ಶೀರ್ಷಿಕೆ : ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ
ಲಿಂಕ್ : ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ
ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ
ಕೊಪ್ಪಳ ನ. 28 (ಕರ್ನಾಟಕ ವಾರ್ತೆ): ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್, ಐಪಿಎಸ್, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ನ. 29 ಮತ್ತು 30 ರಂದು ಎರಡು ದಿನಗಳ ತರಬೇತಿ ಕಾರ್ಯಕ್ರಮ ಕೊಪ್ಪಳದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ.
ಸರ್ಕಾರದ ಸೂಚನೆಯಂತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ಪದವಿ ಕೋರ್ಸುಗಳ (ಬಿಎ, ಬಿಕಾಂ, ಬಿಎಸ್‍ಸಿ) ಹಾಗೂ ಸ್ನಾತ್ತಕೋತ್ತರ ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಐ.ಎ.ಎಸ್., ಐ.ಪಿ.ಎಸ್., ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತಿಳುವಳಿಕೆ ಹೆಚ್ಚಿಸಲು ತರಬೇತಿ ಕಾರ್ಯಕ್ರಮವನ್ನು ಕೊಪ್ಪಳದ ಪ್ರವಾಸಿ ಮಂದಿರದ ಎದುರುಗಡೆ ಇರುವ ಫಿರದೋಸ್‍ನಗರದಲ್ಲಿನ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನ. 29 ಮತ್ತು 30 ರಂದು ಎರಡು ದಿನಗಳ ಕಾಲ ಬೆಳಿಗ್ಗೆ 10-30 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಡೆಸಲಾಗುವುದು.
ತರಬೇತಿ ಕಾರ್ಯಕ್ರಮದಲ್ಲಿ ಕೊಪ್ಪಳ, ಯಲಬುರ್ಗಾ, ಕುಷ್ಟಗಿ ತಾಲೂಕಾ ವ್ಯಾಪ್ತಿಯಲ್ಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ಪದವಿ ಕೋರ್ಸುಗಳ (ಬಿ.ಎ., ಬಿ.ಕಾಂ., ಬಿ.ಎಸ್.ಸಿ) ಹಾಗೂ ಸ್ನಾತ್ತಕೋತ್ತರ ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದೆ ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಚಿದಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/11/29.html
0 Response to "ನ. 29 ರಿಂದ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