ಶೀರ್ಷಿಕೆ : ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಲಿಂಕ್ : ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಕೊಪ್ಪಳ ಅ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಕಾನೂನು ಅರಿವು-ನೆರೆವು ಕಾರ್ಯಕ್ರಮವನ್ನು ಅ. 30 ರಂದು ಬೆಳಿಗ್ಗೆ 09-30 ಗಂಟೆಗೆ ಸಾಕ್ಷಿದಾರರ ಮೊಗಸಾಲೆ, ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸೀನಿಯರ್ ಸಿವಿಲ್ ಜಡ್ಜ್ ಟಿ. ಶ್ರೀನಿವಾಸ, ಸಿವಿಲ್ ಜಡ್ಜ್ ಹಾಗೂ ಜೆ.ಎಂ,ಎಫ್.ಸಿ ವಿಜಯ ಕುಮಾರ ಕನ್ನೂರು, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನುಶರ್ಮ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರೆಡ್ಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಸ್.ಕೆ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ, ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜನಯ್ಯ, ತಹಶಿಲ್ದಾರ ಗುರುಬಸವರಾಜ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ, ಭಾಗವಹಿಸುವರು.
ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮಾನಸಿಕ ತಜ್ಞರಾದ ಡಾ. ಕೃಷ್ಣ ಓಂಕಾರ ಅವರು ಮಾನಸಿಕ ರೋಗದ ವ್ಯಕ್ತಿತ್ವ ವಿಚಾರಗಳು ಹಾಗೂ ಮನೋರೋಗ ನಿಯಂತ್ರಣ ಹಾಗೂ ಚಿಕಿತ್ಸೆ ಕುರಿತು, ಹಾಗೂ ವಕೀಲರಾದ ಎಂ. ಹನುಮಂತರಾವ್ ಅವರು ಮಾನಸಿಕ ಆರೋಗ್ಯ ಕಾನೂನು ಅರಿವು-ನೆರವು ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/10/30_28.html
0 Response to "ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ : ಅ. 30 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