News & Photos Dt.17-09-2017

News & Photos Dt.17-09-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News & Photos Dt.17-09-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News & Photos Dt.17-09-2017
ಲಿಂಕ್ : News & Photos Dt.17-09-2017

ಓದಿ


News & Photos Dt.17-09-2017

ಹೈದ್ರಾಬಾದ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧ

-ಡಾ.ಶರಣಪ್ರಕಾಶ್ ಪಾಟೀಲ್


ಕಲಬುರಗಿ,ಸೆ.17.(ಕ.ವಾ.)-ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಅವರು ರವಿವಾರ ಕಲಬುರಗಿಯ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯಿಂದ ಆಯೋಜಿಸಿದ 70ನೇ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸಂವಿಧಾನದ 371(ಜೆ) ಜಾರಿಗೊಂಡ ಪ್ರಯುಕ್ತ ಈ ಭಾಗದ ಶೈಕ್ಷಣಿಕ, ಉದ್ಯೋಗ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ವೇಗ ಬಂದಂತಾಗಿದೆ. ಕಳೆದ ಮೂರು ವರ್ಷಗಳಿಂದ ಮಂಡಳಿಗೆ 1000 ರೂ. ಕೋಟಿ ಅನುದಾನ ನೀಡಲಾಗಿತ್ತು. ಪ್ರಸಕ್ತ 2017-18ನೇ ಸಾಲಿಗೆ 1500 ಕೋ ರೂ. ಅನುದಾನ ನೀಡುವ ಮೂಲಕ ಸರ್ಕಾರ ಹಿಂದುಳಿದ ಈ ಭಾಗವನ್ನು ಅಭಿವೃದ್ಧಿಗೊಳಿಸುವಲ್ಲಿ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದರು.
371ಜೇ ಸಂವಿಧಾನ ತಿದ್ದುಪಡಿ ಜಾರಿಗೆ ಅಗ್ರಹಿಸಿದ ಅನೇಕ ಜನಪರ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು ಹಾಗೂ ಹೈದ್ರಾಬಾದ ಕರ್ನಾಟಕದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಇತಿಹಾಸ ಸಮಿತಿಗೆ ಚುರುಕುಗೊಳಿಸಿ ಶೀಘ್ರ ಕಾರ್ಯಗತಗೊಳಿಸಲಾಗುವುದು. ಜಿಲ್ಲೆಯಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡುವುದೆ ಸರ್ಕಾರದ ಪ್ರಥಮಾದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವರು ಹೇಳಿದರು.
ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 371ಜೇ ಮೀಸಲಾತಿಯನ್ವಯ ಈಭಾಗದಲ್ಲಿರುವ ಸುಮಾರು 30 ಸಾವಿರಕ್ಕೂ ಹೆಚ್ಚು ಖಾಲಿಯಿರುವ ಹುದ್ದೆಗಳನ್ನು ನೇಮಕ ಮಾಡಲು ಅನುಮೋದನೆ ನೀಡಲಾಗಿದೆ. ಈಗಾಗಲೆ 20 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 371ಜೇ ಜಾರಿಯ ಪರಿಣಾಮ ಪ್ರತಿ ವರ್ಷ ಸುಮಾರು 750 ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು 6000 ವಿದ್ಯಾರ್ಥಿಗಳಿಗೆ ಇಂಜಿನಿಯರ್ ಕೋರ್ಸ್ ವ್ಯಾಸಂಗ ಮಾಡಲು ಸಾಧ್ಯವಾಗಿದೆ ಎಂದರು.
ಹೈ.ಕ. ಭಾಗವು ಭವ್ಯ ಇತಿಹಾಸ, ಪರಂಪರೆ ಹೊಂದಿದ್ದು ತನ್ನದೆಯಾದ ಕೊಡುಗೆಯನ್ನು ನಾಡಿಗೆ ನೀಡಿದೆ. ಬಸವಾದಿ ಶರಣರ ಬೀಡಾಗಿರುವ ಈ ನೆಲವು ಸ್ವಾತಂತ್ರ್ಯ ಪೂರ್ವ ರಾಷ್ಟ್ರಕೂಟರ, ಬಹಮನಿ ಆಡಳಿತದ ರಾಜಧಾನಿಯಾಗಿತ್ತು. ಹಿಂದುಳಿದ ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ದಶಕಗಳ ಅನೇಕ ಹೋರಾಟಗಾರರ ಹೋರಾಟದ ಫಲವಾಗಿ 371ಜೇ ಅನುಷ್ಟಾನಕ್ಕೆ ಬಂದಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಮತ್ತು