ಶೀರ್ಷಿಕೆ : News and photo Date: 25--10--2017
ಲಿಂಕ್ : News and photo Date: 25--10--2017
News and photo Date: 25--10--2017
ಅತ್ಯಾಚಾರ ಪ್ರಕರಣ: ಜಿಲ್ಲಾ ಶಸ್ತ್ರಜ್ಞರ ವರದಿ ಆಧರಿಸಿ 25 ಸಾವಿರ ರೂ. ನೆರವು
ಅಕ್ಟೋಬರ್ 26ರಂದು ಬೆಳಿಗ್ಗೆ 10.30 ಗಂಟೆಗೆ “ಜೈವಿಕ ತಂತ್ರಜ್ಞಾನ ವಿಶೇಷ ಉಪನ್ಯಾಸ ಮಾಲೆ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಕೆ. ಭೈರಪ್ಪಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಸ್.ಆರ್.ನಿರಂಜನ್ ಅಧ್ಯಕ್ಷತೆ ವಹಿಸುವರು. ನಾಡೋಜ ಡಾ.ಪಿ.ಎಸ್.ಶಂಕರ ಗೌರವಾನ್ವಿತ ಅತಿಥಿಯಾಗಿ ಆಗಮಿಸುವರು.
ಈ ವಿಶೇಷ ಉಪನ್ಯಾಸ ಮಾಲೆಯ ಸಮಾರೋಪ ಸಮಾರಂಭವು ಅಕ್ಟೋಬರ್ 28ರಂದು ಮಧ್ಯಾಹ್ನ 3 ಗಂಟೆಗೆ ಜರುಗಲಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ಆರ್.ನಿರಂಜನ್ ಅಧ್ಯಕ್ಷತೆ ವಹಿಸುವರು. ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ. ಜಿ.ಆರ್. ನಾಯಕ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಅಗಸರ್ ದಯಾನಂದ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.
ಪೀಠೋಪಕರಣಗಳ ಸರಬರಾಜಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಅ.25.(ಕ.ವಾ.)-ಅತ್ಯಾಚಾರಕ್ಕೊಳಗಾದ ಬಾಲಕಿಯರಿಗೆ ತುರ್ತು ಚಿಕಿತ್ಸೆ ಅವಶ್ಯಕವಿದ್ದು, ಅತ್ಯಾಚಾರ ಪ್ರಕರಣದ ಎಫ್.ಐ.ಆರ್. ದಾಖಲಾದ ತಕ್ಷಣ ಜಿಲ್ಲಾ ಆಸ್ಪತ್ರೆಯ ಶಸ್ತ್ರಜ್ಞರ ಪ್ರಾಥಮಿಕ ವರದಿ ಆಧಾರದ ಮೇಲೆ 25,000 ರೂ.ಗಳ ನೆರವು ನೀಡಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತ್ಯಾಚಾರಕ್ಕೊಳಗಾದವರ ಮಾಹಿತಿಯನ್ನು ಮಹಿಳಾ ವಿಶೇಷ ಚಿಕಿತ್ಸಾ ಘಟಕದಿಂದ ಪಡೆದು ವೈದ್ಯಕೀಯ ವರದಿಯನ್ನಾಧರಿಸಿ ಸಂಪೂರ್ಣ ಪರಿಹಾರ ನೀಡುವಂತೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅತ್ಯಾಚಾರ ಪ್ರಕರಣಗಳನ್ನು ಪರಿಶೀಲಿಸಿ ಸಮಗ್ರ ವರದಿ ಸಂಗ್ರಹಿಸಬೇಕು. ಈ ವರ್ಷ ಒಟ್ಟು 47 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 18ವರ್ಷ ಮೇಲ್ಪಟ್ಟ 10 ಪ್ರಕರಣಗಳು ಹಾಗೂ 18ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಮೇಲೆ ಅತ್ಯಾಚಾರದ 37 ಪ್ರಕರಣಗಳು ದಾಖಲಾಗಿವೆ. ಇವರ ವೈದ್ಯಕೀಯ ವರದಿಯನ್ನಾಧರಿಸಿ ಯಾವುದೇ ವಿಳಂಬ ಮಾಡದೇ ಪರಿಹಾರ ಒದಗಿಸಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ನಾಲ್ಕು ಗುಜ್ಜರ ಶಾದಿ ಪ್ರಕರಣಗಳು ವರದಿಯಾಗಿವೆ ಹಾಗೂ 187 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ಮೂರು ತಿಂಗಳಿಗೊಮ್ಮೆ ಎರಡು ಬಾರಿ ಪರಿಶೀಲಿಸಬೇಕು. ಈ ಕುರಿತು ವರದಿ ನೀಡಿ ಇವರು ಆರು ತಿಂಗಳಲ್ಲಿ ಮತ್ತೆ ಬಾಲ್ಯ ವಿವಾಹ ಮಾಡಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಸಾಗಾಣಿಕೆ ಕುರಿತ ಕಾವಲು ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಗ್ರಾಮ ಮಟ್ಟದಲ್ಲಿ ನಡೆಯುವ ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳು ಕಾಣೆಯಾಗುವ ಪ್ರಕರಣಗಳ ವರದಿ ನೀಡಬೇಕೆಂದರು.
