news and photo Date: 28-10--2017

news and photo Date: 28-10--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು news and photo Date: 28-10--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : news and photo Date: 28-10--2017
ಲಿಂಕ್ : news and photo Date: 28-10--2017

ಓದಿ


news and photo Date: 28-10--2017

ಸರೋಜನಿ ಮಹಿಷಿ ವರದಿ: ಸ್ಥಳೀಯರಿಗೆ ಉದ್ಯೋಗ ನೀಡಿ
******************************************************
-ಆರ್.ವಿ.ದೇಶಪಾಂಡೆ
********************
ಕಲಬುರಗಿ,ಅ.28,(ಕ.ವಾ):-ಸರೋಜಿನಿ ಮಹಿಷಿ ವರದಿಯು ಕಂಪನಿಗಳಿಗೆ ಭಗವದ್ಗೀತೆ ಇದ್ದಂತೆ. ಕಂಪನಿ ಮಾಲೀಕರು ಕಡ್ಡಾಯವಾಗಿ ಈ ವರದಿಯನ್ನು ಜಾರಿಗೊಳಿಸಿ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಿಮೆಂಟ್ ಕಾರ್ಖಾನೆ, ದಾಲ್ ಮಿಲ್ ಮಾಲೀಕರು ಮತ್ತು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಉದ್ಯಮ ಸ್ಥಾಪನೆಗೆ ಭೂಮಿ ನೀಡುವ ಕುಟುಂಬದ ಸದಸ್ಯರಿಗೂ ನಿಯಮದನ್ವಯ ಉದ್ಯೋಗ ನೀಡಬೇಕು. ಈ ಸಂಬಂಧ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರು ಪರಿಶೀಲಿಸಬೇಕು ಎಂದರು.
ದಾಲ್ ಮಿಲ್ ಮತ್ತು ಸಿಮೆಂಟ್ ಮಾಲೀಕರ ಹಲವು ಸಮಸ್ಯೆಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಸಾಲದ ಭಾದೆ ಮತ್ತು ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಬೆಲೆ ಏರಿಳಿತ ಪರಿಣಾಮ ದಾಲ್ ಮಿಲ್ ಮಾಲೀಕರು ತುಂಬಾ ಸಂಕಷ್ಟದಲ್ಲಿದ್ದಾರೆ. ಇದರ ನಿವಾರಣೆಗೆ ಈಗಾಗಲೆ ರಾಜ್ಯ ಸರ್ಕಾರ ತೊಗರಿ ಬೇಳೆಯನ್ನು ಖರೀದಿಸಿ ಪಡಿತರ ವ್ಯವಸ್ಥೆಯಲ್ಲಿ ವಿತರಿಸಲಾಗುತ್ತಿದೆ. ನ್ಯಾಫೆಡ್ ಟೆಂಡರ್ ವ್ಯವಸ್ಥೆಯಲ್ಲಿ ದಾಲ್ ಮಾಲೀಕರಲ್ಲದೆ ಮಧ್ಯವರ್ತಿಗಳು ಹಾಗೂ ಹೊರಗಿನವರು ಬಿಡ್ ನಲ್ಲಿ ಪಾಲ್ಗೊಳ್ಳುತ್ತಿದ್ದು, ಇದರಿಂದ ದಾಲ್ ಮಾಲೀಕರಿಗೆ ತೊಂದರೆಯಾಗುತ್ತಿದೆ. ದಾಲ್ ಮಿಲ್ ಮಾಲೀಕರ ಹಿತಾಸಕ್ತಿ ಕಾಪಾಡಲು ಬಿಡ್ಡಿನಲ್ಲಿ ರಾಜ್ಯದವರೆ ಹಾಗೂ ದಾಲ್ ಮಾಲೀಕರೆ ಭಾಗವಹಿಸುವ ಕುರಿತು ಜಿಲ್ಲಾಧಿಕಾರಿಗಳು ಜಿಲ್ಲೆಯ ದಾಲ್ ಮಿಲ್ ಅಸೋಸಿಯೇಷನ್‍ದೊಂದಿಗೆ ಚರ್ಚಿಸಿ ಸೂಕ್ತವಾದ ಪ್ರಸ್ತಾವನೆಯನ್ನು 7 ದಿನದೊಳಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು. ತದನಂತರ ಆಹಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು.
