21-10-2017

21-10-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು 21-10-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : 21-10-2017
ಲಿಂಕ್ : 21-10-2017

ಓದಿ


21-10-2017

ತ್ವರಿತ ನ್ಯಾಯದಾನಕ್ಕೆ ವಕೀಲರು ಶ್ರಮಿಸಬೇಕು _ನ್ಯಾಯಮೂರ್ತಿ
*******************************************
ಬಿ.ಎಸ್.ಪಾಟೀಲ್
ಕಲಬುರಗಿ,ಅ.21.(ಕ.ವಾ.)-ನ್ಯಾಯ ಆಲಿಸಿ ನ್ಯಾಯದೇಗುಲಕ್ಕೆ ಬರುವ ಕಕ್ಷಿದಾರರಿಗೆ ಅನಗತ್ಯ ವಿಳಂಬವಾಗದಂತೆ ನ್ಯಾಯದಾನವನ್ನು ತ್ವರಿತವಾಗಿ ಸಿಗುವಂತೆ ವಕೀಲರು ಶ್ರಮಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹೇಳಿದರು.
ಅವರು ಶನಿವಾರ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನೂತನವಾಗಿ ಮಂಜೂರಾದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸೇಡಂ ಪೀಠಾಸೀನ)ವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ನ್ಯಾಯ ನಿರ್ಣಯವನ್ನು ಚಾಕಚಕ್ಕತೆಯಾಗಿ ಶೀಘ್ರ ಒದಗಿಸುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ತರವಾಗಿದ್ದು, ಈ ನಿಟ್ಟಿನಲ್ಲಿ ವಕೀಲರು ಶ್ರೇಷ್ಠತೆಗೆ ಮಾದರಿಯಾಗಿ ಕಾರ್ಯನಿರ್ವಹಿಸಬೇಕು. ಪ್ರತಿ ಪ್ರಕರಣದ ಬಗ್ಗೆ ನ್ಯಾಯವಾದಿಗಳು ಆಯಾ ಪ್ರಕರಣಕ್ಕೆ ಹೋಲುವಂತಹ ವಿಭಿನ್ನ ರೀತಿಯ ತೀರ್ಪುಗಳ ವಿವಿಧ ಆಯಾಮಗಳಲ್ಲಿ ಅಧ್ಯಯನ ಮಾಡಿ ನ್ಯಾಯಾಲಯದ ಮುಂದೆ ಹಾಜರಿಪಡಿಸಿದಾಗ ನ್ಯಾಯದೇಗುಲದಿಂದ ಪರಿಣಾಮಕಾರಿಯಾಗಿ ನ್ಯಾಯದಾನ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ನಗರಗಳು ಬೆಳೆದಂತೆ ಕಿರಿಯ ನ್ಯಾಯಾಲಯದಿಂದ ಹಿರಿಯ ನ್ಯಾಯಾಲಯಗಳು ಬರುತ್ತವೆ. ಅದರಂತೆ ವಕೀಲರು ತಮ್ಮ ವೃತ್ತಿಯಲ್ಲಿ ಪ್ರಬುದ್ಧತೆ ಹಾಗೂ ಶ್ರೇಷ್ಠತೆಯನ್ನು ಹೊಂದುವುದು ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದಲ್ಲಿ ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯದ ತೀರ್ಪುಗಳು ಲಭ್ಯವಿದ್ದು, ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಪ್ರಸ್ತುತ ಮುಂಬೈ, ಬೆಂಗಳೂರು, ದೆಹಲಿ, ಕೊಲ್ಕತ್ತಾ ಮಹಾನಗರದ ವಕೀಲರು ಅವಿರತವಾಗಿ ಅಭ್ಯಾಸಿಸಿ ಕಾರ್ಯನಿರ್ವಹಿಸುತ್ತಿರುವುದರಿಂದ ಅವರಿಗೆ ತುಂಬಾ ಬೇಡಿಕೆ ಇದೆ. ಅದೇ ರೀತಿಯಲ್ಲಿ ಇಲ್ಲಿನ ವಕೀಲರು ಸಹ ಶ್ರದ್ಧೆ, ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರಕರಣವನ್ನು ಸಂಪೂರ್ಣವಾಗಿ ಅರಿತು ವಾದ ಮಂಡಿಸಿದಾಗ ಕಕ್ಷಿದಾರರಿಗೆ ನ್ಯಾಯ ಒದಗಿಸಲು ಸಹಕಾರಿಯಾಗುತ್ತದೆ. ದಿನದಿಂದ ದಿನಕ್ಕೆ ವೃತ್ತಿಯಲ್ಲಿ ಬದಲಾವಣೆ ಆಗದಿದ್ದರೆ, ಪ್ರಾಮುಖ್ಯತೆ ಸಿಗುವುದಿಲ್ಲ. ನಿರಂತರವಾಗಿ ಪ್ರಕರಣಗಳನ್ನು ಅಧ್ಯಯನ ಮಾಡಿದಾಗ ವೃತ್ತಿಪರರಾಗಿ ಹೊರಹೊಮ್ಮಲು ಸಾಧ್ಯ ಎಂದು ವಕೀಲರಿಗೆ ಕಿವಿ ಮಾತು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣ ಪ್ರಕಾಶ ಪಾಟೀಲ್ ಮಾತನಾಡಿ, ಸೇಡಂ ತಾಲೂಕಿಗೆ ನೂತನವಾಗಿ ಮಂಜೂರಾಗಿರುವ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಎಲ್ಲ ರೀತಿಯ ಮೂಲಸೌಲಭ್ಯವನ್ನು ಒದಗಿಸಲಾಗುವುದು. ಈಗಾಗಲೆ 38 ಲಕ್ಷ ರೂ. ವೆಚ್ಚದಲ್ಲಿ ಗ್ರಂಥಾಲಯ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಧ್ಯಸ್ಥಿಕೆ ಕೇಂದ್ರದ ಹಿರಿಯ ನ್ಯಾಯವಾದಿ ಶೋಭಾ ಪಾಟೀಲ್, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ವ್ಹಿ.ಪಾಟೀಲ್, ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಹಿರಿಯ ನ್ಯಾಯವಾದಿ ಕಾಶಿನಾಥ್ ಮೋತಕಪಲ್ಲಿ, ಕಲಬುರಗಿ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಸಿ.ಬಿರಾದರ, ನ್ಯಾಯಾಧೀಶರುಗಳಾದ ಎನ್.ಪಿ.ಘೋರ್ಪಡೆ, ಮಹಾದೇವಿ ಕನಾಟೆ, ಕವಿತಾ ಉಂಡೋಡಿ, ಕಲಬುರಗಿ ಜಿಲ್ಲಾ ವಕೀಲರÀ ಸಂಘದ ಅಧ್ಯಕ್ಷ ನ್ಯಾಯವಾದಿ ಆರ್.ಕೆ.ಹಿರೇಮಠ, ಚಿಂಚೋಳಿ ವಕೀಲರ ಸಂಘದ ಅಧ್ಯಕ್ಷ ನ್ಯಾಯವಾದಿ ಶ್ರೀಮಂತ ಕಟ್ಟಿಮನಿ, ಶಹಾಬಾದ ವಕೀಲರ ಸಂಘದ ಅಧ್ಯಕ್ಷ ನ್ಯಾಯವಾದಿ ಶಶಿಕಾಂತ್ ಎನ್.ಶಿಂಧೆ, ಸೇಡಂ ವಕೀಲರ ಸಂಘದ ಕಾರ್ಯದರ್ಶಿ ಸಂಜೀವರೆಡ್ಡಿ ಕೋಡ್ಲಾ ಸೇರಿದಂತೆ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸೇಡಂ ತಾಲೂಕು ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ಆರ್. ಮುನ್ನೂರ ಸರ್ವರನ್ನು ಸ್ವಾಗತಿಸಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಮಾಡಿದರು. ನ್ಯಾಯವಾದಿ ಎಸ್.ಆರ್.ಆವಂಟಿ ವಂದಿಸಿದರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ,ಅ.21(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಅಕ್ಟೋಬರ್ 23ರಂದು ಕಲಬುರಗಿ ನಗರಕ್ಕೆ ಆಗಮಿಸುವರು.
ಅಂದು ಬೆಳಿಗ್ಗೆ 9 ಗಂಟೆಗೆ ಸೇಡಂ ತಾಲೂಕಿನ ಮೇದಕ ತಾಂಡಾದಲ್ಲಿ ಸೇವಾಲಾಲ್ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ 11 ಗಂಟೆಗೆ ಗಜಲಾಪುರ ರಸ್ತೆ ಶಂಕುಸ್ಥಾಪನಾ ಕಾರ್ಯಕ್ರಮ ಹಾಗೂ ಇನ್ನೀತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 24ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಬೆಂಗಳೂರಿಗೆ ಪ್ರಯಾಣಿಸುವರು.
ಪೊಲೀಸ್ ವಸತಿ ಗೃಹ ಹಾಗೂ ಸ್ಟೇಶನ್ ಪೊಲೀಸ್ ಠಾಣೆಯ ನೂತನ ಕಚೇರಿ
****************************************************************** ಉದ್ಘಾಟನೆ
*************
ಕಲಬುರಗಿ,ಅ.21(ಕ.ವಾ.)-ಕಲಬುರಗಿ ಜಿಲ್ಲಾ ಪೊಲೀಸ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ನಿಗಮ ನಿಯಮಿತ ಬೆಂಗಳೂರು ಇವುಗಳ ಸಂಯುಕ್ರಾಶ್ರಯದಲ್ಲಿ ಕಲಬುರಗಿ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಿಸಿದ 120 ಪೊಲೀಸ್ ವಸತಿ ಗೃಹಗಳ ಹಾಗೂ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ನೂತನ ಕಚೇರಿಯ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 23ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಡಿ.ಎ.ಆರ್. ಆವರಣದಲ್ಲಿ ಜರುಗಲಿದೆ.
