ಶೀರ್ಷಿಕೆ : ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ
ಲಿಂಕ್ : ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ
ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ
ಕೊಪ್ಪಳ ಅ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಪ್ರಕ್ರಿಯೆ ಕೈಗೊಂಡು ಇಬ್ಬರು ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಅಪ್ರೆಂಟಿಸ್ ತರಬೇತಿಯ ಅವಧಿಯು 2018 ರ ಮಾರ್ಚ್ 31 ರವರೆಗೆ ಮಾತ್ರ ಆಗಿದ್ದು, ಯಾವುದೇ ಕಾರಣಕ್ಕೂ ಮುಂದುವರಿಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಜಿಲ್ಲಾ ಮಟ್ಟದ ಸಮಿತಿಯು ಪ್ರಕ್ರಿಯೆ ಕೈಗೊಂಡಿದ್ದು, ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ, ನಿಯಮಾನುಸಾರ ಹಾಗೂ ಮೆರಿಟ್ ಆಧಾರದ ಮೇಲೆ ಇಬ್ಬರು ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ. ಈ ಆಯ್ಕೆ ಪ್ರಕ್ರಿಯೆ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಲಿಖಿತವಾಗಿ ಸಕಾರಣಗಳೊಂದಿಗೆ ಅಗತ್ಯ ದಾಖಲೆ ಸಹಿತ ಅ. 16 ರ ಒಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/10/blog-post_73.html
0 Response to "ಅಪ್ರೆಂಟಿಸ್ ತರಬೇತಿ : ಆಕ್ಷೇಪಣೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