ಶೀರ್ಷಿಕೆ : ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ
ಲಿಂಕ್ : ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ
ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ
ಕೊಪ್ಪಳ ನ. 23 (ಕರ್ನಾಟಕ ವಾರ್ತೆ): ಧಾರವಾಡ-ವಿಜಯಪುರ ಕೇತ್ರ ಪ್ರಚಾರ ನಿರ್ದೇಶನಾಲಯ, ಬೆಂಗಳೂರು ಸಂಗೀತ ಮತ್ತು ನಾಟಕ ವಿಭಾಗ, ಕೊಪ್ಪಳ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನ ಇಲಾಖೆ, ಕೃಷಿ ವಿಸ್ತರಣಾ ಮತ್ತು ಶಿಕ್ಷಣ ಕೇಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಹಲಗೇರಿ ಗ್ರಾಮ ಪಂಚಾಯತ ಸಹಯೋಗದಲ್ಲಿ “ಕೃಷಿ ಮತ್ತು ರೈತ ಕಲ್ಯಾಣ ಯೋಜನೆಗಳ ಕುರಿತು ವಿಶೇಷ ಜನ ಜಾಗೃತಿ ಕಾರ್ಯಕ್ರಮವನ್ನು ನ. 24 ರಂದು ಬೆಳಿಗ್ಗೆ 10-30 ಗಂಟೆಗೆ ಹಲಗೇರಿ ಗ್ರಾಮದ ಶಾಂಭವಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ಈ ಕಾರ್ಯಕ್ರಮದಲ್ಲಿ ಹಲಗೇರಿ ಗ್ರಾಮ ಪಂಚಾಯತ ಅಧ್ಯಕ್ಷ ದೇವಪ್ಪ ಬಸಪ್ಪ ಓಜಿನಹಳ್ಳಿ ಅವರು ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಜಿಲ್ಲಾ ಪಂಚಾಯತ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣ ಶರಣಪ್ಪ ಅಗಸಿಮುಂದಿನ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ತಾ.ಪಂ ಉಪಾಧ್ಯಕ್ಷೆ ಶಂಕ್ರಮ್ಮ ಅಮರೇಶ ಉಲಾಪುರ, ಜಿ.ಪಂ ಸದಸ್ಯ ಗವಿಸಿದ್ದಪ್ಪ ಕರಡಿ, ತಾ.ಪಂ ಸದಸ್ಯೆ ಲಕ್ಷ್ಮೀದೇವಿ ಅಶೋಕ ಅಬ್ಬಿಗೇರಿ, ಕೃಷಿ ವಿಸ್ತರಣಾ ಮತ್ತು ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಎಮ್.ಬಿ ಪಾಟೀಲ, ಹಲಗೇರಿ ಗ್ರಾಮ ಪಂಚಾಯತ ಉಪಾಧ್ಯಕ್ಷೆ ಸರ್ವ ಮಂಗಳ ಶರಣಯ್ಯ ಹಾಗೂ ಸರ್ವ ಸದಸ್ಯರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/11/24.html
0 Response to "ನ. 24 ರಂದು ಹಲಗೇರಿಯಲ್ಲಿ ವಿಶೇಷ ಜನ ಜಾಗೃತಿ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