ಶೀರ್ಷಿಕೆ : News and photo Date: 27-10-2017
ಲಿಂಕ್ : News and photo Date: 27-10-2017
News and photo Date: 27-10-2017
ವಿನೂತನ ಆವಿಷ್ಕಾರ ಮಾಡಿ, ಅವಕಾಶ ಸದುಪಯೋಗಪಡಿಸಿಕೊಳ್ಳಿ--ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ,ಅ.27, (ಕ.ವಾ): ರಾಜ್ಯದ 12 ಜಿಲ್ಲೆಯ ಯುವಕರು, ನವೋದ್ಯಮಿಗಳು ಸೇರಿದಂತೆ ಖಾಸಗಿ ಸಂಸ್ಥೆಗಳಿಗೆ ವಿನೂತನ ಆವಿಷ್ಕಾರ ತೋರ್ಪಡಿಸಲು ವೇದಿಕೆ ಕಲ್ಪಿಸಲಾಗುತ್ತಿದೆ. ವಿನೂತನ ಆವಿಷ್ಕಾರ ಮಾಡಿದವರು ಮೇಕರ್ ಫೇರ್ ಬೆಂಗಳೂರು ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಐಟಿ, ಬಿಟಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಅವರು ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಟೆಕ್ನಾಲಜಿ ಸಮ್ಮೇಳನದಲ್ಲಿ ಭಾಗವಹಿಸುವ ಮೇಕರ್ ಫೇರ್ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ಆರ್ಟ್ ಪ್ರೊಜೆಕ್ಟ್, ಅಗ್ರಿಕಲ್ಚರ್, ಗೇಮ್, ಕಿಟ್ ಮೇಕರ್ಸ್ ಸೇರಿದಂತೆ ಯಾವುದಾದರೂ ವಲಯದಲ್ಲಿ ಮಾಡಿದ ಆವಿಷ್ಕಾರಕ್ಕೆ ಸ್ವಾಗತವಿದೆ. ವಿಶ್ವದ ತಾಂತ್ರಿಕ ಸಂಶೋಧನೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನವಿದೆ. ಕಲಬುರಗಿ ಯುವ ಉತ್ಸಾಹಿ ವಿಜ್ಞಾನಿಗಳು ಹೊಸ ಹೊಸ ಆವಿಷ್ಕಾರ ಮಾಡುವುದರ ಮೂಲಕ ರಾಜ್ಯವನ್ನು ಒಂದನೇ ಸ್ಥಾನಕ್ಕೆ ತರಲು ಪ್ರಯತ್ನಿಸಬೇಕೆಂದರು.
ಆವಿಷ್ಕಾರದ ವಿಷಯದಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ. ಕ್ರಿಯಾತ್ಮಕ ಕೌಶಲ್ಯ ಹಾಗೂ ಪ್ರಯೋಗಾತ್ಮಕವಾಗಿಯೇ ಗುರುತಿಸಿಕೊಳ್ಳಬೇಕು. ಈ ಹಿಂದೆ 10 ವಿನೂತನ ಆವಿಷ್ಕಾರಗಳು ಕಲಬುರ್ಗಿ ಜಿಲ್ಲೆಯಿಂದಲೇ ಆಯ್ಕೆಯಾಗಿದ್ದು ಹೆಮ್ಮೆಯ ಸಂಗತಿ. ಕಳೆದ ಬಾರಿ ಮಿನಿ ಮೆಕರ್ ಫೇರ್‍ನಲ್ಲಿ ಆಯ್ಕೆಯಾದ ಆವಿಷ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ವಿತರಿಸಲಿದ್ದಾರೆ ಎಂದು ತಿಳಿಸಿದರು.
