ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ

ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ
ಲಿಂಕ್ : ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ

ಓದಿ


ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ



ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿನ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು.  ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿದು, ದುಡಿಯುವುದು ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ  ರಾಜಶೇಖರ ಹಿಟ್ನಾಳ ಹೇಳಿದರು.

     ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಸಭೆಯಲ್ಲಿ ಭಾಗವಹಿಸಿದ್ದ ಡಿಡಿಪಿಐ ಹನುಮಂತಪ್ಪ ಅವರು ಮಾತನಾಡಿ, ಈ ಮೊದಲು ಜಿಲ್ಲೆಯಲ್ಲಿ 341 ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ವರದಿಯಾಗಿತ್ತು.  ಈ ಪೈಕಿ ಹಲವು ಕ್ರಮಗಳ ಪರಿಣಾಮವಾಗಿ 171 ಮಕ್ಕಳು ಪುನಃ ಶಿಕ್ಷಣದ ಮುಖ್ಯ ವಾಹಿನಿಗೆ ಮರಳಿದ್ದಾರೆ.  ಇನ್ನೂ 170 ಮಕ್ಕಳು ಶಾಲೆಯಿಂದ ಹೊರಗುಳಿದಿವೆ ಎಂಬ ವರದಿಯನ್ನು ಮಂಡಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಕೆ. ಅವರು ಮಾತನಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಜಿಲ್ಲೆಯಲ್ಲಿ ಸುಮಾರು  ನಾಲ್ಕು ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿವೆ.  ಆದರೆ ಶಿಕ್ಷಣ ಇಲಾಖೆಯವರು ಕೇವಲ 170 ಮಾತ್ರ ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಹೇಳುತ್ತಿದ್ದಾರೆ.  ಇದರಲ್ಲಿ ಯಾವ ಅಂಕಿ-ಅಂಶ ಸರಿ ಎಂಬ ಗೊಂದಲವಿದೆ ಎಂದರು.  ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಈ ಬಾರಿಯ ಸಮೀಕ್ಷೆಯಲ್ಲಿ ವರದಿ ಪಡೆಯಲಾಗುವುದು ಎಂದು ಡಿಡಿಪಿಐ ಉತ್ತರಿಸಿದರು.  ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಅವರು, ಜಿಲ್ಲೆಯಲ್ಲಿ ಬಹಳಷ್ಟು ಮಕ್ಕಳು ಹೋಟೆಲ್, ಗ್ಯಾರೇಜ್ ಮುಂತಾದೆಡೆ ದುಡಿಯುತ್ತಿರುವುದು, ಬಿಕ್ಷಾಟನೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ.  ಕಾರ್ಮಿಕ ಇಲಾಖೆ ಸಮರ್ಪಕ ಕಾರ್ಯ ನಿರ್ವಹಿಸುತ್ತಿಲ್ಲ.  ಬಾಲ ಕಾರ್ಮಿಕ ಮಕ್ಕಳನ್ನು ಗುರುತಿಸಿ, ಅಪರಾಧಿಗಳ ಮೇಲೆ ಮೊಕದ್ದಮೆ ದಾಖಲಿಸುತ್ತಿಲ್ಲ.  ಹೀಗಾಗಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗುತ್ತಿಲ್ಲ.  ಕಾರ್ಮಿಕ ಇಲಾಖೆ ಇನ್ನಾದರೂ ಚುರುಕಿನಿಂದ ನಿಯಮಿತವಾಗಿ ದಾಳಿ ಕೈಗೊಂಡು, ಬಾಲಕಾರ್ಮಿಕರನ್ನು ಪತ್ತೆ ಹಚ್ಚಬೇಕು.  ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವಂತಾಗಬೇಕು.  ಶಾಲೆಯಿಂದ ಹೊರಗುಳಿದ ಜಿಲ್ಲೆಯ ಎಲ್ಲ ಮಕ್ಕಳು ಜನವರಿ ಒಳಗಾಗಿ ಶಾಲೆಗಳಲ್ಲಿರುವಂತೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.  ತಪ್ಪಿದಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಅಧ್ಯಕ್ಷರು ಎಚ್ಚರಿಕೆ ನೀಡಿದರು.
ರೋಗಿಗಳ ಚಿಕಿತ್ಸೆಗೆ ತುರ್ತು ಕ್ರಮ ವಹಿಸಿ :
****************ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದರಿಂದ, ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಯಾಗದಿರುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ರೋಗಿಗಳಿಗೆ ಸೇವೆ ನೀಡಬೇಕು. ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ವೈದ್ಯರುಗಳು ನಿಗಾವಹಿಬೇಕು.  ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗಳ ರಜೆಯನ್ನು ರದ್ದುಪಡಿಸಿ, ಎಲ್ಲರೂ ಕರ್ತವ್ಯಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷರು ತಿಳಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಅವರು, ಈಗಾಗಲೆ ಸರ್ಕಾರಿ ಆಸ್ಪತ್ರೆಗಳ ಎಲ್ಲ ವೈದ್ಯರು ಮತ್ತು ಸಿಬ್ಬಂದಿಗಳ ರಜೆ ರದ್ದುಪಡಿಸಲಾಗಿದೆ.  