ಶೀರ್ಷಿಕೆ : ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
ಲಿಂಕ್ : ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
ಕೊಪ್ಪಳ ಅ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ನೂತನ ಅಧ್ಯಕ್ಷರ ಮತ್ತು ಸದಸ್ಯರ ಆಯ್ಕೆಯಾಗಿದ್ದು, ಕೊಪ್ಪಳ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ ಕಲಂ 27(1)ರ ಆರೈಕೆ ಮತ್ತು ಪೋಷಣೆ ಅವಶ್ಯವಿರುವ ಮಕ್ಕಳ ಪುನರವಸತಿ, ಚಿಕಿತ್ಸೆ ಹಾಗೂ ಪ್ರಕರಣ ವಿಲೇವಾರಿಯ ಅಂತಿಮ ಅಧಿಕಾರ ಹೊಂದಿರುವ ಸಮಿಯನ್ನು ರಾಜ್ಯ ಸರ್ಕಾರವು ನೇಮಿಸಬೇಕು ಎಂದು ಸೂಚಿಸಿದೆ. ಅದರನ್ವಯ ಕೊಪ್ಪಳ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯನ್ನು ರಾಜ್ಯ ಸರ್ಕಾರವು ನೇಮಿಸಿ ಆದೇಶಿಸಿದ್ದು, ನಿಲೋಫರ್ ಎಸ್. ರಾಂಪುರಿ ಅವರು ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ನೂತನ ಅಧ್ಯಕ್ಷರಾಗಿ, ಮತ್ತು ಯಮುನಮ್ಮ, ಕಲ್ಲಪ್ಪ ತಳವಾರ, ಸರೋಜಾ ಬಾಕಳೆ ಹಾಗೂ ನೇತ್ರಾ ಬಸವರಾಜ್ ಪಾಟೀಲ್ ಅವರು ನೂತನ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ವಿರೇಂದ್ರ ನಾವದಗಿರ ಅವರು ಮಾತನಾಡಿ, ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ರಡಿಯಲ್ಲಿ ನಿರೂಪಿತರಾದ ಆರೈಕೆ ಮತ್ತು ಪೋಷಣೆ ಅವಶ್ಯವಿರುವ ಮಕ್ಕಳ ಪುನರ್‍ವಸತಿಯ ಅಂತಿಮ ಅಧಿಕಾರವು ಈ ಸಮಿತಿಯದಾಗಿರುತ್ತದೆ. ಸಮಿತಿಯು ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆಯಡಿಯಲ್ಲಿ ನೊಂದಾಯಿತವಾದ ಸಂಸ್ಥೆಗಳನ್ನು ಭೇಟಿ ಮಾಡುವ, ಪರಿಶೀಲಿಸುವ ಹಾಗೂ ಮಕ್ಕಳ ಹಿತದೃಷ್ಠಿಯಿಂದ ಕೈಗೊಳ್ಳಬೇಕಾದ ಕ್ರಮಗಳನ್ನು ಸೂಚಿಸುವ ಅಧಿಕಾರವನ್ನು, ಅಲ್ಲದೇ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ವರದಿಯಾದಲ್ಲಿ ಅಂತಹ ಪ್ರಕರಣಗಳನ್ನು ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡು ವಿಚಾರಣೆ ಕೈಗೊಳ್ಳುವ ಅಧಿಕಾರವನ್ನು ಹೊಂದಿದೆ. ಈ ಎಲ್ಲಾ ಅಧಿಕಾರವನ್ನು ಹೊಂದಿರುವ ಸಮಿತಿಯ ಸದಸ್ಯರಾದವರು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಮಾಡಿ. ಇಲಾಖೆಯಿಂದ ಅಗತ್ಯವಾದ ಸಹಕಾರವನ್ನು ಹಾಗೂ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳ ಸಹಕಾರವನ್ನು ಒದಗಿಸಿಕೊಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸರ್ವ ಸದಸ್ಯರು, ಮಾಜಿ ಸರ್ವ ಸದಸ್ಯರು, ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿಗಳು, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಸಿಬ್ಬಂದಿಗಳು, ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರದ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ಮಕ್ಕಳ ಸಹಾಯವಾಣಿ-1098, ಅಮೂಲ್ಯ (ಪಿ) ದತ್ತು ಕೇಂದ್ರದ ಸರ್ವ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಲಿಂಕ್ ವಿಳಾಸ https://dekalungi.blogspot.com/2017/10/blog-post_58.html
0 Response to "ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ"
ಕಾಮೆಂಟ್ ಪೋಸ್ಟ್ ಮಾಡಿ