ರಾಜ್ಯ ಮಹಿಳಾ ನಿಲಯ ಮತ್ತು ಬಾಲಕಿಯರ ಬಾಲ ಮಂದಿರಗಳಲ್ಲಿರುವ ನಿವಾಸಿಗಳಿಗೆ ಜಿಲ್ಲಾ ಪಂಚಾಯಿತಿಯಿಂದ ದೀನ್ ದಯಾಳ ಉಪಾಧ್ಯಾಯ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕು. ಈ ಯೋಜನೆಯಡಿ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ದೊರಕಿಸಲಾಗುವುದು. ಮಹಿಳಾ ನಿಲಯದ ನಿವಾಸಿಗಳು ನೇರವಾಗಿ ಪರೀಕ್ಷೆ ಬರೆದು ಕನಿಷ್ಠ ಹತ್ತನೇ ತರಗತಿ ಪಾಸಾಗುವ ಹಾಗೆ ನೋಡಿಕೊಳ್ಳಬೇಕು ಎಂದರು.
ರಾಜ್ಯ ಮಹಿಳಾ ನಿಲಯದಲ್ಲಿ 44 ನಿವಾಸಿಗಳಿದ್ದು, ಈ ಪೈಕಿ 4 ಜನ ಜೆ.ಎನ್.ಎಂ., ಒಬ್ಬರು ಬಿ.ಎಸ್.ಸಿ., ಒಬ್ಬರು ಬಿ.ಕಾಂ., ನಾಲ್ಕು ಜನ ಪಿ.ಯು.ಸಿ. ಓದುತ್ತಿದ್ದಾರೆ. ಈಗಾಗಲೇ ನಾಲ್ಕು ಜನ ಎಂ.ಎಸ್.ಡಬ್ಲ್ಯೂ. ಓದಿ ಕೆಲಸ ಮಾಡುತ್ತಿದ್ದಾರೆ. ಉಳಿದವರಿಗೆ ಬ್ಯೂಟಿ ಪಾರ್ಲರ್, ಟೇಲರಿಂಗ್ ಹಾಗೂ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ. ಇದಲ್ಲದೇ 14 ಜನ ಬುದ್ದಿ ಮಾಂದ್ಯರಿದ್ದು, ಅವರಿಗೆ ಪ್ರತಿ ತಿಂಗಳು ಜಿಲ್ಲಾ ಆಸ್ಪತ್ರೆಯಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ಶಿಲ್ಪಾ ಹಿರೇಮಠ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ಮಾಣಿಕ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಶಾಂತಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ವಿ. ರಾಮನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಮಲ್ಲಣ್ಣ ದೇಸಾಯಿ, ಇಂಟಿಗ್ರೇಟೆಡ್ ರೂರಲ್ ಡೆವಲಪ್‍ಮೆಂಟ್ ಸಂಸ್ಥೆಯ ಅಧ್ಯಕ್ಷೆ ಭಾಗ್ಯಲಕ್ಷ್ಮೀ, ಮಹಿಳಾ ಚಿಕಿತ್ಸಾ ಘಟಕದ ಸಮಾಲೋಚಕಿ ಗೀತಾ ಮತ್ತಿತರರು ಉಪಸ್ಥಿತರಿದ್ದರು.
