News and photo Date: 16-10-2017

News and photo Date: 16-10-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 16-10-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 16-10-2017
ಲಿಂಕ್ : News and photo Date: 16-10-2017

ಓದಿ


News and photo Date: 16-10-2017

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
*********************************************
ಕಲಬುರಗಿ,ಅ.16(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಅಕ್ಟೋಬರ್ 17ರಂದು ಬೆಳಿಗ್ಗೆ 5.39 ಗಂಟೆಗೆ ಕಲಬುರಗಿಗೆ ಆಗಮಿಸಿ, ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 18 ರಿಂದ 20 ರವರೆಗೆ ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 21ರಂದು ಬೆಳಿಗ್ಗೆ 11 ಗಂಟೆಗೆ ಸೇಡಂ ಸೆಷನ್ಸ್ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಅಕ್ಟೋಬರ್ 22ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಅ. 23ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ-ಮೇಲ್ವಿಚಾರಣಾ ಸಮಿತಿ ಸಭೆ
**************************************************************
ಕಲಬುರಗಿ,ಅ.16.(ಕ.ವಾ)-ಕಲಬುರಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣೆ (ಮಾನಿಟರಿಂಗ್) ಸಮಿತಿ ಸಭೆಯು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ರೈಲ್ವೆ ಇಲಾಖೆ, ಏರ್‍ಪೋರ್ಟ್, ನ್ಯಾಷನಲ್ ಹೈವೇ (ರಾಷ್ಟ್ರೀಯ ಹೆದ್ದಾರಿ), ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಪ್ರದೇಶ ಮತ್ತು ಗ್ರಾಮೀಣ, ರಾಷ್ಟ್ರೀಯ ಸಾಮಾಜಿಕ ಭದ್ರತೆ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ, ದೀನ ದಯಾಳ ಅಂತ್ಯೋದಯ ಯೋಜನೆ, ಸೇರಿದಂತೆ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವರು. ಈ ಸಭೆಗೆ ಆಯಾ ಇಲಾಖೆಗಳ ಅಧಿಕಾರಿಗಳು ಸಂಬಂಧಿಸಿದ ಕೇಂದ್ರ ಪುರಸ್ಕøತ ಎಲ್ಲ ಯೋಜನೆಗಳ ಪ್ರಗತಿ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಜಿ.ಪಂ ಅಧ್ಯಕ್ಷರಿಂದ ಆಯುಷ್ ಜಾಥಾಕ್ಕೆ ಚಾಲನೆ
******************************************
ಕಲಬುರಗಿ,ಅ.16.(ಕ.ವಾ)-ಜಿಲ್ಲಾ ಆಯುಷ್ ಇಲಾಖೆ ಹಾಗೂ ಹಿಂಗುಲಾಂಬಿಕಾ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಆಯುಷ್ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಜಗತ್ ವೃತ್ತದಲ್ಲಿ ಚಾಲನೆ ನೀಡಿದರು.
ಆಯುಷ್ ಜನಜಾಗೃತಿ ಜಾಥಾ ಜಗತ್ ವೃತ್ತದಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಕೊನೆಗೊಂಡಿತು. ಜಾಥಾದಲ್ಲಿ ಜಿಲ್ಲೆಯ ಆಯುಷ್ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಜಿಲ್ಲಾ ಆಯುಷ್ ಪದ್ಧತಿಯ ಸಂಘಟನೆಗಳ ವೈದ್ಯರು ಪಾಲ್ಗೊಂಡಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ|| ನಾಗರತ್ನ ಎಸ್. ಚಿಮ್ಮಲಗಿ ಮಾತನಾಡಿ, ದೀಪಾವಳ ಅಮವಾಸ್ಯೆಯ ಎರಡು ದಿನಗಳ ಮೊದಲು ಆಗಮಿಸುವ ಧನತ್ರಯೋದಶಿಯಂದು ಧನ್ವಂತರಿ ಜಯಂತಿ ಆಚರಿಸಲಾಗುತ್ತದೆ. ಈ ದಿನವನ್ನು ಆಯುರ್ವೇದ ದಿನಾಚರಣೆ ಎಂದು ಆಚರಿಸಲಾಗುವುದು. ಧನತ್ರಯೋದಶಿಯಂದು ಅಂದರೆ ಅಕ್ಟೋಬರ್ 17 ಮಂಗಳವಾರದಂದು ಮನೆಯ ಈಶಾನ್ಯ ದಿಕ್ಕಿಗೆ ದೀಪ ಇಟ್ಟು ಮನೆಯಲ್ಲಿ ಹಾಗೂ ಕುಟುಂಬದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ದಯಪಾಲಿಸುವಂತೆ ಧನ್ವಂತರಿಗೆ ಆರಾಧಿಸಬೇಕು. ಇದರಿಂದ ಜೀವನದಲ್ಲಿ ಆರೋಗ್ಯಭಾಗ್ಯ ದೊರೆಯುವುದು. ಆಯುರ್ವೇದವು ಅಥರ್ವವೇದದ ಉಪವೇದವಾಗಿದೆ. ಆಯುರ್ವೆದವು ರೋಗಗಳ ಶಮನಕ್ಕಷ್ಟೇ ಅಲ್ಲದೇ ರೋಗ ಬರದಂತೆ ಶರೀರವನ್ನು ಸಿದ್ಧಗೊಳಿಸುವುದು ಹಾಗೂ ಮಾನವೀಯ ಮೌಲ್ಯಗಳನ್ನು ತಿಳಿಸುವ ಜ್ಞಾನವಾಗಿದೆ ಎಂದರು.