ಜಾಗತೀಕರಣ, ರೊಬೋಟ್ ಮಾನವ ಸೃಷ್ಟಿ ಪರಿಣಾಮದಿಂದ ದೇಶದಲ್ಲಿ ಉದ್ಯೋಗ ಸೃಷ್ಠಿ ದೊಡ್ಡ ಸವಾಲಾಗಿದೆ. ಉದ್ಯೋಗಕ್ಕಾಗಿ ಕೌಶಲ್ಯ ಅತ್ಯಗತ್ಯವಾಗಿದ್ದು, ಇದನ್ನು ಮನಗಂಡು ರಾಜ್ಯ ಸರ್ಕಾರ ಕೌಶಲ್ಯ ಸಚಿವಾಲಯ ಸ್ಥಾಪಿಸಿದೆ. 2014-19ರ ಕೈಗಾರಿಕೆ ನೀತಿಯನ್ವಯ ಮಾರ್ಚ್-2019ರ ವರೆಗೆ 12 ಲಕ್ಷ ಜನರಿಗೆ ಉದ್ಯೋಗ ಕೌಶಲ್ಯ ನೀಡುವ ಗುರಿ ಹೊಂದಿದ್ದು, ಕಳೆದ ವರ್ಷ 5 ಲಕ್ಷ ಜನರಿಗೆ ಉದ್ಯೋಗ ಕೌಶಲ್ಯ ನೀಡಲಾಗಿದೆ. ಇದಲ್ಲದೆ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ 17 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತಿದ್ದು, ನಿರುದ್ಯೋಗಿಗಳು ಇದರ ಲಾಭ ಪಡೆಯಬೇಕು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಇಲಾಖೆಗಳಲ್ಲಿ ಸ್ಟಾರ್ಟ್ ಅಪ್ ಯೋಜನೆಯಡಿಯೂ ಸಹ ಉದ್ಯೋಗ ಸೃಷ್ಠಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರ ಮೂರುವರೇ ವರ್ಷಗಳಲ್ಲಿ ಅತೀ ಸಣ್ಣ, ಸಣ್ಣ, ಮಧ್ಯಮ ಹಾಗೂ ಭಾರಿ ಕೈಗಾರಿಕೆಯಲ್ಲಿ ಸುಮಾರು 14 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗಿದೆ ಎಂದರು.
ಕಲಬುರಗಿ ವಿಮಾನ ನಿಲ್ದಾಣ ಉಳಿದ ಕಾಮಗಾರಿ ಪೂರ್ಣಗೊಳಿಸಲು ಬೇಕಾಗುವ ಅನುದಾನಕ್ಕೆ ಪ್ರಸ್ತಾವನೆ ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಪ್ರಸ್ತಾವನೆ ಬಂದ ಕೂಡಲೇ ಅನುದಾನ ಬಿಡುಗಡೆಗೊಳಿಸಲಾಗುವುದು. ಫೆಬ್ರವರಿ-2018ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಪ್ರಸ್ತುತ ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಪ್ರಾದೇಶಿಕ ವಿಮಾನಯಾನ ಸೇವೆಗೆ ಮೈಸೂರು ಮತ್ತು ತೋರಣಗಲ್ಲಿನ ವಿದ್ಯಾನಗರ ವಿಮಾನ ನಿಲ್ದಾಣಗಳು ಒಪ್ಪಂದವಾಗಿದೆ. ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ನಂತರ ಮುಂದೆ ಕೇಂದ್ರ ಸರ್ಕಾರ ಉಡಾನ್ ಸೇವೆಗೆ ಬಿಡ್ ಆಹ್ವಾನಿಸಿದ ಸಂದರ್ಭದಲ್ಲಿ ಭಾಗವಹಿಸಬಹುದಾಗಿದೆ ಎಂದರು.
ಕೃಷಿ ಪ್ರಧಾನ ಕೈಗಾರಿಕೆಗಳು ಬೆಳೆಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆಹಾರ ಸಂಸ್ಕರಣ ಉದ್ದಿಮೆಗಳಲ್ಲಿ ಹೂಡಿಕೆ ಮಾಡಲು ಉತ್ತೇಜನ ನೀಡುವ ಸಂಬಂಧ ಆಹಾರ ಸಂಸ್ಕರಣ ಘಟಕ ಮತ್ತು ಆಹಾರ ಆಧಾರಿತ ಉದ್ಯಮಗಳ ಉದ್ದಿಮೆದಾರರು ಮತ್ತು ಕೃಷಿ ಸಚಿವರೊಂದಿಗೆ ಶೀಘ್ರವೆÀ ಸಭೆ ನಡೆಸಿ ಚರ್ಚಿಸಲಾಗುವುದು. ಕೃಷಿ ಭಾಗ್ಯ, ಕ್ಷೀರ ಭಾಗ್ಯ, ರೈತ ಸಾರಥಿದಂತಹ ಅನೇಕ ರೈತಪರ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರ ಶೇ.3ರ ಬಡ್ಡಿದರದಲ್ಲಿ ಕೃಷಿಕರಿಗೆ ಸಾಲ ನೀಡಲಾಗುತ್ತಿದೆ. 8168 ಕೋಟಿ. ರೂ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ ತೊಗರಿ ಬೇಳೆಯಲ್ಲಿ ಪ್ರೋಟೀನ್ ಹೆಚ್ಚಿರುವುದರಿಂದ ಹಾಗೂ ತೊಗರಿ ಉತ್ಪನ್ನ ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪಡಿತರ ವ್ಯವಸ್ಥೆಯಲ್ಲಿ ತೊಗರಿ ಬೇಳೆ ವಿತರಿಸುತ್ತಿದ್ದು, ಪ್ರತಿ ವರ್ಷ 11 ಲಕ್ಷ ಕ್ವಿಂಟಾಲ್ ಬೇಡಿಕೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಚಿಂಚೋಳಿ ಶಾಸಕರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ.ಉಮೇಶ ಜಾಧವ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ ಶರಣಕುಮಾರ ಮೋದಿ, ಶಾಸಕ ಬಿ.ಆರ್.ಪಾಟೀಲ, ಡಾ. ಅಜಯ ಸಿಂಗ್, ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಿ.ವಿ.ಪ್ರಸಾದ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ ಡವೆ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಇದ್ದರು.