ಅಕ್ಟೋಬರ್ 26ರಂದು ಜೈವಿಕ ತಂತ್ರಜ್ಞಾನ ವಿಶೇಷ ಉಪನ್ಯಾಸ ಮಾಲೆ ಉದ್ಘಾಟನೆ
ಕಲಬುರಗಿ,ಅ.25.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 26ರಿಂದ 28ರವರೆಗೆ ಮೂರು ದಿನಗಳ “ಜೈವಿಕ ತಂತ್ರಜ್ಞಾನ ವಿಶೇಷ ಉಪನ್ಯಾಸ ಮಾಲೆ” ಕಾರ್ಯಕ್ರಮವನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಕ್ಟೋಬರ್ 26ರಂದು ಬೆಳಿಗ್ಗೆ 10.30 ಗಂಟೆಗೆ “ಜೈವಿಕ ತಂತ್ರಜ್ಞಾನ ವಿಶೇಷ ಉಪನ್ಯಾಸ ಮಾಲೆ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಕೆ. ಭೈರಪ್ಪಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಸ್.ಆರ್.ನಿರಂಜನ್ ಅಧ್ಯಕ್ಷತೆ ವಹಿಸುವರು. ನಾಡೋಜ ಡಾ.ಪಿ.ಎಸ್.ಶಂಕರ ಗೌರವಾನ್ವಿತ ಅತಿಥಿಯಾಗಿ ಆಗಮಿಸುವರು.
ಈ ವಿಶೇಷ ಉಪನ್ಯಾಸ ಮಾಲೆಯ ಸಮಾರೋಪ ಸಮಾರಂಭವು ಅಕ್ಟೋಬರ್ 28ರಂದು ಮಧ್ಯಾಹ್ನ 3 ಗಂಟೆಗೆ ಜರುಗಲಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ಆರ್.ನಿರಂಜನ್ ಅಧ್ಯಕ್ಷತೆ ವಹಿಸುವರು. ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ. ಜಿ.ಆರ್. ನಾಯಕ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಅಗಸರ್ ದಯಾನಂದ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.
ಪೀಠೋಪಕರಣಗಳ ಸರಬರಾಜಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಅ.25.(ಕ.ವಾ.)-ಯಾದಗಿರಿ ಜಿಲ್ಲಾ ನ್ಯಾಯಾಲಯದ ಘಟಕದ ಅಧೀನ ನ್ಯಾಯಾಲಯಗಳ ಕಚೇರಿ ಉಪಯೋಗಕ್ಕಾಗಿ ವಿವಿಧ 4 ಮಾದರಿಯ ಪೀಠೋಪಕರಣಗಳನ್ನು ಸರಬರಾಜು ಮಾಡಲು ಕೆ.ಟಿ.ಪಿ.ಪಿ. ಕಾಯ್ದೆ 1999 ನಿಯಮ 2000ರನ್ವಯ ಅರ್ಹ ತಯಾರಕರು, ಡೀಲರ್ ಮತ್ತು ಸರಬರಾಜುದಾರರಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಅಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಸರಬರಾಜು ಮಾಡುವ ಪೀಠೋಪಕರಣಗಳ ವಿವರ ಮತ್ತು ಸಂಖ್ಯೆ ಇಂತಿದೆ. ಸ್ಟೀಲ್ ಸ್ಲೋಟೆಡ್ ಆ್ಯಂಗಲ್ ರ್ಯಾಕ್ (ದೊಡ್ಡದ್ದು)-16, ಸ್ಟೀಲ್ ಅಲಮಾರಿ-08, ವುಡನ್ ಚಿಕ್ಕ ಟೇಬಲ್-04, ಹೈ ಬ್ಯಾಕ್ ರಿವಾಲ್ವಿಂಗ್ ಕುಷನ್ ಚೇರ್-04.
ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಕಚೇರಿಯಿಂದ ಕೆಲಸದ ದಿನಗಳಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 5 ಗಂಟೆಯವರೆಗೆ ಟೆಂಡರ್ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅದರೊಂದಿಗೆ ಇ.ಎಂ.ಡಿ 10,000 ರೂ. ಡಿ.ಡಿ./ಎಫ್‍ಡಿಆರ್ ಯನ್ನು ಲಗತ್ತಿಸಿದ ಭದ್ರಪಡಿಸಿದ ಅರ್ಜಿಯ ಎರಡು ಲಕೋಟೆಗಳನ್ನು 2017ರ ನವೆಂಬರ್ ಸಾಯಂಕಾಲ 4ಗಂಟೆಯೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಒಂದನೇ ಲಕೋಟೆಯಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮತ್ತು ಎರಡನೇ ಲಕೋಟೆಯಲ್ಲಿ ಟೆಂಡರ್ ಸಂಬಂಧಪಟ್ಟ ಅರ್ಜಿ, ಪ್ರಮಾಣ ಪತ್ರಗಳು, ಜಿ.ಎಸ್.ಟಿ. ನೋಂದಣಿ ಪತ್ರ ಸೇರಿದಂತೆ ಅಗತ್ಯ ದಾಖಲಾತಿಗಳು ಇರಬೇಕು. ಅರ್ಜಿದಾರರ ಸಮಕ್ಷಮದಲ್ಲಿ ಭದ್ರಪಡಿಸಿದ ಅರ್ಜಿ ಲಕೋಟೆಗಳನ್ನು 2017ರ ನವೆಂಬರ್ 8ರಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ಪೀಠೋಪಕರಣಗಳ ವಿವರ, ಷರತ್ತು, ನಿಬಂಧನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಯಾದಗಿರಿಯ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ನವೆಂಬರ್ 4ರಂದು ಹೋಬಳಿ ಮಟ್ಟದ ಜನಸ್ಪಂದನ ಸಭೆಗಳು
ಕಲಬುರಗಿ,ಅ.25.(ಕ.ವಾ.)-ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ 2017ರ ನವೆಂಬರ್ 4ರಂದು ಮೊದಲನೇ ಶನಿವಾರ ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆಗಳು ನಡೆಯಲಿದೆ ಎಂದು ಹೆÀಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ. ತಾಲೂಕುವಾರು ನಡೆಯುವ ಜನಸ್ಪಂದನ ಸಭೆಗಳ ಹೋಬಳಿ, ಗ್ರಾಮ ಮತ್ತು ಸಭೆಯ ಸ್ಥಳಗಳ ವಿವರ ಇಂತಿದೆ.
ಕಲಬುರಗಿ-ಫರತಾಬಾದ ಹೋಬಳಿಯ ಖಣದಾಳ ಗ್ರಾಮ ಪಂಚಾಯಿತಿ ಕಾರ್ಯಾಲಯ. ಆಳಂದ-ಆಳಂದ ಹೋಬಳಿಯ ಕೊಡಲಹಂಗರಗಾ ಗ್ರಾಮ ಪಂಚಾಯಿತಿ ಕಾರ್ಯಾಲಯ. ಅಫಜಲಪುರ-ಅಫಜಲಪುರ ಹೋಬಳಿಯ ಮಲ್ಲಾಬಾದ ಗ್ರಾಮ ಪಂಚಾಯಿತಿ ಕಾರ್ಯಾಲಯ. ಜೇವರ್ಗಿ-ಯಡ್ರಾಮಿ ಹೋಬಳಿಯ ಕಮ್ಮನಸಿರಸಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಸೇಡಂ-ಆಡಕಿ ಹೋಬಳಿಯ ಲಿಂಗಂಪಲ್ಲಿ ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿತ್ತಾಪುರ-ನಾಲವಾರ ಹೋಬಳಿಯ ದಂಡಗುಂಡ ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿಂಚೋಳಿ-ಸುಲೇಪೇಟ್ ಹೋಬಳಿಯ ಹಲಕೋಡ ಸರ್ಕಾರಿ ಶಾಲಾ ಆವರಣ.
ಹೀಗಾಗಿ ಲೇಖನಗಳು News and photo Date: 25--10--2017
ಎಲ್ಲಾ ಲೇಖನಗಳು ಆಗಿದೆ News and photo Date: 25--10--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 25--10--2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-25-10-2017.html
0 Response to "News and photo Date: 25--10--2017"
ಕಾಮೆಂಟ್ ಪೋಸ್ಟ್ ಮಾಡಿ