ಶೀರ್ಷಿಕೆ : ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ
ಲಿಂಕ್ : ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ
ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ
ಕೊಪ್ಪಳ ನ. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ಮತದಾನ ಕೇಂದ್ರಗಳಲ್ಲಿ ಹಾಗೂ ತಹಶೀಲ್ದಾರ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಆಕ್ಷೇಪಣೆ ಸಲ್ಲಿಸಲು ನ. 30 ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಅರ್ಹತಾ ದಿನಾಂಕ 01-01-2018 ರ ಆಧಾರದ ಮೇಲೆ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಸಲುವಾಗಿ ಕೊಪ್ಪಳ ಜಿಲ್ಲೆಯ, 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಮತ್ತು 64-ಕೊಪ್ಪಳ ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿಗಳನ್ನು ಅಕ್ಟೋಬರ್. 30 ರಂದು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತದಾನ ಕೇಂದ್ರಗಳಲ್ಲಿ, ತಹಶೀಲ್ದಾರರ ಕಾರ್ಯಾಲಯದಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಇರಿಸಲಾಗಿದೆ.
ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಕ್ರಮದ ವೇಳಾ ಪಟ್ಟಿ ಇಂತಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವುದು ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ನ. 30 ಕೊನೆಯ ದಿನವಾಗಿರುತ್ತದೆ. ನ. 15 ರಿಂದ 30 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಅರ್ಜಿಗಳನ್ನು ಸ್ವೀಕರಿಸುವ ವಿಶೇಷ ಆಂದೋಲನ ಜಿಲ್ಲೆಯಲ್ಲಿ ಕೈಗೊಳ್ಳಲಾಗುವುದು. ನ. 20 ರಂದು ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳ ವಿಲೆವಾರಿ ನಡೆಯಲಿದ್ದು, 2018 ರ ಜನೇವರಿ. 12 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.
ಕೊಪ್ಪಳ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು, ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮತ್ತು ಬದಲಾವಣೆಗಳು ಇದ್ದಲ್ಲಿ ನ. 30 ರ ಒಳಗಾಗಿ ಆಯಾ ಬೂತ್ ಮಟ್ಟದ ಅಧಿಕಾರಿಗಳಿಗೆ/ ಮತದಾನ ಕೇಂದ್ರಗಳಲ್ಲಿ/ ತಹಶೀಲ್ದಾರರ ಕಾರ್ಯಾಲಯಗಳಲ್ಲಿ/ ಸಹಾಯಕ ಆಯುಕ್ತರು, ಕೊಪ್ಪಳ ಇವರ ಕಾರ್ಯಾಲಯಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/11/30.html
0 Response to "ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ. 30 ರೊಳಗೆ ಅರ್ಜಿ ಸಲ್ಲಿಸಿ- ಎಂ. ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