ಶೀರ್ಷಿಕೆ : News and Photo Date: 30--10--2017
ಲಿಂಕ್ : News and Photo Date: 30--10--2017
News and Photo Date: 30--10--2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ,ಅ.30(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಿಲ್ಲಾಡಳಿತ ಏರ್ಪಡಿಸಿರುವ ಕರ್ನಾಟಕ ರಾಜ್ಯೋತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ, ಕಲಬುರಗಿ ಹಾಗೂ ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 2 ಹಾಗೂ 3ರಂದು ಕಲಬುರಗಿ ಹಾಗೂ ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ನವೆಂಬರ್ 4ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿರುವ ಕಲಬುರಗಿ ಮಹಾನಗರ ಪಾಲಿಕೆ ಮಟ್ಟದ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸುವರು. ನಂತರ ಸಚಿವರು ಕಲಬುರಗಿ ಹಾಗೂ ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 5ರಂದು ಕಲಬುರಗಿ ಹಾಗೂ ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ನವೆಂಬರ್ 6ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಿರುವ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿ ಆಚರಣೆ ಸಮಾರಂಭದಲ್ಲಿ ಭಾಗವಹಿಸಿ, ಅಂದು ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

********************************************** -ಪ್ರೊ.ಎಸ್.ಎಲ್.ಹಿರೇಮಠ
**************************
ಕಲಬುರಗಿ,ಅ.30, (ಕ.ವಾ): ಒಂದು ದೇಶದಲ್ಲಿನ ಪ್ರಜೆಗಳಿಗೆ ಸ್ವಾತಂತ್ರ್ಯ, ಸಮಾನತೆ, ಶಿಕ್ಷಣ, ಸಾಮಾಜಿಕ ನ್ಯಾಯ, ಜೊತೆಗೆ ಆರೋಗ್ಯವಂತ ಜೀವನ ನಡೆಸಲು ಸಕಲ ಸೌಲಭ್ಯ ದೊರೆತಾಗ ಮಾತ್ರವೇ ಒಂದು ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯ ಮಾಜಿ ಕುಲಸಚಿವ ಪ್ರೊ.ಎಸ್.ಎಲ್.ಹಿರೇಮಠ ಅಭಿಪ್ರಾಯ ಪಟ್ಟರು.
ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಕರ್ನಾಟಕ ಸಮಾಜಶಾಸ್ತ್ರ ಸಂಘ ಸಮಾಜಶಾಸ್ತ್ರ ವಿಭಾಗ ಹಾಗೂ ಗುಲಬರ್ಗಾ ಸಮಾಜಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಭಾರತದಲ್ಲಿ ಅಭಿವೃದ್ಧಿ, ಅಸಮಾನತೆಗಳು ಮತ್ತು ನಾಗರಿಕ ಸಮಾಜ” ಎಂಬ ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜೆಗಳು ಹಸಿವು ಹಾಗೂ ಬಡತನದಿಂದ ಮುಕ್ತರಾಗಬೇಕು. ನಂತರ ಕಡ್ಡಾಯ ಶಿಕ್ಷಣ ಪ್ರತಿಯೊಬ್ಬರಿಗೂ ದೊರಕುವಂತಾಗಬೇಕು. ವಿಶೇಷವಾಗಿ ಮಹಿಳಾ ಸಬಲೀಕರಣ ಆಗುವುದು ಮುಖ್ಯವಾಗಿದೆ. ಲಿಂಗತಾರತ್ಯಮ ತೊಲಗಬೇಕು. ಗರ್ಭಿಣಿ ತಾಯಂದಿರ ಹಾಗೂ ಶಿಶು ಮರಣ ದರ ತಡೆಗಟ್ಟಬೇಕು. ಮಹಾಮಾರಿ ಕಾಯಿಲೆಗಳಾದ ಮಲೇರಿಯಾ, ಏಡ್ಸ್, ಕಾಲರಾ ರೋಗಗಳಿಗೆ ಸೂಕ್ತ ಚಿಕಿತ್ಸೆ ಸಿಕ್ಕಾಗ ಮಾನವ ಸಬಲೀಕರಣ ಹಾಗೂ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಕರ್ನಾಟಕ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾದ ಪ್ರೊ. ಸಿ.