ಪ್ರಸಕ್ತ ವರ್ಷ “ನೋವು ನಿರ್ವಹಣೆಗಾಗಿ ಆಯುರ್ವೇದ ಚಿಕಿತ್ಸೆ” ಎಂಬ ಘೋಷ ವಾಕ್ಯದನ್ವಯ ವಿಶೇಷ ಉಪನ್ಯಾಸ ಹಾಗೂ ಸಂಧಿವಾತ ರೋಗದ ವಿಶೇಷ ಉಚಿತ ಚಿಕಿತ್ಸಾ ಶಿಬಿರವನ್ನು ಅಕ್ಟೋಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಜಗತ್ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಸಂಘ (ಡಾ|| ಮಲ್ಲಾರಾವ ಮಲ್ಲೆ ಆಸ್ಪತ್ರೆ) ಆವರಣದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಅವರು ಹೇಳಿದರು. ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಸವ ಪೂರ್ವ ಲಿಂಗ ಪತ್ತೆ-ಕಾನೂನು ರೀತಿ ಶಿಕ್ಷಾರ್ಹ ಅಪರಾಧ
******************************************************
ಕಲಬುರಗಿ.ಅ.16(ಕ.ವಾ):-ಗರ್ಭದಲ್ಲಿರುವ ಮಗುವಿನ ಬೆಳವಣಿಗೆ ಮತ್ತು ನ್ಯೂನ್ಯತೆ ತಿಳಿಯಲು ಅಭಿವೃದ್ಧಿಪಡಿಸಿದ ತಂತ್ರಜ್ಞಾನದ ದುರುಪಯೋಗ ಮಾಡಿಕೊಂಡು ಪ್ರಸವ ಪೂರ್ವದಲ್ಲಿಯೇ ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಹಚ್ಚುವುದು ಕಾನೂನು ರೀತಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸ್ತ್ರೀ ರೋಗ ತಜ್ಞೆ ಡಾ|| ಹೇಮಾ ತಿಳಿಸಿದರು.
ಅವರು ಸೋಮವಾರ ನಗರದ ಸರ್ಕಾರಿ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸರ್ಕಾರಿ ಮಹಿಳಾ ಮಹಾವಿದ್ಯಾಲಯ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ, ಕಲಬುರಗಿ ಹಾಗೂ ಮಾನವ ಹಕ್ಕುಗಳ ಹಿತರಕ್ಷಣಾ ವೇದಿಕೆ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾನೂನು ಮತ್ತು ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಕಾನೂನು ಅರಿವು -ನೆರವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾನೂನು ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಆರೋಗ್ಯವೇ ಭಾಗ್ಯ ಎನ್ನುವಂತೆ ಪ್ರತಿಯೊಬ್ಬರು ನಿತ್ಯ ಯೋಗ ವ್ಯಾಯಾಮ ಮಾಡಬೇಕು. ಇದರಿಂದ ದಿನವಿಡಿ ಉತ್ಸಾಹದಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಕರಿದ ಮತ್ತು ದಿನಸಿ ತಿಂಡಿಗಳ ಮೊರೆ ಹೋಗದೆ ಆಯಾ ಕಾಲಮಾನಗಳಲ್ಲಿ ದೊರೆಯುವ ತರಕಾರಿ ಹಣ್ಣು ಹಂಪಲದಂತಹ ಪ್ರೋಟಿನ್ ಮತ್ತು ವಿಟಾಮಿನ್ ಆಧಾರಿತ ಆಹಾರ ಸೇವಿಸಬೇಕು. ತರಕಾರಿಗಳನ್ನು