ರಾಜ್ಯದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಈ ಸಮಾರಂಭವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಹೆಚ್.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಹಾಗೂ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರು ಗೌರವಾನ್ವಿತರಾಗಿ ಆಗಮಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ, ಬಿ.ಜಿ. ಪಾಟೀಲ, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ ಅಸಗರ ಚುಲಬುಲ್, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಮಹಾನಗರ ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಮೊಬಿನ್ ಅಹ್ಮದ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕ ರೂಪಕ್ ಕುಮಾರ ದತ್ತಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ರೈಲ್ವೇಸ್) ಅಮರಕುಮಾರ ಪಾಂಡೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಜಿ. ಮತ್ತು ಹೆಚ್.ಆರ್.) ಹಾಗೂ ಕೆ.ಎಸ್.ಪಿ.ಹೆಚ್. ಮತ್ತು ಐ.ಡಿ.ಸಿ.ಎಲ್. ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಸಂಜಯ ಸಹಾಯ್, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಆಲೋಕ ಕುಮಾರ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಅಕ್ಟೋಬರ್ 23ರಂದು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
**********************************************************
ಕಲಬುರಗಿ,ಅ.21(ಕ.ವಾ.)-ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ 7ನೇ ತಂಡದ ಪಿ.ಎಸ್.ಐ. (ಸಿವಿಲ್) ಮತ್ತು 3ನೇ ತಂಡದ ಪಿ.ಎಸ್.ಐ. (ನಿಸ್ತಂತು) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನವು ಅಕ್ಟೋಬರ್ 23ರಂದು ಬೆಳಗಿನ 9 ಗಂಟೆಗೆ ನಾಗನಹಳ್ಳಿಯ ಪೊಲೀಸ್ ತರಬೇತಿ ಕಾಲೇಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ.
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯ ಅತಥಿಗಳಾಗಿ ಪಥಸಂಚಲನವನ್ನು ಪರಿವೀಕ್ಷಣೆ ಮಾಡಿ ಬಹುಮಾನ ವಿತರಿಸುವರು. ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕ ರೂಪಕ್ ಕುಮಾರ ದತ್ತಾ, ಪೊಲೀಸ್ ಮಹಾನಿರ್ದೇಶಕ(ತರಬೇತಿ) ಪ್ರೇಮ ಶಂಕರ ಮೀನಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಸಿ.ಎಲ್.ಎಮ್.) ಪ್ರವೀಣ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿರುವರು ಎಂದು ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನ ಎಸ್.