ಎ.ಸೋಮಶೇಖರಪ್ಪ ಮಾತನಾಡಿ, ಕರ್ನಾಟಕ ಸಮಾಜಶಾಸ್ತ್ರ ಸಂಘ 1994ರಲ್ಲಿ ಸ್ಥಾಪನೆಯಾಗಿದ್ದು, 24ನೇ ವರ್ಷಕ್ಕೆ ಪ್ರಯಾಣ ಬೆಳೆಸುತ್ತಿರುವುದು ಸಂತಸದ ಸಂಗತಿ. ಸಮ್ಮೇಳನದಲ್ಲಿ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಮಗ್ಗಲುಗಳಿಗೆ ಚರ್ಚಿಸಲು ಒಟ್ಟು 13 ಸಂಶೋಧನಾ ಸಮಿತಿ ರಚಿಸಿ, ಅದರ ಒಮ್ಮತದ ಮೇರೆಗೆ ಡೈನಾಮಿಕ್ ಆಫ್ ಸೋಶಿಯಲ್ ಇನ್ಸಿಟ್ಯೂಶನ್, ಇಂಟರ್ ನ್ಯಾಶನಲ್ ಮೈಗ್ರೇಶನ್, ಟ್ರಾನ್ಸಿಷನ್ ಡೇವಲಪ್‍ಮೆಂಟ್ ಇನ್ ಇಂಡಿಯನ್ ಇಂಡಸ್ಟ್ರಿ, ತಾಂತ್ರಿಕ ಅಭಿವೃದ್ಧಿ ಅಸಮಾನತೆ ಮತ್ತು ನಾಗರಿಕ ಸಮಾಜ ಎಂಬ ವಿವಿಧ ಒಟ್ಟು 8 ಸಂಪಾದಿತ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಗುಲಬರ್ಗಾ ಪ್ರಭಾರಿ ಕುಲಪತಿ ವಿಜಯಾ ತೆಲಂಗಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೈದ್ರಾಬಾದ್ ಕರ್ನಾಟಕ ಪ್ರದೇಶಗಳಲ್ಲಿ ಬಡತನ, ಹಸಿವು ಸೇರಿದಂತೆ ಅನೇಕ ಆರ್ಥಿಕ, ಸಾಮಾಜಿಕ, ಭೌಗೋಳಿಕ ಸಮಸ್ಯೆಗಳು ತಾಂಡವವಾಡುತ್ತಿದ್ದವು. ಈ ಅಸಮಾನತೆಯನ್ನು ಹೊಗಲಾಡಿಸಲು ವೈಜನಾಥ್ ಪಾಟೀಲ್, ಲೋಕಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ, ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಹೈ.ಕ ಅಭಿವೃದ್ಧಿಗಾಗಿ 371(ಜೆ) ಕಲಂ ಜಾರಿಯಾಗಿದ್ದು, ಶಿಕ್ಷಣ ಹಾಗೂ ಕೆಲಸ ಗಿಟ್ಟಿಸಿಕೊಳ್ಳಲು ಸಹಾಯಕವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಕರ್ನಾಟಕ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾದ ಪ್ರೊ. ಸಿ.ಎ.ಸೋಮಶೇಖರಪ್ಪ ಸಂಪಾದಿತ ಪುಸ್ತಕ ಬಿಡುಗಡೆಗೊಳಿಸಿದರು. 500 ಪ್ರಬಂಧಗಳ ಮಂಡನೆ ಸಮ್ಮೇಳನದ ವಿಶೇಷವಾಗಿತ್ತು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಈಶ್ವರ ಇಂಗನ್, ವಿದ್ಯಾವಿಷಯಕ ಪರಿಷತ್ ಸದಸ್ಯ ಮಹೇಶ್ ರಂಗದಾಳ, ಕುಲಸಚಿವ ಡಾ. ದಯಾನಂದ ಅಗಸರ, ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನ ಸಂಯೋಜಕ ಪ್ರೋ. ಜಗನ್ನಾಥ್ ಆರ್. ಶಿಂಧೆ, ಗುಲಬರ್ಗಾ ಅಸೋಶಿಯೇಷನ್ ಕಾರ್ಯದರ್ಶಿ ನಾರಾಯಣ್, ಹಣಕಾಸು ಅಧಿಕಾರಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಸೇರಿದಂತೆ ಸಮಾಜಶಾಸ್ತ್ರ ಪ್ರಾಧ್ಯಾಪಕರು, ಸಮಾಜಶಾಸ್ತ್ರಜ್ಞರು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಾನಗರ ಪಾಲಿಕೆ ಕೆ.ಡಿ.ಪಿ. ಸಭೆ ನವೆಂಬರ್ 4ಕ್ಕೆ ಮುಂದೂಡಿಕೆ
*********************************************************
ಕಲಬುರಗಿ,ಅ.30.(ಕ.ವಾ.)-ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಮಟ್ಟದ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯು ಅನಿವಾರ್ಯ ಕಾರಣದಿಂದ ನವೆಂಬರ್ 4ಕ್ಕೆ ಮುಂದೂಡಲಾಗಿದೆ.
