ಶೀರ್ಷಿಕೆ : News Item & photo Dt.30-09-2017
ಲಿಂಕ್ : News Item & photo Dt.30-09-2017
News Item & photo Dt.30-09-2017
ಧಮ್ಮ ಚಕ್ರ ಪರಿವರ್ತನ ದಿನಾಚರಣೆ: ಸಾಂಸ್ಕತಿಕ ಕಾರ್ಯಕ್ರಮಕ್ಕೆ ಚಾಲನೆ
ಕಲಬುರಗಿ,ಸೆ.30.(ಕ.ವಾ.)- ಧಮ್ಮ ಚಕ್ರ ಪರಿವರ್ತನ ದಿನಾಚರಣೆ ಅಂಗವಾಗಿ ಕಲಬುರಗಿ ಬುದ್ಧ ವಿಹಾರದ ಬಯಲು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಿದ್ದಾರ್ಥ ವಿಹಾರ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅವರು 1956ರಲ್ಲಿ ವಿಜಯದಶಮಿಯ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಮಹಾರಾಷ್ಟ್ರದ ನಾಗಪುರದಲ್ಲಿ ಬೌದ್ಧ ಧರ್ಮದ ದೀಕ್ಷೆಯನ್ನು ಪಡೆದಿದ್ದು, ಅಂದಿನಿಂದ ಪ್ರತಿ ವರ್ಷ ಭಾರತ ಸೇರಿದಂತೆ ವಿಶ್ವದಾದ್ಯಂತ ಧಮ್ಮ ಚಕ್ರ ಪರಿವರ್ತನ ದಿನಚಾರಣೆ ಆಚರಿಸಲಾಗುತ್ತಿದೆ. ಬುದ್ಧ ಮತ್ತು ಅಂಬೇಡ್ಕರ್ ಅವರ ಆಚಾರ, ವಿಚಾರಗಳನ್ನು ಇಂದಿನ ಪೀಳಿಗೆಗೆ ವಿವಿಧ ಮಾಧ್ಯಮದ ಮುಖಾಂತರ ಪರಿಚಯಿಸುವ ಕಾರ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ಸಿದ್ದಾರ್ಥ ವಿಹಾರ ಟ್ರಸ್ಟ್ ಬುದ್ದ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಮನಕುಲಕ್ಕೆ ಪರಿಚಯಿಸಲು ಇಂದು ಇಡೀ ದಿನ ಹಲವಾರು ಕಾರ್ಯಕ್ರಮಗಳು ಹಾಕಿಕೊಂಡಿರುವುದು ಪ್ರಸ್ತುತವಾಗಿದೆ. ಇದೀಗ ಇಳಿ ಸಂಜೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು, ನಾಟಕಗಳ ಮುಖಾಂತರ ಬುದ್ಧ ಮತ್ತು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಪುನರ್ ಮನನ ಆಗುತ್ತಿರುವುದು ಸಂತೋಷ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವ ಬುದ್ಧನ ತತ್ವಗಳನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡುವ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.
