ಶೀರ್ಷಿಕೆ : ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ
ಲಿಂಕ್ : ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ
ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ
ಕೊಪ್ಪಳ ಅ. 21 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ಎಂಬ ಹೆಸರಿನಲ್ಲಿ ನೀಲಿ ನಕ್ಷೆ ಮತ್ತು ಅನುಷ್ಠಾನ ಕಾರ್ಯಗಳ ಯೋಜನೆ ಸಿದ್ಧಪಡಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಕೊಪ್ಪಳ ಜಿಲ್ಲೆಯ ವಿವಿಧ ಕ್ಷೇತ್ರಗಳ ತಜ್ಞರು, ಕೃಷಿಕರು, ಬುದ್ದಿಜೀವಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಮಾಧ್ಯಮದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಂದ ಅಗತ್ಯ ಸಲಹೆ, ಸೂಚನೆಗಳನ್ನು ಕೊಪ್ಪಳ ಜಿಲ್ಲಾಡಳಿತ ಆಹ್ವಾನಿಸಿದೆ.
ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ಎಂಬ ಹೆಸರಿನಲ್ಲಿ ನೀಲಿ ನಕ್ಷೆ ಮತ್ತು ಅನುಷ್ಠಾನ ಕಾರ್ಯಗಳ ಬಗ್ಗೆ ಯೋಜನೆ ಸಿದ್ಧಪಡಿಸಲು ಕಾರ್ಯಾರಂಭ ಮಾಡಿದೆ. ಇದಕ್ಕಾಗಿ ಸರ್ಕಾರ ಪ್ರಮುಖ ಇಲಾಖೆಗಳನ್ನು ಒಳಗೊಂಡ 13 ವಲಯಗಳನ್ನು ಗುರುತಿಸಿದೆ. ಈ ವಲಯಗಳ ವಿವರ ಇಂತಿದೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಹೀಗೆ ಇದಕ್ಕೆ ಸಂಬಂಧಿಸಿದ ಕ್ಷೇತ್ರಗಳು, ಮೂಲ ಸೌಕರ್ಯಗಳು (ರಸ್ತೆ, ವಿದ್ಯುಚ್ಛಕ್ತಿ, ಕುಡಿಯುವ ನೀರಿನ ಸೌಲಭ್ಯ ಮತ್ತು ನೈರ್ಮಲ್ಯೀಕರಣ), ಉದ್ಯೋಗ ಮತ್ತು ಕೌಶಲ್ಯ, ಕೈಗಾರಿಕಾ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಆರೋಗ್ಯ ಮತ್ತು ಪೋಷಣೆ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ, ಸೇವೆಗಳು, ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ/ನ್ಯಾಯಾಧಿಕಾರ. ಇವೆಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಸಲಹೆಗಳನ್ನು ಕೊಪ್ಪಳ ಜಿಲ್ಲಾಡಳಿತ ಆಹ್ವಾನಿಸಿದೆ.
ಇಂತಹ ಪ್ರಮುಖ ವಲಯಗಳಲ್ಲಿ ಅಭಿವೃದ್ಧಿಗಾಗಿ ರಾಜ್ಯದ ಎಲ್ಲ ಜಿಲ್ಲೆಗಳನ್ನು ಒಳಗೊಂಡಂತೆ ಎಲ್ಲೆಡೆಯಿಂದಲೂ ಜನರ ಅಭಿಪ್ರಾಯ ಮತ್ತು ಪ್ರತಿಕ್ರಿಯೆಗಳನ್ನು ಸೇರಿಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ 07 ವರ್ಷಗಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಲಹೆಗಳು, ಸೂಚನೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ಕ್ಷೇತ್ರಗಳ ತಜ್ಞರು, ಕೃಷಿಕರು, ಬುದ್ದಿಜೀವಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಮಾಧ್ಯಮದವರು, ವಿದ್ಯಾರ್ಥಿಗಳು ತಮ್ಮ ಸಲಹೆಗಳು, ಸೂಚನೆಗಳು, ಪ್ರತಿಕ್ರಿಯೆಗಳನ್ನು vision2025koppal@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಆಸಕ್ತರು ತಮ್ಮ ಸಲಹೆ, ಸೂಚನೆಗಳನ್ನು ಯಾವ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸುತ್ತಿದ್ದೀರಿ ಎಂಬುದನ್ನು ಶೀರ್ಷಿಕೆಯಲ್ಲಿ ನಮೂದಿಸಿ, ಇ-ಮೇಲ್ ವಿಳಾಸಕ್ಕೆ ಅಕ್ಟೋಬರ್ 27 ರ ಒಳಗಾಗಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/2025.html
0 Response to "ಸಮಗ್ರ ಅಭಿವೃದ್ಧಿಗೆ ವಿಷನ್-2025 : ಸಲಹೆ, ಸೂಚನೆಗಳಿಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