ಕೇಂದ್ರ ಕುಡಿಯುವ ನೀರು-ನೈರ್ಮಲ್ಯ ಸಚಿವರ ಪ್ರವಾಸ
ಕಲಬುರಗಿ,ಅ.28.(ಕ.ವಾ.)-ಕೇಂದ್ರದ ಕುಡಿಯವ ನೀರು ಹಾಗೂ ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಸಿ. ಜಿಗಜಿಣಗಿ ಅವರು ಅಕ್ಟೋಬರ್ 29ರಂದು ಬೀದರನಲ್ಲಿ ಪ್ರಧಾನಮಂತ್ರಿಗಳೊಂದಿಗೆ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀದರದಿಂದ ರಸ್ತೆ ಮೂಲಕ ರಾತ್ರಿ 9 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಅಕ್ಟೋಬರ್ 30ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.
ಈಶಾನ್ಯ ಪದವೀಧರÀ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ವೇಳಾಪಟ್ಟಿ ಪ್ರಕಟ
ಕಲಬುರಗಿ,ಅ.28.(ಕ.ವಾ.)-ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಯನ್ನಾಗಿ ಹಾಗೂ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಮತ್ತು ಜಿಲ್ಲಾಧಿಕಾರಿಗಳು, ದಾವಣಗೆರೆ, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಮತ್ತು ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ಸಹಾಯಕ ಆಯುಕ್ತರು ಹರಪನಳ್ಳಿ, ಮತ್ತು ತಹಸೀಲ್ದಾರರು ಹರಪನಳ್ಳಿ, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ. ಅರ್ಹತಾ ದಿನಾಂಕ:01-11-2017ಕ್ಕೆ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ದಿನಾಂಕ: 05-09-2016ರ ಪತ್ರದನ್ವಯ ಪದವಿಧರರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ. ಈಶಾನ್ಯ ಪದವಿಧರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಈ ಕೆಳಗಿನಂತೆ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ನಮೂನೆ 18ರಲ್ಲಿ ಅರ್ಜಿಯನ್ನು ಸ್ವೀಕರಿಸಲು 2017ರ ನವೆಂಬರ್ 7 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 21ರಂದು ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನವೆಂಬರ್ 21 ರಿಂದ ಡಿಸೆಂಬರ್ 21ರವರೆಗೆ ಅವಧಿ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 2018ರ ಜನವರಿ 19ರಂದು ಪ್ರಕಟಿಸಲಾಗುತ್ತದೆ.
ಅರ್ಹತಾ ದಿನಾಂಕ:01-11-2017 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01-11-2014ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿದರರಾಗಿರಬೇಕು. ದಿನಾಂಕ 01-11-2014ಕ್ಕಿಂತಲು ಮೊದಲು ಪದವಿ ಪಡೆದಿರುವಂತಹ ಪದವಿದರರು ನಿಗದಿಪಡಿಸಿದ ನಮೂನೆ 18 ರಲ್ಲಿ (ಭಾವಚಿತ್ರದೊಂದಿಗೆ ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ದಿನಾಂಕ:07-11-2017ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೊಂದಣಾಧಿಕಾರಿಗಳು/ ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕ ಹಾಗೂ ತಹಸೀಲ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ. ಆಯೋಗವು ನಿಗದಿಪಡಿಸಿರುವ 3 ನೇ ಅನುಸೂಚಿ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ದಿನಾಂಕ: 07.11.2017ರ ಒಳಗಾಗಿ ನೀಡಬಹುದು. ವಕೀಲರು, ವೈದ್ಯರು, ಚಾರ್ಟರ್ಡ ಅಕೌಂಟೆಟರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು. ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಸಚಿವರಿಂದ ಭುವನೇಶ್ವರಿ ಪೂಜೆ ಮತ್ತು ರಾಜ್ಯೋತ್ಸವದ ಧ್ವಜಾರೋಹಣ
ಕಲಬುರಗಿ,ಅ.28.(ಕ.ವಾ.)-ಕಲಬುರಗಿಯ ನೆಹರು ಗಂಜಿನ ನಗರೇಶ್ವರ ಬಾಲ ವಿಕಾಸ ಮಂದಿರದಲ್ಲಿ ಹಮ್ಮಿಕೊಳ್ಳಲಾದ 62ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ದಿನವಾದ ನವೆÀಂಬರ್ 1ರಂದು ಬುಧವಾರ ಬೆಳಗಿನ 8.30 ಗಂಟೆಗೆ ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣವನ್ನು ನೆರÀವೇರಿಸುವರು.
ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ, ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಜಿ. ರಾಮಕೃಷ್ಣ, ಬಿ. ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ರಾಜ್ಯೋತ್ಸವದ ಸಾಂಸ್ಕøತಿಕ ಕಾರ್ಯಕ್ರಮಗಳು ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಅಂದು ಸಂಜೆ 5.30 ಗಂಟೆಯಿಂದ ನಡೆಯಲಿವೆ.
ನವೆಂಬರ್ 2ರಂದು ಮಹಾನಗರ ಪಾಲಿಕೆ ಕೆ.ಡಿ.ಪಿ. ಸಭೆ
***********************************************
ಕಲಬುರಗಿ,ಅ.28.(ಕ.ವಾ.)-ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಮಟ್ಟದ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯು 2017ರ ನವೆಂಬರ್ 2 ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ. ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಪ್ರಗತಿ ವರದಿ ಹಾಗೂ ಎಲ್ಲ ಮಾಹಿತಿಯೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗುವಂತೆ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಸೂಚಿಸಿದ್ದಾರೆ.
ಅಕ್ಟೋಬರ್ 29ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,28.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ವಿಠ್ಠಲ ನಗರ ಫೀಡರ್ ಮೇಲೆ ವ್ಯಾಪ್ತಿಯಲ್ಲಿ 11ಕೆ.ವಿ. ವಿದ್ಯುತ್ ಲೈನ್ ಕಾರ್ಯ ಕೈಗೊಳ್ಳುವ ಪ್ರಯುಕ್ತ ಅಕ್ಟೋಬರ್ 29 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ ವಿಠ್ಠಲನಗರ: ಡಿ.ಡಿ.ಪಿ.ಐ. ಕಚೇರಿ, ವಿಜಯ-ವಿದ್ಯಾಲಯ ಕಂಪೌಂಡ್, ಐ-ವಾನ್-ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್‍ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲನಗರ, ಆನಂದ ನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾನಗರ, ವಿದ್ಯಾನಗರ, ಬಲಘಟ ಕಂಪೌಂಡ್, ಮೇಹತಾ ಕಂಪೌಂಡ್, ಮಿನಿ ವಿಧಾನಸೌಧ, ಜಿಲ್ಲಾ ನ್ಯಾಯಾಲಯ ಮತ್ತು ಜೆಸ್ಕಾಂ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಅಕ್ಟೊಬರ್ 31ರಂದು ಸಿಂಗಾಪುರ ಪ್ರವಾಸಕ್ಕೆ ಪೌರ
*********************************************
ಕಾರ್ಮಿಕರ ಬೀಳ್ಕೋಡುಗೆ ಸಮಾರಂಭ
***********************************
ಕಲಬುರಗಿ,28.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳಿಯ ಸಂಸ್ಥೆಗಳಿಂದ ನೈರ್ಮಲ್ಯ ಹಾಗೂ ಸ್ವಚ್ಛತಾ ಅಧ್ಯಯನಕ್ಕಾಗಿ ಸಿಂಗಾಪೂರ ಪ್ರವಾಸಕ್ಕೆ ಆಯ್ಕೆಗೊಂಡ ಪೌರ ಕಾರ್ಮಿಕರ ಬೀಳ್ಕೋಡುಗೆ ಸಮಾರಂಭವನ್ನು ಅಕ್ಟೋಬರ್ 31ರಂದು ಸಂಜೆ 4.30 ಗಂಟೆಗೆ ಕಲಬುರಗಿಯ ಡಾ. ಎಸ್. ಎಂ. ಪಂಡೀತ್ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶ ಹಾಗೂ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದನ್ವಯ ನೈರ್ಮಲ್ಯ ಹಾಗು ಸ್ವಚ್ಛತಾ ಅಧ್ಯಯನಕ್ಕೆ ಕರ್ನಾಟಕದ ಮಹಾನಗರ ಪಾಲಿಕೆಗಳಿಂದ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಪೌರ ಕಾರ್ಮಿಕರನ್ನು ಆಯಾ ಜಿಲ್ಲೆ ಹಾಗೂ ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರನ್ನು ಆಯ್ದು ಸಿಂಗಾಪೂರಕ್ಕೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ.