ತದನಂತರ ಸಾವಿರಾರು ಕಲಾ ಆಸಕ್ತರಿಂದ ತುಂಬಿದ ಬಯಲು ರಂಗಮಂದಿರದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಸವಿತಾ ಚಿರಕುನ್ನಿ ಅವರ ಪೂಜಾ ಕುಣಿತ ಹಾಗೂ ಶಂಕ್ರಯ್ಯ ಘಂಟಿ ನಿರ್ದೇಶನದ ಚಾಂಡಾಲಿಕಾ ನಾಟಕ ಎಲ್ಲರ ಮನಸೊರೆಗೊಳಿಸುವಲ್ಲಿ ಯಶಸ್ವಿಯಾದವು. ಸಾಂಸ್ಕøತಿಕ ಕಾರ್ಯಕ್ರಮದ ಭಾಗವಾಗಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಲಾವಿದರಿಂದ ಪಟ ಕುಣಿತ, ಸೋಮನ ಕುಣಿತ, ಜಗ್ಗಲಿಗೆ ಮೇಳ, ಗಾರುಡಿ ಗೊಂಬೆ, ಕೀಲು ಕುದರೆ, ಮಹಿಳಾ ಡೊಳ್ಳು ಕುಣಿತ, ಜನಪದ ನೃತ್ಯ, ಕೋಲಾಟ, ನಾಶಿಕ ಡೋಲು, ದಟ್ಟಿ ಕುಣಿತ, ಡೊಳ್ಳು ಕುಣಿತ, ಚಿಟ್ಟಹಲಗಿ ಮೇಳ, ಕರಡಿ ಮಜಲು, ಹಲಗಿ ವಾದನ, ಶಹನಾಯಿ, ಗೊಂಧಳಿ ನೃತ್ಯ, ಗೊಂಬೆ ಕುಣಿತ, ಡೊಳ್ಳು ಕುಣಿತ ಜಾನಪದ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಸಿದ್ದಾರ್ಥ ವಿಹಾರ ಟ್ರಸ್ಟ್ ಅಧ್ಯಕ್ಷ ರಾಹುಲ ಖರ್ಗೆ, ಕಾರ್ಯದರ್ಶಿ ಮಾರುತಿರಾವ ಮಾಲೆ, ಕೊಳಚೆ ನಿರ್ಮೂಲನೆ ಮಂಡಳಿಯ ಸದಸ್ಯ ಮಾಪಣ್ಣ ಗಂಜಿಗೇರಿ, ನಾಟಕ ಅಕಾಡೆಮಿ ಸದಸ್ಯ ಸಂದೀಪ ಬಿ., ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಟಗಿ, ಅನೇಕ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು, ಶಿವಾನಂದ ಅಣಜಗಿ ನಿರೂಪಿಸಿದರು.
ಧಮ್ಮ ಚಕ್ರ ಪರಿವರ್ತನ ದಿನಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆ ಸೇರಿದಂತೆ ಆಂಧ್ರ ಪ್ರದೇಶ, ಮಹಾರಾಷ್ಟ್ರ ರಾಜ್ಯದಿಂದ ಇದೇ ವರ್ಷ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಬುದ್ಧನ ಅನುಯಾಯಿಗಳು ಬುದ್ಧ ವಿಹಾರಕ್ಕೆ ಭೇಟಿ ನೀಡಿ ಗೌತಮ ಬುದ್ಧನ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಧಮ್ಮ ಸಂದೇಶ ಪ್ರಾರ್ಥಿಸುತ್ತಿರುವುದು ಇಂದು ಸರ್ವೇ ಸಾಮಾನ್ಯವಾಗಿತ್ತು ಹಾಗೂ ವಿಶೇಷವಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಲಾ ತಂಡಗಳು ಬುದ್ಧ ವಿಹಾರದ ರಸ್ತೆ ಉದ್ಧಕ್ಕು ತಮ್ಮ ಕಲಾ ಪ್ರದರ್ಶನದೊಂದಿಗೆ ವಿಹಾರಕ್ಕೆ ಆಗಮಿಸಿದ ಸಭಿಕರನ್ನು ರಂಜಿಸಿದವು. ಕಲಬುರಗಿ ನಗರ ಮತ್ತು ಸುತ್ತಮುತ್ತಲಿನ ಊರುಗಳಿಂದ ಆಗಮಿಸಿದ ಬೌದ್ಧ ಅನುಯಾಯಿಗಳ ಆಗಮನದಿಂದ ತುಂಬಿ ತುಳಿಕಿದ ಬುದ್ಧ ವಿಹಾರದಲ್ಲಿ ಇಂದು ಬೆಳಿಗ್ಗೆಯಿಂದ ಕವಿಗೋಷ್ಠಿ, ಚಿತ್ರಕಲಾ ಪ್ರದರ್ಶನ, ಚಿತ್ರಕಲಾ ಸ್ಪರ್ಧೆಗಳಂತಹ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಹಾರದಲ್ಲಿ ಒಂದು ರೀತಿಯ ಜಾತ್ರೆಯ ಸೊಬಗು ಎದ್ದುಕಾಣುವಂತಿತ್ತು.