ಈ ಮುಂದೂಡಿದ ಸಭೆಯು ನವೆಂಬರ್ 4ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ. ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಪ್ರಗತಿ ವರದಿ ಹಾಗೂ ಎಲ್ಲ ಮಾಹಿತಿಯೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗಬೇಕು. ಸದರಿ ಸಭೆಯು ಈ ಮುಂಚೆ ನವೆಂಬರ್ 2ರಂದು ನಿಗದಿಯಾಗಿತ್ತು ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಸೂಚಿಸಿದ್ದಾರೆ.

ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗಸಭೆ ಉದ್ಘಾಟನೆ
******************************************************************
ಕಲಬುರಗಿ,ಅ.30.(ಕ.ವಾ.)-ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಲಬುರಗಿ, ಬೀದರ ಹಾಗೂ ಯಾದಗಿರಿ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಬೆಂಗಳೂರು, ಹೈದ್ರಾಬಾದ್ ಕರ್ನಾಟಕ ವಾಣಿಣ್ಯ ಮತ್ತು ಕೈಗಾರಿಕಾ ಸಂಸ್ಥೆ, ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಸಿಯೇಶನ್, ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘ ಹಾಗೂ ಕಲಬುರಗಿ ಲೇಡೀಸ್ ಅಸೋಸಿಯೇಶನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್) ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗಸಭೆ-2017 ಕಲಬುರಗಿ-ಯಾದಗಿರಿ ಮತ್ತು ಬೀದರ ರೋಡ ಶೋ ಉದ್ಘಾಟನಾ ಸಮಾರಂಭವನ್ನು ನವೆಂಬರ್ 1ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಸುಪರ ಮಾರ್ಕೇಟಿನ ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಶ್ರೀನಿವಾಸರಾವ್ ರಾಮಚಂದ್ರಪ್ಪ ರಘೋಜಿ ಸಭಾಂಗಣದಲ್ಲಿ ಜರುಗಲಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ಅವರು ರೋಡ ಶೋ ಸಮಾರಂಭವನ್ನು ಉದ್ಘಾಟಿಸುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಪೌರಾಡಳಿತ, ಸ್ಥಳೀಯ ಸಂಸ್ಥೆಗಳ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಬಿ. ಖಂಡ್ರೆ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಮಹ್ಮದ್ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಗೌರವ ಅಧ್ಯಕ್ಷ ಆರ್. ಹನುಮಂತೇಗೌಡ, ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ. ಸೋಮಶೇಖರ ಟೇಂಗಳಿ, ಬೀದರ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಬಿ. ಶೆಟಗಾರ, ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಹನುಮಾನ ದಾಸ್ ಮುಂದಡ, ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಸಿಯೇಶನ್ ಅಧ್ಯಕ್ಷ ಚಿಂದಬರದಾಸ್ ಪಾಟೀಲ, ಜಿ.ಐ.ಇ.ಎಂ.ಎ. ಗೌರವ ಕಾರ್ಯದರ್ಶಿ ಸುರೇಶ ಜಿ. ನಂದ್ಯಾಳ, ಬೀದರ ಸಣ್ಣ ಕೈಗಾರಿಕೆಗಳ ಸಂಘದ ಗೌರವ ಕಾರ್ಯದರ್ಶಿ ಶಿವರಾಜ್ ಹಲಶೆಟ್ಟಿ, ಕಲಬುರಗಿ ಲೇಡೀಜ್ ಅಸೋಸಿಯೇಶನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್) ಅಧ್ಯಕ್ಷೆ ಜ್ಯೋತಿ ಕಾಡಾದಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಮಹಾನಗರ ಪಾಲಿಕೆ ಪಿ. ಸುನೀಲಕುಮಾರ, ಕೆ.ಸಿ.ಟಿ.ಯು. ವ್ಯವಸ್ಥಾಪಕ ನಿರ್ದೇಶಕ ಅನೀಲ ಉಪ್ಪಿನ್ ವಿಶೇಷ ಆಹ್ವಾನಿತರಾಗಿ ಅಗಮಿಸುವರು.