ಬಿಸಿ ನೀರಿನಲ್ಲಿ ತೊಳೆದು ಶುದ್ಧೀಕರಿಸಿ ಉಪಯೋಗಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೆವೂರ ಮಾತನಾಡಿ, ಸರಕಾರ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಹಲವಾರು ಕಾನೂನುಗಳನ್ನು ರೂಪಿಸಿದೆ. ಎಷ್ಟೋ ಕಾನೂನುಗಳ ಬಗ್ಗೆ ಮಹಿಳೆಯರಿಗೆ ಮಾಹಿತಿ ಇಲ್ಲ. ದೀನನಿತ್ಯದ ಜೀವನದಲ್ಲಿ ಅಗತ್ಯವಿರುವ ಕಾನೂನುಗಳನ್ನು ತಿಳಿಯುದು ಅವಶ್ಯಕ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್. ಆರ್. ಮಾಣಿಕ್ಯ ಮಾತನಾಡಿ, ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ. ಆದರೆ ಅವರಲ್ಲಿ ಆತ್ಮವಿಶ್ವಾಸದ ಕೊರತೆ ಎದ್ದು ಕಾಣುತ್ತದೆ. ಬೇಗನೆ ಒತ್ತಡ, ಆಸೆ-ಆಮೀಷಗಳಿಗೆ ಒಳಗಾಗುತ್ತಾರೆ ಎಂದ ಅವರು ಪ್ರಸುತ್ತ ವಿದ್ಯಾರ್ಥಿಗಳು ಕಂಪ್ಯೂಟರ. ಇಂಟರ್‍ನೆಟ್, ಮೊಬೈಲ್ ಇವುಗಳ ಸಹಾಯದಿಂದ ಕ್ಷಣಾರ್ದದಲ್ಲಿಯೇ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಮಾತ್ರ ಇಂತಹ ತಾಂತ್ರಿಕ ಮಾಧ್ಯಮಗಳ ಸಹಾಯ ಪಡೆದುಕೊಂಡು ದೇಶದ ಪ್ರಗತಿಗೆ ನಾಂದಿಯಾಗಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಅವರು ಮಾಹಿತಿ ಹಕ್ಕು ಕಾಯ್ದೆ ಮತ್ತು ಪೊಲೀಸ್ ದೂರು ಪ್ರಾಧಿಕಾರ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಮಹಾವಿದ್ಯಾಲಯ ಪ್ರಾಂಶುಪಾಲ ಖಂಡೇರಾವ್, ಮಹಾನಗರ ಪಾಲಿಕೆ ಸದಸ್ಯ ಶಿವು ಸ್ವಾಮಿ, ಸೇರಿದಂತೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಶಾಸಕರು 52 ಲಕ್ಷ ರೂಪಾಯಿ ಅನುದಾನದ ಸರ್ಕಾರಿ ಮಹಿಳಾ ಮಹಾವಿದ್ಯಾಲಯದ ಕಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಹುಲಿಜಂತಿ ಶ್ರೀ ಮಾಳಿಂಗರಾಯರ ಜಾತ್ರಾ ಮಹೋತ್ಸವಕ್ಕೆ ವಿಶೇಷ ಬಸ್ಸು
****************************************************************
ಕಲಬುರಗಿ, ಅ.16 (ಕ.ವಾ)- ಗದಗ ನಗರದ ಹತ್ತಿರವಿರುವ ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಮಹೋತ್ಸವ ನಾಳೆಯಿಂದ ಆರಂಭಗೊಂಡು ಅಕ್ಟೋಬರ್ 21ರವರೆಗೆ ಜರುಗಲಿದೆ. ತದನಿಮಿತ್ಯ ಭಕ್ತಾಧಿಗಳಿಗೆ ಅನುಕೂಲವಾಗಲೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ ವಿಭಾಗ-2ರಿಂದ ವಿಶೇಷ ಬಸ್ಸು ಒದಗಿಸಲು ನಿರ್ಧರಿಸಿದೆ.
