ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ

ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ
ಲಿಂಕ್ : ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ

ಓದಿ


ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ


ಕೊಪ್ಪಳ ಅ. 28 (ಕರ್ನಾಟಕ ವಾರ್ತೆ): ಈಗಿನ ಯುವ ಪೀಳಿಗೆ ಕೃಷಿಯಿಂದ ವಿಮುಖರಾಗುತ್ತಿದ್ದು, ಕೃಷಿಯನ್ನು ಉಳಿಸಿಕೊಳ್ಳಲು ಯುವ ಜನತೆಯನ್ನು ಕೃಷಿಯತ್ತ ಆಕರ್ಷಿಸುವ ಅನಿವಾರ್ಯತೆ ನಿರ್ಮಾಣವಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಹೇಳಿದರು.
     ಕರ್ನಾಟಕ ವಿಷನ್-2025 ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿ ಅಭಿವೃದ್ಧಿಗಾಗಿ ಜನರ ಅಭಿಪ್ರಾಯ ಸಂಗ್ರಹಣೆ ಕುರಿತು ಕೃಷಿ ಇಲಾಖೆಯ ಸಭಾಂಗಣದಲ್ಲಿ ಜರುಗಿದ ವಿಷಯಾಧಾರಿತ ಗುಂಪು ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
     ಕೃಷಿ ಭೂಮಿ ಕಡಿಮೆಯಾಗುತ್ತಿದ್ದು, ಬರುವ ದಿನಗಳಲ್ಲಿ ಆಹಾರದ ಕೊರತೆ ಉಂಟಾಗುವ ಸಂಭವ ಹೆಚ್ಚಾಗಲಿದೆ.  ಕೃಷಿಯಿಂದ ಆದಾಯ ಹೆಚ್ಚಿಸುವಂತಹ ಯೋಜನೆಗಳು ಜಾರಿಗೊಳ್ಳಬೇಕಿದ್ದು, ಕೃಷಿಯಿಂದ ವಿಮುಖವಾಗುತ್ತಿರುವ ಯುವಜನರನ್ನು ಕೃಷಿಯತ್ತ ಆಕರ್ಷಿಸುವ ಅನಿವಾರ್ಯತೆ ಉಂಟಾಗಿದೆ.  ಕೃಷಿಯನ್ನು ಲಾಭದಾಯಕವಾಗಿಸಲು, ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕಿದ್ದು, ಕೃಷಿಯ ಜೊತೆಗೆ ಉಪ ಕಸುಬಾಗಿರುವ ಹೈನುಗಾರಿಕೆಗೆ ಆದ್ಯತೆ ನೀಡಬಹುದಾಗಿದೆ.  ಸರ್ಕಾರದಿಂದ ಹೈನುಗಾರಿಕೆಗೆ ಹೆಚ್ಚಿನ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಬೇಕಿದೆ ಎಂದು ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ ಹೇಳಿದರು.
     ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಅವರು ಮಾತನಾಡಿ, ಜಿಲ್ಲೆಯಲ್ಲಿ ತೋಟಗಾರಿಕೆಗೆ ವಿಫುಲ ಅವಕಾಶವಿದೆ ಅಲ್ಲದೆ ಜಿಲ್ಲೆಯ ಹವಾಗುಣವೂ ಇದಕ್ಕೆ ಪೂರಕವಾಗಿದೆ.  ತೋಟಗಾರಿಕೆ ಕ್ಷೇತ್ರವನ್ನು ವಿಸ್ತರಿಸಲು, ರೈತರನ್ನು ಆಕರ್ಷಿಸುವ ಯೋಜನೆಗಳನ್ನು ರೂಪಿಸಬೇಕಿದೆ.  ರಾಜಸ್ಥಾನದಲ್ಲಿ ಲಕ್ಷಣಸಿಂಗ್ ಎನ್ನುವ ರೈತ ಮಳೆ ನೀರು ಸಂಗ್ರಹಣೆಗೆ ಅನುಸರಿಸಿದ ಮಾರ್ಗವನ್ನು ಇಲ್ಲಿಯೂ ಅನುಸರಿಸಬೇಕಿದೆ.  