News and photo date: 17--10--2017

News and photo date: 17--10--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo date: 17--10--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo date: 17--10--2017
ಲಿಂಕ್ : News and photo date: 17--10--2017

ಓದಿ


News and photo date: 17--10--2017

ದೀರ್ಘಕಾಲದ ರೋಗಗಳಿಗೆ ಆಯುರ್ವೇದ ದಿವ್ಯೌಷಧ
ಕಲಬುರಗಿ,ಅ.17(ಕ.ವಾ.)-ದೀರ್ಘಕಾಲದ ರೋಗಗಳಿಗೆ ಆಯುರ್ವೇದ ಚಿಕಿತ್ಸೆ ತುಂಬಾ ಸಹಾಯಕವಾಗಿದೆ. ಗ್ರಾಮಗಳಲ್ಲಿ ದೀರ್ಘಕಾಲದ ರೋಗಗಳಿಗೆ ಗುರಿಯಾದವರಿಗೆ ಆಯುರ್ವೇದ ಚಿಕಿತ್ಸೆ ಲಭಿಸುವಂತೆ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲಯ್ಯ ಹಿರೇಮಠ ತಿಳಿಸಿದರು.
ಅವರು ಮಂಗಳವಾರ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಯುಷ್ ಇಲಾಖೆಗಳ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೋವು ನಿವಾರಣೆಗೆ ಆಯುರ್ವೇದ ಚಿಕಿತ್ಸೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಮನೆಯಲ್ಲಿ ಒಬ್ಬರಾದರೂ ಕೀಲು ನೋವಿನಿಂದ ಬಳಲುತ್ತಿರುತ್ತಾರೆ. ಅವರಿಗೆ ಆಯುರ್ವೆದ ಔಷಧಿಯಿಂದ ಕೀಲು ನೋವು ನಿವಾರಣೆಯಾಗುವಂತೆ ಕ್ರಮ ಜರುಗಿಸಬೇಕು ಎಂದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ|| ಎ.ಎಸ್.ರುದ್ರವಾಡಿ ಮಾತನಾಡಿ, ಅಲೋಪಥಿ ಚಿಕಿತ್ಸೆಗಿಂತ ಆಯುರ್ವೇದ ಚಿಕಿತ್ಸೆಯು ತುಂಬಾ ಪರಿಣಾಮಕಾರಿಯಾಗಿದೆ. ಕಾಮಾಲೆ, ಪಾಶ್ರ್ವವಾಯುಗಳಂತÀಹ ಗಂಭೀರ ಕಾಯಿಲೆಗಳು ಕೇವಲ ಆಯುರ್ವೇದದಿಂದ ಮಾತ್ರ ಗುಣಮುಖವಾಗಲು ಸಾಧ್ಯ. ಆಯುಷ್ ವೈದ್ಯಾಧಿಕಾರಿಗಳು ತಾವು ಕಲೆತಿರುವ ವೈದ್ಯಪದ್ದತಿಯಲ್ಲಿ ಪರಿಣಿತಿ ಪಡೆದು ಪಂಡೀತರಾಗಿ ವಿಶೇಷ ಸೇವೆ ಸಲ್ಲಿಸಬೇಕು. ಅಂತವರಿಗೆ ಯಶಸ್ಸು ಸಾಧ್ಯವಾಗುವುದು. ಅಭಿವೃದ್ಧಿಹೊಂದಿದ ರಾಷ್ಟ್ರಗಳಲ್ಲಿ ನಾಗರಿಕರು ಆಯುರ್ವೇದ, ನ್ಯಾಚುರೋಪಥಿ ಚಿಕಿತ್ಸೆಗೆ ಹೆಚ್ಚು ಮಹತ್ವ ನೀಡುತ್ತಾರೆ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ|| ನಾಗರತ್ನಾ ಎಸ್. ಚಿಮ್ಮಲಗಿ ಪ್ರಾಸ್ತಾವಿಕ ಮಾತನಾಡಿ, ಮಾನವನ ಜನನದಿಂದ ಮರಣದವರೆಗೆ ಆರೋಗ್ಯದಿಂದಿರುವ ಜೀವನ ಶೈಲಿಯನ್ನು ತಿಳಿಸುವುದೇ ಆಯುರ್ವೇದವಾಗಿದೆ. ವೇದಗಳು ಭೂತ, ವರ್ತಮಾನ ಮತ್ತು ಭವಿಷತ್‍ಗಳನ್ನು ವಿವರವಾಗಿ ತಿಳಿಸಿಕೊಡುತ್ತವೆ. ಅಂತಹ ನಾಲ್ಕು ವೇದಗಳಲ್ಲಿ ಪ್ರಮುಖವಾದ ಅಥರ್ವಣವೇದದ ಉಪವೇದವೇ ಆಯುರ್ವೇದವಾಗಿದೆ. ದೇವ ಮತ್ತು ದಾನವರು ಮಂಥನ ಮಾಡಿದಾನ ವಿಷ್ಣುವಿನ ಸ್ವರೂಪದಲ್ಲಿ ಆಯುರ್ವೇದ ಮತ್ತು ಅಮೃತದೊಂದಿಗೆ ಧನ್ವಂತರಿ ಉದ್ಭವನಾಗುತ್ತಾನೆ ಎಂದು ವಿವರಿಸಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯ ಡಾ|| ಮಲ್ಲಾರಾವ ಮಲ್ಲೆ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಯುಷ್ ವೈದ್ಯರಾದ ಡಾ|| ಮಾಲತೇಶ ಹಿರೇಮಠ ಸ್ವಾಗತಿಸಿದರು, ಡಾ||ಶೀಶೈಲ್ ಪಾಟೀಲ ನಿರೂಪಿಸಿದರು, ಡಾ|| ವೇಣುಗೋಪಾಲ ರೆಡ್ಡಿ ವಂದಿಸಿದರು. ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಸಂದಿನೋವಿಗೆ  ಹಮ್ಮಿಕೊಂಡಿದ್ದ ಆಯುರ್ವೇದ ಚಿಕಿತ್ಸಾ ಸೌಲಭ್ಯದ ಸದುಪಯೋಗವನ್ನು ಸುಮಾರು 200 ಜನ ಪಡೆದರು.
ಅಕ್ಟೋಬರ್ 21ರಂದು ಗ್ರಾಹಕರ ಕುಂದುಕೊರತೆ ಸಭೆ
ಕಲಬುರಗಿ,ಅ.17(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ ಉಪವಿಭಾಗದ ಶಾಖೆಗಳಾದ ಜೇವರ್ಗಿ ಪಟ್ಟಣ, ಜೇವರ್ಗಿ ಗ್ರಾಮೀಣ, ಅಂದೋಲಾ, ಮಂದೇವಾಲ್, ನೆಲೋಗಿ ಹಾಗೂ ಅಂಕಲಗಾ ಶಾಖೆಗಳಲ್ಲಿ ಬರುವ ಗ್ರಾಹಕರ ಕುಂದುಕೊರತೆ ಸಭೆಯು ಅಕ್ಟೋಬರ್ 21ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಜೇವರ್ಗಿಯ ಜೇಸ್ಕಾಂನ ಉಪವಿಭಾಗದ ಕಚೇರಿಯಲ್ಲಿ ಜರುಗಲಿದೆ ಎಂದು ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.


ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಜನಸ್ಪಂದನ ಸಭೆಯ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ನ್ಯೂನ್ಯತೆ ಕಂಡು ಬಂದ ಕೀಟನಾಶಕ ಮಾರಾಟ ಮಳಿಗೆಗಳಿಗೆ ನೋಟೀಸು
ಕಲಬುರಗಿ,ಅ.17(ಕ.ವಾ.)-ರೈತರು ತಮ್ಮ ಬೆಳೆಗಳನ್ನು ಕೀಟಭಾದೆಯಿಂದ ರಕ್ಷಿಸಿಕೊಳ್ಳಲು ಕ್ರಿಮಿನಾಶಕಗಳನ್ನು ಉಪಯೋಗಿಸುತ್ತಿದ್ದಾರೆ. ರೈತರಿಗೆ ಗುಣಮಟ್ಟದ ಕೀಟನಾಶಕ ಔಷಧಿಗಳನ್ನು ಪೂರೈಸುವ ಉದ್ದೇಶ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿಯಲ್ಲಿರುವ ಎಲ್ಲ ಕೀಟನಾಶಕ, ಕೃಷಿ ಪರಿಕರ ಮಾರಾಟ ಮಳಿಗೆಗಳನ್ನು ಪರಿಶೀಲಿಸಲು 5 ಜಾಗೃತ ತಂಡಗಳನ್ನು ರಚಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಿಲಾನಿ ಹೆಚ್ ಮೋಕಾಶಿ ತಿಳಿಸಿದ್ದಾರೆ.
ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದ 5 ಜಾಗೃತ ತಂಡಗಳು ಮಂಗಳವಾರ 48 ಮಾರಾಟ ಮಳಿಗೆಗಳಿಗೆ ಹಠಾತ ಭೇಟಿ  ನೀಡಿ ತಪಾಸಣೆ ಕೈಗೊಂಡಿದ್ದಾರೆ. ನ್ಯೂನ್ಯತೆಗಳು ಕಂಡು ಬಂದ 30 ಮಾರಾಟ ಮಳಿಗೆಗಳಿಗೆ ಕಾರಣ ಕೇಳುವ ನೋಟೀಸು ಜಾರಿ ಮಾಡಲಾಗಿದೆ ಹಾಗೂ 10 ಮಾರಾಟ ಮಳಿಗೆಗಳಿಗೆ  ಮಾರಾಟ ತಡೆ ಆದೇಶ ಜಾರಿ ಮಾಡಿ 3 ದಿನದೊಳಗಾಗಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಮಾರಾಟಗಾರರು ಇದಕ್ಕೆ ತಪ್ಪಿದ್ದಲ್ಲಿ ಅವರ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ಸಹ ನೀಡಲಾಗಿದೆ. ಎಲ್ಲ ಮಾರಾಟಗಾರರಿಗೆ ಗುಣಮಟ್ಟದ ಮತ್ತು ಅಧಿಕೃತ ತಯಾರಕರಿಂದ ಪಡೆದ ಕೀಟನಾಶಕಗಳನ್ನು ಮಾತ್ರ ಮಾರಾಟ ಮಾಡುವಂತೆ ಹಾಗೂ ರೈತರಿಗೆ ಕಡ್ಡಾಯವಾಗಿ ಎಲ್ಲ ವಿವರಗಳ ರಸೀದಿಯನ್ನು ನೀಡುವಂತೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಕ್ಟೋಬರ್ 28ರಂದು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ
ಕಲಬುರಗಿ,ಅ.17.(ಕ.ವಾ)-ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಒಂಭತ್ತನೆಯ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯು ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಜರುಗಲಿದೆ.
ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸಂಬಂಧಿಸಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಉದ್ದು-ಹೆಸರು ಕಾಳು ಖರೀದಿ: ಅವಧಿ ವಿಸ್ತರಣೆ
ಕಲಬುರಗಿ,ಅ.17.(ಕ.ವಾ)-ಮುಂಗಾರು ಹಂಗಾಮಿನಲ್ಲಿ 2017-18ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿಗೆ ನವೆಂಬರ್ 9 ರವರೆಗೆ ಹಾಗೂ ಎಫ್.ಎ.ಕ್ಯೂ ಗುಣಮಟ್ಟದ ಉದ್ದಿನ ಕಾಳು ಖರೀದಿಗೆ ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಟಾಸ್ಕ್‍ಪೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ. 