ಕಳೆದ 19 ವರ್ಷಗಳಿಂದ ಬೆಂಗಳೂರು ಐಟಿ.ಇನ್, ಬಯೋಟೆಕ್. ಕಮ್ ಸೇರಿದಂತೆ ಅನೇಕ ಹೆಸರಿನ ವೆಬ್‍ಸೈಟ್ ಸ್ಥಾಪನೆ ಮಾಡಿ ಕೇವಲ ಬೃಹತ್ ನಗರದ ಜನರಿಗೆ ಮಾತ್ರ ಆವಿಷ್ಕಾರ ಸಮ್ಮೇಳನಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೀಗ 20ನೇ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರದ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ನವೆಂಬರ್ 16ರಿಂದ 18ರವರೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಆವಿಷ್ಕಾರದ ವಾತಾವರಣ ಮೊದಲಿನಿಂದಲೂ ಸೃಷ್ಠಿಯಾಗಿದೆ. ಆದರೆ ಪ್ರಸ್ತುತ ಸಮಯಕ್ಕೆ ತಕ್ಕಂತೆ ಬದಲಾಗಬೇಕಿದೆ. ಸೇವೆಯಿಂದ ಅಭಿವೃದ್ಧಿಯತ್ತ ದಾಪುಗಾಲಿಡಬೇಕಾಗಿದೆ. ಅಂತರಂಗದ ವಿನೂತನ ವಿಚಾರದಿಂದ ಹೊಸ ಆವಿಷ್ಕಾರ ಮಾಡಿ ಸ್ವಯಂ ಉದ್ಯೋಗ ಸೃಷ್ಠಿ ಮಾಡಿಕೊಳ್ಳುವಷ್ಟು ಬುದ್ಧಿವಂತಿಕೆ ಬೆಳೆಸಿಕೊಳ್ಳಬೇಕಾಗಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ಪಠ್ಯಕ್ರಮದಲ್ಲಿ ಇನ್ನಷ್ಟು ಬದಲಾವಣೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ವರ್ಕ್ ಬೆಂಚ್ ಪ್ರ್ರೊಜೆಕ್ಟ್ ಫೌಂಡರ್ ಪವನ್ ಕುಮಾರ್ ಮಾತನಾಡಿ, ಮೇಕರ್ ಫೇರ್ ಬೆಂಗಳೂರು ಸಮ್ಮೇಳನದಲ್ಲಿ ತಂತ್ರಜ್ಞಾನ ಪ್ರವೀಣರು, ಇಂಜಿನಿಯರ್, ಶಿಕ್ಷಣ ತಜ್ಞರು ಹಾಗೂ ವಿವಿಧ ವಲಯಗಳ ಪರಿಣಿತರು ಪಾಲ್ಗೊಳ್ಳಲಿದ್ದಾರೆ. ನವೋದ್ಯಮ ಆವಿಷ್ಕಾರರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಹಾಗೂ ಅಂತರರಾಷ್ಟ್ರೀಯ ಪರಿಣಿತರಿಂದ ಕಲಿಯಲು ಅವಕಾಶವಿದೆ ಎಂದು ತಿಳಿಸಿದರು. ಸರ್ಕಾರಿ, ಅರೆಸರ್ಕಾರಿ ವಲಯಗಳು ಸಮ್ಮೇಳನದ ಸದುಪಯೋಗ ಪಡೆದುಕೊಳ್ಳಬಹುದು. ಪ್ರದರ್ಶನಗಳು, ಕಾರ್ಯಾಗಾರ, ಸಂವಾದ, ವಿಚಾರಸಂಕಿರಣ ಜನಸಾಮಾನ್ಯರಿಗೆ ಮುಕ್ತವಾಗಿ ದೊರೆಯಲಿದೆ. ಅಕ್ಟೊಬರ್ 30ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. beಟಿgಚಿಟuಡಿu.mಚಿಞeಡಿಜಿಚಿiಡಿe.ಛಿom ವೆಬ್ ಸೈಟ್ ನಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಬೆಂಗಳೂರಿನ ಐಬಾಲ್ ಹಬ್ ಸ್ಪೇಸ್‍ನ ಕಿಶೋರ ಜಹಾಗೀರದಾರ್ ಮತ್ತಿತರರು ಪಾಲ್ಗೊಂಡಿದ್ದರು.