ಅಕ್ಟೋಬರ್ 31ರಂದು ಉದ್ಯೋಗ ಮೇಳ
************************************
ಕಲಬುರಗಿ,28.(ಕ.ವಾ.)- ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ್ 31ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ ಪದವಿಧರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೊಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಕಲಬುರಗಿಯ ಎಸ್.ಬಿ.ಐ. ಲೈಪ್ ಇನ್ಸುರೆÀನ್ಸ್, ಬೊಷ್ ಸ್ಕಿಲ್ ಇಂಡಿಯಾ, ಯುರೇಕಾ ಫೋಬ್ರ್ಸ್ ಹಾಗೂ ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್ ಲಿಮಿಟೆಡ್ ಕಂಪನಿಯವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 30 ಹಾಗೂ 31ರಂದು
*****************************
ಗು.ವಿ.ವಿ.ಯಲ್ಲಿ ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನ
***********************************************
ಕಲಬುರಗಿ,ಅ.28.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯದ ಕಲಬುರಗಿಯ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಸಮಾಜಶಾಸ್ತ್ರ ಹಳೆ ವಿದ್ಯಾರ್ಥಿ ಸಂಘ ಮತ್ತು ಸಮಾಜಶಾಸ್ತ್ರ ಸಂಘದ ಸಂಯುಕ್ತ ಆಶ್ರಯದಲ್ಲಿ “ಭಾರತದಲ್ಲಿ ಅಭಿವೃದ್ಧಿ, ಅಸಮಾನತೆಗಳು ಮತ್ತು ನಾಗರಿಕ ಸಮಾಜ ವಿಷಯ ಕುರಿತು ”ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನವನ್ನು ಅಕ್ಟೋಬರ್ 30 ಹಾಗೂ 31ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಅಕ್ಟೋಬರ್ 30ರಂದು ಬೆಳಿಗ್ಗೆ 10.30 ಗಂಟೆಗೆ ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ಈ ಸಮ್ಮೇಳನವನ್ನು ಉದ್ಘಾಟಿಸುವರು. ಗುಜರಾತ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಎಸ್.ಎಲ್. ಹಿರೇಮಠ ಆಶಯ ನುಡಿ ಹೇಳುವರು. ಕರ್ನಾಟಕ ಸಮಾಜಶಾಸ್ತ್ರ ಸಂಘದ ಅಧ್ಯಕ್ಷ ಪ್ರೊ. ಸಿ.ಎ. ಸೋಮಶೇಖರಪ್ಪ ಸಂಪಾದಿತ ಪುಸ್ತಕಗಳ ಬಿಡುಗಡೆ ಮಾಡುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಈಶ್ವರ ಇಂಗನ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯ ಮಹೇಶ ರಂಗದಾಳ ಅತಿಥಿಗಳಾಗಿ ಉಪಸ್ಥಿತರಿದ್ದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಆರ್. ನಿರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಅಕ್ಟೋಬರ್ 31ರಂದು ಸಂಜೆ 4.30 ಗಂಟೆಗೆ ವಿಶ್ವವಿದ್ಯಾಲಯದ ಕಾರ್ಯಸೌಧದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಸಮ್ಮೇಳನದ ಸಮಾರೋಪ ಸಮಾರಂಭ ಜರುಗಲಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ.ಹೆಚ್.ಎಂ. ಮಹೇಶ್ವರಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಮೈಸೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಆರ್. ಇಂದಿರಾ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಸ್ ಸದಸ್ಯ ಸಿಂಡಿಕೇಟ್ ಸದಸ್ಯ ಚಂದ್ರಶೇಖರ್ ನಿಟ್ಟೂರೆ, ವಿದ್ಯಾವಿಷಯಕ ಪರಿಷತ್ ಸದಸ್ಯ ಜಾರ್ಜ್ ಫರ್ನಾಂಡಿಸ್, ಮೌಲ್ಯಮಾಪನ ಕುಲಸಚಿವ ಪ್ರೊ. ಸಿ.ಎಸ್. ಪಾಟೀಲ, ಹಣಕಾಸು ಅಧಿಕಾರಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅತಿಥಿಗಳಾಗಿ ಆಗಮಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ದಯಾನಂದ ಅಗಸರ ಅಧ್ಯಕ್ಷತೆ ವಹಿಸುವರು.
