ಶೀರ್ಷಿಕೆ : ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಲಿಂಕ್ : ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಕೊಪ್ಪಳ ನ. 01 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಪ್ರಥಮವಾಗಿ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಜೆ.ಎಸ್.ಎಸ್ ಕಲಾ ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನವೆಂಬರ್. 15 ಮತ್ತು 16 ರಂದು “ವಿಜ್ಞಾನ, ತಂತ್ರಜ್ಞಾನ ಮತ್ತು ಸಮಾಜ” ಎಂಬ ಕೇಂದ್ರ ವಿಷಯದ ಮೇಲೆ ಆಯೋಜಿಸಿದೆ.
ಸಮ್ಮೇಳನದಲ್ಲಿ ಖ್ಯಾತ ವಿಜ್ಞಾನ ಲೇಖಕರಾದ ಪ್ರೊ. ಜೆ.ಆರ್. ಲಕ್ಷ್ಮಣರಾವ್ ಅವರಿಗೆ ಅಕಾಡೆಮಿಯು “ಜೀವಮಾನ ಸಾಧನೆ” ಪ್ರಶಸ್ತಿಯನ್ನು ನೀಡಿ ಗೌರವಿಸಲಿದೆ. ಕೇಂದ್ರ ವಿಷಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ವಿದ್ವತ್‍ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ ಸಂಸ್ಥೆಗಳ ವಿಶೇಷ ಪರಿಣಿತ ಸಂಪನ್ಮೂಲ ತಜ್ಞರಿಂದ ಆಯೋಜಿಸಲಾಗಿದ್ದು, 600 ಪ್ರತಿನಿಧಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಮೂಲ ಮತ್ತು ಅನ್ವಯಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಕನ್ನಡದಲ್ಲಿ ಮಂಡಿಸಲು ಸಹ ಯುವ ವಿಜ್ಞಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಇಮೇಲ್ kstakannadacon@gmail.com ಮೂಲಕ ನಿಗದಿತ ನಮೂನೆಯಲ್ಲಿ ನವೆಂಬರ್. 4 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಎ.ಎಂ. ರಮೇಶ, ಹಿರಿಯ ವೈಜ್ಞಾನಿಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮೊಬೈಲ್ 9845258894, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಎಲ್ಲಾ ಲೇಖನಗಳು ಆಗಿದೆ ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಲಿಂಕ್ ವಿಳಾಸ https://dekalungi.blogspot.com/2017/11/blog-post.html
0 Response to "ಮೈಸೂರು : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ"
ಕಾಮೆಂಟ್ ಪೋಸ್ಟ್ ಮಾಡಿ