ಶೀರ್ಷಿಕೆ : ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ
ಲಿಂಕ್ : ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ
ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ
ಕೊಪ್ಪಳ ನ. 27 (ಕರ್ನಾಟಕ ವಾರ್ತೆ): ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯು, ಚಿಕುನ್‍ಗುನ್ಯಾ ಮುಂತಾದ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಒಂದು ಫಾಗಿಂಗ್ ಯಂತ್ರವನ್ನು ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸದ್ಯ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯು, ಚಿಕುನ್‍ಗುನ್ಯಾ ಮುಂತಾದ ರೋಗಗಳು ಉಲ್ಬಣಗೊಳ್ಳುತ್ತಿವೆ. ಸೊಳ್ಳೆಗಳನ್ನು ತಡೆಗಟ್ಟಲು ಗ್ರಾಮೀಣ ಪ್ರದೇಶಗಳಲ್ಲಿ ಸಾಧ್ಯವಾಗುತ್ತಿಲ್ಲ. ಲಭ್ಯವಿರುವ ಫಾಗಿಂಗ್ ಯಂತ್ರಗಳು ಸಾಕಾಗುತ್ತಿಲ್ಲ. ಸದ್ಯ ರೋಗ ಉಲ್ಬಣಗೊಂಡ ಪ್ರದೇಶಗಳಿಗೆ ಮಾತ್ರ ಫಾಗಿಂಗ್ ಯಂತ್ರ ಬಳಕೆ ಮಾಡಲಾಗುತ್ತಿದೆಯಾದರೂ, ನಿರೀಕ್ಷಿತ ಯಶಸ್ಸು ದೊರೆಯುತ್ತಿಲ್ಲ. ಒಂದು ಫಾಗಿಂಗ್ ಯಂತ್ರಕ್ಕೆ ಅಂದಾಜು 50 ರಿಂದ 60 ಸಾವಿರ ರೂ. ವೆಚ್ಚವಾಗಬಹುದಾಗಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಒಂದು ಫಾಗಿಂಗ್ ಯಂತ್ರವನ್ನು ಆಯಾ ಗ್ರಾ.ಪಂ. ನಲ್ಲಿ ಲಭ್ಯವಿರುವ ಅನುದಾನದಲ್ಲಿ ಖರೀದಿಸಬೇಕು. ಫಾಗಿಂಗ್ ಯಂತ್ರ ನಿರ್ವಹಣೆಗೆ ಪಂಚಾಯತಿಯ ಸಿಬ್ಬಂದಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಇದಕ್ಕೆ ಸೂಕ್ತ ಸಹಕಾರ ಒದಗಿಸಬೇಕು ಎಂದು ಜಿ.ಪಂ. ಅಧ್ಯಕ್ಷರು ಸೂಚನೆ ನೀಡಿದರು. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಕೇವಲ ಮಲೇರಿಯಾ ರೋಗ ಪತ್ತೆ ಮಾಡುವುದಕ್ಕೆ ಮಾತ್ರ ರಕ್ತ ಪರೀಕ್ಷೆ ಮಾಡುತ್ತಿದ್ದಾರೆ. ಉಳಿದಂತೆ ಟೈಫಾಯ್ಡ್, ಡೆಂಗ್ಯೂ ಸೇರಿದಂತೆ ವಿವಿಧ ರೋಗಗಳ ಪತ್ತೆಗೆ ರಕ್ತ ಪರೀಕ್ಷೆಗೆ ವೈದ್ಯರು ಹೊರಗಡೆ ಚೀಟಿ ಬರೆದು ಕಳುಹಿಸುತ್ತಿದ್ದು, ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಜಿ.ಪಂ. ಸದಸ್ಯರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಅವರು ಈ ಕುರಿತು ಪರಿಶೀಲಿಸಿ, ವರದಿ ಸಲ್ಲಿಸುವುದಾಗಿ ಹೇಳಿದರು.
