ಶೀರ್ಷಿಕೆ : ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ
ಲಿಂಕ್ : ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ
ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ
ಕೊಪ್ಪಳ ಅ. 30 (ಕರ್ನಾಟಕ ವಾರ್ತೆ): ಮನೋರೋಗವು ವ್ಯಾಪಕವಾಗಿದ್ದು, ಈ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ” ಅಂಗವಾಗಿ ಸಾಕ್ಷಿದಾರರ ಮೊಗಸಾಲೆ, ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸೋಮವಾರಂದು ಹಮ್ಮಿಕೊಳ್ಳಲಾಗಿದ್ದ, “ಕಾನೂನು ಅರಿವು-ನೆರೆವು” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾನಸಿಕ ಕಾಯಿಲೆಯಿಂದ ಮನುಷ್ಯ ದುಷ್ಚಟಗಳಿಗೆ ಬಲಿಯಾಗುತ್ತಾನೆ. ಮಾನಸಿಕ ಆರೋಗ್ಯದ ಕಾಳಜಿಯಲ್ಲಿ ಎಲ್ಲರೂ ಅವಶ್ಯಕವಾಗಿ ಸಕಾಲಕ್ಕೆ ವೈದ್ಯರಲ್ಲಿ ಪರೀಕ್ಷಿಸಿ ಚಿಕಿತ್ಸೆ ಪಡೆಯಬೇಕು. ಕಾರ್ಯ ಸ್ಥಳದಲ್ಲಿ ಯಾವುದೇ ಒತ್ತಡಗಳಿಗೆ ಬಳಲದೇ ಮಾನಸಿಕವಾಗಿ ಸದೃಡತೆಯನ್ನು ಕಾಪಾಡಿಕೊಳ್ಳಬೇಕು. ಕಾನೂನಿನಲ್ಲಿ ಮನೋರೋಗಿಗಳಿಗೆ ವಿಶೇಷ ಚಿಕಿತ್ಸೆ ನೀಡಲು ಅವಕಾಶವಿದ್ದು, ಇದರ ಸದಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ಮಾತನಾಡಿ, “ಕಾರ್ಯ ಸ್ಥಳದಲ್ಲಿ ಮಾನಸಿಕ ಆರೋಗ್ಯ” ಎಂಬುವುದು ಈ ವರ್ಷದ ಘೋಷಣೆ ವಾಕ್ಯವಾಗಿದ್ದು, ಕೆಲಸದ ಒತ್ತಡದಿಂದ ಬಳಲದೇ ಎಲ್ಲರೂ ಮಾನಸಿಕ ರೋಗದಿಂದ ಮುಕ್ತರಾಗಿ, ಸಹ ಬಾಳ್ವೆಯನ್ನು ನಡೆಸಿ, ಸಂತೋಷದಿಂದ ಬದುಕಬೇಕು ಎಂಬುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಂದಿನ ದಿನಗಳಲ್ಲಿ ಎಲ್ಲರೂ ಒಂದಲ್ಲ ಒಂದು ಸಮಸ್ಯೆಗಳಿಗೆ ಒಳಗೊಳ್ಳುತ್ತಿದ್ದು, ನಮ್ಮ ಮನಸ್ಥಿತಿ ಸುಧಾರಿಸಿಕೊಳ್ಳಬೇಕು. ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದರ ಮೂಲಕ ಉತ್ತಮ ಆರೋಗ್ಯದ ಜೊತೆ ಮಾನಸಿಕ ಸದೃಡತೆಯನ್ನು ಕಾಪಾಡಿಕೊಳ್ಳಬೇಕು. ಮಾನಸಿಕ ರೋಗದ ಬಗ್ಗೆ ಮೂಢನಂಬಿಕೆಗಳಿಗೆ ಒಳಗಾಗದೆ, ಸೂಕ್ತ ಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸಾರ್ವಜನಿಕರು ಮುಂದಾಗಬೇಕು ಎಂದರು.
ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮಾನಸಿಕ ತಜ್ಞರಾದ ಡಾ. ಕೃಷ್ಣ ಓಂಕಾರ ಅವರು ಮಾನಸಿಕ ರೋಗದ ವ್ಯಕ್ತಿತ್ವ ವಿಚಾರಗಳು ಹಾಗೂ ಮನರೋಗ ನಿಯಂತ್ರಣ ಹಾಗೂ ಚಿಕಿತ್ಸೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ, ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ ಕನ್ನೂರು, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನುಶರ್ಮ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರೆಡ್ಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಕೀಲರಾದ ಎಂ. ಹನುಮಂತರಾವ್ ನಿರೂಪಿಸಿದರು. ಸೈಕಾಟ್ರಿಕ್ ಸೋಶಿಯಲ್ ವೆಲ್‍ಫೇರ್ ಆಫೀಸರ್ ಗವಿಸಿದ್ದಪ್ಪ ಕೊನೆಯಲ್ಲಿ ವಂದಿಸಿದರು.
ಹೀಗಾಗಿ ಲೇಖನಗಳು ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ
ಎಲ್ಲಾ ಲೇಖನಗಳು ಆಗಿದೆ ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ ಲಿಂಕ್ ವಿಳಾಸ https://dekalungi.blogspot.com/2017/10/blog-post_89.html
0 Response to "ಮನೋರೋಗದ ಬಗ್ಗೆ ಜಾಗೃತಿ ಅತ್ಯವಶ್ಯಕ : ರಾಜೀವ್ ಗುರುನಾಥ ಜೋಶಿ"
ಕಾಮೆಂಟ್ ಪೋಸ್ಟ್ ಮಾಡಿ