ಈ ಹಿಂದೆ ಹೆಸರು ಕಾಳು ಖರೀದಿಗೆ ಸೆಪ್ಟೆಂಬರ್ 11ರಂದು ಹಾಗೂ ಉದ್ದಿನ ಕಾಳು ಖರೀದಿಗೆ ಸೆಪ್ಟೆಂಬರ್ 23ರಂದು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಎಲ್ಲ ರೈತ ಬಾಂದವರು ತಾವು ಬೆಳೆದ ಹೆಸರು ಕಾಳು ಹಾಗೂ ಉದ್ದಿನ ಕಾಳನ್ನು ಈಗಾಗಲೇ ಪ್ರಾರಂಭಿಸಿರುವ ಖರೀದಿ ಕೇಂದ್ರಗಳಲ್ಲಿ ಅವಶ್ಯಕ ದಾಖಲೆಗಳನ್ನು ಸಲ್ಲಿಸಿ ಹೆಸರು ನೋಂದಾಯಿಸಿ ಮಾರಾಟ ಮಾಡಬಹುದಾಗಿದೆ. ಉಳಿದಂತೆ ನಿಯಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಹಾಯ ಅನುದಾನÀ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಲಬುರಗಿ,ಅ.17.(ಕ.ವಾ)-ಅಲ್ಪಸಂಖ್ಯಾತರ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಬಿ.ಎಸ್.ಸಿ., ಜಿ.ಎನ್.ಎಂ., ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಸಹಾಯ ಅನುದಾನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಪಾಲಕರ/ಪೋಷಕರ ಗರಿಷ್ಠ ವಾರ್ಷಿಕ ವರಮಾನ 2.50 ರೂ. ಲಕ್ಷ ರೂ. ಮೀರಿರಬಾರದು. ಪ್ಯಾರಾ ಮೆಡಿಕಲ್ ಕಾಲೇಜುಗಳಲ್ಲಿ ಪ್ಯಾರಾ ಮೆಡಿಕಲ್ ಬೋರ್ಡಿನಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧದಲ್ಲಿನ ಟ್ರಾಫಿಕ್ ಪೊಲೀಸ್ ಸ್ಟೇಶನ್ ಎದುರುಗಡೆಯಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-247260/244006ನ್ನು ಹಾಗೂ ಇಲಾಖೆಯ ವೆಬ್‍ಸೈಟ್‍ನಲ್ಲಿ hಣಣಠಿs://goಞಜom.ಞಚಿಡಿ.ಟಿiಛಿ.iಟಿ  ಲಾಗಿನ್ ಆಗಿ ಅರ್ಜಿ  ನಮೂನೆಯನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
 ಪದವೀಧರರಿಗೆ ನ್ಯಾಯಾಂಗ ಆಡಳಿತ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕಲಬುರಗಿ,ಅ.17(ಕ.ವಾ.)-ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ಜನಾಂಗಕ್ಕೆ ಸೇರಿದ ಕಲಬುರಗಿ ಜಿಲ್ಲೆಯ 14 ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಸಾಕಷ್ಟು ಅರ್ಜಿಗಳನ್ನು ಸಲ್ಲಿಸದೇ ಇರುವುದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 25ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ 2(ಎ), 3(ಎ) ಮತ್ತು 3(ಬಿ) ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮಿತಿಯೊಳಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 3.50 ಲಕ್ಷ ರೂ. ಆದಾಯ ಮಿತಿಯೊಳಗಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಶೇ.33 ರಷ್ಟು ಮೀಸಲಾತಿ ನೀಡಲಾಗುವುದು. ತರಬೇತಿ ಅವಧಿ 4 ವರ್ಷಗಳದ್ದಾಗಿದ್ದು, ತರಬೇತಿ ಅವಧಿಯಲ್ಲಿ ಪ್ರತಿ ಮಾಹೆಯಾನ 4000 ರೂ.ಗಳ ಭತ್ಯೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು. ಪ್ರವರ್ಗ-1ರಡಿ ಬರುವ ಅಭ್ಯರ್ಥಿಗಳ ವಯಸ್ಸು 31 ವರ್ಷ ಮೀರಿರಬಾರದು.
