ಶೀರ್ಷಿಕೆ : ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ
ಲಿಂಕ್ : ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ
ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ
ಕೊಪ್ಪಳ ಅ. 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸಮಗ್ರ ವ್ಯವಸ್ಥೆ ಹೊಂದಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ತಾಲೂಕಿಗೊಂದು ನಿರ್ಮಾಣವಾಗಬೇಕು. ಹಾಗೂ ಪ್ರತಿಯೊಬ್ಬ ಬಡ ರೋಗಿಗಳಿಗೂ ಉಚಿತ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟರು.
ಕರ್ನಾಟಕ ವಿಷನ್-2025 ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿ ಅಭಿವೃದ್ಧಿಗಾಗಿ ಜನರ ಅಭಿಪ್ರಾಯ ಸಂಗ್ರಹಣೆ ಕುರಿತು ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಜರುಗಿದ ವಿಷಯಾಧಾರಿತ ಗುಂಪು ಚರ್ಚೆಯಲ್ಲಿ ಇಂತಹ ಅಭಿಪ್ರಾಯ ವ್ಯಕ್ತಗೊಂಡವು.
ಪ್ರತಿ ತಾಲೂಕುಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣಗೊಂಡು, ಪ್ರತಿಯೊಬ್ಬ ಬಡ ರೋಗಿಗೂ ಉತ್ತಮ ಹಾಗೂ ಉಚಿತ ಚಿಕಿತ್ಸೆ ಸಕಾಲದಲ್ಲಿ ದೊರೆಯುವಂತಾಗಬೇಕು. ಶಿಶು ಹಾಗೂ ತಾಯಿ ಮರಣವನ್ನು ಸಂಪೂರ್ಣವಾಗಿ ತಡೆಗಟ್ಟಲು, ಇದರಿಂದ ಮಾತ್ರ ಸಾಧ್ಯವಾಗಲಿದೆ. ಸರ್ಕಾರದಿಂದ ಪ್ರತಿಯೊಬ್ಬ ಪ್ರಜೆಗೂ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಎಲ್ಲ ಸೌಲಭ್ಯಗಳು ದೊರೆಯುವಂತಾಗಬೇಕು. ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿಗಳು ಸಂಪೂರ್ಣವಾಗಿ ತೊಲಗಲು ಅವಶ್ಯಕ ಹೆಚ್ಚಿನ ಕ್ರಮ ಜರುಗಿಸಬೇಕು. ವಸತಿ ನಿಲಯಗಳಿಗೆ ವಿಶೇಷ ಭದ್ರತೆ ವ್ಯವಸ್ಥೆ ಒದಗಿಸಬೇಕು. ಹೋಬಳಿವಾರು ವಸತಿ ಸಾಲೆ, ಡಿಜಿಟಲ್ ಲೈಬ್ರರಿ ತೆರೆಯಬೇಕು. ಅಲ್ಪಸಂಖ್ಯಾತರ ಸಾಮಾಜಿಕ ನ್ಯಾಯಕ್ಕೆ ಮಿಷನ್ ಸಹಕಾರಿಯಾಗಲಿದೆ. ಬಾಲ್ಯ ವಿವಾಹ ತಡೆಗಟ್ಟಬೇಕು. ಭಿಕ್ಷಾಟನೆಯನ್ನು ತಡೆಗಟ್ಟಿ, ಅಂತಹ ಮಕ್ಕಳನ್ನು ಶಾಲೆಗೆ ಸೇರಿಸಿ, ಅವರ ಶಿಕ್ಷಣಕ್ಕೆ ಯೋಜನೆ ರೂಪಿಸಬೇಕು. ನಿವೇಶನಗಳನ್ನು ಎಲ್ಲಾ ಜನಾಂಗಕ್ಕೆ ನೀಡಬೇಕು. ಅಲೆಮಾರಿಗಳು ವಾಸಿಸುವ ಸ್ಥಳಗಳಲ್ಲಿ ಶಾಲೆಗಳನ್ನು ನಿರ್ಮಿಸಬೇಕು. ರಸ್ತೆಗಳ ಅಭಿವೃದ್ಧಿಯಾಗಬೇಕು. ಹೊಗೆ ರಹಿತ ಗ್ರಾಮಗಳ ನಿರ್ಮಾಣಕ್ಕಾಗಿ ಪ್ರತಿಯೊಂದು ಕುಟುಂಬಗಳಿಗೂ ಎಲ್‍ಪಿಜಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಬೇಕು. ಸಾಮೂಹಿಕ ಮದುವೆಯಲ್ಲಿ ಕ್ರಮಬದ್ಧವಾಗಿ ವಧು-ವರರ ವಯಸ್ಸು ಪರಿಶೀಲನೆ ಆಗಬೇಕು. ಜಾತಿ ಭೇಧ-ಭಾವ ಮಾಡದೆ, ಪ್ರತಿಯೊಂದು ಸಮುದಾಯಕ್ಕೂ ಸಾಮಾಜಿಕ ನ್ಯಾಯ ದೊರೆಯುವಂತಾಗಬೇಕು. ಸಾಕ್ಷರತೆ ಪ್ರಮಾಣವನ್ನು 2025 ರ ಹೊತ್ತಿಗೆ ಶೇ. 100 ರಷ್ಟು ಹೆಚ್ಚಿಸಬೇಕು. ಪ್ರತಿ ತಾಲೂಕಿಗೆ ಒಂದರಂತೆ ಹೆಣ್ಣು ಮಕ್ಕಳಿಗಾಗಿ ವಸತಿ ಶಾಲೆ ನಿರ್ಮಿಸಬೇಕು. ಶಾಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ತರಬೇತಿಯನ್ನು ಪ್ರಾರಂಭಿಸಬೇಕು. ಇಂಗ್ಲೀಷ್ ಶಾಲೆಗಳು ಹೆಚ್ಚಾಗುತ್ತಿದ್ದಂತೆ ಕನ್ನಡ ಶಾಲೆಗಳು ಕಡಿಮೆಯಾಗುತ್ತಿವೆ. ಆದ್ದರಿಂದ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು. ಪರೀಕ್ಷೆಯ ಪದ್ದತಿಯಲ್ಲಿ ಬದಲಾವಣೆ ತರಬೇಕು. ಕಾಲೇಜುಗಳನ್ನು ಇನ್ನೂ ಹೆಚ್ಚಿನ ಸಂಖ್ಯೆಗಳಲ್ಲಿ ನಿರ್ಮಾಣ ಮಾಡಬೇಕು. ಮೊರಾರ್ಜಿ ಶಾಲೆಗಳಂತಂಹ ವಸತಿ ಶಾಲೆಗಳನ್ನು ಹೆಚ್ಚಿಸಬೇಕು. ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಬೇಕು. ಕಂಪ್ಯೂಟರ್, ಲ್ಯಾಪ್‍ಟ್ಯಾಪ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಮತ್ತು ಅವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂಬ ಸಲಹೆಗಳು ಸಾರ್ವಜನಿಕರಿಂದ ಕೇಳಿಬಂದವು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗೋನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಸೇರಿದಂತೆ ಹಲವು ಅಧಿಕಾರಿಗಳು, ವಿಷಯ ತಜ್ಞರು, ಸಾರ್ವಜನಿಕರು ಚರ್ಚೆಯಲ್ಲಿ ಭಾಗವಹಿಸಿದ್ದರು.
ಹೀಗಾಗಿ ಲೇಖನಗಳು ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ
ಎಲ್ಲಾ ಲೇಖನಗಳು ಆಗಿದೆ ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ ಲಿಂಕ್ ವಿಳಾಸ https://dekalungi.blogspot.com/2017/10/2025_64.html
0 Response to "ಮಿಷನ್-2025 : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಉಚಿತ ಚಿಕಿತ್ಸೆಗೆ ಆದ್ಯತೆ ನೀಡಿ"
ಕಾಮೆಂಟ್ ಪೋಸ್ಟ್ ಮಾಡಿ