ಅಕ್ಟೋಬರ್ 28ರಂದು ಮಹಿಳಾ ಉದ್ಯಮಶೀಲತಾ ಕಾರ್ಯಕ್ರಮ ಉದ್ಘಾಟನೆ
ಕಲಬುರಗಿ,ಅ.27,(ಕ.ವಾ): ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಲೇಡಿಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್) ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ‘’ಮಹಿಳಾ ಉದ್ಯಮಶೀಲತಾ ಕಾರ್ಯಕ್ರಮ’’ದ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಸುಪರ ಮಾರ್ಕೇಟ್‍ನಲ್ಲಿರುವ ಶ್ರೀನಿವಾಸರಾವ ರಾಮಚಂದ್ರಪ್ಪ ರಘೋಜಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವ್ಹಿ. ದೇಶಪಾಂಡೆ ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ಮತಕ್ಷೇತ್ರದ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಹಾಗೂ ಐಟಿ, ಬಿಟಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯ ಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಅಫಜಲಪೂರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ.ಗುತ್ತೇದಾರ, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ||ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರಾದ ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ್, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ, ಬಿ.ಜಿ. ಪಾಟೀಲ, ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಮಹ್ಮದ ಅಜಗರ್ ಚುಲ್‍ಬುಲ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ್, ಎನ್.ಈ.ಕೆ.ಆರ್.ಟಿ.ಸಿ. ಅಧ್ಯಕ್ಷ ಮಹ್ಮದ್ ಇಲಿಯಾಸ್ ಬಾಗವಾನ್, ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಡಾ. ಸೋಮಶೇಖರ ಜಿ.ಟೇಂಗಳಿ, ಕಲಬುರಗಿ ಲೇಡೀಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ ( ಕೆ-ಲ್ಯಾಂಪ್) ಅಧ್ಯಕ್ಷೆ ಜ್ಯೋತಿ ಕಾಡಾದಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಸರ್ಕಾರದ ಅಭಿವೃದ್ಧಿ ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಿ.ವ್ಹಿ.ಪ್ರಸಾದ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಕೈಗಾರಿಕಾಭಿವೃದ್ಧಿ ಆಯುಕ್ತರು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ದರ್ಪಣ್ ಜೈನ್, ಕೆ.ಐ.ಎ.ಡಿ.ಬಿ. ಮುಖ್ಯ ಕಾರ್ಯನಿರ್ವಾಹಕ ಸದಸ್ಯರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಯರಾಮ, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾರ್ಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ. ಮಹಾನಗರ ಪಾಲಿಕೆ ಆಯುಕ್ತ ಪಿ.ಸುನೀಲಕುಮಾರ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಈ ಉದ್ಯಮಶೀಲತಾ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಶಿಬಿರಾರ್ಥಿಗಳ ನೋಂದಣಿ ನಡೆಯಲಿದೆ. ಮಧ್ಯಾಹ್ನ 12.15 ರಿಂದ 1.45 ಗಂಟೆಯವರೆಗೆ ಹೈದ್ರಾಬಾದಿನ ಸಿ.ಎಫ್.ಟಿ.ಆರ್.ಐ.ನ ಸಿನಿಯರ್ ಪ್ರಿನ್ಸಿಪಾಲ ಸೈಂಟಿಸ್ಟ್ ರುದ್ರಯ್ಯಾ ಮಠ ಅವರು ಆಹಾರ ಉತ್ಪನ್ನಗಳ ಉದ್ಯಮಗಳ ಅವಕಾಶಗಳು ಹಾಗೂ ಉದ್ಯಮಗಳಿಗೆ ಸಿ.ಆರ್.ಟಿ.ಆರ್.ಐ. ತಾಂತ್ರಿಕ ಸೇವಾ ಸೌಲಭ್ಯಗಳು ಕುರಿತು ಮಾಹಿತಿ ನೀಡುವರು. ಮಧ್ಯಾಹ್ನ 2.30 ರಿಂದ 3.30 ಗಂಟೆಯವರೆಗೆ ಬೆಂಗಳೂರಿನ ಕೆ.ಸಿ.ಟಿ..ಯು. ವ್ಯವಸ್ಥಾಪಕ ನಿರ್ದೇಶಕ ಅನೀಲ ಉಪ್ಪಿನ್ ಅವರು ಕ್ಲಸ್ಟರ್ ಅಭಿವೃದ್ಧಿ ಕುರಿತು ಮಾಹಿತಿ ನೀಡುವರು. ಮಧ್ಯಾಹ್ನ 3.30 ರಿಂದ ಸಂಜೆ 4.30 ಗಂಟೆಯವರೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ 2014-19 ಕೈಗಾರಿಕಾ ನೀತಿ ಕುರಿತು ಮಾಹಿತಿ ಹಾಗೂ ಮಹಿಳಾ ಉದ್ಯಮಿಗಳ ಜೊತೆ ಸಂವಾದ ಕಾರ್ಯಕ್ರಮ ಜರುಗಲಿದೆ. ಸಂಜೆ 4.30 ರಿಂದ 5.30 ಗಂಟೆಯವರೆಗೆ ಚರ್ಚೆ, ಹಿಮ್ಮಾಹಿತಿ (ಫೀಡ್‍ಬ್ಯಾಕ್) ಹಾಗೂ ಸಮಾರೋಪ ಸಮಾರಂಭ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ತಿಳಿಸಿದ್ದಾರೆ.