ಎಲ್.ಎಲ್.ಬಿ. ಕೋರ್ಸಿನ ಎಲ್ಲ ವರ್ಷಗಳ ದೃಢೀಕೃತ ಅಂಕಪಟ್ಟಿ, ವಕೀಲ ವೃತ್ತಿ ಕೈಗೊಳ್ಳಲು ನೋಂದಣಿ ಮಾಡಿದ ಪ್ರಮಾಣಪತ್ರ ಹಾಗೂ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣಪತ್ರ ದಾಖಲಾತಿಗಳನ್ನು ಲಗತ್ತಿಸಿ ಅಕ್ಟೋಬರ್ 25ರ ಸಂಜೆ 5.30 ಗಂಟೆಯೊಳಗಾಗಿ ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಲ್ಲಿಸಬೇಕು.  ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯನ್ನು ಹಾಗೂ ಕಚೇರಿ ಮೊಬೈಲ್ ಸಂ. 9243689100ನ್ನು ಸಂಪರ್ಕಿಸಲು ಕೋರಿದೆ. 
ಹೆಣ್ಣು ಶಿಶುವಿನ ಪೋಷಕರ ಪತ್ತೆಗೆ ಮನವಿ
ಕಲಬುರಗಿ,ಅ.17(ಕ.ವಾ.)-ಚಿತ್ತಾಪುರ ತಾಲೂಕಿನ ಶಹಬಾದನಲ್ಲಿ 2017ರ ಸೆಪ್ಟೆಂಬರ್ 20ರಂದು ಪತ್ತೆಯಾದ ಒಂದು ದಿವಸದÀ ಹೆಣ್ಣು ಶಿಶುವನ್ನು ಅಂಗನವಾಡಿ ಮೇಲ್ವಿಚಾರಕಿ ನಾಗಮ್ಮರವರ ಮುಖಾಂತರ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ ಸೆಪ್ಟೆಂಬರ್ 22ರಂದು ದಾಖಲಿಸಲಾಗಿದೆ. ಮಗು ನೋಡಲು ಗುಂಡಾಗಿದ್ದು, ಬಿಳುಪು ಮೈಕಟ್ಟು ಹೊಂದಿರುವ ಈ ಹೆಣ್ಣು ಶಿಶುವಿನ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಅಮೂಲ್ಯ ಶಿಶು ಗೃಹದ ಅಧೀಕ್ಷಕ ಶ್ರೀಕಾಂತ ಮೇಂಗಜಿ ತಿಳಿಸಿದ್ದಾರೆ. 
ಮೇಲ್ಕಂಡ ಹೆಣ್ಣು ಶಿಶುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 60 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ ನೀಡಲು ಕೋರಿದೆ. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ಹಾಗೂ ದೂರವಾಣಿ ಸಂ.08472-265588 ಹಾಗೂ ಮೊಬೈಲ್ ಸಂಖ್ಯೆ 9449125576ನ್ನು ಸಂಪರ್ಕಿಸಬೇಕೆಂದು ಕೋರಿದ್ದಾರೆ.


ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ಅ.17(ಕ.ವಾ.)-ವಿಶೇಷ ಘಟಕ ಯೋಜನೆ ಮತ್ತು ಸಾಮಾನ್ಯ ಯೋಜನೆಯಡಿ 2016-17ನೇ ಸಾಲಿನ ಕುರಿ/ಮೆಕೆ ಸಾಕಾಣಿಕೆಗೆ ಸಾಲಸೌಲಭ್ಯಕ್ಕಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಣಿಯಾದ ಕಲಬುರಗಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಕುರಿ/ಮೆಕೆ ಸಾಕಾಣಿಕೆಗಾಗಿ 23 ಪರಿಶಿಷ್ಟ ಜಾತಿ ಮತ್ತು 46 ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಆಸಕ್ತಿಯುಳ್ಳ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ  ನೋಂದಾಯಿತ ಸದಸ್ಯರು ಭರ್ತಿ ಮಾಡಿದ ಅರ್ಜಿಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕರ ಕಚೇರಿಯಲ್ಲಿ ನವೆಂಬರ್ 7 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-237772ನ್ನು ಸಂಪರ್ಕಿಸಲು ಕೋರಿದೆ.
ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಬಸ್ಸು
 ಕಲಬುರಗಿ,ಅ.17(ಕ.ವಾ)-ಗದಗ ನಗರದ ಹತ್ತಿರವಿರುವ ಹುಲಿಜಂತಿಯಲ್ಲಿ ಅಕ್ಟೋಬರ್ 18 ರಿಂದ 21ರವರೆಗೆ ಶ್ರೀ ಮಾಳಿಂಗರಾಯ ಜಾತ್ರೆ ಜರುಗಲಿದೆ. ಭಕ್ತಾಧಿಗಳ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ ವಿಭಾಗ-1ರ ಕೆಳಕಂಡ ಘಟಕಗಳಿಂದ ಹೆಚ್ಚುವರಿ ವಿಶೇಷ ಬಸ್ಸು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
  ಸೇಡಂ, ಚಿಂಚೋಳಿ, ಚಿತ್ತಾಪೂರ ಮತ್ತು ಕಾಳಗಿ ಘಟಕಗಳಿಂದ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರು/ಯಾತ್ರಾರ್ಥಿಗಳು ಈ ವಿಶೇಷ ಬಸ್ಸುಗಳ ಸದುಪಯೋಗವನ್ನು ಪಡೆಯಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ನಂ. 7760992100, 7760992102, 7760992108, 7760992113, 7760992117, 7760992119, 7760992120 ಮತ್ತು 7760992466ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪಿ. ಲೋಕೇಶ್ ಅವರಿಗೆ ಸನ್ಮಾನ
ಕಲಬುರಗಿ,ಅ.17(ಕ.ವಾ)-ಬೆಂಗಳೂರಿನ ಕರ್ನಾಟಕ ಸ್ವಿಮಿಂಗ್ ಅಸೋಸಿಯೆಶನ್‍ದಿಂದ ಅಕ್ಟೋಬರ್ 14 ಮತ್ತು 15ರಂದು ಜರುಗಿದ 19ನೇ ರಾಜ್ಯ  ಬಮಟ್ಟದ ಮಾಸ್ಟರ್ಸ್ ಅಕ್ವೇಟಿಕ್ ಚಾಂಪಿಯನಶಿಪ್‍ನ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕಲಬುರಗಿ ವಿಭಾಗೀಯ ಆಹಾರ ಪ್ರಯೋಗಾಲಯ ಹಿರಿಯ ಆಹಾರ ವಿಶ್ಲೇಷಕ  ಪಿ. ಲೋಕೇಶ ಅವರನ್ನು ಪ್ರಯೋಗಾಲಯದ ಸಿಬ್ಬಂದಿಗಳಾದ ಶ್ರೀಶೈಲ ಹೆಬ್ಬಳ್ಳಿ, ಜಿ.ಬಿ. ನಂದಿ, ಶಶಿಧರ, ಜಬ್ಬಾರಖಾನ, ಕೃಷ್ಣ,  ಬಸವರಾಜ  ಹಾಗೂ ಅನಿತಾ ಸನ್ಮಾನಿಸಿದರು.












ಹೀಗಾಗಿ ಲೇಖನಗಳು News and photo date: 17--10--2017

ಎಲ್ಲಾ ಲೇಖನಗಳು ಆಗಿದೆ News and photo date: 17--10--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo date: 17--10--2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-17-10-2017.html

Subscribe to receive free email updates:

0 Response to "News and photo date: 17--10--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