್ಗೆಗೆ ಹಲವಾರು ಯೋಜನೆಗಳನ್ನು ರೂಪಿಸಿ ಸಮರ್ಪಕ ಅನುದಾನ ನೀಡುವ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಸೂಕ್ತ ಕ್ರಮ ಜರುಗಿಸಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು. 
ಅವರು ಸೋಮವಾರ ಸೇಡಂನ ರಹೆಮತನಗರದಲ್ಲಿ ನಗರೋತ್ಥಾನ ಎರಡನೇ ಹಂತದಡಿ 70 ಲಕ್ಷ ರೂ.ಗಳಲ್ಲಿ ನಿರ್ಮಿಸಿದ ರಸ್ತೆ ಉದ್ಘಾಟಿಸಿ ಮಾತನಾಡಿ, ಸೇಡಂ ಪಟ್ಟಣದಿಂದ ರಹೆಮತನಗರಕ್ಕೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಲು ಅತಿಥಿಗೃಹದ ಪಕ್ಕದಿಂದ 350 ಮೀಟರ್ ಸಿ.ಸಿ. ರಸ್ತೆಯನ್ನು 22 ಲಕ್ಷ ರೂ.ಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. 
ರಹೆಮತ ನಗರ ಪ್ರದೇಶದಲ್ಲಿ ಈಗಾಗಲೇ ಒಳಚರಂಡಿ ಮತ್ತು 24X7 ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಈ ಕಾಮಗಾರಿ ಮುಗಿದ ನಂತರವೇ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ರಹೆಮತನಗರ ಪ್ರದೇಶದಲ್ಲಿ ಇನ್ನೂ ಕೆಲವಡೆ ರಸ್ತೆ ಸಂಪರ್ಕ ಕಲ್ಪಿಸಬೇಕಾಗಿದ್ದು, ಆದಷ್ಟು ಬೇಗ ಕೈಗೆತ್ತಿಕೊಳ್ಳಲಾಗುವುದು ಎಂದರು. 
ಹೈದ್ರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ರೂಪಿಸಲಾದ 371(ಜೆ) ಕಲಂದಿಂದಾಗಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ದೊರೆತು ಅಭಿವೃದ್ಧಿಗೆ ಹೆಚ್ಚಿನ ಸಹಕಾರ ದೊರೆಯುತ್ತಿದೆ. ಈ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಪ್ರತಿವರ್ಷ 750 ವೈದ್ಯಕೀಯ ಹಾಗೂ ಪ್ರತಿವರ್ಷ 6000 ಇಂಜಿನಿಯರಿಂಗ್ ಸೀಟುಗಳನ್ನು ಮೀಸಲಿಟ್ಟು ಪ್ರವೇಶ ನೀಡಲಾಗಿದೆ. ಇದರಿಂದ ಬಡವರ ಮಕ್ಕಳು ಸಹಿತ ಡಾಕ್ಟರ್, ಇಂಜಿನಿಯರಿಂಗ್ ಓದುವಂತಾಗಿದೆ ಎಂದರು. 
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಖಾಲಿಯಿರುವ ಸುಮಾರು 30 ಸಾವಿರ ಹುದ್ದೆಗಳ ಪೈಕಿ ಈಗಾಗಲೇ 20000 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಈ ಎಲ್ಲ ಹುದೆಗಳು ಹೈ.ಕ. ಭಾಗದವರಿಗೆ ಮಾತ್ರ ನೀಡಲಾಗಿದೆ. ಇದರಿಂದ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆತಂತಾಗಿದೆ. ಈ ಹಿಂದೆ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಹೈದ್ರಾಬಾದ್ ಕರ್ನಾಟಕದ ಅಭವೃದ್ಧಿಗಾಗಿ ಪ್ರತಿವರ್ಷ 40-50 ಕೋಟಿ ರೂ. ಮಾತ್ರ ಲಭ್ಯವಾಗುತ್ತಿತ್ತು. 371(ಜೆ) ಕಲಂನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಪ್ರತಿ ವರ್ಷ 1000 ಕೋಟಿ ರೂ. ಹಾಗೂ ಪ್ರಸಕ್ತ ವರ್ಷದಿಂದ 1500 ಕೋಟಿ ರೂ.ಗಳು ಅಭಿವೃದ್ಧಿಗೆ  ಲಭ್ಯವಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದರು. 
