News and Photos Date: 11--10--2017

News and Photos Date: 11--10--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photos Date: 11--10--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photos Date: 11--10--2017
ಲಿಂಕ್ : News and Photos Date: 11--10--2017

ಓದಿ


News and Photos Date: 11--10--2017

ಮಹಿಳಾ ಆಯೋಗದ ಅಧ್ಯಕ್ಷರ ಪ್ರವಾಸ
**********************************
ಕಲಬುರಗಿ,ಅ.11.(ಕ.ವಾ)-ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರು ಬಳ್ಳಾರಿಯಿಂದ ರಸ್ತೆ ಮೂಲಕ ಅಕ್ಟೋಬರ್ 12ರಂದು ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 14ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸುವರು.
ಸೇನಾ ಭರ್ತಿ ರ್ಯಾಲಿ: ಸುಮಾರು 2500 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಸಂಭವ
***********************************************************************
ಕಲಬುರಗಿ,ಅ.11(ಕ.ವಾ.)-ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಕಲಬುರಗಿಯಲ್ಲಿ ಅಕ್ಟೋಬರ್ 14ರವರೆಗೆ ನಡೆಯುವ ಸೇನಾ ಭರ್ತಿ ರ್ಯಾಲಿಯಲ್ಲಿ ಈ ಭಾಗದ ಸುಮಾರು 2500 ಅಭ್ಯರ್ಥಿಗಳು ತಾತ್ಕಾಲಿಕವಾಗಿ ಆಯ್ಕೆಯಾಗಲಿದ್ದಾರೆ ಎಂದು ಕರ್ನಟಕ-ಕೇರಳ ಸೇನಾ ನೇಮಕಾತಿ ವಲಯದ ಬ್ರಿಗೇಡಿಯರ್ ಪಿ.ಎಸ್.ಬಾಜ್ವಾ ತಿಳಿಸಿದರು.
ಅವರು ಬುಧವಾರ ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಪತ್ರಕರ್ತರನ್ನುದ್ದೇಸಿಶಿ ಮಾತನಾಡಿ, ಸೇನಾ ಭರ್ತಿ ರ್ಯಾಲಿಗೆ ಎರಡು ತಿಂಗಳ ಹಿಂದೆ ಆನ್‍ಲೈನ್ ಅರ್ಜಿ ಕರೆಯಲಾಗಿತ್ತು. ಸುಮಾರು 35300 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಕಲಬುರಗಿಯಲ್ಲಿ ನಡೆಯುತ್ತಿರುವ 10 ದಿನಗಳ ರ್ಯಾಲಿಯಲ್ಲಿ ಸುಮಾರು 28000 ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಈ ರ್ಯಾಲಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಿದ ನಂತರ ಬೆಳಗಾವಿಯಲ್ಲಿ 2018ರ ಜನವರಿ ಮಾಹೆಯಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮಥ್ರ್ಯ ಪರೀಕ್ಷೆ ಅಂಕಗಳ ಆಧಾರದ ಮೇಲೆ ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಯುವುದು. ಸೇನೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿ ದೊರೆಯುತ್ತಿದ್ದಂತೆ 2018ರ ಮಾರ್ಚ್ ಮಾಹೆಯಲ್ಲಿ ದೇಶದಲ್ಲಿ ಅವಶ್ಯಕವಿರುವ ಸೇನಾ ರೆಜಿಮೆಂಟ್‍ಗಳಿಗೆ ಕಳುಹಿಸಲಾಗುವುದು ಎಂದು ವಿವರಿಸಿದರು.
10ನೇ ತರಗತಿ ಪಾಸಾಗಿರುವ 18-20 ವಯಸ್ಸಿನ ಯುವಕರು ಸೇನೆಗೆ ಆಯ್ಕೆಯಾಗುತ್ತಿದ್ದಾರೆ. ಅವರಿಗೆ ಪ್ರಾರಂಭದಲ್ಲಿಯೇ ಸುಮಾರು 20000 ರೂ.ಗಳ ಸಂಬಳ, ಉಚಿತ ಸೌಕರ್ಯಗಳನ್ನು ನೀಡಲಾಗುತ್ತದೆ. ಸೇನೆಯಲ್ಲಿ ಭರ್ತಿಯಾದ ಯೋಧನ ಕುಟುಂಬದ ಸಂಪೂರ್ಣ ಜವಾಬ್ದಾರಿ ಸರ್ಕಾರ ವಹಿಸುತ್ತದೆ. ಈ ಎಲ್ಲ ಸೌಲಭ್ಯಗಳನ್ನು ನೀಡುತ್ತಿರುವ ಸೇನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭರ್ತಿಯಾಗಬೇಕು. ಭಾರತೀಯ ಸೇನೆಯಲ್ಲಿ ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್/ಎಸ್.ಕೆ.ಟಿ., ಸೋಲ್ಜರ್ ಟ್ರೇಡ್ಸ್‍ಮನ್, ಸೋಲ್ಜರ್ ನರ್ಸಿಂಗ್ ಅಸಿಸ್ಟಂಟ್ ಮತ್ತು ಸೋಲ್ಜರ್ ಟೆಕ್ನಿಕಲ್ ಹುದ್ದೆಗಳಿಗೆ ಸೇನಾ ಭರ್ತಿ ರ್ಯಾಲಿಯನ್ನು ಕಾಲಕಾಲಕ್ಕೆ ನಡೆಸಲಾಗುವುದು ಎಂದರು.