ಬಸವಾದಿ ಶರಣರು ವಚನ ಸಾಹಿತ್ಯ ನೀಡಿದ ಪುಣ್ಯ ಭೂಮಿ ಇದಾಗಿದೆ. ಕಾಯಕವೆ ಕೈಲಾಸ ತತ್ವವನ್ನು ಹೇಳಿಕೊಟ್ಟಿರುವ ಬಸವಾದಿ ಶರಣರ ಆದರ್ಶಗಳನ್ನು ಮೈಗೂಡಿಸಿಕೊಂಡು ಇಂದಿನ ಯುವ ಪೀಳಿಗೆಯೂ ವೈಚಾರಿಕತೆ, ಸತ್ಯ, ನ್ಯಾಯಪರ ಧೋರಣೆಯಿಂದ ನಡೆದುಕೊಳ್ಳುವ ಮೂಲಕ ಬೌದ್ಧಿಕ ಅಭಿವೃದ್ಧಿ ಹೊಂದುವುದಲ್ಲದೇ ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ವ ಜನಾಂಗಕ್ಕು ಸಿಗುವ ಈ ವಿಶೇಷ ಮೀಸಲಾತಿಯ ಸವಲತ್ತು ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಸಚಿವರು ಹೇಳಿದರು.
ಇಲ್ಲಿನ ಜನರು ಹೃದ್ರೋಗದ ಸಮಸ್ಯೆಗೆ ತುತ್ತಾದರೆ ದೂರದ ರಾಜಧಾನಿ ಬೆಂಗಳೂರಿಗೆ ಚಿಕಿತ್ಸೆಗೆ ಹೋಗಬೇಕಾಗುವ ಕಾಲವಿತ್ತು. ಇದೀಗ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆಯನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡುವ ಮೂಲಕ ಜನರ ಬಳಿಗೆ ಆರೋಗ್ಯ ಸೇವೆಯನ್ನು ನೀಡಲಾಗಿದೆ. ಇದಲ್ಲದೇ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯನ್ನು ಸಹ ಆರಂಭಿಸಿದ್ದು, ಸಾವಿರಾರು ಜನರಿಗೆ ಉಪಯೋಗವಾಗಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಅಪಘಾತದ ನಂತರ ಸೂಕ್ಷ್ಮ ಅವಧಿಯೊಳಗೆ ಚಿಕಿತ್ಸೆ ನೀಡುವ ಟ್ರಾಮಾ ಸೆಂಟರ್ ಸಹ ಡಿಸೆಂಬರ್ ಅಂತ್ಯದೊಳಗೆ ಕಲಬುರಗಿಯಲ್ಲಿ ಸ್ಥಾಪಿಸಲಾಗುವುದು. ಇದಲ್ಲದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನ ಪರಿಷತ್ ಶಾಸಕರುಗಳಾದ ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ್ ಮೋದಿ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ವಿಧಾನ ಪರಿಷತ್ತಿನ ಮಾಜಿ ಶಾಸಕ ಶಶೀಲ್ ಜಿ.ನಮೋಶಿ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ಪೊಲೀಸ್ ಮಹಾನಿರೀಕ್ಷಕ ಅಲೋಕ ಕುಮಾರ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತ ರಾಚಪ್ಪಾ, ಲಕ್ಷ್ಮಣ ದಸ್ತಿ, ಪ್ರೊ. ವಸಂತ ಕುಷ್ಟಗಿ ಸೇರಿದಂತೆ ಅನೇಕÀ ಮುಖಂಡರು, ಜನಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಹೈ.ಕ.ವಿಮೋಚನಾ ದಿನಾಚರಣೆಯ ಸಮಾರಂಭದಲ್ಲಿ ಪರೇಡ್ ಕಮಾಂಡರ್ ಆರ್.ಪಿ.ಐ. ಚನ್ನಬಸವ ಅವರ ನೇತೃತ್ವದಲ್ಲಿ ನಡೆದ ಪರೇಡಿನಲ್ಲಿ ಡಿ.ಎ.ಆರ್., ಕೆ.ಎಸ್.ಆರ್.ಪಿ., ಸಿವಿಲ್ ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಅರಣ್ಯ ಮತ್ತು ಅಬಕಾರಿ ಇಲಾಖೆ, ಎನ್.ಸಿ.ಸಿ., ಭಾರತ ಸೇವಾ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ಅಂಧ ಬಾಲಕರ ವಸತಿ ಶಾಲೆ, ಕೆ.ಸಿ.ಇ.ಡಿ.ಟಿ. ಬಾಲಕೀಯರ ಪ್ರೌಢ ಶಾಲಾ ಮಕ್ಕಳು, ಪೊಲೀಸ್ ವಾದ್ಯ ವೃಂದ ಸೇರಿದಂತೆ ಒಟ್ಟು 15 ತುಕಡಿಗಳಿಂದ ಸಚಿವರು ಪರೇಡ್ ವಂದನೆ ಸ್ವೀಕರಿಸಿದರು. ಸಮಾರಂಭದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಾದ ಬಾಬುರಾವ ದೇಶಮಾನೆ ಹಾಗೂ ಬುಡ್ಡಪ್ಪ ಅಂಬಾದಾಸ ವಿಸ್ಕಿನ್ ಅವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. 