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
***************************************************
ಕಲಬುರಗಿ,28.(ಕ.ವಾ.)-ಸಶಸ್ತ್ರ ಮೀಸಲು ಸಬ್‍ಇನ್ಸ್‍ಪೆಕ್ಟರ್ ಸಿಎಆರ್/ಡಿಎಆರ್ ಹಾಗೂ ಸೇವಾ ನಿರತನ್ನೊಳಗೊಂಡ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್ 29ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿ ಕುಸನೂರ ರಸ್ತೆಯಲ್ಲಿರುವ ರೇಶ್ಮಿ ಡಿಗ್ರಿ ಕಾಲೇಜು ಹಾಗೂ ಶರಣೇಶ್ವರಿ ರೇಶ್ಮಿ ಮಹಿಳಾ ಡಿಗ್ರಿ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಎರಡು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 29ರಂದು ಬೆಳಿಗ್ಗೆ 8 ರಿಂದ ಪರೀಕ್ಷೆ ಮುಗಿಯುವವರೆಗೆ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿರಾಕ್ಸ್/ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಕಲಬುರಗಿ ತಹಸೀಲ್ದಾರ್ ಅಶೋಕ ಹಿರೊಳ್ಳಿ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಹಾಗೂ ಇತರೆ ಚಿಕ್ಕ ಎಲೆಕ್ಟ್ರಾನಿಕ್ಸ್ ವಸ್ತು ಮತ್ತು ಚಿಕ್ಕ ಗಾತ್ರದ ಪುಸ್ತಕಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಸೂಚಿಸಿದ್ದಾರೆ.
ರಾಜ್ಯದಲ್ಲಿ ಐದು ಮಹಿಳಾ ಉದ್ಯಮ ಪಾರ್ಕ್ ಸ್ಥಾಪನೆ 
ಕಲಬುರಗಿ,ಅ.28,(ಕ.ವಾ):-ಮಹಿಳಾ ಉದ್ಯಮಿಗಳಿಗೆ ಉದ್ದಿಮೆ ನಡೆಸಲು ಪ್ರತ್ಯೇಕ ವೇದಿಕೆ ಇಲ್ಲ. ಮಹಿಳೆಯರನ್ನು ಉದ್ಯಮದತ್ತ ಆಕರ್ಷಿಸಲು ಮತ್ತು ಸ್ವಾವಲಂಬನೆ ಸಾಧಿಸಲು ಹುಬ್ಬಳಿ-ಧಾರವಾಡ, ಬಳ್ಳಾರಿ, ಬೆಳಗಾವಿ, ಮೈಸೂರು ಮತ್ತು ರಾಮನಗರದ ಹಾರೋಹಳ್ಳಿಯಲ್ಲಿ ಮಹಿಳಾ ಉದ್ಯಮ ಪಾರ್ಕ್ ಸ್ಥಾಪಿಸಿ, ಕಡಿಮೆ ಮೊತ್ತದಲ್ಲಿ ನಿವೇಶನ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ಶನಿವಾರ ಕಲಬುರಗಿಯ ಹೈದ್ರಾಬಾದ್ ಕರ್ನಾಟಕ ಚೆಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಕಲಬುರಗಿ ಲೇಡಿಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್) ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ‘’ಮಹಿಳಾ ಉದ್ಯಮಶೀಲತಾ ಕಾರ್ಯಕ್ರಮ’’ವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಬಹಳಷ್ಟು ಕೈಗಾರಿಕೆಗಳು ಸ್ಥಾಪನೆಯಾಗುತ್ತಿದ್ದು, ಇದರಲ್ಲಿ ಮಹಿಳಾ ಉದ್ಯಮಿಗಳು ಮುಂದೆ ಬರುತ್ತಿದ್ದು ಉತ್ತಮ ಬೆಳವಣಿಗೆಯಾಗಿದೆ. ಇದನ್ನ ಮನಗಂಡು ರಾಜ್ಯ ಸರ್ಕಾರ ಮಹಿಳಾ ಉದ್ಯಮಿಗಳಿಗೆ 2014-19ರ ಕೈಗಾರಿಕಾ ನೀತಿಯಲ್ಲಿ ಅನೇಕ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಹಿಳಾ ಉದ್ದಿಮೆದಾರರು ಉದ್ಯಮ ಸ್ಥಾಪನೆಯ ಹೂಡಿಕೆಯ ಒಟ್ಟು ಮೊತ್ತದಲ್ಲಿ ಶೇ.35ರಷ್ಟು ಸಾಮಾನ್ಯ ವರ್ಗದ ಮಹಿಳೆಯರಿಗೆ ಹಾಗೂ ಶೇ.40ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮಹಿಳೆಯರಿಗೆ ಸರ್ಕಾರ ಧನಸಹಾಯ ನೀಡುತ್ತದೆ. ಇದರ ಲಾಭ ಪಡೆದು ಸಣ್ಣ, ಅತೀ ಸಣ್ಣ, ಮದ್ಯಮ ಕೈಗಾರಿಕೆ, ಗೃಹ ಕೈಗಾರಿಕೆ ಸ್ಥಾಪಿಸಿ ಬೆಳಸಬೇಕು ಎಂದರು.