ಸೇಡಂ: ಸಾಕು ನಾಯಿ ಮಾಲೀಕರ ಗಮನಕ್ಕೆ
ಕಲಬುರಗಿ,ಅ.27.(ಕ.ವಾ.)-ಸೇಡಂ ಪುರಸಭೆಯಿಂದ ಬೀದಿ ಹಾಗೂ ಕ್ರೂರ ನಾಯಿಗಳನ್ನು ಹಿಡಿಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸೇಡಂ ಪಟ್ಟಣದ ಸಾರ್ವಜನಿಕರು ಹಾಗೂ ಖಾಸಗಿ/ಸಾಕು ನಾಯಿಗಳ ಮಾಲೀಕರು ತಮ್ಮ ನಾಯಿಗಳಿಗೆ ಕೊರಳಲ್ಲಿ ಪಟ್ಟಿಯನ್ನು (ಬೆಲ್ಟ್) ಹಾಕಿ ತಮ್ಮ ಮನೆಯಲ್ಲಿ ಕಟ್ಟಬೇಕೆಂದು ಸೇಡಂ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಲಬುರಗಿ,ಅ.27.(ಕ.ವಾ.)-ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆಯಲ್ಲಿರುವ ಸೈನಿಕ ಶಾಲೆಗೆ 2018-19ನೇ ಸಾಲಿನ 6ನೇ ಮತ್ತು 9ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಲಿಖಿತ ಪರೀಕ್ಷೆ, ಮೌಖಿಕ ಸಂದರ್ಶನ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ಈ ಶಾಲೆಗೆ ಪ್ರವೇಶ ಕಲ್ಪಿಸಲಾಗುತ್ತದೆ. 6ನೇ ತರಗತಿ ಪ್ರವೇಶಕ್ಕಾಗಿ ವಯೋಮಿತಿ 2ನೇ ಜುಲೈ 2007 ರಿಂದ 1ನೇ ಜುಲೈ 2008ರ ರೊಳಗೆ (ಎರಡು ದಿನಗಳು ಸೇರಿ) ಜನಿಸಿರಬೇಕು. 9ನೇ ತರಗತಿಗಾಗಿ ವಯೋಮಿತಿ 2ನೇ ಜುಲೈ 2004 ರಿಂದ 1ನೇ ಜುಲೈ 2005 ರೊಳಗೆ (ಎರಡು ದಿನಗಳು ಸೇರಿ) ವಿದ್ಯಾರ್ಥಿಗಳು ಜನಿಸಿರಬೇಕು. 6 ಮತ್ತು 9ನೇ ತರಗತಿಯ ಪ್ರವೇಶ ಪರೀಕ್ಷೆಯು 2017ರ ಜನವರಿ 7ರಂದು ಸೈನಿಕ ಶಾಲೆ ಕೊಡಗಿನಲ್ಲಿ ಮತ್ತು 6ನೇ ತರಗತಿ ಪ್ರವೇಶ ಪರೀಕ್ಷೆಯು ಅದೇ ದಿನದಂದು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.