ದೇಶದ ಸಂವಿಧಾನದಿಂದ ಎಲ್ಲರಿಗೂ ಸಮಾನ ಹಕ್ಕು
ಕಲಬುರಗಿ,ಸೆ.30.(ಕ.ವಾ.)- ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಡಿಯಲ್ಲಿ ಭಾರತದ ಸಂವಿಧಾನ ರೂಪಗೊಂಡಿದ್ದು, ಇದರಲ್ಲಿ ಎಲ್ಲರಿಗೂ ಸಮಾನ ಹಕ್ಕು ನೀಡಲಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅವರು ಶನಿವಾರ ಸಿದ್ದಾರ್ಥ ವಿಹಾರ ಟ್ರಸ್ಟ್‍ನಿಂದ ಕಲಬುರಗಿ-ಸೇಡಂ ರಸ್ತೆಯಲ್ಲಿರುವ ಬುದ್ಧ ವಿಹಾರದಲ್ಲಿ ಆಯೋಜಿಸಲಾದ 62ನೇ ಧಮ್ಮಚಕ್ರ ಪ್ರವರ್ತನ ದಿನಾಚರನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ರಚಿತ ಭಾರತದ ಸಂವಿಧಾನವು ಧರ್ಮ-ಪಂಥ ಮೀರಿ ಎಲ್ಲರಿಗೂ ಸಮಾನತೆಯ, ಭಾತೃತ್ವ, ಸ್ವಾತಂತ್ರ್ಯದ ಸಮಾನ ಹಕ್ಕು ನೀಡಿ ಎಲ್ಲರ ಗೌರವಯುತ ಬದುಕಿಗೆ ಕಾರಣವಾಗಿದೆ ಎಂದರು.
ಹಿಂದೂ ಧರ್ಮದ ವರ್ಣ ವ್ಯವಸ್ಥೆಯನ್ನು ಖಂಡಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಇಂದಿನ ದಿನವೇ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಶಾಂತಿ ಪ್ರಿಯ ಹಾಗೂ ವೈಜ್ಞಾನಿಕವಾದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಬುದ್ಧನ ಆಚಾರ ವಿಚಾರಗಳು ಸರ್ವಕಾಲಿಕ ಸತ್ಯವಾಗಿದ್ದು, ಅದನ್ನು ವಿಶ್ವಕ್ಕೆ ಪ್ರಚೂರಪಡಿಸುವ ಕಾರ್ಯ ಆಗಬೇಕು. ದೇಶದ ಅಭಿವೃದ್ಧಿಗೆ ನಮ್ಮಲ್ಲಿನ ಧರ್ಮ-ಜಾತಿ ವ್ಯವಸ್ಥೆ ಅಡ್ಡವಾಗಿದ್ದು, ಇದನ್ನು ಮೀರಿ ನಾವೆಲ್ಲರು ಮನುಷ್ಯ ಜಾತಿ ಎಂದು ತಿಳಿದು ಪರಸ್ಪರ ಅಭಿವೃದ್ಧಿ ಹೊಂದಬೇಕಾಗಿದೆ. ಧರ್ಮದ ಹೆಸರಿನಲ್ಲಿ ಇಂಥದೆ ಕಾಯಕವನ್ನು ಮಾಡು ಎಂದು ಹೇಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ ಅವರು ಧರ್ಮದ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಸಮಾಜದಲ್ಲಿನ ಅಂಧಶ್ರದ್ಧೆ, ಬೆತ್ತಲೆ ಮೆರವಣಿಗೆ, ಉರುಳು ಸೇವೆಗಳಂತಹ ಅನಿಷ್ಠ ಪದ್ಧತಿಗಳನ್ನು ನಿಷೇಧಿಸಲು ಇತ್ತೀಚಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮೌಢ್ಯ ನಿಷೇಧ ಕಾಯ್ದೆಗೆ ಸಂಪುಟ ಒಪ್ಪಿಗೆ ನೀಡಿದ್ದು ಸಂತಸವಾಗಿದ್ದು, ಶೀಘ್ರ ಜಾರಿಯಾಗಲಿ. ಇಂತಹ ಅನಿಷ್ಠ ಪದ್ಧತಿಗಳು ಅಂಬೇಡ್ಕರ್ ಹಲವು ದಶಕಗಳ ಹಿಂದೇನೆ ಪ್ರತಿಪಾದಿಸಿದ್ದರು ಎಂದರು.