ಇದಕ್ಕೂ ಮುನ್ನ ಸಚಿವರು ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ,ಸೆ.17.(ಕ.ವಾ.)-ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ಲಂಬಾಣಿ ಜನಾಂಗದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಪಡೆಯಲು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಕೆಳಕಂಡ ವಿವಿಧ ಕೋರ್ಸುಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಅರ್ಹ ಲಂಬಾಣಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ವಲಯ ಕಚೇರಿಯ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಗಣಕಯಂತ್ರ ಮತ್ತು ಡಿ.ಟಿ.ಪಿ. ತರಬೇತಿ, ಗಣಕಯಂತ್ರ ಮತ್ತು ಟ್ಯಾಲಿ ತರಬೇತಿ, ಲಘು ವಾಹನ ತರಬೇತಿ, ಸಭೆ-ಸಮಾರಂಭದಲ್ಲಿ ಪುಷ್ಪ ಅಲಂಕಾರ ತರಬೇತಿ, ಹೌಸ್ ಕೀಪಿಂಗ್ ತರಬೇತಿ, ಮಿಲಿಟರಿಗೆ ಸೇರಲು ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ತರಬೇತಿ, ಸ್ಪರ್ಧಾತ್ಮಕ ವೃತ್ತಿ ವಿಕಸನ ಉನ್ನತೀಕರಣ ತರಬೇತಿ, ಟ್ರ್ಯಾಕ್ಟರ್/ಮೋಟಾರ ಸೈಕಲ್ ದುರಸ್ತಿ ತರಬೇತಿ, ಗೃಹಪಯೋಗಿ ಮತ್ತು ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿ, ಎಲೆಕ್ಟ್ರಿಶಿಯನ್ ತರಬೇತಿ, ಲಂಬಾಣಿ ಕಸೂತಿ ಕಲೆ ತರಬೇತಿ, ಮೋಟಾರ್ ರಿವೈಡಿಂಗ್ ತರಬೇತಿ, ಎಲೆಕ್ಟ್ರಾನಿಕ್ಸ್ (ಮೊಬೈಲ್, ಲ್ಯಾಪ್‍ಟಾಪ್ ದುರಸ್ತಿ) ತರಬೇತಿ, ಕಾರ್ಯಕ್ರಮ ಸಂಯೋಜನಾ ನಿರ್ವಹಣಾ ತರಬೇತಿ ಹಾಗೂ ಬ್ಯೂಟಿ ಪಾರ್ಲರ್ ತರಬೇತಿಗಳನ್ನು ರಾಜ್ಯ ಮಟ್ಟ, ತಾಲೂಕು ಮಟ್ಟ ಹಾಗೂ ಹೋಬಳಿ ಮಟ್ಟದಲ್ಲಿ ನೀಡಲಾಗುತ್ತದೆ.
ಲಂಬಾಣಿ ಯುವಕ/ ಯುವತಿಯರು ಮೇಲ್ಕಂಡ ತರಬೇತಿ ಪಡೆಯಲು ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಭರ್ತಿ ಮಾಡಿದ ಅರ್ಜಿಗಳೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 22ರೊಳಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ನಂ. 6, ಜಿಪಿಆರ್ ಟವರ್, 1ನೇ ಮಹಡಿ, ಪಾರ್ಕ್ ರಸ್ತೆ, ಟಸ್ಕರ್ ಟೌನ್, ಶಿವಾಜಿನಗರ ಬೆಂಗಳೂರು ವಿಳಾಸಕ್ಕೆ ಅಥವಾ ಇಮೇಲ್ ktdclit@gmail.com ವಿಳಾಸಕ್ಕೆ ಸಲ್ಲಿಸಬೇಕು. ವಿದ್ಯಾರ್ಹತೆ, ತರಬೇತಿ ಅವಧಿ, ಶಿಷ್ಯವೇತನ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಾಂಡಾ ಅಭಿವೃದ್ಧಿ ನಿಗಮದ ವಲಯ ಕಚೇರಿಯನ್ನು, ದೂರವಾಣಿ ಸಂಖ್ಯೆ 08472-257045ನ್ನು ಹಾಗೂ ಬೆಂಗಳೂರಿನ ತಾಂಡಾ ಅ ದೂರವಾಣಿ ಸಂಖ್ಯೆ 080-22865561, 22865562, 22865563ಗಳನ್ನು ಸಂಪರ್ಕಿಸಲು ಕೋರಲಾಗಿದೆ.





















ಹೀಗಾಗಿ ಲೇಖನಗಳು News & Photos Dt.17-09-2017

ಎಲ್ಲಾ ಲೇಖನಗಳು ಆಗಿದೆ News & Photos Dt.17-09-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News & Photos Dt.17-09-2017 ಲಿಂಕ್ ವಿಳಾಸ https://dekalungi.blogspot.com/2017/09/news-photos-dt17-09-2017.html

Subscribe to receive free email updates:

0 Response to "News & Photos Dt.17-09-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