ಶೀರ್ಷಿಕೆ : ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಅ. 26 (ಕರ್ನಾಟಕ ವಾರ್ತೆ): ಸರಕಾರಿ ಪ್ರೌಢಶಾಲೆ/ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ಗ್ರೇಡ್-2, ಸಂಗೀತ/ ನೃತ್ಯ/ ನಾಟಕ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಸರಕಾರಿ ಪ್ರೌಢಶಾಲೆ/ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ಗ್ರೇಡ್-2, ಸಂಗೀತ/ ನೃತ್ಯ/ ನಾಟಕ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಸೇವೆಗೆ ಸೇರಿದ ದಿನಾಂಕವನ್ನು ಪರಿಗಣಿಸದೆ ಆಯ್ಕೆ ಪಟ್ಟಿಯಲ್ಲಿರುವ ಮೆರಿಟ್‍ಲಿಸ್ಟ್‍ನಲ್ಲಿರುವ ಕ್ರಮ ಸಂಖ್ಯೆಯನ್ನು ಪರಿಗಣಿಸಿ ಜೇಷ್ಟತಾ ಪಟ್ಟಿಯನ್ನು ಸರಕಾರದ ಆದೇಶ ಸಂ:ಇಡಿ 152 ಎಲ್‍ಬಿಸಿ 2014 ದಿನಾಂಕ:20/05/2014 ರ ಪ್ರಕಾರ ಸಿದ್ದಪಡಿಸಿ ಇಲಾಖಾ ವೆಬ್‍ಸೈಟ್ http://ift.tt/1qNzXLO; ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಉಪನಿರ್ದೇಶಕರ ಕಛೇರಿ ಮತ್ತು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸೂಚನಾ ಫಲಕದಲ್ಲಿಯೂ ಪ್ರಕಟಿಸಲಾಗಿದೆ.
ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ನೇಮಕಾತಿ ದಿನಾಂಕ, ನೇಮಕಾತಿ ಮೆರಿಟ್ ಕ್ರಮಸಂಖ್ಯೆ, ಬಡ್ತಿ, ಜಾತಿ ಹಾಗೂ ವೆಬ್‍ಸೈಟ್‍ನಲ್ಲಿ ನೀಡಲಾಗಿರುವ ನಮೂನೆಯ ಕಾಲಂ 01 ರಿಂದ 13 ರ ವರೆಗೆ ಯಾವುದಾದರೂ ತಪ್ಪುಗಳಿದ್ದಲ್ಲಿ ಅಥವಾ ಹೆಸರು ಕೈಬಿಟ್ಟು ಹೋಗಿದ್ದಲ್ಲಿ, ಅವುಗಳನ್ನು ಸಮರ್ಥಿಸುವ ದೃಢೀಕೃತ ಪೂರಕ ದಾಖಲೆಗಳೊಂದಿಗೆ ಕಾಲಂ 01 ರಿಂದ 13 ರ ವರೆಗಿನ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಕೊಪ್ಪಳ ರವರ ಕಛೇರಿಗೆ ಖುದ್ದಾಗಿ ಅ. 30 ರೊಳಗಾಗಿ ಸಲ್ಲಿಸಬೇಕು. ತದನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_26.html
0 Response to "ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