ಶೀರ್ಷಿಕೆ : ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ
ಲಿಂಕ್ : ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ
ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಅ. 04 (ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಸಂಗೀತ ನೃತ್ಯಾದಿ ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ/ ಅಧ್ಯಯನ ಮಾಡಲು ಪ್ರಸಕ್ತ ಸಾಲಿನ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಪರಿಣಿತ ಕಲಾವಿದರು/ ತಜ್ಞರಿಂದ ಸಂಶೋಧನೆಗೆ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸಂಶೋಧನಾರ್ಥಿಗಳು ಯಾವುದಾದರೂ ಪದವೀಧರರಾಗಿರಬೇಕು. ವಯೋಮಿತಿ 45 ವರ್ಷ ಮೀರಿರಬಾರದು. ಆಸಕ್ತರು ಸಂಶೋಧನೆ/ ಅಧ್ಯಯನ ನಡೆಸುವ ವಿಷಯದ ಬಗ್ಗೆ ಸುಮಾರು 5 ರಿಂದ 6 ಪುಟಗಳ ಸಾರಲೇಖವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅಧ್ಯಯನದ ಅವಧಿ ಆರು ತಿಂಗಳು. ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಲ್ಲಿ ಅಕಾಡೆಮಿ ತೀರ್ಮಾನವೇ ಅಂತಿಮ.
ನಿಗದಿತ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ಅರ್ಜಿಯ ಜೊತೆ ಸೂಚನೆಯ ಪ್ರತಿ ನೀಡಲಾಗುವುದು. ಅಂಚೆ ಮೂಲಕ ಅರ್ಜಿ ಪಡೆಯಲಿಚ್ಚಿಸುವವರು ರೂ. 10-00 ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕು. ಅಲ್ಲದೇ ಅರ್ಜಿಗಳನ್ನು ಅಕಾಡೆಮಿಯ ಇ-ಮೇಲ್ karnatakasangeeta@gmail.com ಮೂಲಕ ಭರ್ತಿ ಮಾಡಿ ಅ. 16 ರೊಳಗಾಗಿ ಸಲ್ಲಿಸಬೇಕು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_67.html
0 Response to "ಗಿರಿಜನ ಉಪಯೋಜನೆಯಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