ಬೆಂಗಳೂರಿನಲ್ಲಿ ನವೆಂಬರ್ 23 ಹಾಗೂ 24ರಂದು ನಡೆಯುವ ಸಮಾವೇಶದ ಪೂರ್ವಭಾವಿಯಾಗಿ ಕಲಬುರಗಿ ಜಿಲ್ಲೆಯಲ್ಲಿ 2017ರ ನವೆಂಬರ್ 1ರಂದು ರೋಡ್‍ಶೋ ಆಯೋಜಿಸಲಾಗಿದೆ. ಈ ರೋಡ್ ಶೋದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು. ನೆರೆಯ ಜಿಲ್ಲೆಗಳಾದ ಬೀದರ ಮತ್ತು ಯಾದಗಿರಿಯ ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಉಪಯುಕ್ತ ಮಾಹಿತಿಗಳನ್ನು ಇಲ್ಲಿ ಹಂಚಿಕೊಳ್ಳಲು ಅವಕಾಶವಿದೆ.
ಕೈಗಾರಿಕೋದ್ಯಮಿಗಳು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೆಚ್ಚಿನ ಮಾಹಿತಿಯನ್ನು ಪಡೆಯಬೇಕೆಂದು ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಮತ್ತು ಕಾನ್‍ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (ಸಿ.ಐ.ಐ.) ದಿಂದ ರಾಜ್ಯ ಮಟ್ಟದ ವೆಂಡರ್ ಡೆವಲಪ್‍ಮೆಂಟ್ ಪ್ರೋಗ್ರಾಮ್ ಮತ್ತು ಬಂಡವಾಳ ಹೂಡಿಕೆದಾರರ ಶೃಂಗಸಭೆಯನ್ನು ಬೆಂಗಳೂರಿನಲ್ಲಿ 2017ರ ನವೆಂಬರ್ 23 ಹಾಗೂ 24ರಂದು ಆಯೋಜಿಸಲಾಗಿದೆ. ಈ ಸಮಾವೇಶವನ್ನು ಬೆಂಗಳೂರು ವಸ್ತುಪ್ರದರ್ಶನ ಸೆಂಟರ್‍ನಲ್ಲಿ ಆಯೋಜಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಸಾರ್ವಜನಿಕ ಕೈಗಾರಿಕೋದ್ಯಮಗಳು, ರಾಜ್ಯ ಸರ್ಕಾರದ ಸಾರ್ವಜನಿಕ ಕೈಗಾರಿಕೋದ್ಯಮಗಳು ಮತ್ತು ಪ್ರತಿಷ್ಠಿತ ತಯಾರಿಕಾ ಘಟಕಗಳು ತಾವು ತಯಾರಿಸುವ ಉತ್ಪನ್ನಗಳ ತಯಾರಿಕೆಗೆ ಬೇಕಾದ ಬಿಡಿ ಭಾಗಗಳನ್ನು ಪ್ರದರ್ಶಿಸಲಿವೆ.