ಸೈನಿಕ ಶಾಲೆಯ ತಿತಿತಿ.sಚಿiಟಿiಞsಛಿhooಟಞoಜಚಿgu.eಜu.iಟಿ ವೆಬ್‍ಸೈಟಿನಲ್ಲಿ ಲಭ್ಯವಿರುವ ಆನ್‍ಲೈನ್ ಅರ್ಜಿಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಪಿಡಿಎಫ್ ಫೈಲ್ ಪ್ರಿಂಟ್ ತೆಗೆದು ಅಗತ್ಯ ದಾಖಲೆ ಹಾಗೂ ಅರ್ಜಿ ಶುಲ್ಕದ ಡಿ.ಡಿ.ಯೊಂದಿಗೆ ಸಲ್ಲಿಸಬೇಕು. ಮಾಹಿತಿ ಪುಸ್ತಕ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳನ್ನು ಡೌನ್‍ಲೋಡ್ ಮಾಡಲು ಶಾಲೆಯ ಮೇಲ್ಕಂಡ ವೆಬ್‍ಸೈಟ್‍ನ್ನು ನವೆಂಬರ್ 30ರೊಳಗಾಗಿ ಸಂಪರ್ಕಿಸಬಹುದಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗ ಮತ್ತು ರಕ್ಷಣಾ ಇಲಾಖೆಯವರಿಗೆ 500 ರೂ. ಹಾಗೂ ಎಸ್.ಸಿ., ಎಸ್.ಟಿ. ವರ್ಗದವರು 350 ರೂ. ಶುಲ್ಕವನ್ನು ಪಾವತಿಸಿ ಪ್ರಾಂಶುಪಾಲರು, ಸೈನಿಕ ಶಾಲೆ ಕೊಡುಗು, ಕುಶಾಲನಗರ ಇವರಿಗೆ ಸಂದಾಯವಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ತೆಗೆದು ಕಳುಹಿಸಬೇಕು. ಪ್ರತಿ ಅರ್ಜಿಗೂ ಪ್ರತ್ಯೇಕ ಡಿ.ಡಿ.ಯನ್ನು ಪಡೆದು ಲಗತ್ತಿಸಬೇಕು.
ಭರ್ತಿ ಮಾಡಿದ ಅರ್ಜಿ ಸಲ್ಲಿಸಲು 2017ರ ಡಿಸೆಂಬರ್ 5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಮತ್ತಿತರ ವಿವರಗಳಿಗಾಗಿ ಕೂಡಿಗೆ ಸೈನಿಕ ಶಾಲೆಯ ಪ್ರಾಚಾರ್ಯರ ಕಚೇರಿ, ಮೇಲ್ಕಂಡ ವೆಬ್‍ಸೈಟ್ ಮತ್ತು ದೂರವಾಣಿ ಸಂಖ್ಯೆ 08276-278963ನ್ನು ಸಂಪರ್ಕಿಸಬೇಕೆಂದು ಕೊಡಗು ಸೈನಿಕ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಅಕ್ಟೋಬರ್ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಅ.27.(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗ-1ರಿಂದ ಕಲಬುರಗಿ ಶಹಾಬಾದ ರಸ್ತೆ ರಾಷ್ಟ್ರೀಯ ಹೆದ್ದಾರಿಯ ಹಿಂದುಸ್ತಾನ ಪೆಟ್ರೋಲಿಯಂ ನಿಗಮ ನಿಯಮಿತದ 11ಕೆ.ವಿ. ಕೇಬಲ್ ಕಾರ್ಯ ಕೈಗೊಳ್ಳುವ ಪ್ರಯುಕ್ತ ಅಕ್ಟೋಬರ್ 28ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.
ವಿದ್ಯುತ್ ವ್ಯತ್ಯಯವಾಗುವ ಗ್ರಾಮಗಳ ವಿವರ ಇಂತಿದೆ. 110/11 ಕೆ.ವಿ. ಯುನಿವರ್ಸಿಟಿ ವಿದ್ಯುತ್ ವಿತರಣಾ ಕೇಂದ್ರÀ: ಎಫ್-10 ನಂದೂರ ಕೆಐಡಿಬಿ-1 ಆಂಡ್ 2, ಎಫ್-12 ಕೆಸರಟಗಿ ಇಂಡಸ್ಟ್ರೀಯಲ್, ಕೆಐಡಿಬಿ ನಂದೂರ ಫೀಡರಿನ ನಂದೂರ, ಕೆಸರಟಗಿ, ಇಂಡಸ್ಟ್ರೀಯಲ್ ಏರಿಯಾ, ನಂದೂರ, ನಂದೂರ(ಕೆ), ಧರ್ಮಪೂರ ಗ್ರಾಮಗಳು.

