ಶೀರ್ಷಿಕೆ : ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ
ಲಿಂಕ್ : ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ
ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ
ಕೊಪ್ಪಳ ಅ. 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಬೀದಿಬದಿ ವ್ಯಾಪಾರಸ್ಥರಿಗೆ “ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಕಾಯ್ದೆ 2014 ಮತ್ತು 2016” ಕುರಿತು ಅಧಿಕಾರಿಗಳು ಅರಿವು ಮೂಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೌರಾಡಳಿತ ನಿರ್ದೇಶನಾಲಯ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಮೈಸೂರು ಹಾಗೂ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿಕೋಶ ಇವರ ಸಹಯೋಗದಲ್ಲಿ ದೀನದಯಾಳ್ ಅಂತ್ಯೋದಯ ನಲ್ಮ್ ಯೋಜನೆಯಡಿ “ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಕಾಯ್ದೆ 2014 ಮತ್ತು 2016” ಕುರಿತು ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಿದ ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಸಂಘಟಿತ ವಲಯದ ಬೀದಿ ವ್ಯಾಪಾರಿಗಳಿಂದ ನಗರದ ಆರ್ಥಿಕತೆಗೆ ಪೂರಕವಾಗಿ ಒಳ್ಳೆಯ ಕೊಡುಗೆ ನೀಡುತ್ತಿದ್ದಾರೆ. ಸಾಮಾನ್ಯವಾಗಿ ಬೀದಿ ಬದಿ ವ್ಯಾಪಾರಸ್ಥರು, ತಮ್ಮ ವ್ಯವಹಾರ ಮುಗಿದ ಬಳಿಕ ಕಸ ಹಾಗೂ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಡುತ್ತಾರೆ. ಹೀಗಾಗಿ ಅವರಿಗೆ ನೈರ್ಮಲ್ಯ ಕುರಿತು ಅರಿವು ಮೂಡಿಸಬೇಕು. ವ್ಯಾಪಾರಸ್ಥರು ತಮ್ಮ ಅಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಟ್ಟುಕೊಳ್ಳಬೇಕು. ಬೀದಿ ಬದಿ ವ್ಯಾಪಾರಿಗಳ ಹಿತರಕ್ಷಣೆಗಾಗಿಯೇ ಸರ್ಕಾರ “ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಕಾಯ್ದೆ 2014 ಮತ್ತು 2016” ಯನ್ನು ಜಾರಿಗೊಳಿಸಿದ್ದು, ಈ ಕಾಯ್ದೆಯ ಕುರಿತು ಬೀದಿ ಬದಿ ವ್ಯಾಪಾರಿಗಳೂ ಅರಿಯಬೇಕು. ಅಧಿಕಾರಿಗಳು ಜಾಗೃತಿ ಮೂಡಿಸಲು ಮುಂದಾಗಬೇಕು. ವ್ಯಾಪಾರಿಗಳಿಗೆ ಈ ಕಾಯ್ದೆಯ ಕುರಿತು ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. ಕಾಯ್ದೆಯ ಸಂಪೂರ್ಣ ಅನುಷ್ಠಾನ ಹಾಗೂ ಜಾರಿಗೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಹೇಳಿದರು.
ಕಾರ್ಯಗಾರದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಮೈಸೂರು ರಾಜ್ಯ ನಗರಾಭಿವೃದ್ಧಿ ತರಬೇತಿ ಸಂಸ್ಥೆಯ ಮಂಜುನಾಥ, ಬೆಂಗಳೂರು ಉನ್ನತಿ ಮಾನವನ ಹಕ್ಕುಗಳ ಸೊಸೈಟಿಯ ವಿಶ್ವನಾಥ ಹಾಗೂ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಎಂ. ವಿಜಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/10/blog-post_34.html
0 Response to "ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯ ಅರಿವು ಮೂಡಿಸಿ- ಎಂ. ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