ಶೀರ್ಷಿಕೆ : ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ
ಲಿಂಕ್ : ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ
ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ
ಕೊಪ್ಪಳ, ಅ. 31 (ಕರ್ನಾಟಕ ವಾರ್ತೆ) :ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರದಂದು ಕೊಪ್ಪಳದ ಗಡಿಯಾರ ಕಂಬದ ಬಳಿ ಆರಂಭಿಸಲಾದ ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಅವರು ಚಾಲನೆ ನೀಡಿದರು.
ರಾಷ್ಟ್ರೀಯ ಏಕತಾ ಓಟಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ ಅವರು ಉಪಸ್ಥಿತರಿದ್ದರು. ನಗರದ ಗಡಿಯಾರ ಕಂಬದ ಬಳಿಯಿಂದ ಪ್ರಾರಂಭಿಸಲಾದ ರಾಷ್ಟ್ರೀಯ ಏಕತಾ ಓಟದಲ್ಲಿ ಸಂಸದ ಕರಡಿ ಸಂಗಣ್ಣ ಅವರು ಉತ್ಸಾಹದಿಂದ ಖುದ್ದು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಗಡಿಯಾರ ಕಂಬದಿಂದ ಪ್ರಾರಂಭವಾದ ಏಕತಾ ಓಟ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ನಗರಸಭೆ ಕಚೇರಿವರೆಗೂ ಸಾಗಿಬಂದಿತು. ತಹಸಿಲ್ದಾರ್ ಗುರುಬಸವರಾಜ್ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ನಂತರ ನಗರಸಭೆ ಕಾರ್ಯಾಲಯ ಆವರಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೈ. ಸುದರ್ಶನ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಷ್ಟ್ರೀಯ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ. ಮತ್ತು ನನ್ನ ದೇಶ ಬಾಂಧವರಲ್ಲಿ ಈ ಸಂದೇಶ ಸಾರಲು ಶ್ರಮಿಸುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆ ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುವುದಾಗಿ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ದಿ. ಇಂದಿರಾಗಾಂಧಿ ಅವರ ಪುಣ್ಯ ತಿಥಿ ದಿನದ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರೂ ರಾಷ್ಟ್ರೀಯ ಸಂಕಲ್ಪ ದಿವಸದ ಪ್ರತಿಜ್ಞೆ ಸ್ವೀಕರಿಸಿದರು. ಹಲವು ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಹೀಗಾಗಿ ಲೇಖನಗಳು ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ
ಎಲ್ಲಾ ಲೇಖನಗಳು ಆಗಿದೆ ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ ಲಿಂಕ್ ವಿಳಾಸ https://dekalungi.blogspot.com/2017/10/blog-post_337.html
0 Response to "ರಾಷ್ಟ್ರೀಯ ಏಕತಾ ಓಟಕ್ಕೆ ಸಂಸದ ಕರಡಿ ಸಂಗಣ್ಣ ಚಾಲನೆ, ನಂತರ ಪ್ರತಿಜ್ಞಾ ವಿಧಿ ಸ್ವೀಕಾರ"
ಕಾಮೆಂಟ್ ಪೋಸ್ಟ್ ಮಾಡಿ