ಶೀರ್ಷಿಕೆ : ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ
ಲಿಂಕ್ : ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ
ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ
ಕೊಪ್ಪಳ ಅ. 21 (ಕರ್ನಾಟಕ ವಾರ್ತೆ): ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 3 ಜನ, ಗಂಗಾವತಿ ನಗರ ಸಭೆ ವ್ಯಾಪ್ತಿಯಲ್ಲಿ 3 ಜನ, ಕುಷ್ಟಗಿ ಮತ್ತು ಕಾರಟಗಿ - ಪುರಸಭೆ ವ್ಯಾಪ್ತಿಯಲ್ಲಿ ತಲಾ ಒಬ್ಬರು, ಯಲಬುರ್ಗಾ ಪಟ್ಟಣ ಪಂಚಾಯತಿ, ಕುಕನೂರು ಪಟ್ಟಣ ಪಂಚಾಯತಿ ಹಾಗೂ ಗಂಗಾವತಿ ತಾಲೂಕಿನ ಬೆನ್ನೂರು, ಬಸಾಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ ಒಬ್ಬರನ್ನು ನೇಮಕ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ನಗರ/ ಪಟ್ಟಣ/ ಗ್ರಾ.ಪಂ (ಯು.ಆರ್.ಡಬ್ಲ್ಯೂ ಮತ್ತು ವಿಆರ್.ಡಬ್ಲ್ಯೂ) ಕಾರ್ಯಕರ್ತರ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾಭ್ಯಾಸ ಹೊಂದಿರಬೇಕು. ಸ್ಥಳೀಯರಿಗೆ ಹಾಗೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ವಿಕಲಚೇತನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಕೊಪ್ಪಳ, ಇವರಿಂದ ಪಡೆದು, ಸಕ್ಷಮ ಪ್ರಾಧಿಕಾರದಿಂದ ಪಡೆದ ವಾಸಸ್ಥಳ, ಎಸ್ಎಸ್ಎಲ್ಸಿ ಶೈಕ್ಷಣಿಕ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ವೈsದ್ಯಕೀಯ ಪ್ರಮಾಣ ಪತ್ರ/ ಅಂಗವಿಕಲರ ಗುರುತಿನ ಚೀಟಿ, ಆಧಾರ ಕಾರ್ಡ, ಅಂಗವಿಕಲತೆ ತೊರುವ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ನವೆಂಬರ್. 13 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ.ಗಳನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_21.html
0 Response to "ಖಾಲಿ ಇರುವ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