ವೈದ್ಯಕೀಯ ಶಿಕ್ಷಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಬೌದ್ಧ ಧರ್ಮವು ವೈಜ್ಞಾನಿಕ ಧರ್ಮವಾಗಿದೆ. ಬುದ್ಧ ಮಾನವ ಕುಲಕ್ಕೆ ದಾರದೀಪದಂತಿರುವ ಮಹಾನ್ ದಾರ್ಶನಿಕರಾಗಿದ್ದಾರೆ. ಬುದ್ಧನು ತನ್ನ ಕಿರಿ ವಯಸ್ಸಿನಲ್ಲಿಯೆ ತಾನು ಕಂಡಿದ್ದನ್ನು, ಕಟು ಸತ್ಯದ ಅನುಭವವನ್ನು ಹಂಚಿಕೊಂಡಿದ್ದಾರೆ. ಎಲ್ಲರಿಗೂ ಸಮಾನ ದೃಷ್ಠಿಯಿಂದ ನೋಡಲ್ಪಡುವ ಬೌದ್ಧ ಧರ್ಮದ ಹಾಗೂ ಬುದ್ಧನ ಕುರಿತ ಆಚಾರ, ವಿಚಾರಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯವಾಗಿದೆ ಎಂದರು.
ವಿಮರ್ಶಕರು ಹಾಗೂ ಚಿಂತಕ ಡಾ.ಜಿ.ಬಿ.ಹರೀಶ, ಹೈದ್ರಾಬಾದಿನ ಇ.ಎಫ್.ಎಲ್ ವಿಶ್ವವಿದ್ಯಾಲಯದ ಲಲಿತಕಲೆ ಮತ್ತು ತತ್ವಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ.ಮೈತ್ರಿವೀರ ನಾಗಾರ್ಜುನ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ.ಉಮೇಶ ಜಾಧವ, ಮಹಾನಗರ ಪಾಲಿಕೆ ಮಹಾಪೌರರಾದ ಶರಣಕುಮಾರ ಮೋದಿ, ಮಾಜಿ ವಿಧಾನ ಪರಿಷತ್ ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಟಗಿ, ಮಾಪಣ್ಣ ಗಂಜಗೇರಿ, ಭೀಮಾಶಂಕರ ತೆಗಲತಿಪ್ಪ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಿದ್ದರು.
ಇದಕ್ಕು ಮುನ್ನ ಪೂಜ್ಯ ಸಂಗಾನಂದ ಭಂತೇಜಿ ಅವರ ಸಮಕ್ಷಮ ಧಮ್ಮ ಪ್ರಾರ್ಥನೆ ಸಲ್ಲಿಸಲಾಯಿತು. ಎಲ್ಲ ಗಣ್ಯರು ಧ್ಯಾನಸ್ಥ ಬುದ್ದನ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಮಾರುತಿ ರಾವ್ ಮಾಲೆ ಸ್ವಾಗತಿಸಿದರು ಎಚ್.ಟಿ.ಪೋತೆ ನಿರೂಪಿಸಿದರು.
ತದನಂತರ ಬೋಧಿಸತ್ವ ವೇದಿಕೆಯಲ್ಲಿ ನಡೆದ ಕವಿಗೋಷ್ಠಿ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸಿದರು. ಕವಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಟಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ, ನಾಟಕ ಅಕಾಡೆಮಿ ಸದಸ್ಯ ಸಂದೀಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಾಹಿತಿಗಳಾದ ಎಸ್.ಪಿ.ಸುಳ್ಳದ, ಹಣಮಂತರಾವ ದೊಡ್ಮನಿ, ಸಂಗಮನಾಥ ರೇವತಗಾಂವ, ಡಾ.ಸೂರ್ಯಕಾಂತ ಸುಜಾತ, ವಿಠ್ಠಲ ವಗ್ಗನ, ಉಪಸ್ಥಿತರಿದ್ದರು. ಹಲವು ಕವಿಗಳು ತಮ್ಮ ಕವಿತೆ ವಾಚನ ಮಾಡಿದರು.
