ಶೀರ್ಷಿಕೆ : ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ ನ. 23 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆಯ-ನಲ್ಮ್ ಅಭಿಯಾನದಡಿ ಸ್ವಯಂ ಉದ್ಯೋಗ ಹಾಗೂ ಗುಂಪು (ಕ್ರೆಡಿಟ್ ಲಿಂಕೇಜ್) ಉದ್ಯೋಗದ ಸಾಲಕ್ಕಾಗಿ ಮತ್ತು ವಿವಿಧ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ದೀನದಯಾಳ್ ಅಂತ್ಯೋದಯ ಯೋಜನೆಯ-ನಲ್ಮ್ ಅಭಿಯಾನದಡಿ ಸ್ವಯಂ ಉದ್ಯೋಗ ಹಾಗೂ ಗುಂಪು (ಕ್ರೆಡಿಟ್ ಲಿಂಕೇಜ್) ಉದ್ಯೋಗದ ಸಾಲಕ್ಕಾಗಿ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಇರುವ ಹಾಗೂ ನಗರಸಭೆ ಕಾರ್ಯಾಲಯದಿಂದ ರಚಿಸಿರುವ 04 ಗುಂಪುಗಳಿಗೆ ಮಾತ್ರ ಗುಂಪು ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ (ಶೇ.7 ಕ್ಕೆ ಮೇಲ್ಪಟ್ಟು ಬಡ್ಡಿದರಕ್ಕೆ ಸಂಬಂಧಿಸಿದಂತೆ ಬಡ್ಡಿ ಸಹಾಯಧನವು ಲಭ್ಯವಿರುತ್ತದೆ. ಹಾಗೂ ಸಾಲವನ್ನು ಸಕಾಲಕ್ಕೆ ಮರು ಪಾವತಿಸುವ ಎಲ್ಲಾ ಸ್ವಸಹಾಯ ಗುಂಪುಗಳಿಗೆ ಹೆಚ್ಚುವರಿಯಾಗಿ ಶೇ.3 ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.) ಅಲ್ಲದೆ ವಿವಿಧ ತರಬೇತಿಗಳಿಗೂ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಕೊಪ್ಪಳ ನಗರಸಭೆ ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ, ಜಾತಿ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಭಾವಚಿತ್ರವಿರುವ ಮತದಾರರ ಚೀಟಿ ಅಥವಾ ಆಧಾರ ಕಾರ್ಡ್, 03 ಭಾವಚಿತ್ರ, ಬಿ.ಪಿ.ಎಲ್ ರೇಷನ್ ಕಾರ್ಡ್ ಇತ್ಯಾದಿ ದಾಖಲೆ ಲಗತ್ತಿಸಿ ಡಿಸೆಂಬರ್. 04 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_31.html
0 Response to "ಕೊಪ್ಪಳ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