ಇದಕ್ಕಾಗಿ ಒಂದು ಲಕ್ಷ ವಿಸ್ತೀರ್ಣದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಣ್ಣ ಕೈಗಾರಿಕೆಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಒಂದು ಲಕ್ಷ ಚ.ಅ. ಕ್ಷೇತ್ರವನ್ನು ಮೀಸಲಿರಿಸಲಾಗಿದೆ. ಇಲ್ಲಿ ಸುಮಾರು 500 ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಒಂದೇ ಸೂರಿನಡಿ ಸರಬರಾಜುದಾರರ ಮತ್ತು ಖರೀದಿದಾರರ ಕೊಂಡುಕೊಳ್ಳುವ ಸಮಾವೇಶ ನಡೆಯಲಿದೆ. ಇಲ್ಲಿ ಬಿ2ಬಿ, ಬಿ2ಜಿಗೆ ಅವಕಾಶ ಕಲ್ಪಿಸಲಾಗಿದೆ ಮತ್ತು ವಿವಿಧ ತಾಂತ್ರಿಕ ಸೆಮಿನಾರ್Àಗಳು ಕೂಡ ಜರುಗಲಿವೆ. ಈಗಾಗಲೇ ದೇಶದ ವಿವಿಧ ಮಹಾನಗರಗಳಲ್ಲಿ ಹಾಗೂ ವಿದೇಶಗಳಲ್ಲಿಯೂ ಸಹ ರೋಡ್‍ಶೋಗಳನ್ನು ಆಯೋಜಿಸಿ ಬಂಡವಾಳದಾರರನ್ನು ಹೂಡಿಕೆಗೆ ಆಹ್ವಾನಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ತಿಳಿಸಿದ್ದಾರೆ.

ಈಶಾನ್ಯ ಪದವೀಧರÀ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ:
***********************************************************
ವೇಳಾಪಟ್ಟಿ ಪ್ರಕಟ
*****************
ಕಲಬುರಗಿ,ಅ.30.(ಕ.ವಾ.)-ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಯನ್ನಾಗಿ ಹಾಗೂ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಮತ್ತು ಜಿಲ್ಲಾಧಿಕಾರಿಗಳು, ದಾವಣಗೆರೆ, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಮತ್ತು ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ಸಹಾಯಕ ಆಯುಕ್ತರು ಹರಪನಳ್ಳಿ, ಮತ್ತು ತಹಸೀಲ್ದಾರರು ಹರಪನಳ್ಳಿ, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ. ಅರ್ಹತಾ ದಿನಾಂಕ:01-11-2017ಕ್ಕೆ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ದಿನಾಂಕ: 05-09-2016ರ ಪತ್ರದನ್ವಯ ಪದವಿಧರರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ. ಈಶಾನ್ಯ ಪದವಿಧರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಈ ಕೆಳಗಿನಂತೆ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ನಮೂನೆ 18ರಲ್ಲಿ ಅರ್ಜಿಯನ್ನು ಸ್ವೀಕರಿಸಲು 2017ರ ನವೆಂಬರ್ 7 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 21ರಂದು ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನವೆಂಬರ್ 21 ರಿಂದ ಡಿಸೆಂಬರ್ 21ರವರೆಗೆ ಅವಧಿ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 2018ರ ಜನವರಿ 19ರಂದು ಪ್ರಕಟಿಸಲಾಗುತ್ತದೆ.