ಗಾಂಧಿ ಜಯಂತಿ ಪ್ರಯುಕ್ತ ಪಾಲಿಕೆಯಿಂದ ವಿವಿಧ ಕಾರ್ಯಕ್ರಮ
ಕಲಬುರಗಿ,ಸೆ.30(ಕ.ವಾ.)- ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಕಲಬುರಗಿ ಮಹಾನಗರ ಪಾಲಿಕೆಯು ಸಹಯೋಗದೊಂದಿಗೆ ಅಂದು ಬೆಳಿಗ್ಗೆ 8 ಗಂಟೆಗೆ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ “ಸ್ವಚ್ಛತಾ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ನಂತರ 11.30 ಗಂಟೆಗೆ ಗಾಜಿಪೂರದ ಮಹಾವೀರ ಚೌಕ್ ಹತ್ತಿರ “ಆರೋಗ್ಯ ಶಿಬಿರ” ಏರ್ಪಡಿಸಲಾಗಿದೆ ಮತ್ತು ಸಾಯಂಕಾಲ 4.45 ಗಂಟೆಗೆ ಪಾಲಿಕೆ ವತಿಯಿಂದ ನಿರ್ಮಿಸಲಾದ “ಅiviಛಿ Woಡಿಞeಡಿs oಜಿ ಏಚಿಟಚಿbuಡಿಚಿgi” ಎಂಬ ಕಿರು ಚಿತ್ರವನ್ನು ಬಿಗ್ ಬಜಾರ್ ಮಾಲ್‍ನ “ಮೀರಾಜ್ ಸಿನೆಮಾಸ್” ನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪಾಲಿಕೆ ಆಯುಕ್ತ ಪಿ. ಸುನೀಲ್ ಕುಮಾರ್ ಕೋರಿದ್ದಾರೆ.
ಅಕ್ಟೋಬರ್ 2ಕ್ಕೆ ಸರ್ವ ಧರ್ಮ ಪ್ರಾರ್ಥನೆ-ಸದ್ಭಾವನಾ ಗೀತಗಾಯನ
ಕಲಬುರಗಿ,ಸೆ.30.(ಕ.ವಾ.)-ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ ಹಾಗೂ ಭಾರತ ಸೇವಾದಳ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 2 ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸರ್ವ ಧರ್ಮ ಪ್ರಾರ್ಥನೆ-ಸದ್ಭಾವನಾ ಗೀತಗಾಯನ ಹಾಗೂ ಕರ್ನಾಟಕದಲ್ಲಿ ಗಾಂಧೀಜಿ ವಿಶೇಷ ಛಾಯಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ.
ಶ್ರೀಶೈಲಂ ಸಾರಂಗಮಠದ ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಮಹ್ಮದ್ ಜಾವೀದ್ ಆಲಂ ಖಾಸ್ಮಿ, ಪೂಜ್ಯ ಸಂಗಾನಂದ ಭಂತೇಜಿ ಹಾಗೂ ಸೆಂಟ್ ಮೇರಿ ಚರ್ಚಿನ ಫಾದರ್ ಸ್ಟ್ಯಾನಿ ಅವರ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಹಾಗೂ ಹೆಚ್.ಕೆ.ಆರ್.ಡಿ.ಬಿ. ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಉದ್ಘಾಟಿಸುವರು. ಪ್ರವಾಸೋದ್ಯಮ, ಜೈವಿಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಘನ ಉಪಸ್ಥಿತಿ ವಹಿಸಲಿದ್ದಾರೆ.
ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ. ಗುತ್ತೇದಾರ್, ವಿಧಾನಸಭಾ ಶಾಸಕರುಗಳಾದ ಜಿ.ರಾಮಕೃಷ್ಣ, ಬಿ.ಆರ್.ಪಾಟೀಲ್, ಡಾ. ಅಜಯಸಿಂಗ್, ವಿಧಾನÀ ಪರಿಷತ್ತಿನ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ್, ಅಮರನಾಥ ಪಾಟೀಲ್, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣ ಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಾಗಣ್ಣಗೌಡ ಸಂಕನೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್ ಆಗಮಿಸುವರು. ಭಾರತ ಸೇವಾದಳದಿಂದ ಸದ್ಭಾವನಾ ಗೀತ ಗಾಯನ ನಡೆಯಲಿದೆ.
ಹೀಗಾಗಿ ಲೇಖನಗಳು News Item & photo Dt.30-09-2017
ಎಲ್ಲಾ ಲೇಖನಗಳು ಆಗಿದೆ News Item & photo Dt.30-09-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News Item & photo Dt.30-09-2017 ಲಿಂಕ್ ವಿಳಾಸ https://dekalungi.blogspot.com/2017/09/news-item-photo-dt30-09-2017.html
0 Response to "News Item & photo Dt.30-09-2017"
ಕಾಮೆಂಟ್ ಪೋಸ್ಟ್ ಮಾಡಿ