ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ

ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ
ಲಿಂಕ್ : ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ

ಓದಿ


ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ

ಕೊಪ್ಪಳ, ಅ. 30 (ಕರ್ನಾಟಕ ವಾರ್ತೆ) : ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ನ. 06 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ವಿಜೃಂಭಣೆಯ ಜೊತೆಗೆ ಅರ್ಥಪೂರ್ಣ ರೀತಿಯಲ್ಲಿ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುವುದು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.

     ಭಕ್ತ ಕನಕದಾಸರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಭಕ್ತ ಶ್ರೇಷ್ಠ ಕನಕದಾಸರು ಇಡೀ ಜಗತ್ತಿಗೆ ಅನ್ವಯವಾಗುವ ತತ್ವ ಸಂದೇಶಗಳನ್ನು ನೀಡಿದ್ದಾರೆ.  ಅವರ ಆದರ್ಶ ಹಾಗೂ ಅವರು ನಡೆದುಕೊಂಡು ಬಂದ ರೀತಿ ನೀತಿಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ರೀತಿಯಲ್ಲಿ ಅವರ ಜಯಂತಿ ಆಚರಣೆಯನ್ನು ಮಾಡಬೇಕಿದೆ.  ಕನಕದಾಸರ ಅಂಗವಾಗಿ ನ. 06 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿರಸಪ್ಪಯ್ಯ ಮಠ ಆವರಣದಿಂದ ಕನಕದಾಸರ ಭಾವಚಿತ್ರ ಸಹಿತ ಮೆರವಣಿಗೆಯನ್ನು ಪ್ರಾರಂಭಿಸಲಾಗುವುದು.  ಇದಕ್ಕೂ ಪೂರ್ವದಲ್ಲಿ ಬಸ್‍ಸ್ಟ್ಯಾಂಡ್ ಬಳಿಯ ಕನಕದಾಸರ ವೃತ್ತದಲ್ಲಿನ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುವುದು.  ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ಹಲವಾರು ವೈವಿಧ್ಯಮಯ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ಮೆರವಣಿಗೆಯನ್ನು ಆಕರ್ಷಕಗೊಳಿಸಲಿದೆ.  ಮೆರವಣಿಗೆಯು ಸಿರಸಪ್ಪಯ್ಯನ ಮಠ ಬಳಿಯಿಂದ ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ನಗರದ ಸಾರ್ವಜನಿಕ ಮೈದಾನ (ಬಾಲಕಿಯರ ಪ.ಪೂ. ಕಾಲೇಜು ಮೈದಾನ) ತಲುಪಲಿದೆ.  ಜಯಂತಿಯನ್ನು ಸಮಾಜದ ಮುಖಂಡರ ಮನವಿ ಮೇರೆಗೆ ಅಂದು ಮಧ್ಯಾಹ್ನ 01 ಗಂಟೆಗೆ ಸಾಹಿತ್ಯ ಭವನದ ಬದಲಿಗೆ ನಗರದ ಸಾರ್ವಜನಿಕ ಮೈದಾನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಗಣ್ಯಾತಿಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.  ವಿವಿಧ ಕ್ಷೇತ್ರಗಳಲ್ಲಿನ ಸ್ಪರ್ಧೆಗಳಲ್ಲಿ ಜಿಲ್ಲೆಗೆ ಕೀರ್ತಿ ತಂದವರನ್ನು ಸನ್ಮಾನಿಸಲಾಗುವುದು.  ಎಲ್ಲ ಸಮುದಾಯದ ಮುಖಂಡರು, ಸಂಘಟನೆಗಳು ಭಕ್ತ ಕನಕದಾಸರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದರು.
     ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಕನಕದಾಸರ ಜಯಂತಿ ಆಚರಣೆಗೆ ನಂದಿಕೋಲು, ಡೊಳ್ಳು ಕುಣಿತ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಂಸ್ಕøತಿಕ ಕಲಾತಂಡಗಳನ್ನು ಆಯೋಜಿಸಲಾಗುವುದು.  ಅಲ್ಲದೆ ಸಮಾಜದ ವತಿಯಿಂದ ಮಹಿಳೆಯರಿಂದ ಪೂರ್ಣ ಕುಂಭ ಮೆರವಣಿಗೆಯನ್ನೂ ಸಹ ಆಯೋಜಿಸಲಾಗುವುದು.  ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲ ಸಮಾಜದ ಮುಖಂಡರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು.
     ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಅವರು ಮಾತನಾಡಿ, ಭಕ್ತ ಕನಕದಾಸರ ವೃತ್ತದ ಬಳಿ ಸ್ವಚ್ಛತೆಯನ್ನು ಕೈಗೊಳ್ಳಬೇಕು.  ಅಲ್ಲದೆ ಸಾರ್ವಜನಿಕ ಮೈದಾನವನ್ನು ಸ್ವಚ್ಛಗೊಳಿಸಬೇಕು.  ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಕನಕದಾಸರ ಜೀವನ ಹಾಗೂ ಅವರ ತತ್ವಾದರ್ಶಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಲು  ಹಂಪಿ ಕನ್ನಡ ವಿವಿ ಭಾಷಾಂತರ ವಿಭಾಗದ ಮುಖ್ಯಸ್ಥ ಡಾ. ವಿಠ್ಠಲರಾವ್ ಗಾಯಕ್ವಾಡ್ ಅವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಸ್ಮಮ್ಮ ನೀರಲೂಟಿ, ಜಿ.ಪಂ. ಸದಸ್ಯ ಹನುಮಂತಗೌಡ ಚಂಡೂರ, ನಗರಸಭೆ ಸದಸ್ಯ ಅಮ್ಜದ್ ಪಟೇಲ್, ವಿವಿಧ ಸಮಾಜದ ಮುಖಂಡರುಗಳಾದ ವಿಠ್ಠಪ್ಪ ಗೋರಂಟ್ಲಿ, ಶಿವಾನಂದ ಹೊದ್ಲೂರು, ಮಂಜುನಾಥ ಗೊಂಡಬಾಳ, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ

ಎಲ್ಲಾ ಲೇಖನಗಳು ಆಗಿದೆ ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ ಲಿಂಕ್ ವಿಳಾಸ https://dekalungi.blogspot.com/2017/10/06.html

Subscribe to receive free email updates:

0 Response to "ನ. 06 ರಂದು ವಿಜೃಂಭಣೆಯಿಂದ ಭಕ್ತ ಕನಕದಾಸರ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