ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ

ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ
ಲಿಂಕ್ : ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ

ಓದಿ


ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ

ಕೊಪ್ಪಳ ನ. 03 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿಯಲ್ಲಿ ಕೊಪ್ಪಳ ಜಿಲ್ಲೆಯನ್ನು ನ. 19 ರೊಳಗಾಗಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ, ಜಿಲ್ಲಾ ಪಂಚಾಯತಿ ವತಿಯಿಂದ “ಆಪರೇಷನ್ ಅಂತ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು  ಕರೆ ನೀಡಿದರು.  

          ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ “ಮಿಷನ್-200” ಎರಡು ನೂರು ತಾಸುಗಳಲ್ಲಿ 21,129 ಶೌಚಾಲಯಗಳನ್ನು ಜಿಲ್ಲೆಯಲ್ಲಿ ನಿರ್ಮಿಸಿ, ಅಭಿಯಾನವನ್ನು ಯಶಸ್ವಿಗೊಳಿದ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಏರ್ಪಡಿಸಲಾದ ಸತ್ಕಾರ ಸಮಾರಂಭ ಹಾಗೂ “ಆಪರೇಷನ್ ಅಂತ” ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

          ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳ ಸಹಾಯಧನ ಪಾವತಿಗೆ ಸರ್ಕಾರ 10 ಕೋಟಿ ರೂ. ಅನುದಾನವನ್ನು ಬಿಡುಗಡೆ ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ.  ಹೀಗಾಗಿ ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಸಹಾಯಧನ ಪಾವತಿ ಕಾರ್ಯ ಶೀಘ್ರವೇ ಆಗಲಿದೆ.  ಶೌಚಾಲಯ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಲಾಗಿದ್ದ, “ಮಿಷನ್-200” ಕಾರ್ಯಕ್ರಮವನ್ನು ಎಲ್ಲರ ಸಂಘಟಿತ ಪ್ರಯತ್ನ ದಿಂದ 21,129 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದ್ದು, ರಾಜ್ಯ ಹಾಗೂ ರಾಷ್ಟ ಮಟ್ಟದಲ್ಲಿ ಗಮನ ಸೆಳೆಯುವುದಲ್ಲದೇ ಇದು ಪ್ರಪ್ರಥಮ ಹಾಗೂ ಹೊಸ ಕಾರ್ಯಕ್ರಮವಾಗಿ ಅಭಿನಂದನೆಗೆ ಪಾತ್ರವಾಗಿದೆ.   ಯಾವುದೇ ಒಂದು ಯೋಜನೆ ಯಶಸ್ವಿಗೆ ನಿರಂತರ ಪ್ರಯತ್ನವೇ ಕಾರಣವಾಗಿದೆ.  ಕೊಪ್ಪಳ ಜಿಲ್ಲೆಯಲ್ಲಿ ಇನ್ನೂ 33 ಸಾವಿರ ಶೌಚಾಲಯಗಳ ನಿರ್ಮಾಣ ಆಗಬೇಕಾಗಿದ್ದು,  ಈ ದಿಸೆಯಲ್ಲಿಯೇ “ಆಪರೇಷನ್ ಅಂತ” ಎನ್ನುವ ವಿನೂತನ ಅಭಿಯಾನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.  ನವೆಂಬರ್ 19 ರೊಳಗಾಗಿ ಬಾಕಿ ಇರುವ ಎಲ್ಲ 33 ಸಾವಿರ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಜಿಲ್ಲೆಯನ್ನು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ ಹೊಂದಲಾಗಿದೆ.  ಈ ಕಾರ್ಯಕ್ರಮಕ್ಕೆ ಸಹಕರಿಸಿ, ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪಿಡಿಓಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆ ಮತ್ತು ಸ್ವಚ್ಛತಾ ಪ್ರೇರಕರು ಸಂಘಟಿತರಾಗಿ ಯೋಜನೆಯ ಸಂಪೂರ್ಣ ಯಶಸ್ವಿಗೆ ಪಣತೊಡಿ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು. 
ಕೊಪ್ಪಳ ಜಿಲ್ಲಾ ಪಂಚಾತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಮಾತನಾಡಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯಗಳ ನಿರ್ಮಾಣದಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.  ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯ ಯಾವ ಜಿಲ್ಲೆಯೂ “ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ”ಯಾಗಿಲ್ಲ.  ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಿ ಪ್ರಥಮಸ್ಥಾನದಲ್ಲಿ ಜಿಲ್ಲೆಯನ್ನು ಕೊಂಡೊಯ್ಯುವುದೇ ಜಿ.ಪಂ ಗುರಿಯಾಗಿದೆ.  ಈಗಾಗಲೆ ಜಿಲ್ಲೆಯಲ್ಲಿ ಈವರೆಗೆ 1. 86 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ.  33 ಸಾವಿರ ಶೌಚಾಲಯ ನಿರ್ಮಾಣ ಕಾರ್ಯ ಬಾಕಿ ಇದೆ.  ಶೇ.100 ರಷ್ಟು ವೈಯಕ್ತಿಕ ಶೌಚಾಲಯ ನಿರ್ಮಾಣಗೊಳಿಸಿ, ಬಯಲು ಬಹಿರ್ದೆಸೆ ಮುಕ್ತಗೊಳಿಸುವ ಕಾರ್ಯ ಜಿಲ್ಲೆಯಲ್ಲಿ ಸದ್ಯ ಅಂತಿಮ ಹಂತ ತಲುಪಿದೆ.     “ಸ್ವಚ್ಛತಾ ಆಂದೋಲನಾ” “ಮಿಷನ್-200” ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳು ಯಶಸ್ವಿಯಾಗಿದ್ದು, ಕೊನೆ ಹಂತವಾದ “ಆಪರೇಷನ್ ಅಂತ” ಯೋಜನೆಯನ್ನು ಯಶಸ್ವಿಗೊಳಿಸಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ.  ಕೇವಲ ಶೌಚಾಲಯ ನಿರ್ಮಾಣ ಆದರೆ ಸಾಲದು ಇದರ ಜೊತೆಯಲ್ಲಿಯೇ ಶೌಚಾಲಯಗಳ ಬಳಕೆಯ ಕುರಿತು ಕೂಡ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
       ಸಮಾರಂಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಲಕ್ಷ್ಮಮ್ಮ ಎಸ್. ನೀರಲೂಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣ ಅಗಸಿ ಮುಂದಿನ, ಜಿ.ಪಂ. ಸದಸ್ಯ ಅಮರೇಶ ಗೋನಾಳ, ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ದಾಸರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ ಲಿಂಕ್ ವಿಳಾಸ https://dekalungi.blogspot.com/2017/11/blog-post_22.html

Subscribe to receive free email updates:

0 Response to "ಕೊಪ್ಪಳ ಜಿಲ್ಲೆ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತಗೊಳಿಸಲು “ಅಪರೇಷನ್ ಅಂತ” : ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಿ -ರಾಜಶೇಖರ ಹಿಟ್ನಾಳ"

ಕಾಮೆಂಟ್‌‌ ಪೋಸ್ಟ್‌ ಮಾಡಿ