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಪ್ರೋತ್ಸಾಹಿಸಲು ಕರೆ
***************************************************************
ಕಲಬುರಗಿ,ಅ.27.(ಕ.ವಾ)-ಕಲಬುರಗಿಯಲ್ಲಿ ಪ್ರಪ್ರಥಮ ಬಾರಿಗೆ ಕರಕುಶಲ ವಸ್ತು ಪ್ರದರ್ಶನ ನಡೆಯುತ್ತಿದ್ದು ಸರ್ಕಾರ ಜಾಹೀರಾತು, ಕರಪತ್ರಗಳ ಮೂಲಕ ಕರಕುಶಲ ವಸ್ತುಗಳಿಗೆ ಉತ್ತಮ ಪ್ರಚಾರ ನೀಡಲು ಸಹಕರಿಸುವುದರ ಜೊತೆಗೆ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಪ್ರೋತ್ಸಾಹ ನೀಡಬೇಕೆಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ಸಿ.ರೇವೂರ್ ಹೇಳಿದರು.
ಅವರು ಶುಕ್ರವಾರ ಕಲಬುರಗಿಯ ಬಾಪುಗೌಡ ದರ್ಶನಾಪುರ ರಂಗಮಂದಿರದ ಕನ್ನಡ ಭವನದಲ್ಲಿ ಆಯೋಜಿಸಿದ ಏಳು ದಿನಗಳ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘ್ಘಾಟಿಸಿ ಮಾತನಾಡಿದರು.
ಇಡೀ ದೇಶದಾದ್ಯಂತ ಕೈಮಗ್ಗಗಳಿಂದ ತಯಾರಿಸಿದ ವಸ್ತುಗಳನ್ನು ಈ ಪ್ರದರ್ಶನದಲ್ಲಿ ಗುರುತಿಸಲಾಗುತ್ತಿದೆ. ಮಧÀ್ಯಪ್ರದೇಶ, ಇಂದೋರ, ಕರ್ನಾಟಕದ ಬೀದರ್, ಕೊಪ್ಪಳ, ಹೈದ್ರಾಬಾದ ಸೇರಿದಂತೆ ವಿವಿಧ ಸ್ಥಳಗಳಿಂದ ಜನರು ಕಷ್ಟಪಟ್ಟು ತಮ್ಮ ಸ್ವಂತ ಕಲೆಯಿಂದ ತಯಾರಿಸಿದ ವಸ್ತುಗಳನ್ನು ಈ ಪ್ರದರ್ಶನದಲ್ಲಿ ಇಡಲಾಗಿದೆ. ಕಲಬುರಗಿ ನಗರದ ಸಾರ್ವಜನಿಕರು ಈ ವಸ್ತು ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಲಬುರಗಿ ಮಹಾನಗರ ಪಾಲಿಕೆ ಸದಸ್ಯೆ ಗೀತಾ ರಾಜು ವಾಡೇಕರ್ ಮಾತನಾಡಿ, ಕರಕುಶಲತೆಯು ಪ್ರಾಚೀನ ಕಲೆಯಾಗಿದ್ದು, ಈ ಕಲೆ ಮರೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ವಸ್ತು ಪ್ರದರ್ಶನದಿಂದ ಪ್ರಾಚೀನ ಕರಕುಶಲ ವಸ್ತ್ತುಗಳಿಗೆ ಮರುಜೀವತುಂಬಿದಂತಾಗುತ್ತದೆ. ಕರಕುಶಲಕರ್ಮಿಗಳಿಂದ ತಯಾರಿಸಿದ ವಸ್ತ್ತುಗಳು ಬಹುದಿನ ಬಾಳಿಕೆ ಬರಲಿದ್ದು, ಇಂತಹ ಕಲೆಗಳ ಬಗ್ಗೆ ಈ ಭಾಗದ ಜನತೆಯಲ್ಲಿ ಅರಿವು ಮೂಡಿಸಿ ಆ ಕಲೆಗಳ ಮಾಹಿತಿಯನ್ನು ನೀಡಬೇಕು ಎಂದರು.
