ಶೀರ್ಷಿಕೆ : ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ
ಲಿಂಕ್ : ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ
ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ
ಕೊಪ್ಪಳ ಅ. 29 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಕಾಲು ಬಾಯಿ ರೋಗ ನಿಯಂತ್ರಣ ಯೋಜನೆಯಡಿ ಜಿಲ್ಲೆಯಲ್ಲಿ ನ. 01 ರಿಂದ 25 ರವರೆಗೆ ಉಚಿತವಾಗಿ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ 2. 90 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಕಾಲು ಬಾಯಿ ಜ್ವರ ರೋಗವು ದನ, ಎಮ್ಮೆ, ಹಂದಿ, ಜಿಂಕೆ ಮತ್ತು ಇತರೆ ಸೀಳು ಗೊರಸಿನ ರಾಸುಗಳಲ್ಲಿ ಪಿಕಾರ್ನೋ ವೈರಾಣುವಿನಿಂದ ಉಟಾಗುವ ಸಾಂಕ್ರಾಮಿಕ ರೋಗವಾಗಿದೆ. ಈ ರೋಗವು ಅಂಟು ಜಾಡ್ಯವಾಗಿದ್ದು, ರೋಗಗ್ರಸ್ತ ರಾಸುವಿನ ಸಂಪರ್ಕ, ಆಹಾರ, ಗಾಳಿ ಮತ್ತು ನೀರಿನ ಮೂಲಕ ರಾಸುವಿನಿಂದ ರಾಸುವಿಗೆ ಹರಡುತ್ತದೆ. ಕಾಲು-ಬಾಯಿ ಜ್ವರದ ತೀವ್ರ ಪರಿಣಾಮ ಸಂದರ್ಭದಲ್ಲಿ ಕೆಲವೊಮ್ಮೆ ಜಾನುವಾರುಗಳು ಮರಣವನ್ನಪ್ಪುತ್ತವೆ. ರೋಗದಿಂದ ಚೇತರಿಸಿಕೊಂಡ ರಾಸುಗಳ ಉತ್ಪನ್ನ ಸಾಮಥ್ರ್ಯ ಕಡಿಮೆಯಾಗುವುದಲ್ಲದೆ, ಹಸು/ಎಮ್ಮೆಗಳಲ್ಲಿ ಗರ್ಭ ಕಟ್ಟುವ ತೊಂದರೆಗಳು ಉಂಟಾಗುತ್ತವೆ. ಗರ್ಭಪಾತ ಉಂಟಾಗುವ ಸಂಭವ ಇರುತ್ತದೆ. ಹೋರಿ/ಎತ್ತುಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸುತ್ತದೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇರುತ್ತದೆ. ಕಾಲು-ಬಾಯಿ ಜ್ವರದ ವಿರುದ್ಧ ನಿಯಮಿತವಾಗಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಈ ರೋಗವನ್ನು ತಹಬದಿಗೆ ತರಬಹುದಾಗಿದ್ದು, ಈ ನಿಟ್ಟಿನಲ್ಲಿ ಸದ್ಯ ಉಚಿತ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲೂಕುವಾರು, ಗ್ರಾಮವಾರು ಸಿದ್ಧಪಡಿಸಲಾಗಿದ್ದು, ಪಶುಪಾಲನಾ ಇಲಾಖೆ ಅಧಿಕಾರಿ/ಸಿಬ್ಬಂದಿಯನ್ನು ಒಳಗೊಂಡ ಲಸಿಕಾ ತಂಡಗಳು ನಿಗದಿತ ವೇಳಾಪಟ್ಟಿಯಂಗತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಈ ಲಸಿಕೆ ಹಾಕುವುದರಿಂದ ಹಾಲು ಕಡಿಮೆಯಾಗುವಾಗಲಿ, ಗರ್ಭಪಾತವಾಗುವುದಾಗಲಿ ಆಗುವುದಿಲ್ಲ. ರೈತರು ಇಂತಹ ಯಾವುದೇ ಮೂಢನಂಬಿಕೆ, ತಪ್ಪು ಗ್ರಹಿಕೆಗೆ ಒಳಗಾಗದೆ ತಮ್ಮ ಜಾನುವಾರುಗಳಿಗೆ ತಪ್ಪದೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/10/01.html
0 Response to "ನ. 01 ರಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