ಪಿ ಹಾಗೂ ಪ್ರಾಂಶುಪಾಲರಾದ ಸವಿತಾ ಹೂಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುರಿ/ಮೆಕೆ ಸಾಕಾಣಿಕೆಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಕಲಬುರಗಿ,ಅ.21(ಕ.ವಾ.)-ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2017-18ನೇ ಸಾಲಿನ ಕುರಿ/ಮೆಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕಾಗಿ ನಿಗಮದಲ್ಲಿ ನೋಂದಣಿಯಾದ ಕಲಬುರಗಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಉಪ ನಿರ್ದೇಶಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಕುರಿ/ಮೆಕೆ ಸಾಕಾಣಿಕೆಗಾಗಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕ್ರಮವಾಗಿ 23 ಪರಿಶಿಷ್ಟ ಜಾತಿ ಮತ್ತು 05 ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 01 ಪರಿಶಿಷ್ಟ ಜಾತಿ ಮತ್ತು 03 ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಆಸಕ್ತಿವುಳ್ಳ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ ನೋಂದಾಯಿತ ಸದಸ್ಯರು ಭರ್ತಿ ಮಾಡಿದ ಅರ್ಜಿಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕರ ಕಚೇರಿಯಲ್ಲಿ (ರಜಾ ದಿನಗಳನ್ನು ಹೊರತುಪಡಿಸಿ) 2017ರ ನವೆಂಬರ್ 09 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-237772ನ್ನು ಸಂಪರ್ಕಿಸಲು ಕೋರಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಕಲಬುರಗಿ,ಅ.21(ಕ.ವಾ.)-ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿದ್ಯಾವಂತ ನಿರುದ್ಯೋಗಿ ಅಂಗವಿಕಲ ಅಭ್ಯರ್ಥಿಗಳಿಗೆ ಕೆಳಕಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಹ ತರಬೇತಿ (ಕೋಚಿಂಗ್) ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಬನ್ಸಿ ಪವಾರ ತಿಳಿಸಿದ್ದಾರೆ.
ತರಬೇತಿ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷೆಗಳು, ಐ.ಎ.ಎಸ್., ಕೆ.ಎ.ಎಸ್., ಬ್ಯಾಂಕಿಂಗ್, ಎಸ್.ಡಿ.ಎ., ಎಫ್.ಡಿ.ಎ., ಶಿಕ್ಷಕರ ಮತ್ತಿತರ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಭತ್ಯೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಭರಿಸಲಾಗುವುದು. ಇಚ್ಛೆಯುಳ್ಳ ಸಂಸ್ಥೆಗಳು ಅಕ್ಟೋಬರ್ 27ರೊಳಗಾಗಿ ತಮ್ಮ ಸಂಸ್ಥೆಯ ದಾಖಲಾತಿಗಳನ್ನು ಮೇಲ್ಕಂಡ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08427-235222ನ್ನು ಸಂಪರ್ಕಿಸಲು ಕೋರಲಾಗಿದೆ.




ಹೀಗಾಗಿ ಲೇಖನಗಳು 21-10-2017

ಎಲ್ಲಾ ಲೇಖನಗಳು ಆಗಿದೆ 21-10-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ 21-10-2017 ಲಿಂಕ್ ವಿಳಾಸ https://dekalungi.blogspot.com/2017/10/21-10-2017.html

Subscribe to receive free email updates:

0 Response to "21-10-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