ಶೀರ್ಷಿಕೆ : News and photo Date: 26--10--2017
ಲಿಂಕ್ : News and photo Date: 26--10--2017
News and photo Date: 26--10--2017
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಪ್ರವಾಸ
***********************************************
ಕಲಬುರಗಿ,ಅ.26.(ಕ.ವಾ.)-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ಹೈದ್ರಾಬಾದ್‍ದಿಂದ ಅಕ್ಟೋಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಗೆ ಆಗಮಿಸಿ, ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಿಮೆಂಟ್ ಘಟಕಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಮಾನ ನಿಲ್ದಾಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11.30 ಗಂಟೆಗೆ ಮಹಿಳಾ ಕೈಗಾರಿಕೋದ್ಯಮ ಮತ್ತು ವುಮೆನ್ಸ್ ಪಾರ್ಕ್ ಅಭಿವೃದ್ಧಿ ಕುರಿತು ಸಭೆ ನಡೆಸುವರು.
ಮಧ್ಯಾಹ್ನ 12 ಗಂಟೆಗೆ ವುಮೆನ್ಸ್ ಪಾರ್ಕ್ ಪ್ರದೇಶವನ್ನು ವೀಕ್ಷಿಸುವರು. ಮಧ್ಯಾಹ್ನ 12.30 ಗಂಟೆಗೆ ಗುಲಬರ್ಗಾ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡುವರು. ಸಚಿವರು ಅಂದು ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ಹೈದ್ರಾಬಾದಿಗೆ ಪ್ರಯಾಣಿಸುವರು.

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
********************************************
ಕಲಬುರಗಿ,ಅ.26(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಅಕ್ಟೋಬರ್ 27ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರೊಂದಿಗೆ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಿಮೆಂಟ್ ಘಟಕಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಮಾನ ನಿಲ್ದಾಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11.30 ಗಂಟೆಗೆ ಮಹಿಳಾ ಕೈಗಾರಿಕೋದ್ಯಮ ಮತ್ತು ವುಮೆನ್ಸ್ ಪಾರ್ಕ್ ಅಭಿವೃದ್ಧಿ ಕುರಿತು ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ವುಮೆನ್ಸ್ ಪಾರ್ಕ್ ಪ್ರದೇಶವನ್ನು ವೀಕ್ಷಿಸುವರು. ಮಧ್ಯಾಹ್ನ 12.30 ಗಂಟೆಗೆ ಗುಲಬರ್ಗಾ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡುವರು.
ಅಕ್ಟೋಬರ್ 29 ರಿಂದ 31ರವರೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

ಬುಡಕಟ್ಟು ಆಯೋಗದ ಅಧ್ಯಕ್ಷರ ಪ್ರವಾಸ
************************************
ಕಲಬುರಗಿ,ಅ.26,(ಕ.ವಾ): ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎ. ಮುನಿಯಪ್ಪ, ಸದಸ್ಯರು ಹಾಗೂ ಕಾರ್ಯದರ್ಶಿಗಳು ಬೀದರದಿಂದ ಅಕ್ಟೋಬರ್ 30ರಂದು ಸಂಜೆ 4.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘’ದಲಿತ ಸಂಘಟನೆ, ವಿವಿಧ ಪಕ್ಷಗಳ ಮುಖಂಡರುಗಳ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ನಂತರ ಅಧ್ಯಕ್ಷರು ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಶೇ. 24.10 ಮೀಸಲಾತಿ ಅನುದಾನದ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಪತ್ರಿಕಾಗೋಷ್ಠಿ ನಡೆಸುವರು. ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು.

ಅಲೆಮಾರಿಗಳ ವಸತಿಗೆ ಸೂಕ್ತ ಭೂಮಿ ಗುರುತಿಸಲು ಜಿಲ್ಲಾಧಿಕಾರಿಗಳ ಸೂಚನೆ
*******************************************************************
ಕಲಬುರಗಿ,ಅ.26(ಕ.ವಾ.)-ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಕುಟುಂಬಗಳಿಗೆ ಸೂಕ್ತ ನಿವೇಶನ ನೀಡಿ ವಸತಿ ಸೌಲಭ್ಯ ಕಲ್ಪಿಸಲು ನಗರದ ಸಮೀಪದಲ್ಲಿರುವ ಭೂಮಿಯನ್ನು ಗುರುತಿಸಿ ಮೂರು ದಿನದೊಳಗಾಗಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮ ಬಗ್ಗೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಕಲ್ಯಾಣ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ತಹಶೀಲ್ದಾರರೊಂದಿಗೆ ಜಂಟಿಯಾಗಿ ಸಮೀಕ್ಷೆ ಕೈಗೊಂಡು ನಿವೇಶನ ರಹಿತರಿಗೆ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಲು ಭೂಮಿ ಗುರುತಿಸಬೇಕು ಹಾಗೂ ನಿವೇಶನ ಹೊಂದಿದವರಿಗೆ ಮನೆ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿದರು.