ಉದ್ಯಮ ಸ್ಥಾಪನೆಯ ಆರಂಭದಲ್ಲಿ ಸಮಸ್ಯೆಗಳು ಬರುವುದು ಸಹಜ. ಅದಕ್ಕೆ ಎದೆಗುಂದದೆ ಕಠಿಣ ಪರಿಶ್ರಮ ಮತ್ತು ಬದ್ಧತೆಯಿಂದ ಮುನ್ನುಗಿದ್ದಲ್ಲಿ ಯಶಸ್ಸು ಸಾಧ್ಯ. ಒಂದು ಉದ್ದಿಮೆ ಯಶಸ್ಸು ಕಂಡರೆ ಅದು ಆ ಕುಟುಂಬಕ್ಕೆ ಕಲ್ಪವೃಕ್ಷವಾಗಿ ಪರಿಣಮಿಸುತ್ತದೆ. ಈ ನಿಟ್ಟಿನಲ್ಲಿ ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 200 ಮಹಿಳಾ ಉದ್ದಿಮೆದಾರರು ಮುಂದೆ ಬಂದಿರುವುದು ಸಂತಸದ ಸಂಗತಿ. ಇತ್ತೀಚಿಗೆ ಜೆಕ್ ಗಣರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೈಗಾರಿಕಾ ಪ್ರದರ್ಶನದಲ್ಲಿ ರಾಜ್ಯದಿಂದ 9 ಮಹಿಳಾ ಉದ್ಯಮಿಗಳನ್ನು ಕಳುಹಿಸಲಾಗಿತ್ತು, ಇದರಲ್ಲಿ 4 ಜನ ಕಲಬುರಗಿಯವರು ಇದ್ದಿದ್ದು ವಿಶೇಷ. ಸ್ವಯಂ ಉದ್ಯೋಗ ಬೆಳೆದರೆ ಕೈಗಾರಿಕೆ ಬೆಳಯುತ್ತವೆ ಅದರಿಂದ ಉದ್ಯೋಗ ಸೃಷ್ಠಿ ಆಗುತ್ತದೆ. ಮಹಿಳಾ ಉದ್ಯಮಿಗಳು ಸ್ವಾವಲಂಬನೆ ಸಾಧಿಸಿ ಗೌರವಯುತ ಬದುಕು ಸಾಧಿಸಬೇಕು. ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರ ರಾಜ್ಯ ಸರ್ಕಾರ ನೀಡಲಿದೆ ಎಂದರು.
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಸ್ಟಾರ್ಟ್‍ಅಪ್ ಯೋಜನೆಯಡಿ ಮಹಿಳೆಯರಿಗೆ ತರಬೇತಿಗಾಗಿಯೆ 10 ಕೋಟಿ ರೂ. ಮೀಸಲಿರಿಸಿದ್ದು, ಈ ಭಾಗದ ಮಹಿಳೆಯರು ಇದರ ಸದುಪಯೋಗಪಡಿಸಿಕೊಳ್ಳಬೇಕು. ಹಿಂದುಳಿದ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದು ಬರುವ ಮಹಿಳಾ ಉದ್ಯಮಗಳಿಗೆ ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸರ್ಕಾರದ ಹಲವು ಕಾರ್ಯಕ್ರಮಗಳು ಮಹಿಳಾ ಕೇಂದ್ರಿತವಾಗಿದ್ದು, ಮಹಿಳೆಯರನ್ನು ಆರ್ಥಿಕ ಶಕ್ತರನ್ನಾಗಿಸಿ ಸಬಲೀಕರಣಗೊಳಿಸುವುದು ಇದರ ಉದ್ದೇಶವಾಗಿದೆ.


ನಂದೂರ-ಕೆಸರಟಗಿ ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿ 50 ಎಕರೆ ಪ್ರದೇಶ ಮಹಿಳಾ ಉದ್ಯಮಿಗಳಿಗೆ ಮೀಸಲಿರಿಸಲಾಗಿದ್ದು, ಇನ್ನು ಹೆಚ್ಚುವರಿಯಾಗಿ 10 ಎಕರೆ ನೀಡಲಾಗುವುದು ಹಾಗೂ ನಿವೇಶನದ ಪ್ರತಿ ಚದುರ ಮೀಟರ್ ಮೊತ್ತವನ್ನು ಸಹ ಕಡಿಮೆಗೊಳಿಸಲಾಗುವುದು. ಈ ಕೈಗಾರಿಕಾ ಪ್ರದೇಶದಲ್ಲಿ 58 ಮಹಿಳಾ ಉದ್ಯಮಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಕಲಬುರಗಿ ವಿಭಾಗದ ಮಹಿಳಾ ಉದ್ದಿವ್ಮೆದಾರರಿಗೆ ಕೌಶಲ್ಯ ತರಬೇತಿ ಹಾಗೂ ವಿಚಾರ ಸಂಕಿರಣಗಳನ್ನು ಕಲಬುರಗಿ ಲೇಡಿಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್) ಸಂಸ್ಥೆ ವತಿಯಿಂದ ನೀಡಲು ಅನುಕೂಲವಾಗುವ ಹಾಗೆ ಕಟ್ಟಡ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. 
