ಶೀರ್ಷಿಕೆ : ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ
ಲಿಂಕ್ : ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ
ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ
ಕೊಪ್ಪಳ ಅ. 25 (ಕರ್ನಾಟಕ ವಾರ್ತೆ): ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ನಿಗದಿಪಡಿಸಲಾಗಿರುವ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಜಿಲ್ಲೆಯ ಅನುಷ್ಠಾನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 2017-18 ನೇ ಸಾಲಿಗೆ ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯ ಮೈಕ್ರೋ ಯೋಜನೆಯಡಿ 85. 83 ಕೋಟಿ ರೂ. ಗಳಲ್ಲಿ ಒಟ್ಟು 428 ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಕೊಪ್ಪಳ ತಾಲೂಕಿನಲ್ಲಿ 96 ಕಾಮಗಾರಿಗಳಿಗೆ 16. 69 ಕೋಟಿ ರೂ., ಗಂಗಾವತಿ ತಾಲೂಕಿನಲ್ಲಿ 36 ಕಾಮಗಾರಿಗಳಿಗೆ 6. 19 ಕೋಟಿ, ಕುಷ್ಟಗಿ ತಾಲೂಕಿನಲ್ಲಿ 157 ಕಾಮಗಾರಿಗಳಿಗೆ 30. 16 ಕೋಟಿ ಹಾಗೂ ಯಲಬುರ್ಗಾ ತಾಲೂಕಿನಲ್ಲಿ 139 ಕಾಮಗಾರಿಗಳಿಗೆ 32. 78 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಈಗಾಗಲೆ ತಳಕಲ್ ಇಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಸಿ.ಸಿ. ರಸ್ತೆ ನಿರ್ಮಾಣ, ಶಾಲಾ ಕಟ್ಟಡಗಳ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿವೆ. ಜಿಲ್ಲೆಯಲ್ಲಿ ಈ ಯೋಜನೆಯಡಿಯಲ್ಲಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಪಂಚಾಯತಿ ರಾಜ್ ಇಂಜಿನಿಯರಿಂಗ್ ಇಲಾಖೆ, ಕರ್ನಾಟಕ ಗ್ರಾಮೀಣ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಯೋಜನೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಬೇಕು. ಇನ್ನೂ ಟೆಂಡರ್ ಪ್ರಕ್ರಿಯೆ ಕೈಗೊಳ್ಳದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತಕ್ಷಣ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿ, ಶೀಘ್ರ ಕಾಮಗಾರಿಗಳನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಬಂಡಿವಡ್ಡರ್, ಕೆಆರ್‍ಐಡಿಎಲ್ ಕಾರ್ಯಪಾಲಕ ಅಭಿಯಂತರ ಎಂ. ಕೊರಬು, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/10/blog-post_25.html
0 Response to "ಹೈ-ಕ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಿ- ಎಂ. ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