ಉತ್ತರ ಕರ್ನಾಟಕದ ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಯುವಕರಿಗೆ ಈ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬೇರೆ ಜಿಲ್ಲೆಯಿಂದ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸುವ ಅಭ್ಯರ್ಥಿಗಳಿಗೆ ಜಿಲ್ಲಾಡಳಿತ ಸೂಕ್ತ ವಸತಿ ಮತ್ತು ಊಟದ ವ್ಯವಸ್ಥೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ಅವರು, ಸೇನಾ ಭರ್ತಿಗಾಗಿ ಅಭ್ಯರ್ಥಿಗಳಿಗೆ ತರಬೇತಿ ನೀಡುತ್ತಿರುವ ಕೆಲವರು ಸೇನೆಯಲ್ಲಿ ಭರ್ತಿ ಮಾಡಿಸುವ ಆಮೀಷ ಒಡ್ಡಿ ಅಭ್ಯರ್ಥಿಗಳಿಂದ ಹಣ
ದೋಚುತ್ತಿದ್ದಾರೆ. ಮಾನಸಿಕ ಹಾಗೂ ದೈಹಿಕವಾಗಿ ಸಮರ್ಥರಿದ್ದವರಿಗೆ ಮಾತ್ರ ಸೇನೆಯಲ್ಲಿ ಭರ್ತಿ ಮಾಡಲಾಗುವುದು. ಸೇನಾ ಭರ್ತಿಯು ಸಂಪೂಣ್ವಾಗಿ ಪಾರದರ್ಶಕ ಮತ್ತು ಉಚಿತವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಕಾರಣ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮೀಷಕ್ಕೆ ಒಳಗಾಗಬಾರದೆಂದು ಕೋರಿದರು.
ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯು 13 ಜಿಲ್ಲೆಗಳು, ಮಂಗಳೂರು ಕಚೇರಿ 11 ಜಿಲ್ಲೆಗಳು ಹಾಗೂ ಬೆಳಗಾವಿ ಕಚೇರಿ 6 ಜಿಲ್ಲೆಗಳನ್ನು ಒಳಗೊಂಡಿದೆ. ಬೆಳಗಾವಿ ಕಚೇರಿಯು ಕೇವಲ 6 ಜಿಲ್ಲೆಗಳನ್ನು ಒಳಗೊಂಡ ಕಾರಣ ಸೇನೆಯಲ್ಲಿ ಖಾಲಿಯಾಗುವ ಹುದ್ದೆಗಳ ಪೈಕಿ ಬೆಳಗಾವಿ ಸೇನಾ ನೇಮಕಾತಿ ಕಚೇರಿಗೆ ಹೆಚ್ಚಿನ ಪಾಲು ದೊರೆಯುತ್ತದೆ. ಈ ಭಾಗದಲ್ಲಿ ಹಮ್ಮಿಕೊಳ್ಳುವ ರ್ಯಾಲಿಗಳಲ್ಲಿ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೆ. ಸೇನಾ ಭರ್ತಿ ರ್ಯಾಲಿ ಮನೆಬಾಗಿಲಿಗೆ ಬಂದಾಗ ಆ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಯ್ಕೆಯಾಗಬೇಕು. ಈ ಹಿಂದೆ ಕಲಬುರಗಿಯಲ್ಲಿ ರ್ಯಾಲಿ ಹಮ್ಮಿಕೊಂಡಿರುವುದರಿಂದ ಈ ಬಾರಿಯ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೆಳಗಾವಿಯ ಆರ್ಮಿ ರಿಕ್ರೂಟ್‍ಮೆಂಟ್ ಆಫೀಸಿನ ರಿಕ್ರೂಟಿಂಗ್ ಡೈರೆಕ್ಟರ್ ಕರ್ನಲ್ ಸೆಂಗೋಲ್ ಸಂಥನಮ್, ಬೆಂಗಳೂರು ಆರ್ಮಿ ರಿಕ್ರೂಟ್‍ಮೆಂಟ್ ಆಫೀಸಿನ ರಿಕ್ರೂಟಿಂಗ್ ಡೈರೆಕ್ಟರ್ ಕರ್ನಲ್ ರಾಜಮನ್ನಾರ, ಕರ್ನಲ್ ನವರತ್ತನÀ, ತ್ರಿವೇಂದ್ರಮ್ ಆರ್ಮಿ ರಿಕ್ರೂಟ್‍ಮೆಂಟ್ ಆಫೀಸಿನ ರಿಕ್ರೂಟಿಂಗ್ ಡೈರೆಕ್ಟರ್ ಕರ್ನಲ್ ಸಂಜಯ ಪಟ್ನಾಯಕ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಕಾಮಗಾರಿಗಳ ಅನುಮೋದನೆ ಪಡೆದು ತ್ವರಿತವಾಗಿ ಅನುಷ್ಠಾನಕ್ಕೆ ತನ್ನಿ
**************************************************************
ಕಲಬುರಗಿ,ಅ.11.(ಕ.ವಾ.)-ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಕೈಗೊಳ್ಳುವ ರಸ್ತೆ, ಸೇತುವೆ, ಕೆರೆ ನಿರ್ಮಾಣ ಸೇರಿದಂತೆ ಎಲ್ಲಾ ಕಾಮಗಾರಿಗಳಿಗೆ ಮಾಸಾಂತ್ಯಕ್ಕೆ ಅನುಮೋದನೆ ಪಡೆದು ತ್ವರಿತಗತಿಯಲ್ಲಿ ಅನುಷ್ಟಾನಕ್ಕೆ ತರುವ ಮೂಲಕ ನಿಗದಿಯಂತೆ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರ ಕಲಬುರಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಂಭವವಿದ್ದು, ಕುಡಿಯುವ ನೀರು ಪೂರೈಸಬೇಕು. ಆಳಂದ ತಾಲೂಕಿನ ನಿಂಬರ್ಗಾ ಆಸ್ಪತ್ರೆಯಲ್ಲಿ ವಿದ್ಯುತ್ ಪೂರೈಕೆಯಿಲ್ಲದೆ ರೋಗಿಗಳು ಸಮಸ್ಯೆ ಅನುಭವಿಸುತ್ತಿದ್ದು, ಕೂಡಲೆ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಿಂಬರ್ಗಾ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಈ ಸಮಸ್ಯೆಯಾಗಿದ್ದು, ಈ ಕುರಿತು ಈಗಾಗಲೇ ಕೇಂದ್ರ ಕಚೇರಿಗೆ ವರದಿ ಮಾಡಲಾಗಿದೆ. ನಿಂಬರ್ಗಾ ಆಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಕಾರ್ಯನಿರ್ವಹಣೆಗೆ 2.5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳು ತಿಳಿಸಿದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ವಿಭಾಗದಿಂದ ಒಟ್ಟು 186 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ 21 ಕಾಮಗಾರಿಗಳನ್ನು ಪೂರ್ಣಗೊಳಿಸಿದರೆ 22 ಪ್ರಗತಿಯ ಹಂತದಲ್ಲಿವೆ. 143 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು, 20 ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದೂವರೆಗೆ 1202.92 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಸೆಪ್ಟೆಂಬರ್ ಅಂತ್ಯಕ್ಕೆ ಸಂಪೂರ್ಣ ಅನುದಾನ ಖರ್ಚು ಮಾಡುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೋರ್ಲಪಾಟಿ ಮಾತನಾಡಿ ರಾಜ್ಯ ಸರ್ಕಾರ ರೂ.50 ಲಕ್ಷದೊಳಗಿನ ಸಿವಿಲ್ ಕಾಮಗಾರಿಗಳ ಪೈಕಿ ಶೇ.17.15ರಷ್ಟು ಕಾಮಗಾರಿಗಳು ಪರಿಶಿಷ್ಠ ಜಾತಿ ಮತ್ತು ಶೇ.6.95 ರಷ್ಟು ಕಾಮಗಾರಿಗಳು ಪರಿಶಿಷ್ಠ ಪಂಗಡದ ಗುತ್ತಿಗೆದಾರರಿಗೆ ಟೆಂಡರ್ ನೀಡಬೇಕೆಂದು ಮೀಸಲಾತಿ ಕಲ್ಪಿಸಿದ್ದು, ಅದರಂತೆ ಎಲ್ಲಾ ಇಲಾಖೆಗಳು ಕ್ರಮ ಕೈಗೊಳ್ಳಬೇಕು. ಮೀಸಲಾತಿವಲ್ಲದ ಕಾಮಗಾರಿಗಳು ಎಲ್ಲಾ ವರ್ಗದ ಗುತ್ತಿಗೆದಾರರಿಗೆ ಮುಕ್ತವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಗುತ್ತಿಗೆದಾರರಿಗೆ ಸರಿಯಾದ ಮಾಹಿತಿ ನೀಡಬೇಕು ಎಂದರು.
ಚಿಂಚೋಳಿ ತಾಲೂಕಿನ ಕೆಲವು ಗ್ರಾಮಗಳು ಹಾಗೂ ಭೂಸನೂರ, ಪೇಠಶಿರೂರ ಗ್ರಾಮಗಳಿಗೆ ನಿರಂತರ ಜ್ಯೋತಿ ಯೋಜನೆಯಡಿ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಇದರಿಂದ ಬೆಳೆಗಳು ಹಾಳಾಗುತ್ತಿವೆ ಎಂದು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ ಅವರು ಅತೃಪ್ತಿ ವ್ಯಕ್ತಪಡಿಸಿ, ನಿರಂತರ ವಿದ್ಯುತ ಪೂರೈಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಮತ್ತು ಇತರೆ ತಾಂತ್ರಿಕ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ನಿರಂತರ ಜ್ಯೋತಿ ಯೋಜನೆಯಡಿ ಮೊದಲನೇ ಕಂತಿನ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲಾಗಿದೆ. ವಿವಿಧ ನಿಗಮಗಳಿಂದ ಆಯ್ಕೆಗೊಳ್ಳುವ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಸಕ್ತ ವರ್ಷದಲ್ಲಿ 425 ಗುರಿ ಹೊಂದಲಾಗಿದ್ದು, ಸೆಪ್ಟೆಂಬರ್ ಅಂತ್ಯದ ವರೆಗೆ 144 ರೈತರಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ. ಇದಕ್ಕಾಗಿ ಈ ವರ್ಷ 438.42 ಲಕ್ಷ ಹಣ ನಿಗದಿಪಡಿಸಿದ್ದು, ಕಳೆದ ಮಾಹೆ ಅಂತ್ಯಕ್ಕೆ 257.61 ಲಕ್ಷ ಹಣ ಖರ್ಚು ಮಾಡಲಾಗಿದೆ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದರು. ವಿದ್ಯುತ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಆಗುತ್ತಿಲ್ಲ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಗಮನಕ್ಕೆ ತಂದರು. ಜೆಸ್ಕಾಂ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಎರಡು ದಿನದೊಳಗೆ ಸಭೆ ಸೇರಿ ಪರಸ್ಪರ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರು.
ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಬಳ್ಳೂರ್ಗಿ ಗ್ರಾಮದ ಹತ್ತಿರ ಸೇತುವೆ ಹಾಳಾಗಿದೆ ಹಾಗೂ ತಾಲೂಕಿನ ಜೇರಟಗಿ, ಅಂಕಲಗಿ, ಕಲ್ಲೂರ(ಬಿ), ಇಟಗಾ, ಭೋಸಗಾ, ಹುಲ್ಲೂರ, ನೆಲೋಗಿ, ಯಾತನೂರ ಗ್ರಾಮಗಳಲ್ಲಿ ರೈತರು ಬೆಳೆದ ಹತ್ತಿ, ತೊಗರಿ, ಸೂರ್ಯಕಾಂತಿ, ಉದ್ದು, ಹೆಸರು ಬೆಳೆ ಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲಯ್ಯ ಹಿರೇಮಠ ಸಭೆಗೆ ಕೋರಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ಮಾತನಾಡಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹವರಿಗೆ ಪ್ರತಿ ತಾಲೂಕಿನಲ್ಲಿ 3 ಕೇಂದ್ರಗಳಂತೆ ಜಿಲ್ಲೆಯ 24 ಕೇಂದ್ರಗಳಲ್ಲಿ ವಿಜ್ಞಾನ, ಗಣಿತ ಮತ್ತು ಆಂಗ್ಲ ವಿಷಯದ ಬಗ್ಗೆ 25 ದಿನಗಳ ವಿಶೇಷ ತರಬೇತಿ ಇಂದಿನಿಂದ ಪ್ರಾರಂಭಿಸಲಾಗಿದೆ. ಪ್ರತಿ ಕೇಂದ್ರದಲ್ಲಿ 3 ರಂತೆ ಜಿಲ್ಲೆಯ ಎಂಟು ಬ್ಲಾಕುಗಳಲ್ಲಿ 72 ವಿಶೇಷ ಶಿಕ್ಷಕರು ಭೋಧನೆ ಮಾಡುತ್ತಿದ್ದು, ಅವರಿಗೆ ಇಲಾಖೆಯಿಂದ ವಿಶೇಷ ಗೌರವಧನ ನೀಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಇದೊಂದು ಉತ್ತಮ ಯೋಜನೆಯಾಗಿದ್ದು, ವಿದ್ಯಾರ್ಥಿಗಳ ಹಾಜರಾತಿ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನೊಂದಣಿಯಾಗಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಜಿ.ಪಂ. ಸಿ.ಇ.ಓ ಸೂಚಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 341143 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯ ಲಾಭ ಪಡೆಯುತ್ತಿದ್ದು, ಬಿಸಿಯೂಟಕ್ಕೆ 6104.74 ಲಕ್ಷ ಮತ್ತು ಕ್ಷೀರಭಾಗ್ಯಕ್ಕೆ 2381.18 ಲಕ್ಷ ಹಣ ಈ ವರ್ಷ ವಿನಿಯೋಗಿಸಲಾಗುತ್ತಿದೆ ಎಂದು ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿಗಳು ತಿಳಿಸಿದರು. ಬಿಸಿಯೂಟ ಯೋಜನೆಯಡಿ ಕಳೆದ ಮಾಹೆಯಲ್ಲಿ ತೊಗರಿ ಬೆಳೆ ಪೂರೈಕೆಯಾಗಿಲ್ಲ, ತೊಗರಿ ಬೆಳೆ ಪೂರೈಕೆಗೆ ಕೂಡಲೆ ಟೆಂಡರ್ ಕರೆಯಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್ ಯಾಕಾಪುರ ತಿಳಿಸಿದರು. ಟೆಂಡರ್ ಪ್ರಕ್ರಿಯೆ ರಾಜ್ಯ ಮಟ್ಟದಲ್ಲಿ ಪ್ರತಿ ತಿಂಗಳು ನಡೆಯುವುದರಿಂದ ಹಾಗೂ ತಾಂತ್ರಿಕ ಕಾರಣಗಳಿಂದ ಈ ಸಮಸ್ಯೆಯಾಗಿದ್ದು, ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದೆಂದು ಅಧಿಕಾರಿಗಳು ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಜಿಲಾನಿ ಹೆಚ್. ಮೊಕಾಶಿ ಮಾತನಾಡಿ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿತ್ತಾಪುರ ತಾಲೂಕಿನಲ್ಲಿ ಅಧಿಕ ಮಳೆಯಾಗಿದೆ. ಇದರಿಂದ ಸಹಜವಾಗಿ ಇಲ್ಲಿನ ಪ್ರಮುಖ ಬೆಳೆ ತೊಗರಿ ಇಳುವರಿ ಹೆಚ್ಚು ನಿರೀಕ್ಷಿಸಬಹುದಾಗಿದೆ. ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಲು ಕಂದಾಯ, ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಜಂಟಿ ಸರ್ವೇಗಾಗಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಅದರಂತೆ ಸರ್ವೆ ಕಾರ್ಯ ನಡೆಯುತ್ತಿದ್ದು, 15 ದಿನದೊಳಗೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆ ಬಿತ್ತನೆಯಾಗಿದ್ದು, ಇನ್ನು 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿದೆ. ಬೀಜಗಳ ದಾಸ್ತಾನು ಸಾಕಷ್ಟು ಲಭ್ಯವಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಆರೋಗ್ಯ, ಸಣ್ಣ ಮತ್ತು ಮಧ್ಯಮ ನೀರಾವರಿ, ಆಯುಷ್, ಲೋಕೋಪಯೋಗಿ, ಕಾಡಾ, ವಯಸ್ಕರ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಭಾಗವಹಿಸಿದ್ದರು.