ಇದೇ ಸಂದರ್ಭದಲ್ಲಿ ನಂದೂರ-ಕೆಸರಟಗಿ ಮಹಿಳಾ ಪಾರ್ಕಿನಲ್ಲಿ ನಿವೇಶನ ಪಡೆದವರ ಪೈಕಿ 5 ಜನರಿಗೆ ಸಾಂಕೇತಿಕವಾಗಿ ಹಕ್ಕು ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಚಿಂಚೋಳಿ ಶಾಸಕರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತ ಮಲಾಜಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ ಶರಣಕುಮಾರ ಮೋದಿ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ(ಅಭಿವೃದ್ಧಿ) ಕೆ.ರತ್ನಪ್ರಭಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಿ.ವಿ.ಪ್ರಸಾದ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ ಡವೆ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ, ಹೈದ್ರಾಬಾದ ಕರ್ನಾಟಕ ಚೆಂಬರ್ ಆಫ್ ಕಾಮರ್ಸ್ ಅಧ್ಯಕ್ಷರು ಇದ್ದರು.
ಕಲಬುರಗಿ ಲೇಡಿಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್) ಅಧ್ಯಕ್ಷೆ ಜ್ಯೋತಿ ಕಾಡಾದಿ ಸ್ವಾಗತಿಸಿದರೆ, ಗೌರವ ಕಾರ್ಯದರ್ಶಿ ಡಾ.ಸರ್ವಮಂಗಳಾ ಆರ್.ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ತದನಂತರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಅವರು ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿ ನಂದೂರ-ಕೆಸರಟಗಿ ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿನ ಮಹಿಳಾ ಉದ್ಯಮ ಪಾರ್ಕಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ 7.30 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
 ಪ್ರವಾಸೋದ್ಯಮ ಸಚಿವರ ಪ್ರವಾಸ
ಕಲಬುರಗಿ,ಅ.28.(ಕ.ವಾ.)-ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ ಖರ್ಗೆ ಅವರು ಬೆಂಗಳೂರಿನಿಂದ ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಅಕ್ಟೋಬರ್ 31ರಂದು ಬೆಳಗಿನ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು. ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಕ್ಕೆ ಪ್ರಯಾಣಿಸುವರು. ಸಚಿವರು ಅಂದು ಮರಳಿ ಸಂಜೆ 5 ಗಂಟೆಗೆ ಬೀದರದಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸಿ ಅಗಮಿಸಿ ವಾಸ್ತವ್ಯ ಮಾಡುವರು. 
ಕಾಲುಬಾಯಿ ರೋಗ: ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮ
ಕಲಬುರಗಿ,ಅ.28.(ಕ.ವಾ.)-ಕೇಂದ್ರ ಪುರಸ್ಕøತ ಕಾಲುಬಾಯಿ ರೋಗ ನಿಯಂತ್ರಣ ಯೋಜನೆಯಡಿ ರಾಜ್ಯದಾದ್ಯಂತ ಕಾಲುಬಾಯಿ ರೋಗದ ವಿರುದ್ಧ ಎಲ್ಲ   ಜಾನುವಾರುಗಳಿಗೆ 13ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು 2017ರ ನವೆಂಬರ್ 1 ರಿಂದ 25ರವರೆಗೆ  ಹಮ್ಮಿಕೊಳ್ಳಲಾಗಿದೆ.   
ನವೆಂಬರ್ 1ರಂದು ಜಿಲ್ಲೆಯ ಎಲ್ಲ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಈ ಲಸಿಕಾ ಕಾರ್ಯಕ್ರಮಕ್ಕೆ ಉದ್ಘಾಟನೆ ಮಾಡಲಾಗುತ್ತಿದೆ. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಿಲ್ಲೆಯ ಎಲ್ಲ ರೈತ ಬಾಂಧವರು ತಮ್ಮ ದನಗಳಿಗೆ (3 ತಿಂಗಳು ವಯಸ್ಸಿನ ಮೇಲ್ಪಟ್ಟ) ಎಲ್ಲ ಆಕಳು, ಎಮ್ಮೆ ಮತ್ತು ಎತ್ತುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ಈ ಲಸಿಕಾ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು  ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
















ಹೀಗಾಗಿ ಲೇಖನಗಳು news and photo Date: 28-10--2017

ಎಲ್ಲಾ ಲೇಖನಗಳು ಆಗಿದೆ news and photo Date: 28-10--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo Date: 28-10--2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-28-10-2017.html

Subscribe to receive free email updates:

0 Response to "news and photo Date: 28-10--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