ಕಾರ್ಯಕ್ರಮದಲ್ಲಿ ಸೇಡಂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುದರ್ಶನರೆಡ್ಡಿ ಪಾಟೀಲ, ಸೇಡಂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸೈಯ್ಯದ್ ನಜೀಮುದ್ದೀನ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶರಣಯ್ಯ ಸ್ವಾಮಿ, ತಾಲೂಕು ಪಂಚಾಯಿತಿ ಸದಸ್ಯ ಹಾಜಿ ನಾಡೆಪಲ್ಲಿ, ದತ್ತಾತ್ರೇಯ, ಅಲ್ಪಸಂಖ್ಯಾತ ಮುಖಂಡ ಸೈಯ್ಯದ್ ಅಬ್ದುಲ್ ಅಲಿಂ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ರಹೆಮತನಗರ ಬಡಾವಣೆಯ ಸರ್ಕಾರಿ ಉರ್ದು ಶಾಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 
ಸಂಭ್ರಮದಿಂದ ವಿಶ್ವ ಕರ್ಮ ಜಯಂತಿ ಆಚರಣೆಗೆ ನಿರ್ಧಾರ
ಕಲಬುರಗಿ,ಸೆ.11.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17ರಂದು ವಿಶ್ವ ಕರ್ಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯು ಸರ್ವಾನುಮತದಿಂದ ನಿರ್ಧರಿಸಿತು.
ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಬೆಳಗಿನ 10 ಗಂಟೆಯಿಂದ ಕಲಬುರಗಿ ನಗರದ ಸಂತ್ರಾಸವಾಡಿ ಕಾಳಿಕಾ ಮಂದಿರದಿಂದ ಸರಾಫ ಬಜಾರ, ಕಪಡಾ ಬಜಾರ, ಚೌಕ್ ಪೊಲೀಸ್ ಸ್ಟೇಶನ್, ಸುಪರ ಮಾರ್ಕೇಟ್, ಜಗತ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ವಿಶ್ವಕರ್ಮ ಭಾವಚಿತ್ರದ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು.
ಅಂದು ಮಧ್ಯಾಹ್ನ 1 ಗಂಟೆಗೆ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗುವುದು. ದಿನಾಚರಣೆಯ ಅಂಗವಾಗಿ ಕಲಬುರಗಿಯ ವಿಶ್ವಕರ್ಮ ಮಹಾಸಭಾಧ್ಯಕ್ಷ ಅಶೋಕ ಪೋದ್ದಾರ ಹರಸೂರ ಅವರಿಂದ ಉಪನ್ಯಾಸ ಏರ್ಪಡಿಸಲು ಸಭೆ ನಿರ್ಣಯ ಕೈಗೊಂಡಿತು. ರಂಗಮಂದಿರದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಆಮಂತ್ರಣಪತ್ರಿಕೆಗಳನ್ನು ಮುಂಚಿತವಾಗಿ ಜಿಲ್ಲೆಯ ಸಚಿವರು ಹಾಗೂ ಶಾಸಕರು, ಜನಪ್ರತಿನಿಧಿಗಳು ಮತ್ತು ಸಮಾಜದ ಮುಖಂಡರಿಗೆ ಸೂಕ್ತ ಸಮಯದಲ್ಲಿ ತಲುಪಿಸುವಂತೆ ಸೂಚಿಸಿದರು.    
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಯಾದಗಿರಿ ವಿಶ್ವ ಕರ್ಮ ಏಕದಂಡಗಿ ಮಠದ ಸುರೇಂದ್ರ ಮಹಾಸ್ವಾಮಿಗಳು, ವಿಠ್ಠಲ ಆರ್. ಸುತಾರ, ಬಸವರಾಜ ಪಾಂಚಾಳ, ಕುಪ್ಪಣ್ಣ ಪೊದ್ದಾರ್, ಅಶೋಕ ಪೊದ್ದಾರ, ಮನೋಹರ ಪೊದ್ದಾರ, ಕೇಶವ ಸೀತನೂರ, ವೀರಣ್ಣ ಸಿ. ಪಾಂಚಾಳ, ವಿಶ್ವಕರ್ಮ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.  

ಸೆಪ್ಟೆಂಬರ್ 14 ಹಾಗೂ 15ರಂದು ಕಲಬುರಗಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ
ಕಲಬುರಗಿ,ಸೆ.11.(ಕ.ವಾ.)-ಕಲಬುರಗಿ ವಿಭಾಗಮಟ್ಟದ 2017-18ನೇ ಸಾಲಿನ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 14 ಮತ್ತು 15ರಂದು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. 