ಕರಕುಶಲ ಹಿರಿಯ ವ್ಯವಸ್ಥಾಪಕ ನಾಗೇಂದ್ರಪ್ಪ, ವಸ್ತು ಪ್ರದರ್ಶನ ನೋಡಲ್ ಅಧಿಕಾರಿ ಪ್ರಭು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಮತ್ತಿತರರು ಉಪಸ್ಥಿತರಿದ್ದರು.

ನವೆಂಬರ್ 7ರಂದು ರೆಕಾರ್ಡ್ ಕೀಪರ್ ಕಮ್ ಕ್ಲರ್ಕ ಹುದ್ದೆ ನೇಮಕಾತಿಗೆ ಸಂದರ್ಶನ
***********************************************************************
ಕಲಬುರಗಿ,ಅ.27.(ಕ.ವಾ): ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ರೆಕಾರ್ಡ್ ಕೀಪರ್ ಕಮ್ ಕ್ಲರ್ಕ್-01 ಹುದ್ದೆಯ ನೇಮಕಾತಿಗೆ ನವೆಂಬರ್ 7ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳ ಕಾರ್ಯಾಲಯದ ಕುಷ್ಠರೋಗ ನಿರ್ಮೂಲನಾ ವಿಭಾಗದಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಬಿಕಾಂ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಕಂಪ್ಯೂಟರ್ ವಿದ್ಯಾರ್ಹತೆ ಜೊತೆಗೆ ಆರೋಗ್ಯ ಕೇಂದ್ರದಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು. ಮಾಸಿಕ 7145 ರೂ.ಗಳ ವೇತನ ನೀಡಲಾಗುವುದು. ಸ್ವಯಂ ವಿವರದ ಬಯೋಡಾಟಾ, ಪತ್ರಾಂಕಿತ ಅಧಿಕಾರಿಗಳ ಧೃಢೀಕರಿಸಿದ ಶೈಕ್ಷಣಿಕ ವಿದ್ಯಾರ್ಹತೆಗಳ ಮೂಲ ಪ್ರತಿ, ಅನುಭವ ಮತ್ತು ಒಂದು ಸೆಟ್ ಝೆರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡ್ಡಾಯ ಶಿಕ್ಷಣ ನೀಡುವುದು ಪೋಷಕರ ಕರ್ತವ್ಯ
******************************************
--ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ
***********************************************
ಕಲಬುರಗಿ.ಅ.27.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಒಂದು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಎಲ್ಲ ವ್ಯಕ್ತಿಗಳಿಗೆ ಉಚಿತವಾಗಿ ಕಾನೂನು ನೆರವನ್ನು ನೀಡಲಾಗುತ್ತಿದೆ. ಇದಲ್ಲದೇ ವಿಶೇಷವಾಗಿ ಮಹಿಳೆಯರಿಗೂ ಸಹ ಆದಾಯ ಮಿತಿ ಇಲ್ಲದೇ ಉಚಿತವಾಗಿ ಕಾನೂನು ನೆರವು ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ ತಿಳಿಸಿದರು.
ಅವರು ಇತ್ತೀಚೆಗೆ ಕಲಬುರಗಿ ರಾಮನಗರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಹರಾ ಸೇವಾ ಸಂಸ್ಥೆ ಹಾಗೂ ರಹೆನುಮಾ ಕಾನೂನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಜನತಾ ನ್ಯಾಯಾಲಯ, ಉಚಿತ ಕಾನೂನು ನೆರವು, ಸರ್ಕಾರದ ವಿಶೇಷ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಡತನವನ್ನೇ ಮುಂದಿಟ್ಟುಕೊಂಡು ಮಕ್ಕಳಿಗೆ ವಿದ್ಯಾಭ್ಯಾಸ ನಿಲ್ಲಿಸದೆ, ಕಡ್ಡಾಯ ಶಿಕ್ಷಣ ಕೊಡಿಸುವುದು ಪ್ರತಿ ಪಾಲಕರ ಕರ್ತವ್ಯವಾಗಿದೆ ಎಂದರು.