ಅಲ್ಲದೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಔಷಧೋಪಚಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅಗತ್ಯವಿರುವಷ್ಟು ಜೀವರಕ್ಷಕ ಔಷಧಿಗಳನ್ನು ದಾಸ್ತಾನಿರಿಸಲಾಗಿದೆ.  ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ದಾಖಲಾಗುತ್ತಿರುವ ಆಸ್ಪತ್ರೆಗಳಿಗೆ ಕೂಡಲೆ ತೆರಳಿ, ಜನರಿಗೆ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದಲ್ಲಿರುವ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಿಗೂ ಸಹ ಸೂಚನೆ ನೀಡಲಾಗಿದ್ದು, ಅವರೂ ಕೂಡ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ನೀಡಲು ನಿರ್ದೇಶನ ನೀಡಲಾಗಿದೆ ಎಂದರು.
ಕಾರ್ಮಿಕರ ನೊಂದಣಿಗೆ ಕ್ರಮ ವಹಿಸಿ :
*************ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸೂಚನೆಯಂತೆ ಸರ್ಕಾರ ಕಾರ್ಮಿಕರ ನೊಂದಣಿಗೆ ವಿಶೇಷ ಅಭಿಯಾನ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ನೋಂದಾಯಿಸುವಂತೆ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿದೆ.  ಕಾರ್ಮಿಕರ ನೊಂದಣಿಗೆ ಇಲಾಖೆ ಯಾವ ಕ್ರಮ ಕೈಗೊಂಡಿದೆ.  ಯೋಜನೆಯ ಬಗ್ಗೆ ಇದುವರೆಗೂ ಹೆಚ್ಚಿನ ಪ್ರಚಾರ ನೀಡಲು ಕ್ರಮ ಕೈಗೊಳ್ಳದಿರುವ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಾರ್ಯ ವೈಖರಿಗೆ ಜಿ.ಪಂ. ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.  ಕಾರ್ಮಿಕರ ನೊಂದಣಿಗೆ ಸರ್ಕಾರ ನೂತನವಾಗಿ ಜಾರಿಗೊಳಿಸಿರುವ ಯೋಜನೆಯ ಬಗ್ಗೆ ಪ್ರತಿಯೊಂದು ಗ್ರಾಮಗಳಲ್ಲೂ ಪ್ರಚಾರ ಫಲಕವನ್ನು ಅಳವಡಿಸಿ, ಪ್ರಚಾರ ನೀಡಬೇಕು.  ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಟ 30 ಸಾವಿರ ಕರ ಪತ್ರಗಳನ್ನು ಪೂರೈಸಿ, ಪ್ರಚಾರ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ಯಾಮರಾವ್ ಅವರಿಗೆ ಸೂಚನೆ ನೀಡಿದರು.
ಅಧಿಕಾರಿಗಳ ಗೈರಿಗೆ ಅಸಮಾಧಾನ :
********** ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಬಹಳಷ್ಟು ಅಧಿಕಾರಿಗಳು ಗೈರು ಹಾಜರಾಗಿದ್ದಕ್ಕೆ ಜಿ.ಪಂ. ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಸಭೆಗೆ ಗೈರು ಹಾಜರಾದ ಎಲ್ಲ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು.  ಅಲ್ಲದೆ ಗೈರು ಹಾಜರಾದ ಅಧಿಕಾರಿಗಳು ಖುದ್ದು ಭೇಟಿ ಮಾಡಿ, ಗೈರು ಹಾಜರಿಗೆ ಲಿಖಿತ ವಿವರಣೆ ಸಲ್ಲಿಸಲು ಸೂಚನೆ ನೀಡುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಧ್ಯಕ್ಷರು ನಿರ್ದೇಶನ ನೀಡಿದರು.
ಆರ್.ಓ ಘಟಕಗಳಿಗೆ ವಿದ್ಯುತ್ ಸಂಪರ್ಕ ನೀಡಿ :
*************** ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಆರ್.ಓ. ಘಟಕಗಳನ್ನು ಸ್ಥಾಪಿಸಲಾಗಿದ್ದು, ಕೆಲವೆಡೆ ವಿದ್ಯುತ್ ಸಂಪರ್ಕ ಇಲ್ಲದೆ, ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ.  ಇನ್ನೂ ಕೆಲವೆಡೆ, ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ.  ಜೆಸ್ಕಾಂ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಂಡು, ಜಿಲ್ಲೆಯ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುವಂತೆ ಕ್ರಮ ವಹಿಸಬೇಕು ಎಂದು ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಕೊಪ್ಪಳ ಹಾಗೂ ಗಂಗಾವತಿ ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮಹೇಶ್, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ

ಎಲ್ಲಾ ಲೇಖನಗಳು ಆಗಿದೆ ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ ಲಿಂಕ್ ವಿಳಾಸ https://dekalungi.blogspot.com/2017/11/blog-post_21.html

Subscribe to receive free email updates:

0 Response to "ಶಾಲೆಯಿಂದ ಯಾವುದೇ ಮಕ್ಕಳು ಹೊರಗುಳಿಯದಂತೆ ಕ್ರಮ ವಹಿಸಿ- ರಾಜಶೇಖರ ಹಿಟ್ನಾಳ"

ಕಾಮೆಂಟ್‌‌ ಪೋಸ್ಟ್‌ ಮಾಡಿ