ಕಲಬುರಗಿ 328, ಅಫಜಲಪೂರ 46, ಚಿತ್ತಾಪೂರ 319, ಜೇವರ್ಗಿ 35, ಸೇಡಂ 95 ಹಾಗೂ ಆಳಂದ ತಾಲೂಕಿನಿಂದ 11 ಹೀಗೆ ಒಟ್ಟು 834 ನಿವೇಶನ ರಹಿತ ಅಲೆಮಾರಿ ಕುಟುಂಬಗಳು ನಿವೇಶನ ಒದಗಿಸಿ ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಆಯಾ ತಾಲೂಕು ಕೇಂದ್ರದ ಸಮೀಪದಲ್ಲಿ ವಸತಿ ಸೌಲಭ್ಯ ಕಲ್ಪಿಸಿ ಅಲೆಮಾರಿಗಳ ಗ್ರಾಮ ನಿರ್ಮಿಸಲು ಅನುಕೂಲವಾಗುವ ಹಾಗೆ ನೋಡಿಕೊಳ್ಳಬೇಕು. ಕಲಬುರಗಿ ಮತ್ತು ಚಿತ್ತಾಪೂರ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲೆಮಾರಿಗಳಿದ್ದು, ಅವರಿಗಾಗಿ ಭೂಮಿ ಗುರುತಿಸುವಾಗ ಸ್ವಲ್ಪ ಹೆಚ್ಚಿನ ಪ್ರಮಾಣದ ಭೂಮಿ ಗುರುತಿಸಿ ಅಲ್ಲಿ ಶಾಲೆ, ಅಂಗನವಾಡಿ, ಕುಡಿಯುವ ನೀರು, ವಿದ್ಯುತ್‍ಗಳಂಥಹ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕೆಂದು ಸೂಚಿಸಿದರು.
ಕಲಬುರಗಿ 141, ಚಿಂಚೋಳಿ 228, ಚಿತ್ತಾಪೂರ 141, ಜೇವರ್ಗಿ 98, ಸೇಡಂ 44 ಹಾಗೂ ಆಳಂದ 19 ಹೀಗೆ ಒಟ್ಟು ಜಿಲ್ಲೆಯ 671 ಅಲೆಮಾರಿ ಕುಟುಂಬಗಳು ನಿವೇಶನ ಹೊಂದಿದ್ದು, ಮನೆ ನಿರ್ಮಿಸಿಕೊಡಲು ಅರ್ಜಿ ಸಲ್ಲಿಸಿದ್ದಾರೆ. ಸಮಾಜ ಕಲ್ಯಾಣ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿ ಅರ್ಜಿಗಳನ್ನು ಕುಲಂಕುಶವಾಗಿ ಪರಿಶೀಲಿಸಿ ಮನೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಫಲಾನುಭವಿಗಳಿಗೆ ಯಾವುದೇ ಯೋಜನೆಯ ಪ್ರಯೋಜನ ದೊರಕಿಸುವಾಗ ಅಧಿಕಾರಿಗಳು ಖುದ್ದಾಗಿ ಬೇಟಿನೀಡಿ ಪರಿಶೀಲಿಸಿ ವರದಿ ನೀಡಬೇಕು. ಹಲವಾರು ಯೋಜನೆಗಳಲ್ಲಿ ಅಲೆಮಾರಿಗಳು ಬ್ಯಾಂಕುಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವರು. ಅವರಿಗೆ ನಿಗದಿಪಡಿಸಿರುವ ಸಹಾಯಧನ ಬ್ಯಾಂಕುಗಳಿಗೆ ಬಿಡುಗಡೆಯಾದ ತಕ್ಷಣ ಸಾಲ ಮಂಜೂರು ಮಾಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಇರುವ ಜಿಲ್ಲಾ ಮಟ್ಟದ ಸಮಿತಿಯಂತೆ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ ಸಮಿತಿಗಳನ್ನು ರಚಿಸುವಂತೆ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ರಾಜ್ಯ ನೋಡಲ್ ಅಧಿಕಾರಿ ಡಾ. ಬಾಲಗುರುಮೂರ್ತಿ ಮಾತನಾಡಿ, ಬುಡುಗ ಜಂಗಮ, ಸುಡುಗಾಡ ಸಿದ್ಧ, ಡೊಂಬರು, ಹಕ್ಕಿಪಿಕ್ಕಿ, ಮಾಂಗರವಾಡಿ, ಗಂಟಿಚೋರ, ಹರಿಣಿಶಿಕಾರಿ, ಹಂದಿಜೋಗಿ, ಶಿಳ್ಳೇಕ್ಯಾತರು, ಸಿಂದೋಳ, ಪೋತರಾಜ, ಡಕ್ಕಲಿಗರಂತಹ ಸಮುದಾಯದ ಜಾತಿಗಳ ಅಭಿವೃದ್ಧಿಗಾಗಿ ಕೋಶವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೋಶದಿಂದ ರಾಜ್ಯದಲ್ಲಿ 1250 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ ಈಗಾಗಲೇ 416 ಮನೆಗಳನ್ನು ನಿರ್ಮಿಸಲಾಗಿದೆ. ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಓದುವ ಮಕ್ಕಳಿಗೆ ಒಂದನೇ ತರಗತಿಯಿಂದ ಏಳನೇ ತರಗತಿ ವರೆಗೆ ವರ್ಷಕ್ಕೆ 500 ರೂ., 8 ರಿಂದ ದ್ವಿತಿಯ ಪಿಯುಸಿವರೆಗೆ 1000 ರೂ., ಪದವಿ ಓದುವವರಿಗೆ 2500 ರೂ. ಹಾಗೂ ಉನ್ನತ ಶಿಕ್ಷಣ ಓದುವವರಿಗೆ 4000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಸಂಬಂಧಿಸಿದ ಅಧಿಕಾರಿಗಳು ವಿದ್ಯಾರ್ಥಿಗಳ ಪಟ್ಟಿಯನ್ನು ಕೋಶಕ್ಕೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಸಮಾಜ ಕಲ್ಯಾಣ ಇಲಾಖೆಯ ಜಂಟೀ ನಿರ್ದೇಶಕ ಬಂದೇನವಾಜ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಭೀಮಾಶಂಕರ ಕಟ್ಟೀಮನಿ, ಸವಿತಾ ಎನ್. ಶಿರವಾಟಿ, ಮಂಗಲಮೂರ್ತಿ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಅಕ್ಟೋಬರ್ 27ರಂದು ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
****************************************************************
ಉದ್ಘಾಟನೆ
**********
ಕಲಬುರಗಿ,ಅ.26.(ಕ.ವಾ):ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದಿಂದ ಕಲಬುರಗಿಯ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಬಾಪು ಗೌಡ ದರ್ಶನಾಪುರ ರಂಗ ಮಂದಿರದ ಕನ್ನಡ ಭವನದಲ್ಲಿ ಅಕ್ಟೋಬರ್ 27ರಿಂದ ನವೆಂಬರ್ 2ರವರೆಗೆ ಏಳು ದಿನಗಳ ಕಾಲ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ (ಕೈಮಗ್ಗ ಜವಳಿ ಮತ್ತು ಆಭರಣ) ಮೇಳ ಏರ್ಪಡಿಸಲಾಗಿದೆ ಎಂದು ನಿಗಮದ ಮಾರುಕಟ್ಟೆ ವ್ಯವಸ್ಥಾಪಕ ಪ್ರಭು ತಿಳಿಸಿದ್ದಾರೆ.
ಅಕ್ಟೋಬರ್ 27ರಂದು ಸಂಜೆ 5 ಗಂಟೆಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ಸಿ.ರೇವೂರ್ ಈ ವಸ್ತು ಪ್ರದರ್ಶನವನ್ನು ಉದ್ಘಾಟಿಸುವರು. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯೆ ಗೀತಾ ರಾಜು ವಾಡೇಕರ್ ಗೌರವ ಅತಿಥಿಯಾಗಿ ಭಾಗವಹಿಸುವರು. ಈ ವಸ್ತು ಪ್ರದರ್ಶನದಲ್ಲಿ ಸುಮಾರು 50 ಕರಕುಶಲಕರ್ಮಿಗಳು ಪಾಲ್ಗೊಳ್ಳಲಿದ್ದಾರೆ. 50 ಉಚಿತವಾಗಿ ಮಳಿಗೆಗಳನ್ನು ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಕರಕುಶಲ ಪ್ರೇಮಿಗಳು ಮೇಳದಲ್ಲಿ ಪಾಲ್ಗೊಳ್ಳಬೇಕು. ಅಭಿವೃದ್ಧಿ ಆಯುಕ್ತರು, ಜವಳಿ ಮಂತ್ರಾಲಯ, ಭಾರತ ಸರ್ಕಾರ ನವದೆಹಲಿ ಇವರ ಸಹಾಯಧನದಲ್ಲಿ ಇದೇ ಮೊದಲಬಾರಿಗೆ ಈ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಅಭಿವೃದ್ಧಿ ಆಯುಕ್ತರ ಕಚೇರಿಯು ನೀಡಿರುವ ಗುರುತಿನ ಚೀಟಿಯನ್ನು ಹೊಂದಿರುವ ರಾಜ್ಯದ ಹಾಗೂ ಇತರೆ ರಾಜ್ಯಗಳ ಕುಶಲಕರ್ಮಿಗಳು ಈ ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಿರಿಯರನ್ನು ಗೌರವದಿಂದ ಕಾಣಲು ಸಲಹೆ
**************************************
ಕಲಬುರಗಿ,ಅ.26(ಕ.ವಾ): ಇಂದಿನ ಆಧುನಿಕ ಯುಗದಲ್ಲಿ ಹಿರಿಯರನ್ನು ಗೌರವಿಸುವ ಪ್ರವೃತ್ತಿ ಕಡಿಮೆ ಆಗುತ್ತಿದೆ. ಹಿರಿಯ ನಾಗರಿಕರು ತಮ್ಮ ಜೀವನವನ್ನು ತಾವೇ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿಕೊಳ್ಳುವ ಉದ್ದೇಶದಿಂದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ವಿಶೇಷವಾಗಿ ಯೋಜನೆಯನ್ನು ರೂಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್. ಆರ್. ಮಾಣಿಕ್ಯ ಹಿರಿಯ ನಾಗರಿಕರಿಗೆ ಸಲಹೆ ನೀಡಿದರು.
ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ ವತಿಯಿಂದ ನಗರದ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘’ಹಿರಿಯ ನಾಗರಿಕರಿಗೆ ನೀವು ಒಂಟಿ ಅಲ್ಲ” ಎಂಬ ವಿಷಯದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರಿಗೆ ಕಾನೂನಿನ ಸಮಸ್ಯೆಗಳ ಕುರಿತು ಶೀಘ್ರವಾಗಿ ಸ್ಪಂದಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ. ಸಂಧ್ಯಾ ಸುರಕ್ಷಾ ಯೋಜನೆ, ವೃದ್ದಾಪ್ಯ ವೇತನ, ಬಸ್ ಪಾಸ್ ವಿತರಣೆ, ಹಿರಿಯ ನಾಗರಿಕರ ಕ್ಷೇಮಾಬ್ಯುದ್ದಯಕ್ಕಾಗಿ ಸಂಸ್ಥೆಗಳನ್ನು ತೆರೆಯುವುದು ಹಾಗೂ ಕಾನೂನಿನ ಸಲಹೆ ಬೇಕಾದ್ದಲ್ಲಿ ಉಚಿತವಾಗಿ ವಕೀಲರ ಮುಖಾಂತರ ಸಲಹೆ ನೀಡಲಾಗುವುದು. ಹಿರಿಯ ನಾಗರಿಕರ ವ್ಯಾಜ್ಯಗಳನ್ನು ನಡೆಸಿ ಕೊಡಲು ವಕೀಲರನ್ನು ನೇಮಿಸಿಕೊಡುವಂತಹ ಎಲ್ಲಾ ನೆರವುವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾಡುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅಂಗವಿಕಲರ ಕಲ್ಯಾಣಾಧಿಕಾರಿ ಬನ್ಸಿ ಪವಾರ್ ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಮಾತನಾಡಿದರು. ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಜಲಜಾಕ್ಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ನವೆಂಬರ್ 16ಕ್ಕೆ ಮುಂದೂಡಿಕೆ
**********************************************************
ಕಲಬುರಗಿ,ಅ.26(ಕ.ವಾ):ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಕಲಬುರಗಿ ಜಿಲ್ಲಾ ಪಂಚಾಯಿತಿಯ ಒಂಭತ್ತನೇ ಸಾಮಾನ್ಯ ಸಭೆಯು ಅನಿವಾರ್ಯ ಕಾರಣದಿಂದ ನವೆಂಬರ್ 16ಕ್ಕೆ ಮುಂದೂಡಲಾಗಿದೆ.
ಈ ಮುಂದೂಡಿಕೆ ಸಭೆಯು ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಸ ಸಭಾಂಗಣದಲ್ಲಿ ಜರುಗಲಿದೆ. ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸಂಬಂಧಿಸಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗಬೇಕು.
ಸದರಿ ಸಭೆಯು ಈ ಮುಂಚೆ ಅಕ್ಟೋಬರ್ 28ರಂದು ನಿಗದಿಯಾಗಿತ್ತು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು News and photo Date: 26--10--2017
ಎಲ್ಲಾ ಲೇಖನಗಳು ಆಗಿದೆ News and photo Date: 26--10--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 26--10--2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-26-10-2017.html
0 Response to "News and photo Date: 26--10--2017"
ಕಾಮೆಂಟ್ ಪೋಸ್ಟ್ ಮಾಡಿ