ಕಲಬುರಗಿ, ಆಳಂದ, ಅಫಜಲಪೂರ ಹಾಗೂ ಇನ್ನಿತರ ತಾಲೂಕಿನಲ್ಲಿ ಒಂದೇ ಸ್ಥಳದಿಂದ 40 ಜನ ಭಕ್ತಾಧಿಗಳು ಪ್ರಯಾಣಿಸುತ್ತಿದ್ದರೆ ಹೋಗಲು ಹಾಗೂ ಬರಲು ವಿಶೇಷ ಬಸ್ಸು ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760984086, 7760993920, 7760992115, 7760992114, 7760992116, 7760992118, 7760992121 ಸಂಪರ್ಕಿಸುವಂತೆ ಕಲಬುರಗಿ ವಿಭಾಗ -2ರ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಹೆಚ್.ನಾಗೇಶ್ ತಿಳಿಸಿದ್ದಾರೆ.
ಅಕ್ಟೋಬರ್ 17ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ
*****************************************************
ಕಲಬುರಗಿ,ಅ.16(ಕ.ವಾ.)-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆವನ್ನು ಅಕ್ಟೋಬರ್ 17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಗತ್ ಸರ್ಕಲ್ ಹತ್ತಿರದ ಕನ್ನಡ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಹಾಗೂ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಹ್ಮದ್ ಅಜಗರ್ ಚುಲ್‍ಬುಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್ ಮುಖ್ಯ ಅತಿಥಿಗಳಾಗಿ ಹಾಗೂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಮ್ಮ ಚನ್ನಮಲ್ಲಯ್ಯ ಹಿರೇಮಠ ಮುಖ್ಯ ವಿಶೇಷ ಆಹ್ವಾತರಾಗಿ ಆಗಮಿಸುವರು. ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ “ನೋವು ನಿರ್ವಹಣೆಗೆ ಆಯುರ್ವೇದ ಚಿಕಿತ್ಸೆ” ಕುರಿತು ಹಿಂಗುಲಾಂಬಿಕಾ ಆಯುರ್ವೇದ ಕಾಲೇಜಿನ ಉಪನ್ಯಾಸಕಿ ಡಾ|| ಚಂದ್ರಕಲಾ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.
ನವೋದಯ ವಿದ್ಯಾಲಯ:ಪ್ರವೇಶ ಪರೀಕ್ಷೆಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
***********************************************************************
ಕಲಬುರಗಿ.ಅ.16.(ಕ.ವಾ.)-ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಜವಾಹರ ನವೋದಯ ವಿದ್ಯಾಲಯ ಶಾಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡಲು 2017-18ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಂದ www.nvshq.org ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಜಿಲ್ಲೆಯಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನ ರಹಿತ, ಖಾಸಗಿ ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಕೋರವಾರ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ಸೇಡಂ, ಚಿಂಚೋಳಿ, ಚಿತ್ತಾಪೂರ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಕಲಬುರಗಿ ನಗರದ ಪೊಲೀಸ್ ಗ್ರೌಂಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕಾಗಿ ಆಳಂದ, ಅಫಜಲಪುರ, ಜೇವರ್ಗಿ, ಗುಲಬರ್ಗಾ ಬ್ಲಾಕ್ ಮಟ್ಟದ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬೇಕು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಅಪಲೋಡ್ ಮಾಡಲು ಶುಲ್ಕ 35 ಹಾಗೂ ಪ್ರವೇಶ ಪತ್ರವನ್ನು ಆನ್‍ಲೈನ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಲು 10 ರೂ. ಶುಲ್ಕ ನಿಗದಿಪಡಿಸಲಾಗಿದೆ. 2018ರ ಫೆಬ್ರುವರಿ 10ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು. ಪ್ರತಿ ನವೋದಯ ವಿದ್ಯಾಲಯಕ್ಕೆ 6ನೇ ತರಗತಿಗಾಗಿ 80 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಾರಿ 8000 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡುವ ನಿರೀಕ್ಷೆಯಿದೆ ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