ಅರ್ಹತಾ ದಿನಾಂಕ:01-11-2017 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01-11-2014ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿದರರಾಗಿರಬೇಕು. ದಿನಾಂಕ 01-11-2014ಕ್ಕಿಂತಲು ಮೊದಲು ಪದವಿ ಪಡೆದಿರುವಂತಹ ಪದವಿದರರು ನಿಗದಿಪಡಿಸಿದ ನಮೂನೆ 18 ರಲ್ಲಿ (ಭಾವಚಿತ್ರದೊಂದಿಗೆ ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ದಿನಾಂಕ:07-11-2017ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೊಂದಣಾಧಿಕಾರಿಗಳು/ ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕ ಹಾಗೂ ತಹಸೀಲ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ. ಆಯೋಗವು ನಿಗದಿಪಡಿಸಿರುವ 3 ನೇ ಅನುಸೂಚಿ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ದಿನಾಂಕ: 07.11.2017ರ ಒಳಗಾಗಿ ನೀಡಬಹುದು. ವಕೀಲರು, ವೈದ್ಯರು, ಚಾರ್ಟರ್ಡ ಅಕೌಂಟೆಟರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು. ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 4ರಂದು ಖಣದಾಳದಲ್ಲಿ ಜನಸ್ಪಂದನ ಸಭೆ
**********************************************
ಕಲಬುರಗಿ,ಅ.30.(ಕ.ವಾ.)-ಕಲಬುರಗಿ ತಾಲೂಕಿನ ಫರತಾಬಾದ ಹೋಬಳಿ ವ್ಯಾಪ್ತಿಯ ಖಣದಾಳ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನವೆಂಬರ್ 4ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆ ನಡೆಸಲಾಗುವುದು ಎಂದು ಗ್ರೇಡ್-2 ತಹಶೀಲ್ದಾರ್ ಜಗನ್ನಾಥ ಎಂ. ಪೂಜಾರಿ ತಿಳಿಸಿದ್ದಾರೆ. ಖಣದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಟ್ಟ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಖುದ್ದಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.

ಅಕ್ಟೋಬರ್ 31ರಂದು ರಾಷ್ಟ್ರೀಯ ಏಕತಾ ದಿವಸ್
********************************************
ಕಲಬುರಗಿ,ಅ.30.(ಕ.ವಾ.)-ನೆಹರು ಯುವ ಕೇಂದ್ರ (ಯುವಜನ ಮತ್ತು ಕ್ರೀಡಾ ಮಂತ್ರಾಲಯ) ಹಾಗೂ ಮಹಾಂತೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಮಹಾಂತಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್ ಜನ್ಮ ದಿನಚರಣೆ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಮಧ್ಯಾಹ್ನ 2 ಗಂಟೆಗೆ ಅಫಜಲಪುರ ತಾಲೂಕಿನ ಮಹಾಂತಪುರರದ ಮಹಾಂತೇಶ್ವರ ಪದವಿಪೂರ್ವ ಕಾಲೇಜಿನಲಿ ಏರ್ಪಡಿಸಲಾಗಿದೆ.
ಕಲಬುರಗಿ ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ರಹೀಮ್ ಮುಲ್ಲಾ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಾಂತಪುರ ಮಹಾಂತ ಜ್ಯೋತಿ ವಿದ್ಯಾಪೀಠದ ಅಧ್ಯಕ್ಷ ಷ.ಬ್ರ. ಸಿದ್ಧರಾಮ ಶಿವಾಚಾರ್ಯರು ಸಾನಿಧ್ಯ ವಹಿಸುವರು. ಮಹಾಂತೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ದಯಾನಂದ ವ್ಹಿ. ಬಂದರವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕ ಹಾಗೂ ಲೇಖಕ ಎಚ್.ಬಿ.ಪಾಟೀಲ ವಿಶೇಷ ಉಪನ್ಯಾಸ ನೀಡುವರು. ಕಲಬುರಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಮಾಲತಿ ಗಾಯಕವಾಡ, ಕಲಬುರಗಿ ಉತ್ತರ ವಲಯದ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವ ಎಚ್. ಕಾಂದೆ ಸೇರಿದಂತೆ ಮತ್ತಿತರರು ಅತಿಥಿಗಳಾಗಿ ಆಗಮಿಸುವರು.

ಹೀಗಾಗಿ ಲೇಖನಗಳು News and Photo Date: 30--10--2017
ಎಲ್ಲಾ ಲೇಖನಗಳು ಆಗಿದೆ News and Photo Date: 30--10--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 30--10--2017 ಲಿಂಕ್ ವಿಳಾಸ https://dekalungi.blogspot.com/2017/10/news-and-photo-date-30-10-2017.html
0 Response to "News and Photo Date: 30--10--2017"
ಕಾಮೆಂಟ್ ಪೋಸ್ಟ್ ಮಾಡಿ