ಶೀರ್ಷಿಕೆ : ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಲಿಂಕ್ : ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಕೊಪ್ಪಳ ನ. 10 (ಕರ್ನಾಟಕ ವಾರ್ತೆ): ಕೊಪ್ಪಳ ರೈತರಿಗೆ ಉತ್ಪಾದಕತೆಯನ್ನು ಹೆಚ್ಚಿಸಲು ವಿಸ್ತರಣೆ ಮತ್ತು ಪ್ರಾತ್ಯಕ್ಷಿಕೆಗಳು ಘಟಕದಡಿ ಪೇರಲ, ಮಾವು, ನಿಂಬೆ, ತರಕಾರಿ ಬೆಳೆಗಳ ಬಗ್ಗೆ ಮೂರು ದಿನಗಳ ಸಾಂಸ್ಥಿಕ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಚಾಲನೆ ನೀಡಿದರು.
ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆಯ ಕೆ.ಡಬ್ಲ್ಯೂ.ಡಿ.ಪಿ-2 ಸುಜಲಾ-3 ಸಹಯೋಗದಲ್ಲಿ ಸುಜಲಾ-3 ಯೋಜನೆಯಡಿ ಆಯ್ಕೆಯಾದ ರೈತರಿಗೆ “ಉತ್ಪಾದಕತೆಯನ್ನು ಹೆಚ್ಚಿಸಲು ವಿಸ್ತರಣೆ ಮತ್ತು ಪ್ರಾತ್ಯಕ್ಷಿಕೆಗಳು” ಘಟಕದಡಿ ಪೇರಲ, ಮಾವು, ನಿಂಬೆ, ತರಕಾರಿ ಬೆಳೆಗಳ ಬಗ್ಗೆ ಮೂರು ದಿನಗಳ “ಸಾಂಸ್ಥಿಕ ತರಬೇತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಮಾತನಾಡಿ, ಯೋಜನೆಗಳನ್ನು ತಮ್ಮ ಹೊಲಗಳಲ್ಲಿ ಸರಿಯಾದ ನಿರ್ವಹಣೆ ಮಾಡಿ, ಬೇರೆ ರೈತರಿಗೆ ಮಾರ್ಗದರ್ಶಿಗಳಾಗಬೇಕು ಜೊತೆಗೆ ತೋಟಗಾರಿಕೆ ಬೆಳೆಗಳಲ್ಲಿ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಹೊಸಹೊಸ ತಂತ್ರಜ್ಞಾನಗಳನ್ನು ವೇಳೆಗೆ ಸರಿಯಾಗಿ ಉಪಯೋಗಿಸಿಕೊಂಡು ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ರೈತರಿಗೆ ಕರೆ ನೀಡಿದರು. ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಬೆಳೆಗಳ ಸಂಸ್ಕರಣೆ, ಮಾರುಕಟ್ಟೆ, ರಪ್ತು ವಿಚಾರಗಳ ಬಗ್ಗೆ ಮಾಹಿತಿ ಪಡೆದು ಹೆಚ್ಚಿನ ಆದಾಯ ಪಡೆಯಬೇಕು. ಮಾವು ಮೇಳ, ಜೇನು ಮೇಳಗಳು ಯಶಸ್ವಿಯಾಗಿ ಜಿಲ್ಲೆಯಲ್ಲಿ ನೆರವೇರಿದವು. ಮುಂದೆ ದ್ರಾಕ್ಷಿ ಮತ್ತು ದಾಳಿಂಬೆ ಹಾಗೂ ವೈನ್ ಮೇಳಗಳನ್ನು ಏರ್ಪಡಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಎಂ.ಬಿ. ಪಾಟೀಲ ಅವರು ವಹಿಸಿದ್ದರು. ರಾಯಚೂರು ಕೃವಿವಿ ಮುಖ್ಯ ವೈಜ್ಞಾನಿಕ ಅಧಿಕಾರಿ ಡಾ. ಬಿ.ಎಂ. ಚಿತ್ತಾಪುರ, ತೋಟಗಾರಿಕೆ ಸುಜಲ ಸಹಾಯಕ ನಿರ್ದೇಶಕ ಮಹಾದೇವಪ್ಪ ಕಮ್ಮಾರ, ತೋಟಗಾರಿಕೆ ಇಲಾಖೆ ವಿಷಯ ತಜ್ಞರು (ಹಾರ್ಟಿ ಕ್ಲೀನಿಕ್) ವಾಮನಮೂರ್ತಿ ಪುರೋಹಿತ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಷಯ ತಜ್ಞರು ಡಾ. ಗಿರೀಶ ಎನ್. ಮರಡ್ಡಿ, ವಿಷಯ ತಜ್ಞರು (ತೋಟಗಾರಿಕೆ), ಪ್ರದೀಪ ಬಿರಾದರ ಸೇರಿದಂತೆ ಜಿಲ್ಲೆಯ ಕೊಪ್ಪಳ ಮತ್ತು ಯಲಬುರ್ಗಾ ತಾಲೂಕುಗಳ ಸುಜಲಾ ಯೋಜನೆಯ ಫಲಾನುಭವಿ ರೈತರು, ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಭಾಗವಹಿಸಿದ್ದರು.
ಹೀಗಾಗಿ ಲೇಖನಗಳು ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_19.html
0 Response to "ಕೊಪ್ಪಳ : ರೈತರ ಸಾಂಸ್ಥಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ"
ಕಾಮೆಂಟ್ ಪೋಸ್ಟ್ ಮಾಡಿ