ಈ ಕ್ರೀಡಾಕೂಟದಲ್ಲಿ ಕಲಬುರಗಿ ವಿಭಾಗದ ಆರು ಜಿಲ್ಲೆಗಳಾದ ಕಲಬುರಗಿ, ಬಳ್ಳಾರಿ, ಬೀದರ, ಯಾದಗಿರಿ, ರಾಯಚೂರ ಮತ್ತು ಕೊಪ್ಪಳ ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಲಬುರಗಿಯಲ್ಲಿ ಅಥ್ಲೇಟಿಕ್ಸ್, ಖೋ-ಖೋ, ವಾಲಿಬಾಲ್, ಕಬ್ಬಡ್ಡಿ, ಬಾಲ್ ಬ್ಯಾಡ್ಮಿಂಟಲ್, ಟೆನ್ನಿಸ್, ಟೇಬಲ್ ಟೆನ್ನಿಸ್, ಬಾಸ್ಕೇಟ್‍ಬಾಲ್, ಹ್ಯಾಂಡ್‍ಬಾಲ್ ಮತ್ತು ಥ್ರೋಬಾಲ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 
ಬಳ್ಳಾರಿ ಜಿಲ್ಲೆಯಲ್ಲಿ ಸ್ವೀಮಿಂಗ್, ಹಾಕಿ, ಶಟಲ್ ಬ್ಯಾಡ್ಮಿಂಟಲ್ ಮತ್ತು ಫುಟ್ಬಾಲ್ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ  08472-268637ನ್ನು ಸಂಪರ್ಕಿಸಲು ಕೋರಲಾಗಿದೆ. 
ಡಿಪ್ಲೋಮಾ ಪ್ರವೇಶಾತಿ: ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೊನೆಯ ಅವಕಾಶ
ಕಲಬುರಗಿ,ಸೆ.11.(ಕ.ವಾ.)-2009-10ನೇ ಸಾಲಿನಲ್ಲಿ ಸಿ-09 ಪಠ್ಯಕ್ರಮದಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಪಡೆದು ಇಲ್ಲಿಯವರೆಗೆ ಉತ್ತೀರ್ಣರಾಗದೇ ಇರುವ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದನ್ವಯ 2018ರ ಏಪ್ರಿಲ್/ಮೇ ತಿಂಗಳಲ್ಲಿ ನಡೆಯುವ ಸೆಮಿಸ್ಟರ್ ಪರೀಕ್ಷೆಯೇ ಕೊನೆಯ ಅವಕಾಶ ಇರುತ್ತದೆ ಎಂದು ಅಫಜಲಪುರ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ತಿಳಿಸಿದ್ದಾರೆ. 
ಸದರಿ ಸಂಸ್ಥೆಯಲ್ಲಿ 2009-10ನೇ ಸಾಲಿನಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಆಯಾ ಕೋರ್ಸುಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದೇ ಬಾಕಿ ವಿಷಯಗಳನ್ನು ಉಳಿಸಿಕೊಂಡಿದ್ದಲ್ಲಿ, ಅಂತಹ ವಿದ್ಯಾರ್ಥಿಗಳು ವಿಷಯ ಪೂರ್ಣಗೊಳಿಸಲು ಮುಂಬರುವ 2018ರ ಏಪ್ರಿಲ್/ಮೇ ಪರೀಕ್ಷೆ ಕೊನೆಯ ಅವಕಾಶ ಇರುತ್ತದೆ. ವಿದ್ಯಾರ್ಥಿಗಳು ಇದನ್ನು ಮನಗಂಡು ನಿಗದಿಪಡಿಸಿದ ಪರೀಕ್ಷಾ ಅವಧಿಯೊಳಗೆ ಕೋರ್ಸನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ. ತಪ್ಪಿದ್ದಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸಕ್ಕಾಗಿ ಅನರ್ಹರೆಂದು ಪರಿಗಣಿಸಲಾಗುವುದಲ್ಲದೇ, ಮಂಡಳಿಯಿಂದ ಯಾವುದೇ ಪ್ರಮಾಣಪತ್ರವನ್ನು ನೀಡಲಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.  
ಸೆಪ್ಟೆಂಬರ್ 12ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
ಕಲಬುರಗಿ,ಸೆ.11.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಜೇವರ್ಗಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಿವ್ಯ ಚೇತನ ನೆಟ್‍ವರ್ಕ್, ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಏಡ್ಸ ಪ್ರಿವೆನ್‍ಶನ್ ಸೊಸೈಟಿ, ಏ.ಆರ್.ಟಿ. ಕೇಂದ್ರ ಜೇವರ್ಗಿ ಹಾಗೂ ಶ್ರೀ ಗುರು ವಿದ್ಯಾಪೀಠ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸೆಪ್ಟೆಂಬರ್ 12ರಂದು ಬೆಳಿಗ್ಗೆ 11 ಗಂಟೆಗೆ ಜೇವರ್ಗಿಯ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. 
