ಶೀರ್ಷಿಕೆ : NI 04-09-2017
ಲಿಂಕ್ : NI 04-09-2017
NI 04-09-2017
ಸೆಪ್ಟೆಂಬರ್ 5ರಿಂದ ಮಾನಸಿಕ ರೋಗಿಗಳ ತಪಾಸಣಾ ಶಿಬಿರ
ಕಲಬುರಗಿ,ಸೆ.04(ಕ.ವಾ.)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ ಆರು ತಾಲೂಕುಗಳ ಆಸ್ಪತ್ರೆಗಳಲ್ಲಿ ಮಾನಸಿಕ ರೋಗಿಗಳ ತಪಾಸಣಾ ಶಿಬಿರವನ್ನು ಕೆಳಕಂಡ ವಾರ ಮತ್ತು ದಿನಾಂಕಗಳಂದು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ತಾಲೂಕು ಆಸ್ಪತ್ರೆ ಜರುಗುವ ಶಿಬಿರದ ದಿನಾಂಕ, ವಾರ ಹಾಗೂ ಪಾಲ್ಗೊಳ್ಳುವ ತಜ್ಞ ಮನೋವೈದ್ಯರುಗಳ ವಿವರ ಇಂತಿದೆ.
ಮೊದಲನೇ ಮಂಗಳವಾರ: ಸೆಪ್ಟೆಂಬರ್ 5ರಂದು ಆಳಂದ ತಾಲೂಕು ಆಸ್ಪತ್ರೆ-ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ|| ಚಂದ್ರಶೇಖರ ಹೂಡೇದ್, ಎರಡನೇ ಶುಕ್ರವಾರ: ಸೆಪ್ಟೆಂಬರ್ 8ರಂದು ಅಫಜಲಪುರ ತಾಲೂಕು ಆಸ್ಪತ್ರೆ- ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ|| ಶರಣಬಸಪ್ಪ ಕೆ., ಎರಡನೇ ಮಂಗಳವಾರ: ಸೆಪ್ಟೆಂಬರ್ 12ರಂದು ಚಿಂಚೋಳಿ ತಾಲೂಕು ಆಸ್ಪತ್ರೆ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೃದ್ಯ ಡಾ. ವಿಜಯೇಂದ್ರ ಎಂ.ಡಿ., ಮೂರನೇ ಶುಕ್ರವಾರ: ಸೆಪ್ಟೆಂಬರ್ 15ರಂದು ಜೇವರ್ಗಿ ತಾಲೂಕು ಆಸ್ಪತ್ರೆ-ಕೆ.ಬಿ.ಎನ್. ಆಸ್ಪತ್ರೆಯ ಮನೋವೃದ್ಯ ಡಾ|| ಅಮೋಲ್ ಪತಂಗೆ. ಮೂರನೇ ಮಂಗಳವಾರ: ಸೆಪ್ಟೆಂಬರ್ 19ರಂದು ಚಿತ್ತಾಪುರ ತಾಲೂಕು ಆಸ್ಪತ್ರೆ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೃದ್ಯರು, ನಾಲ್ಕನೇ ಮಂಗಳವಾರ: ಸೆಪ್ಟೆಂಬರ್ 26ರಂದು ಸೇಡಂ ತಾಲೂಕು ಆಸ್ಪತ್ರೆ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೃದ್ಯ ಡಾ. ಅಜಯ ಢಗೆ ಭೇಟಿ ನೀಡುವರು.
ಮೇಲ್ಕಂಡ ದಿನಾಂಕಗಳಂದು ಮನೋವೈದ್ಯರು ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಬಹಳ ಮಂಕಾಗಿರುವ, ಯಾರ ಜೊತೆಗೂ ಸೇರದಿರುವ, ಬೇರೆಯವರಿಗೆ ಕಾಣಿಸದ ದೃಶ್ಯ ತಮಗೆ ಕಾಣಿಸುತ್ತದೆ ಹಾಗೂ ಕೇಳಿಸದ ಧ್ವನಿ ತನಗೆ ಕೇಳಿಸುತ್ತದೆ ಎನ್ನುವ, ಎಲ್ಲರ ಬಗ್ಗೆ ಸಂಶಯ ಪಡುವ, ಆತ್ಮಹತ್ಯೆ ಬಗ್ಗೆ ಆಲೋಚಿಸುವ, ಮೂರ್ಛೆರೋಗ, ಬುದ್ಧಿಮಾಂದ್ಯರು ಮುಂತಾದ ಮಾನಸಿಕ ತೊಂದರೆ ಅಥವಾ ಮಾನಸಿಕ ರೋಗದಿಂದ ಬಳಲುತ್ತಿರುವವರು ಸದರಿ ದಿನದಂದು ಮನೋವೈದ್ಯರ ಹತ್ತಿರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು NI 04-09-2017
ಎಲ್ಲಾ ಲೇಖನಗಳು ಆಗಿದೆ NI 04-09-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NI 04-09-2017 ಲಿಂಕ್ ವಿಳಾಸ https://dekalungi.blogspot.com/2017/09/ni-04-09-2017.html
0 Response to "NI 04-09-2017"
ಕಾಮೆಂಟ್ ಪೋಸ್ಟ್ ಮಾಡಿ