“ಸಿ” ವೃಂದದ ವಿವಿಧ ಹುದ್ದೆಯ ಪರೀಕ್ಷೆಗೆ 28000 ಅಭ್ಯರ್ಥಿಗಳು
******************************************************
ಕಲಬುರಗಿ,ಅ.11.(ಕ.ವಾ)-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ‘ಸಿ’ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ಕಲಬುರಗಿ ನಗರದಲ್ಲಿ ಅಕ್ಟೋಬರ್ 13, 14, 15 ಹಾಗೂ 16ರಂದು ನಡೆಯಲಿದ್ದು, ಈ ಪರೀಕ್ಷೆಗೆ ಒಟ್ಟು 28000 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ‘ಸಿ’ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕ ಲೋಕಸೇವಾ ಆಯೋಗದಿಂದ ಅಕ್ಟೋಬರ್ 13ರಂದು 04 ಕೇಂದ್ರಗಳಲ್ಲಿ, ಅಕ್ಟೋಬರ್ 14ರಂದು 27 ಕೇಂದ್ರಗಳಲ್ಲಿ, ಅಕ್ಟೋಬರ್ 15ರಂದು 74 ಕೇಂದ್ರಗಳಲ್ಲಿ ಹಾಗೂ ಅಕ್ಟೋಬರ್ 16ರಂದು 8 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು.
ಪ್ರತಿ ಮೂರು ಕೇಂದ್ರಗಳಿಗೆ ಓರ್ವ ರೂಟ್ ಆಫೀಸರ್ ಹಾಗೂ ಓರ್ವ ವೀಕ್ಷಕರನ್ನು ನೇಮಿಸಲಾಗಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯು ಬೆಳಗಿನ 10 ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವುದರೊಂದಿಗೆ ಮತ್ತು ಜವಾಬ್ದಾರಿಯಿಂದ ಪರೀಕ್ಷೆಯನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷೆಗಾಗಿ ನೇಮಕಗೊಂಡ ಮಾರ್ಗಾಧಿಕಾರಿಗಳು ನಿಗದಿತ ಸಮಯದಲ್ಲಿ ಖಜಾನೆಗಳಲ್ಲಿ ಹಾಜರಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕು. ಆದರೆ ಪ್ರಶ್ನೆ ಪತ್ರಿಕೆ ಬಂಡಲ್‍ಗಳನ್ನು ಪಡೆಯುವ ಮುನ್ನ ಬಂಡಲ್ ಭದ್ರಪಡಿಸಿರುವುದನ್ನು (ಸೀಲ್) ಖಚಿತಪಡಿಸಿಕೊಳ್ಳಬೇಕು. ಮಾರ್ಗಾಧಿಕಾರಿಗಳು, ವೀಕ್ಷಕರು ತಮ್ಮ ವಾಹನದಲ್ಲಿ ಪೊಲೀಸ್ ಅಧಿಕಾರಿಗಳನ್ನು ಕರೆದುಕೊಂಡು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಪೂರ್ಣಗೊಳ್ಳುವವರೆಗೆ ಕೇಂದ್ರದಲ್ಲಿಯೇ ಇದ್ದು, ಮಾನಿಟರ್ ಮಾಡಬೇಕೆಂದು ಹೇಳಿದರು.
ಪರೀಕ್ಷೆಗಳು ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡಲ್‍ಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಂದ ಅಂಚೆ ಕಚೇರಿಗೆ ನಿಗದಿತ ಸಮಯದಲ್ಲಿ ತಲುಪುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ಮೊಬೈಲ್‍ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತರುವಂತಿಲ್ಲ. ಪರೀಕ್ಷಾ ನಿಯಮಾವಳಿ ಪ್ರಕಾರ ಈ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಯಾವುದೇ ಕಾರಣಕ್ಕೂ ಅಕ್ರಮ ಅವ್ಯವಹಾರಗಳಿಗೆ ಅವಕಾಶ ನೀಡದಂತೆ ತೀವ್ರ ನಿಗಾವಹಿಸಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಿದರು.
ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಆವರಣ ಮತ್ತು ಕೊಠಡಿಯಲ್ಲಿ ಮೊಬೈಲ್, ವಿದ್ಯುತ್ ಉಪಕರಣ, ಯಾವುದೇ ತರಹದ ಗಡಿಯಾರ, ಕೈ ಗಡಿಯಾರ ಬಳಸುವುದನ್ನು ನಿಷೇಧಿಸಲಾಗಿದೆ. ಆದಾಗ್ಯೂ ಅಭ್ಯರ್ಥಿಗಳು ಮೊಬೈಲ್ ಫೋನ್, ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ತಂದಿದ್ದಲ್ಲಿ ಪರೀಕ್ಷಾ ಉಪಕೇಂದ್ರದ ಮುಖ್ಯ ದ್ವಾರದಲ್ಲಿಯೇ ಎಲ್ಲ ವಸ್ತುಗಳನ್ನು ಇಡಬೇಕು. ನಂತರವೇ ಅಭ್ಯರ್ಥಿಗಳ ತಪಾಸಣೆ ನಡೆಸಬೇಕು. ಅಭ್ಯರ್ಥಿಗಳು ಪೆನ್ನು ಮತ್ತು ಪ್ರವೇಶ ಪತ್ರವನ್ನಷ್ಟೆ ಪರೀಕ್ಷಾ ಕೊಠಡಿಯೊಳಗೆ ತರಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಡೌನ್‍ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಮತ್ತು ಅವರ ಅರ್ಜಿಯೊಂದಿಗೆ ಅಪ್ಲೋಡ್ ಮಾಡಿದ ಆಧಾರ್ ಕಾರ್ಡ, ಆಧಾರ ಕಾರ್ಡ ಹೊಂದಿರದ ಅಭ್ಯರ್ಥಿಗಳು ಆಧಾರ್ ಕಾರ್ಡ ಪಡೆಯಲು ಸಲ್ಲಿಸಿದ ಅರ್ಜಿಯ ಸ್ವೀಕೃತಿ ಹಾಗೂ ಒಂದು ಗುರುತಿನ ಚೀಟಿ, ಪ್ಯಾನ್‍ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‍ಪೋರ್ಟ್, ವೋಟರ ಐಡಿ ಇವುಗಳಲ್ಲಿ ಯಾವುದಾದರೂ ಒಂದು ಗುರುತಿನ ಚೀಟಿ ತರುವುದು ಕಡ್ಡಾಯವಾಗಿರುತ್ತದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಮಾರ್ಗಾಧಿಕಾರಿಗಳು, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಈ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು ತೀವ್ರ ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕೆಂದರು.
ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹೆಬೂಬ್ ಪಾಶಾ ಕಾರಟಗಿ ಸೇರಿದಂತೆ ಮತ್ತಿತರರು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅಮರ್ಜಾ ಜಲಾಶಯದಿಂದ ನೀರು ಬಿಡುಗಡೆ: ಮುನ್ನೆಚ್ಚರಿಕೆÉ ವಹಿಸಲು ಸೂಚನೆ
*********************************************************************
ಕಲಬುರಗಿ,ಅ.11.(ಕ.ವಾ)-ಆಳಂದ ತಾಲೂಕಿನ ಭೂಸನೂರ ಗ್ರಾಮದ ಅಮರ್ಜಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನಿರಂತರವಾಗಿ ಒಳ ಹರಿವು ಹೆಚ್ಚಾಗುತ್ತಿದೆ. ಜಲಾಶಯವು ಭರ್ತಿಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 600 ಕ್ಯೂಸೆಕ್ಸ್ ನೀರನ್ನು ಆಣೆಕಟ್ಟಿನ ಗೇಟುಗಳ ಮುಖಾಂತರ ನದಿಗೆ ಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಕಲಬುರಗಿ ಐ.ಪಿ.ಸಿ. ವಿಭಾಗ ನಂ.1ರ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ತಿಳಿಸಿದ್ದಾರೆ.
ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಬೀಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ನದಿ ಪಾತಳಿಯ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ಆಸ್ತಿ ಹಾಗೂ ದನಕರುಗಳಿಗೆ ಹಾನಿಯಾಗದಂತೆ ಮುನ್ನೇಚ್ಚರಿಕೆ ವಹಿಸಬೇಕೆಂದು ಅವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುಲ್ಕ ಪಾವತಿಸಿ ಎಲ್.ಇ.ಡಿ. ಪರದೆ ಮೂಲಕ ವ್ಯಾಪಾರ ಪ್ರಚಾರ ಪಡೆಯಲು ಸೂಚನೆ
**************************************************************************
ಕಲಬುರಗಿ,ಅ.11.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಎಲ್.ಇ.ಡಿ. ಪರದೆ ಅಳವಡಿಸಲಾಗಿದೆ. ಈ ಪರದೆ ಮೇಲೆ ಇಚ್ಛೆಯುಳ್ಳ ಸಾರ್ವಜನಿಕರು, ಕಂಪನಿ, ವರ್ತಕರು ತಮ್ಮ ಕಂಪನಿ, ಸಂಸ್ಥೆ ಅಥವಾ ಮತ್ತಿತರ ರೀತಿಯ ವ್ಯಾಪಾರದ ಪ್ರಚಾರಕ್ಕಾಗಿ ಇಚ್ಛಿಸಿದ್ದಲ್ಲಿ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆದು ಜಾಹಿರಾತು ಶುಲ್ಕ ಪಾವತಿಸಿ ಪ್ರದರ್ಶಿಸಬಹುದಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಪಿ. ಸುನೀಲಕುಮಾರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆ ಪರಿಸರ ಇಂಜಿನಿಯರ್ ಮುನಾಫ್ ಪಟೇಲ್ ಅವರನ್ನು ಮೊಬೈಲ್ ಸಂಖ್ಯೆ 9742117786 ಹಾಗೂ ಜಾಹೀರಾತು ಶಾಖೆಯ ಪ್ರಥಮ ದರ್ಜೆ ಸಹಾಯಕ ಮೊಹರಿರ್ ಅವರನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಅಕ್ಟೋಬರ್ 13ರಂದು ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ಉದ್ಘಾಟನೆ
**************************************************************************
ಕಲಬುರಗಿ,ಅ.11.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯದಿಂದ 2017-18ನೇ ಶೈಕ್ಷಣಿಕ ಸಾಲಿನ ಅಂತರ ಮಹಾವಿದ್ಯಾಲಯ ಯುವಜನೋತ್ಸವ-2017 ಕಾರ್ಯಕ್ರಮವನ್ನು ಅಕ್ಟೋಬರ್ 13, 14 ಮತ್ತು 15 ರಂದು ಮೂರು ದಿನಗಳು ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನ ಗಂಗಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 13ರಂದು ಬೆಳಿಗ್ಗೆ 9.30 ಗಂಟೆಗೆ ವಿಶ್ವವಿದ್ಯಾಲಯದಲ್ಲಿ ಸಾಂಸ್ಕøತಿಕ ವಾತಾವರಣವನ್ನು ನಿರ್ಮಿಸಲು ಕಾರ್ಯಸೌಧದಿಂದ ಡಾ|| ಬಿ. ಆರ್. ಅಂಬೇಡ್ಕರ್ ಭವನದವರೆಗೆ ಯುವಜನೋತ್ಸವದ ಮೆರವಣಿಗೆ, ಜನಪದ ನೃತ್ಯ, ಮೇಳಗಳೊಂದಿಗೆ ಆರಂಭಗೊಳ್ಳಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯ ಡಾ|| ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಮೈಸೂರಿನ ಖ್ಯಾತ ಹಾಸ್ಯ ಸಾಹಿತಿಗಳು ಹಾಗೂ ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಕೃಷ್ಣೇಗೌಡ ಅವರು ಅಂತರ್ ಮಹಾವಿದ್ಯಾಲಯ ಯುವಜನೋತ್ಸವದ ಸಮಾರಂಭವನ್ನು ಉದ್ಘಾಟಿಸುವರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ಆರ್. ನಿರಂಜನ ಅಧ್ಯಕ್ಷತೆ ವಹಿಸುವರು. ಸಿಂಡಿಕೇಟ್ ಸದಸ್ಯ ನಾರಾಯಣರಾವ ಕಾಳೆ, ವಿದ್ಯಾವಿಷಯಕ ಸದಸ್ಯ ನಾಗೇಶ ಕಾಳೆ, ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಪಾಟೀಲ ಹಾಗೂ ವಿತ್ತಾಧಿಕಾರಿ ಪ್ರೊ. ರಾಜನಾಳಕರ ಲಕ್ಷ್ಮಣ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಯುವಜನೋತ್ಸವದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ಸಾಂಸ್ಕøತಿಕ ಚಟುವಟಿಕೆಗಳಾದ ವೃತ್ತಿ ಕಲೆ, ದೃಶ್ಯಕಲಾ ಪರಂಪರೆ ಮತ್ತು ಸಂಸ್ಕøತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಯುವ ಉತ್ಸಾಹಿ ತರುಣರನ್ನು ಗುರುತಿಸಿ ಬೆಳೆಸಲು ವಿವಿಧ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವೈವಿಧ್ಯಮಯವಾದ 25 ಬಗೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಾಂಸ್ಕøತಿಕ ಸ್ಪರ್ಧೆಗಳ ಆಕರ್ಷಣೆಯ ಕೇಂದ್ರವಾದ ಜ್ಞಾನಗಂಗೆಯ ಆವರಣದಲ್ಲಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು, ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ವಿದ್ಯಾರ್ಥಿ ಕಲಾವಿದರಿಗಾಗಿ ವಾದ್ಯ ಸಂಗೀತ, ಪಾಶ್ಚಿಮಾತ್ಯ ಸಂಗೀತ, ಹಾಡುಗಾರಿಕೆ, ಶಾಸ್ತ್ರೀಯ ಹಾಗೂ ಜನಪದ ನೃತ್ಯಗಳು, ಮೂಕಾಭಿನಯ, ಅನುಕರಣೆ/ಪ್ರಹಸನ, ಏಕಾಂಕ ನಾಟಕಗಳು, ಪೇಂಟಿಂಗ್, ಕಾರ್ಟೂನಿಂಗ್, ಕ್ಲೇಮಾಡೆಲ್, ರಂಗೋಲಿ, ರಸಪ್ರಶ್ನೆ, ಚರ್ಚಾಸ್ಪರ್ಧೆ, ವಾಕ್ಪಟುತ್ವ ಸ್ಪರ್ಧೆಗಳು, ಛಾಯಾಚಿತ್ರ ಸ್ಪರ್ಧೆಗಳನ್ನು ಸಹ ಏರ್ಪಡಿಸಲಾಗಿದೆ.
ಅಕ್ಟೋಬರ್ 15 ರಂದು ಮಧ್ಯಾಹ್ನ 2 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಆರ್. ನಿರಂಜನ ಅವರ ಅಧ್ಯಕ್ಷತೆಯನ್ನು ಅಂತರ ಮಹಾವಿದ್ಯಾಲಯ ಯುವಜನೋತ್ಸವ-2017ರ ಸಮಾರೋಪ ಸಮಾರಂಭ ಜರುಗಲಿದೆ. ಆಳಂದ ಶಾಸಕ ಬಿ. ಆರ್. ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಈಶ್ವರ ಇಂಗನ್, ವಿದ್ಯಾವಿಷಯಕ ಪರಿಷತ್ ಸದಸ್ಯೆ ರಾಣಿಚೆನ್ನಮ್ಮ ಹಲ್ಸೆ, ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಪಾಟೀಲ ಹಾಗೂ ವಿತ್ತಾಧಿಕಾರಿ ಪ್ರೊ. ರಾಜನಾಳಕರ ಲಕ್ಷ್ಮಣ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೂರು ದಿನಗಳು ಜರುಗುವ ಯುವಜನೋತ್ಸವ ಯಶಸ್ವಿಯಾಗಿ ಜರುಗಲು ಕುಲಪತಿಗಳಾದ ಪ್ರೊ. ಎಸ್. ಆರ್. ನಿರಂಜನ ನವರ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಆಮಂತ್ರಣ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಪ್ರೊ. ಎಸ್. ಎಂ. ಹಿರೇಮಠ ಹಾಗೂ ಕಾರ್ಯಕ್ರಮದ ಸಾಂಸ್ಕøತಿಕ ಸಂಯೋಜಕರಾದ ಡಾ. ಕೆ. ಸಿದ್ದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
*****************************************
ಕಲಬುರಗಿ,ಅ.11.(ಕ.ವಾ)-ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮಗಳಡಿ 2017-18ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಟ್ರೇಡ್‍ಗಳಲ್ಲಿ ತರಬೇತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಇಚ್ಛೆಯುಳ್ಳ ಅಭ್ಯರ್ಥಿಗಳು ಕಲಬುರಗಿ ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಅಕ್ಟೋಬರ್ 13ರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ನವೆಂಬರ್ 6ರೊಳಗಾಗಿ ಸಲ್ಲಿಸಬೇಕು. ತರಬೇತಿ ನೀಡುವ ವಿವಿಧ ಟ್ರೇಡ್‍ನ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278660ಗೆ ಸಂಪರ್ಕಿಸಲು ಕೋರಲಾಗಿದೆ.
