ಶೀರ್ಷಿಕೆ : ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ
ಲಿಂಕ್ : ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ
ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ
ಕೊಪ್ಪಳ ನ. 24 (ಕರ್ನಾಟಕ ವಾರ್ತೆ): ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆನೆಕಾಲು ರೋಗ ನಿವಾರಣೆಗಾಗಿ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮವನ್ನು ನ. 27 ರಿಂದ ಡಿಸೆಂಬರ್. 04 ರವರೆಗೆ ಜಿಲ್ಲೆಯ ಕೊಪ್ಪಳ ತಾಲೂಕಿನ ಕಿನ್ನಾಳ, ಕುಷ್ಟಗಿ ತಾಲೂಕಿನ ತಾವರಗೇರಾ ಮತ್ತು ಹನುಮಸಾಗರ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಆನೆಕಾಲು ರೋಗ ನಿವಾರಣೆಗಾಗಿ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ ದಿನದಂದು ಆರೋಗ್ಯ ಇಲಾಖೆಯವರು ಸಂಬಂಧಪಟ್ಟ ಗ್ರಾಮಗಳಲ್ಲಿನ ಮನೆ-ಮನೆಗೆ ಹಾಗೂ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಖದ್ದಾಗಿ ಡಿ.ಇ.ಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆಗಳನ್ನು ಉಚಿತವಾಗಿ ನೀಡುವರು. ಈ ಮಾತ್ರೆಗಳು ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ತೀವ್ರತರನಾದ ಅಡ್ಡ ಪರಿಣಾಮಗಳು ಇರುವುದಿಲ್ಲ. ಡಿ.ಇ.ಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆಗಳನ್ನು ಗ್ರಾಮಗಳಲ್ಲಿರುವ ಪ್ರತಿಯೊಬ್ಬರು ಸೇವಿಸಿ ಆನೆಕಾಲು ರೋಗದಿಂದ ಪಾರಾಗಲು ಸಹಕರಿಸಬೇಕು.
ಆನೆಕಾಲು ರೋಗ ಒಂದು ಭಯಂಕರ ರೋಗವಾಗಿದ್ದು, ಒಮ್ಮೆ ಈ ರೋಗದಿಂದ ಪೀಡಿತರಾದರೆ ಈ ರೋಗವನ್ನು ವಾಸಿ ಮಾಡಲು ಸಾಧ್ಯವಿಲ್ಲ. ಕೊಪ್ಪಳ ತಾಲೂಕಿನ ಕಿನ್ನಾಳ, ಕುಷ್ಟಗಿ ತಾಲೂಕಿನ ತಾವರಗೇರಾ ಮತ್ತು ಹನುಮಸಾಗರ ಗ್ರಾಮಗಳನ್ನು ಆನೆಕಾಲು ರೋಗದ ಹೈರಿಸ್ಕ್ ವಲಯವೆಂದು ಪರಿಗಣಿಸಿದ್ದು, ಈ ಗ್ರಾಮಗಳಲ್ಲಿ ವಾಸಿಸುವ ವ್ಯಕ್ತಿಗಳು ಮೇಲ್ನೋಟಕ್ಕೆ ಆರೋಗ್ಯವಂತರಾಗಿ ಕಂಡರೂ ಕೂಡ ಅವರುಗಳ ದೇಹದಲ್ಲಿ ಈ ರೋಗವನ್ನು ಉಂಟುಮಾಡುವ ರೋಗಾಣುಗಳು ಇರುವ ಸಾಧ್ಯತೆ ಅಧಿಕವಾಗಿರುತ್ತದೆ. ಆನೆಕಾಲು ರೋಗ ಕ್ಯುಲೆಕ್ಸ್ ಜಾತಿಯ ಸೋಂಕಿತ ಸೊಳ್ಳೆಯ ಕಚ್ಚುವಿಕೆಯಿಂದ ಹರಡುತ್ತದೆ. ಸೋಂಕಿತ ಸೊಳ್ಳೆ ಕಚ್ಚಿದ ವ್ಯಕ್ತಿಗಳಲ್ಲಿ 06 ರಿಂದ 08 ವರ್ಷಗಳ ನಂತರ ರೋಗಲಕ್ಷಣಗಳು ಕಾಣಿಸಿಕೊಳ್ಳುವುದರಿಂದ ರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ.
ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಜ್ಯ ಮಟ್ಟದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ನಡೆದ ಆನೆಕಾಲು ರೋಗದ ರಾತ್ರಿ ರಕ್ತಲೇಪನ ಸಮೀಕ್ಷೆಯಲ್ಲಿ ಕೊಪ್ಪಳ ತಾಲೂಕಿನ ಕಿನ್ನಾಳ ಹಾಗೂ ಕುಷ್ಟಗಿ ತಾಲೂಕಿನ ತಾವರಗೇರಾ ಮತ್ತು ಹನುಮಸಾಗರ ಗ್ರಾಮಗಳಲ್ಲಿ ಆನೆಕಾಲು ರೋಗವನ್ನುಂಟು ಮಾಡುವ ರೋಗಾಣುಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿಗೆ ಇರುವುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಖಚಿತಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಗ್ರಾಮಗಳಲ್ಲಿರುವ ಪ್ರತಿಯೊಬ್ಬರು ಆರೋಗ್ಯ ಇಲಾಖೆಯ ವತಿಯಿಂದ ನೀಡುವ ಡಿ.ಇ.ಸಿ ಹಾಗೂ ಅಲ್ಬೆಂಡಾಜೋಲ್ ಮಾತ್ರೆಗಳನ್ನು ತಪ್ಪದೇ ಸೇವಿಸಿ, ಆನೆಕಾಲು ರೋಗದಿಂದ ಮುಕ್ತರಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೀಗಾಗಿ ಲೇಖನಗಳು ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/11/27_5.html
0 Response to "ಆನೆಕಾಲು ರೋಗ ನಿವಾರಣೆಗಾಗಿ ನ. 27 ರಿಂದ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