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜೇವರ್ಗಿ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ|| ಸಿದ್ದು ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜೇವರ್ಗಿ ಹಿರಿಯ ಸಿವಿಲ್ ನ್ಯಾಯಾಧೀಶ ಜಿ. ಕುಮಾರ, ಸಿವಿಲ್ ನ್ಯಾಯಾಧೀಶ ಸಿವರಾಜ ವಿ. ಸಿದ್ಧೇಶ್ವರ, ಖಣದಾಳದ ಶ್ರೀ ಗುರು ವಿದ್ಯಾಪೀಠದ ಅಧ್ಯಕ್ಷ ಬಸವರಾಜ ದಿಗ್ಗಾಂವಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ|| ಶರಣಬಸಪ್ಪ ಗಣಜಲಖೇಡ, ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ರವಿಕುಮಾರ ಬಿರಾದಾರ್, ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ವಿಜಯಕುಮಾರ ಭಗತ, ಕೆ.ಹೆಚ್.ಪಿ.ಟಿ. ಕಾರ್ಯಕ್ರಮ ಅಧಿಕಾರಿ ಶ್ರೀದೇವಿ ಪಿ., ದಿವ್ಯ ಜೇವನ ನೆಟ್‍ವರ್ಕ್ ಅಧ್ಯಕ್ಷೆ ಶಾಂತಾಬಾಯಿ ಟೇಲರ್, ಕೆ.ಹೆಚ್.ಪಿ.ಟಿ. ಕಾರ್ಯಕ್ರಮ ಅಧಿಕಾರಿ ಸುಬ್ಬಯ್ಯ ಗುತ್ತೇದಾರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. 
ಸಂಪನ್ಮೂಲ ವ್ಯಕ್ತಿಗಳಾಗಿ ನ್ಯಾಯವಾದಿ ಎಂ.ಜಿ. ಪಾಟೀಲ ಅವರು ಹೆಚ್.ಐ.ವ್ಹಿ. ಸೊಂಕಿತರಿಗೆ ಕಾನೂನು ಅರಿವು ಮತ್ತು ನೆರವು ಕುರಿತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ ಅವರು ಹೆಚ್.ಐ.ವ್ಹಿ. ಸೋಂಕಿನಿಂದ ಬಳಲುತ್ತಿರುವ















ಮಹಿಳೆಯರಿಗೆ ಮತ್ತು ಮಕ್ಕಳಿಗೆ ಇರುವ ಹಕ್ಕುಗಳ ವಿಷಯ ಕುರಿತು ಮಾತನಾಡುವರು.
ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೂಚನೆ 
ಕಲಬುರಗಿ,ಸೆ.11.(ಕ.ವಾ.)-ಕಲಬುರಗಿ ಜಿಲ್ಲೆಯ ವಕ್ಫ್ ನೋಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಹಾಗೂ ಮೌಜ್ಜನ್‍ಗಳು ವಕ್ಫ್ ಮಂಡಳಿಯಿಂದ ನೀಡಲಾಗುತ್ತಿರುವ ಗೌರವಧನ ಪಡೆಯಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನು ಜೋಡಿಸಬೇಕೆಂದು ಕಲಬುರಗಿ ಜಿಲ್ಲಾ  ವಕ್ಫ್ ಅಧಿಕಾರಿಗಳು ತಿಳಿಸಿದ್ದಾರೆ. 
ಅಲ್ಲದೇ ಆಧಾರ ಕಾರ್ಡಿನ ಪ್ರತಿ ಹಾಗೂ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಕುರಿತು ಸಂಬಂಧಪಟ್ಟ ಕಮೀಟಿಯಿಂದ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಕ್ರಮಬದ್ಧಗೊಳಿಸಿದ ಪ್ರತಿ ಹಾಗೂ ಮೊಬೈಲ್ ಸಂಖ್ಯೆನ್ನೊಳಗೊಂಡ ವಿವರವನ್ನು ಜಿಲ್ಲಾ ವಕ್ಫ್ ಕಚೇರಿ, ಒಂದನೇ ಮಹಡಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ, ಮಿನಿ ವಿಧಾನಸೌಧ ಹತ್ತಿರ, ಮುಖ್ಯ ರಸ್ತೆ, ಕಲಬುರಗಿ ಕಚೇರಿ ವಿಳಾಸಕ್ಕೆ ತಕ್ಷಣ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ. 



ಹೀಗಾಗಿ ಲೇಖನಗಳು News Date: 11-9-2017

ಎಲ್ಲಾ ಲೇಖನಗಳು ಆಗಿದೆ News Date: 11-9-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 11-9-2017 ಲಿಂಕ್ ವಿಳಾಸ https://dekalungi.blogspot.com/2017/09/news-date-11-9-2017.html

Subscribe to receive free email updates:

0 Response to "News Date: 11-9-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