ಕೃಷಿ ಭೂಮಿ ಕಡಿಮೆಯಾಗುವುದನ್ನು ತಪ್ಪಿಸಲು, ಎನ್‍ಎ ಮಾಡಿಕೊಡುವ ನಿಯಮವನ್ನು ಇನ್ನಷ್ಟು ಬಿಗಿಗೊಳಿಸಬೇಕು.  ಅರಣ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡಿದಲ್ಲಿ, ಜಿಲ್ಲೆ ಬರದಿಂದ ಮುಕ್ತವಾಗಲಿದೆ.  ಬೆಳೆ ವಿಮೆ ಯೋಜನೆ ನಿಷ್ಪ್ರಯೋಜಕವಾಗಿದ್ದು, ಇದರ ಲಾಭ ರೈತರಿಗೆ ಸಮರ್ಪಕವಾಗಿ ದೊರಕುತ್ತಿಲ್ಲ.  ರೈತರಿಗೆ ಲಾಭದಾಯಕವಾಗುವ ರೀತಿಯಲ್ಲಿ ನಿಯಮಗಳನ್ನು ರೂಪಿಸಬೇಕು ಎಂದರು.
     ಕೊಟ್ರಪ್ಪ ಮುತ್ತಾಳ ಮಾತನಾಡಿ, ಗ್ರಾಮಗಳ ಅಭಿವೃದ್ಧಿಯಾಗಬೇಕಾದರೆ, ರಸ್ತೆ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗಬೇಕು.  ಇದಕ್ಕಾಗಿ ಪ್ರತಿಯೊಂದು ಗ್ರಾಮಗಳ ರಸ್ತೆಗಳು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣವಾಗಬೇಕು ಎಂದರು.
     ಗಂಗಾವತಿಯ ಶ್ಯಾಮ್ ಅವರು ಮಾತನಾಡಿ, ಮುಂಗಾರು ಪ್ರಾರಂಭವಾಗುವ ಪೂರ್ವದಲ್ಲಿ, ರೈತರಿಗೆ ಯಾವ ಬೆಳೆ ಬೆಳೆಯುವುದು ಸೂಕ್ತ ಎನ್ನುವ ಬಗ್ಗೆ ಹಾಗೂ ಕೃಷಿ ಪದ್ಧತಿಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಜಾರಿಗೊಳ್ಳಬೇಕು.  ಕೃಷಿ ಸಂಸ್ಕರಣಾ ಘಟಕಗಳ ನಿರ್ಮಾಣ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಮದ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ರೈತರಿಗೆ ಲಾಭ ಹೆಚ್ಚಿಸುವುದು, ಕೃಷಿ ಸಲಹಾ ಕೇಂದ್ರಗಳನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನಗಳ ಬಳಕೆಗೆ ಹೆಚ್ಚಿನ ಒತ್ತು ನೀಡುವುದು, ಉಪ ಕಸುಬುಗಳ ಬಗ್ಗೆ ರೈತರಿಗೆ ತರಬೇತಿ ನೀಡುವಂತಾಗಬೇಕು ಎಂದರು.  ಗಿಣಿಗೇರಾದ ಗೋವಿಂದರಾಜು ಮಾತನಾಡಿ, ಹೋಬಳಿಗೊಂದು ನರ್ಸರಿ ಸ್ಥಾಪಿಸಿ, ರೈತರಿಗೆ ಸಮರ್ಪಕವಾಗಿ ಹಣ್ಣಿನ ಅಥವಾ ಇತರೆ ಗಿಡಗಳು ದೊರೆಯುವಂತಾಗಬೇಕು.  ಸೂಕ್ತ ಕಾಲದಲ್ಲಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ, ರೈತರ ಹಿತ ಕಾಯಬೇಕು.  ಹೆಚ್ಚು ನೀರು ಬಳಸಿ, ಬೆಳೆಯುವ ಬೆಳೆಗಳಿಗೆ ಹನಿ ನೀರಾವರಿಯನ್ನು ಕಡ್ಡಾಯಗೊಳಿಸಿ, ಮಿತ ನೀರು ಬಳಕೆ ಮಾಡುವಂತಾಗಬೇಕು.  ಕೃಷಿ ಆಧಾರಿತ ಕೈಗಾರಿಕೆಗಳು, ಸಂಸ್ಕರಣೆ ಘಟಕಗಳು ನಿರ್ಮಾಣವಾಗಬೇಕು.  ಸರ್ಕಾರಿ ಯೋಜನೆಗಳಲ್ಲಿ ಸಹಾಯಧನದ ಜೊತೆಗೆ ಸಾಲ ನೀಡಲು ಬ್ಯಾಂಕ್‍ಗಳು ಸಹಕಾರ ನೀಡದ ಕಾರಣ ಪಶುಭಾಗ್ಯದಂತಹ ಯೋಜನೆಗಳು ವಿಫಲವಾಗುತ್ತಿದ್ದು, ಇದಕ್ಕೆ ಸರಿಯಾದ ನಿಯಮಗಳನ್ನು ರೂಪಿಸಬೇಕು ಎಂದರು.