ಮೂಲಭೂತ ಕರ್ತವ್ಯ ಅನ್ವಯ 6ರಿಂದ 14 ವರ್ಷದ ಒಳಗಿನ ಮಕ್ಕಳಿಗೆ ಪೋಷಕರಿಂದ ಕಡ್ಡಾಯ ಶಿಕ್ಷಣ ದೊರೆಯಬೇಕು. ಆದ್ದರಿಂದ ಹತ್ತಿರವಿರುವ ಸರ್ಕಾರಿ ಶಾಲೆಗೆ ಮಕ್ಕಳಿಗೆ ಕಳುಹಿಸಿ ಬುದ್ಧಿವಂತರನ್ನಾಗಿ ಮಾಡಬೇಕು. ಶಿಕ್ಷಣ ಇಲಾಖೆಯಿಂದ ದೊರೆಯಬಹುದಾದ ಸಹಾಯವನ್ನು ಪಡೆಯಲು ಕಾನೂನು ಸೇವೆಗಳ ಪ್ರಾಧಿಕಾರವು ಎಲ್ಲ ಪ್ರಯತ್ನ ಮಾಡುತ್ತದೆ. ಅದೇ ರೀತಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿಯೂ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ ಮಾತನಾಡಿ, ಸರ್ಕಾರದಿಂದ ಪ್ರಾಥಮಿಕ ಆರೋಗ್ಯ ತೆರೆದಿದ್ದು, ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ವಿಶೇಷವಾಗಿ ಮಕ್ಕಳಿಗೆ ಸಿಡುಬು, ನಾಯಿ, ಕೆಮ್ಮು, ಅತೀ ಸಾರ, ಅಪೌಷ್ಠಿಕತೆಗೆ ಸಂಬಂಧಿಸಿದ ಔಷಧಿ ಹಾಗೂ ಚುಚ್ಚುಮದ್ದುಗಳನ್ನು ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿಯೂ ನೀಡಲಾಗುತ್ತದೆ ಎಂದು ತಿಳಿಸಿದರು. ಸಹರಾ ಸೇವಾ ಸಂಸ್ಥೆ ನಿರ್ದೇಶಕ ಮಸ್ತಾದ್ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಕ್ಟೋಬರ್ 30 ರಿಂದ ವಿಜಿಲೆನ್ಸ್ ಜಾಗೃತಿ ಸಪ್ತಾಹ********************************************
ಕಲಬುರಗಿ,ಅ.27.(ಕ.ವಾ.)- ವಿಜಿಲೆನ್ಸ್ ಜಾಗೃತಿ ಸಪ್ತಾಹದ ಅಂಗವಾಗಿ ಆದಾಯ ತೆರಿಗೆ ಇಲಾಖೆಯು ಕಲಬುರಗಿ ವಿಭಾಗದ ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ಬೀದರ, ಕೊಪ್ಪಳ ಮತ್ತು ಹೊಸಪೇಟೆ ಕಚೇರಿಗಳಲ್ಲಿ ಅಕ್ಟೋಬರ್ 30 ರಿಂದ ನವೆಂಬರ್ 4ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತ ಟಿ.ವೆಂಕಟರೆಡ್ಡಿ ತಿಳಿಸಿದ್ದಾರೆ.
ಅಧಿಕಾರಿ-ಸಿಬ್ಬಂದಿಗಳು, ಮಧ್ಯಸ್ಥಗಾರರ, ತೆರಿಗೆ ಪಾವತಿದಾರರಿಗೆ ಪ್ರಮಾಣ ವಚನ ಭೋಧಿಸಲಾಗುವುದು. ಇದಲ್ಲದೇ ಸಾರ್ವಜನಿಕ ಕುಂದುಕೊರತೆ ಸಹ ಆಲಿಸಲಾಗುವುದು. ಭ್ರಷ್ಟಾಚಾರ ಮುಕ್ತ ಭಾರತದ ಗುರಿಯೊಂದಿಗೆ ಶಾಲಾ-ಕಾಲೇಜುಗಳಲ್ಲಿ ವಿಚಾರ ಸಂಕಿರಣ, ಕಾರ್ಯಾಗಾರ ಸಹ ಏರ್ಪಡಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹೀಗಾಗಿ ಲೇಖನಗಳು News and photo Date: 27-10-2017
ಎಲ್ಲಾ ಲೇಖನಗಳು ಆಗಿದೆ News and photo Date: 27-10-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 27-10-2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-27-10-2017.html
0 Response to "News and photo Date: 27-10-2017"
ಕಾಮೆಂಟ್ ಪೋಸ್ಟ್ ಮಾಡಿ