***********************************
ಕಲಬುರಗಿ.ಅ.16.(ಕ.ವಾ.)-ಬೇಗಂ ಹಜ್ರತ್ ಮಹಲ್ ನ್ಯಾಶನಲ್ ಸ್ಕಾಲರಶಿಫ್‍ಗಾಗಿ 2017-18ನೇ ಸಾಲಿನ (ಮೌಲಾನಾ ಆಜಾದ್ ಸ್ಕಾಲರಶಿಫ್-2017) ಅಲ್ಪಸಂಖ್ಯಾತರ ಸಮಯದಾಯಕ್ಕೆ ಸೇರಿದ 9ನೇ ತರಗತಿಯಿಂದ ದ್ವಿತೀಯ ಪಿಯು.ಸಿ.ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿಯನ್ನು http://ift.tt/2gn4tPH ವೆಬ್‍ಸೈಟಿನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿಯ ಪ್ರಿಂಟ್ ತೆಗೆದು ಎಲ್ಲ ದಾಖಲೆಗಳ ಸಹಿತ ಅಂಚೆ ಮೂಲಕ ನವೆಂಬರ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‍ಸೈಟ್‍ನ್ನು ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-247260/244006ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಜಲಾಶಯದಿಂದ ನೀರು ಬಿಡುಗಡೆ: ಮುನ್ನೆಚ್ಚರಿಕೆಗೆ ಸೂಚನೆ
***************************************************
ಕಲಬುರಗಿ,ಅ.16.(ಕ.ವಾ)-ಮುಲ್ಲಾಮಾರಿ ಮೇಲ್ದಂಡೆ ಜಲಾಶಯ ಹಾಗೂ ಚುಳಕಿನಾಲಾ ಜಲಾಶಯಗಳ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನಿರಂತರವಾಗಿ ಒಳ ಹರಿವು ಹೆಚ್ಚಾಗಿ ಜಲಾಶಯವು ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿ ಜಲಾಶಯಗಳು ಭರ್ತಿಯಾದಲ್ಲಿ ಹೆಚ್ಚುವರಿ ನೀರನ್ನು ಯಾವುದೇ ಕ್ಷಣದಲ್ಲಿ ಜಲಾಶಯ ನದಿಪಾತ್ರಕ್ಕೆ ಬಿಡಲಾಗುವುದು.
ಈ ಹಿನ್ನೆಲೆಯಲ್ಲಿ ನದಿಪಾತ್ರದ ಸುತ್ತಮುತ್ತಲಿನ ಸಾರ್ವಜನಿಕರು, ಗ್ರಾಮಸ್ಥರು, ದನಗಾಹಿಗಳು ನದಿಯ ಎರಡು ನದಿ ದಂಡೆಗಳ ಆಸು-ಪಾಸು ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭಾಲ್ಕಿ ವಿಭಾಗ ನಂ.2ರ ಕಾರ್ಯನಿರ್ವಾಹಕ ಇಂಜಿನಿಯರ್ ಮುನ್ಸೂಚನೆ ನೀಡಿದ್ದಾರೆ.
ಸಂಜೀವ ಕುಮಾರ ಅವರಿಗೆ ಪಿಹೆಚ್.ಡಿ. ಪದವಿ
****************************************
ಕಲಬುರಗಿ.ಅ.16.(ಕ.ವಾ.)-ಸೈನ್ಸ್ ಆ್ಯಂಡ್ ಟೆಕ್ನಾಲಜಿ ವಿಷಯದಲ್ಲಿ “ಇನ್ವೆಸ್ಟಿಗೇಶನ್ ಆನ್ ಬ್ರೆಯೋನೋಪ್ಸಿಸ್ ಲ್ಯಾಸಿನಿಯೋಸಾ ಫ್ರುಟ್ಸ್ ಫಾರ್ ಆ್ಯಂಟಿ ಆ್ಯಕ್ಸಿಡೆಂಟ್ ಆ್ಯಂಟಿ ಕ್ಯಾನ್ಸರ್ ಆಕ್ಟಿವಿಟಿ” (INVESTIGATION ON BRYONOPSIS LACINIOSA FRUITS FOR ANTIOXIDANT AND ANTICANCER ACTIVITY)ಎಂಬ ವಿಷಯದ ಪ್ರಬಂಧ ಮಂಡನೆಗೆ ಗುಲಬರ್ಗಾ ವಿಶ್ವವಿದ್ಯಾಲಯವು ಸಂಜೀವಕುಮಾರ ಚಂದ್ರಶೇಖರ ಸಿ. ಬಂಕಲಗಿ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಸೈನ್ಸ್ ಆಂಡ್ ಟೆಕ್ನಾಲಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡಾ. ರಮೇಶ ಎಲ್. ಲಂಡನಕರ್ ಅವರ ಮಾರ್ಗದರ್ಶನದಲ್ಲಿ ಸಂಜೀವಕುಮಾರ ಚಂದ್ರಶೇಖರ ಸಿ. ಬಂಕಲಗಿ ಅವರು ಪ್ರಬಂಧ ಮಂಡಿಸಿದ್ದರು.





ಹೀಗಾಗಿ ಲೇಖನಗಳು News and photo Date: 16-10-2017

ಎಲ್ಲಾ ಲೇಖನಗಳು ಆಗಿದೆ News and photo Date: 16-10-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 16-10-2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-16-10-2017.html

Subscribe to receive free email updates:

0 Response to "News and photo Date: 16-10-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