ವಾಣಿಜ್ಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ
***************************************************
ಕಲಬುರಗಿ,ಅ.11.(ಕ.ವಾ)-ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕಲಬುರಗಿ ವಿಭಾಗದ ವ್ಯಾಪ್ತಿಯಲ್ಲಿ ವಾಣಿಜ್ಯ ಶಾಲೆಗಳಿಂದ/ನೋಂದಾಯಿತ ಸಂಸ್ಥೆ/ಟ್ರಸ್ಟ್ ಅಥವಾ ಸಾರ್ವಜನಿಕರಿಂದ ವಾಣಿಜ್ಯ ಶಿಕ್ಷಣ (ಬೆರಳಚ್ಚು, ಶೀಘ್ರಲಿಪಿ ಮತ್ತು ಗಣಕಯಂತ್ರ ಕೋರ್ಸ್) ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಸಹ ನಿರ್ದೇಶಕರು ತಿಳಿಸಿದ್ದಾರೆ.
ಸಾಮಾನ್ಯ ವರ್ಗದವರು 2000 ರೂ. ಡಿ.ಡಿ. ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದವರು 1000 ರೂ.ಗಳ ಡಿ.ಡಿ.ಯನ್ನು ಸಹನಿರ್ದೇಶಕರು/ ಕಾರ್ಯದರ್ಶಿಗಳು, ಅಪರ ಆಯುಕ್ತ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ ಕಲಬುರಗಿ ಹೆಸರಿನಲ್ಲಿ ಪಡೆದು ಕರ್ನಾಟಕ ಶಿಕ್ಷಣ ಸಂಸ್ಥೆಗಳು (ವಾಣಿಜ್ಯ ಸಂಸ್ಥೆಗಳ ನೋಂದಣಿ ಮತ್ತು ಮಾನ್ಯತೆ) ನಿಯಮಗಳು 1999 ಮತ್ತು ಸರ್ಕಾರಿ ಅಧಿಸೂಚನೆ ದಿನಾಂಕ: 28-05-2013ರನ್ವಯ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದು ವಾಣಿಜ್ಯ ಸಂಸ್ಥೆಗಳು/ಗಣಕಯಂತ್ರ ಶಿಕ್ಷಣ ಸಂಸ್ಥೆಗಳು ನಡೆಸುವ ಸಂಬಂಧ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಿ ಅಗತ್ಯ ನಿಯಮಗಳನ್ನು ರೂಪಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಳಿಗಾಗಿ hಣಣಠಿ://ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ/seಛಿeಜಟಿ/seಛಿಛಿommeಡಿಛಿeeಜu.hಣmಟ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ, ಕಲಬುರಗಿ ವಿಭಾಗ ಕಲಬುರಗಿಯ ವಾಣಿಜ್ಯ ಶಿಕ್ಷಣ ಶಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ: ಅರ್ಜಿಗಳನ್ನು ಪ್ರಾಚಾರ್ಯರ ಮುಖಾಂತರ ಸಲ್ಲಿಸಲು ಸೂಚನೆ
***********************************************************************
ಕಲಬುರಗಿ,ಅ.11.(ಕ.ವಾ)-ಕಲಬುರಗಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು 2017-18ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ 13,000 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುತ್ತಾರೆ. ಆದರೆ ವಿದ್ಯಾರ್ಥಿಗಳು ಸಂಬಂಧಪಟ್ಟ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಚಾರ್ಯರ ಸಹಿ ಮಾಡಿಸಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಿರುವುದಿಲ್ಲ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈಗಾಗಲೇ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಹಾಗೂ ಪ್ರಾಚಾರ್ಯರು ಅಕ್ಟೋಬರ್ 20ರೊಳಗಾಗಿ ಸಂತ್ರಾಸವಾಡಿ ಝಟಪಟ್ ಬೀಬಿ ದರ್ಗಾ ಹಿಂದುಗಡೆಯಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಂಬಂಧಪಟ್ಟ ಎಲ್ಲ ದಾಖಲಾತಿಗಳನ್ನು ಲಗತ್ತಿಸಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಶಿಷ್ಯವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
**************************************
ಕಲಬುರಗಿ,ಅ.11.(ಕ.ವಾ)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 19ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಞಚಿಡಿeಠಿಚಿss.ಛಿgg.gov.iಟಿ ಹಾಗೂ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಅಥವಾ ಸಹಾಯವಾಣಿ ಸಂಖ್ಯೆ 080-65970005, 65970006ಗಳನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.








ಹೀಗಾಗಿ ಲೇಖನಗಳು News and Photos Date: 11--10--2017

ಎಲ್ಲಾ ಲೇಖನಗಳು ಆಗಿದೆ News and Photos Date: 11--10--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 11--10--2017 ಲಿಂಕ್ ವಿಳಾಸ https://dekalungi.blogspot.com/2017/10/news-and-photos-date-11-10-2017.html

Subscribe to receive free email updates:

0 Response to "News and Photos Date: 11--10--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