     ಜಿ.ಪಂ. ಮಾಜಿ ಅಧ್ಯಕ್ಷ ಜನಾರ್ಧನ ಹುಲಿಗಿ ಮಾತನಾಡಿ, ಹೊಲದ ಬದುಗಳು ಹಾಗೂ, ಕೆರೆಯ ಬದುಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ಅರಣ್ಯೀಕರಣ ಮಾಡಲು ಅವಕಾಶ ನೀಡಬೇಕು.  ಪ್ರತಿ 05-06 ಗ್ರಾಮ ಪಂಚಾಯತಿಗಳನ್ನು ಸೇರಿಸಿ, ಬಹುಗ್ರಾಮ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಿ, ಸಮರ್ಪಕ ತ್ಯಾಜ್ಯ ವಿಲೇವಾರಿ ಮಾಡಬೇಕು.  ಎಲ್ಲ ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳಾಗಬೇಕು ಎಂದರು.
     ಉಳಿದಂತೆ ಹನಿ ನೀರಾವರಿ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಬೇಕು.  ಗೊಬ್ಬರ ಮತ್ತು ಬೀಜ ಕಳಪೆ ಪೂರೈಕೆಯಾಗುವುದನ್ನು ತಡೆಗಟ್ಟಲು ಕಠಿಣ ನಿಯಮಗಳು ಜಾರಿಗೊಳ್ಳಬೇಕು.  ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು.  ಜೇನು ಕೃಷಿ, ಪುಷ್ಪ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು.  ಆರೋಗ್ಯ ದೃಷ್ಟಿಯಿಂದ ಸಿರಿಧಾನ್ಯ ಬೆಳೆಗೆ ಉತ್ತೇಜನ ನೀಡಬೇಕು.  ಹಸಿ ಮೇವು ಘಟಕಗಳು, ಎರೆ ಹುಳು ಘಟಕಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣಗೊಳ್ಳಬೇಕು.  ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 02 ಸಂಚಾರಿ ಮಣ್ಣು ಪರೀಕ್ಷೆ ಘಟಕಗಳು ಪ್ರಾರಂಭವಾಗಬೇಕು ಎಂಬ ಅಭಿಪ್ರಾಯಗಳು ರೈತರಿಂದ ಕೇಳಿಬಂದವು.
     ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎನ್.ಕೆ. ತೊರವಿ, ಕೃಷಿ ಇಲಾಖೆ ಜಂಟಿನಿರ್ದೇಶಕ ವೀರೇಶ್ ಹುನಗುಂದ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಪಶುಸಂಗೋಪನೆ ಉಪನಿರ್ದೇಶಕ ಡಾ. ಶಿವಣ್ಣ ಸೇರಿದಂತೆ ಹಲವು ಅಧಿಕಾರಿಗಳು, ಕೃಷಿ ತಜ್ಞರು, ರೈತರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ

ಎಲ್ಲಾ ಲೇಖನಗಳು ಆಗಿದೆ ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ ಲಿಂಕ್ ವಿಳಾಸ https://dekalungi.blogspot.com/2017/10/2025_28.html

Subscribe to receive free email updates:

0 Response to "ವಿಷನ್ 2025 : ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕಾದ ಅನಿವಾರ್ಯತೆ ಇದೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