ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ

ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ
ಲಿಂಕ್ : ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ

ಓದಿ


ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ



ಕೊಪ್ಪಳ ಅ. 31 (ಕರ್ನಾಟಕ ವಾರ್ತೆ): ಮಹಿಳೆಯರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಒಂದು ಸುಂದರವಾದ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಬಹಳ ಮಖ್ಯವಾಗಿದೆ ಎಂದು  ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಹೇಳಿದರು.  

    ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಕಾರಿಗಳ ಕಛೇರಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ರಕ್ಷಣೆ ದಿನ ಅಂಗವಾಗಿ ಸಾಕ್ಷಿದಾರರ ಮೊಗಸಾಲೆ, ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ, “ಕಾನೂನು ಅರಿವು-ನೆರೆವು” ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಮಹಿಳೆಯರ ರಕ್ಷಣೆ ಎಂದರೆ ಕೇವಲ ನಮ್ಮ ಮನೆಯ ಹೆಣ್ಣು ಮಕ್ಕಳ ಸಂರಕ್ಷಣೆ ಅಲ್ಲದೇ ಅಕ್ಕ-ಪಕ್ಕದ, ಸಮಾಜದಲ್ಲಿ ವಾಸಿಸುವಂತ ಪ್ರತಿಯೊಬ್ಬ ಹೆಣ್ಣುಮಕ್ಕಳ, ಮಹಿಳೆಯರ ಸಂರಕ್ಷಣೆಯಾಗಿದೆ.  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು, ಒಬ್ಬ ಮಹಿಳೆ ನಿರ್ಭಯವಾಗಿ ಮಧ್ಯರಾತ್ರಿಯಲ್ಲಿ ಓಡಾಡಿದರೆ ನಮ್ಮ ದೇಶ ಅಂದು ರಾಮ ರಾಜ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.  ಮಹಿಳಾ ಸಬಲೀಕರಣದ ಉದ್ದೇಶದಿಂದ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೊಳಿಸಿದೆ.  ಸಂವಿಧಾನವಾಗಿ ಮಹಿಳೆಯರಿಗೆ ಕೊಟ್ಟಂತಹ ಕಾನೂನು ರಕ್ಷಣೆ ವ್ಯವಸ್ಥೆ ಪುರುಷರಿಗಿಲ್ಲ.  ಕಾನೂನಿನ ಕುರಿತು ಮಹಿಳೆಯರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚು-ಹೆಚ್ಚು ಸಂಖ್ಯೆಯಲ್ಲಿ ನಡೆಯಬೇಕಿವೆ.  ದಿನವೂ ನಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯದೆ ಇರುವುದಕ್ಕೆ ಕಾರಣ ಭ್ರಷ್ಟಾಚಾರ.  ಇದಕ್ಕೆ ನಾವು ಅನುವು ಮಾಡಬಾರದು.  ಭ್ರಷ್ಟಾಚಾರವನ್ನು ಕೊನೆಗೊಳಿಸಲು ಜನಜಾಗೃತಿ ಉಂಟು ಮಾಡಬೇಕು.  ಇದರ ನಿರ್ಮೂಲನೆಗಾಗಿ ಎಲ್ಲರೂ ಕೈಜೋಡಿಸಿ, ಭ್ರಷ್ಟಾಚಾರ ಮುಕ್ತ ವ್ಯವಸ್ಥೆಯನ್ನಾಗಿಸಿ ಎಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಹೇಳಿದರು.
    ಸಮಾರಂಭದ ಅಧ್ಯಕ್ಷತೆಯನ್ನು  ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಸ್.ಹೆಚ್. ಇಂಗಳದಾಳ ಅವರು ವಹಿಸಿದ್ದರು.  ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ ಕನ್ನೂರು, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನುಶರ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ವಕೀಲರಾದ ಎಂ. ಹನುಮಂತರಾವ್ ಅವರು ಹೆಣ್ಣುಮಕ್ಕಳ ರಕ್ಷಣೆ ಮತ್ತು ಸಮಾಜದ ಹೊಣೆ ಕುರಿತು ಹಾಗೂ ಗೌರಮ್ಮ ದೇಸಾಯಿ ಅವರು ಅಪ್ರಾಪ್ತ ವಯಸ್ಕ ಮಕ್ಕಳ ಸಂಬಂಧ ಕಾನೂನು ಕುರಿತು ವಿಶೇಷ ಉಪನ್ಯಾಸ ನೀಡಿದರು.    


ಹೀಗಾಗಿ ಲೇಖನಗಳು ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ

ಎಲ್ಲಾ ಲೇಖನಗಳು ಆಗಿದೆ ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ ಲಿಂಕ್ ವಿಳಾಸ https://dekalungi.blogspot.com/2017/10/blog-post_81.html

Subscribe to receive free email updates:

0 Response to "ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಸಂರಕ್ಷಣೆ ಮುಖ್ಯವಾಗಿದೆ : ಟಿ. ಶ್ರೀನಿವಾಸ"

ಕಾಮೆಂಟ್‌‌ ಪೋಸ್ಟ್‌ ಮಾಡಿ