ಶುದ್ಧ ಕುಡಿಯುವ ನೀರಿನ ಘಟಕ :
************ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಲುವಾಗಿ ಆರ್.ಓ ಘಟಕಗಳನ್ನು ಸ್ಥಾಪಿಸಲು ಪಾನ್ ಏಷಿಯಾ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಆದರೆ ಕಂಪನಿಯು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಘಟಕಗಳನ್ನು ಸ್ಥಾಪಿಸಿಲ್ಲ. ಸ್ಥಾಪನೆಗೊಂಡಿರುವ ಕೆಲವೆಡೆ ಶುದ್ಧ ಕುಡಿಯುವ ನೀರು ದೊರೆಯುತ್ತಿಲ್ಲ. ಘಟಕಗಳು ಕಾರ್ಯನಿರ್ವಹಿಸದ ಕಾರಣ ಹಂದಿ, ನಾಯಿಗಳ ವಾಸಸ್ಥಾನವಾಗಿ ಮಾರ್ಪಟ್ಟಿವೆ. ಜನರಿಗೆ ಕುಡಿಯುವ ನೀರು ದೊರಕುತ್ತಿಲ್ಲ. ಸರ್ಕಾರದ ಉದ್ದೇಶ ಈಡೇರುತ್ತಿಲ್ಲ ಎಂದು ಕೆಲ ಜಿ.ಪಂ. ಸದಸ್ಯರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಅಧ್ಯಕ್ಷರು. ಪಾನ್ ಏಷಿಯ ಕಂಪನಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಅಳವಡಿಸಿರುವ ಹಾಗೂ ಅಳವಡಿಸಬೇಕಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸದ್ಯದ ಸ್ಥಿತಿ-ಗತಿ ಕುರಿತು ಮೂರು ದಿನಗಳ ಒಳಗಾಗಿ ಸಮಗ್ರ ವರದಿಯನ್ನು ಪಡೆಯಲಾಗುವುದು. ವರದಿಯ ಆಧಾರದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕುಡಿಯುವ ನೀರು ಪೂರೈಕೆಯ ಬಿಲ್ ಪಾವತಿಸಿ :
*************** ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿದ್ದ ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಜನರಿಗೆ ನೀರು ಪೂರೈಸಲಾಗಿದೆ. ಆದರೆ ಹನುಮನಾಳ ಮುಂತಾದ ಗ್ರಾಮಗಳಲ್ಲಿ ಇದುವರೆಗೂ ಇದಕ್ಕೆ ಸಂಬಂಧಿಸಿದ ಬಿಲ್ ಪೂರ್ಣ ಪಾವತಿಯಾಗಿಲ್ಲ. ಈಗಲೂ ಕೆಲವೆಡೆ ಕುಡಿಯುವ ನೀರಿನ ತೊಂದರೆ ಇದೆ ಎಂದು ಜಿ.ಪಂ. ಸದಸ್ಯರು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜ ಅವರು ಬೇಸಿಗೆಯ ಮೂರು ತಿಂಗಳಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರ್‍ಗಳ ಮೂಲಕ ನೀರು ಪೂರೈಸಿದ ಬಿಲ್‍ಗಳನ್ನು ಈಗಾಗಲೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಿಲ್ ಪಾವತಿಸಲಾಗಿದೆ. ಇದರ ನಂತರವೂ ಕೆಲವೆಡೆ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯದೆ ನೀರು ಪೂರೈಸಿದ್ದಲ್ಲಿ, ಬಿಲ್ ಪಾವತಿ ಮಾಡಲು ಬರುವುದಿಲ್ಲ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ನೊಣಗಳ ಹಾವಳಿ ತಪ್ಪಿಸಿ :
************ ಜಿಲ್ಲೆಯಲ್ಲಿರುವ ಕೋಳಿ ಫಾರಂ ಗಳು ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದ ಕಾರಣ ಹಾಗೂ ಸ್ವಚ್ಛತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವ ಪರಿಣಾಮವಾಗಿ ಕೋಳಿ ಫಾರಂ ಗಳಿರುವ ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ನೊಣಗಳ ಹಾವಳಿಯಾಗುತ್ತಿದೆ. ಆನರು ಮನೆಗಳ ಒಳಗಡೆಯೂ ಊಟ ಮಾಡದ, ಕುಳಿತುಕೊಳ್ಳಲಾರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಿ.ಪಂ. ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಅವರು, ಆರೋಗ್ಯ ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳೊಂದಿಗೆ ಕೋಳಿ ಫಾರಂಗಳಿಗೆ ಭೇಟಿ ನೀಡಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಅಲ್ಲದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸವರಿಹಳ್ಳಿ ಸೇರಿದಂತೆ ಜಿಲ್ಲಾ ಪಂಚಾಯತಿ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ
ಎಲ್ಲಾ ಲೇಖನಗಳು ಆಗಿದೆ ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ ಲಿಂಕ್ ವಿಳಾಸ https://dekalungi.blogspot.com/2017/11/blog-post_365.html
0 Response to "ಗ್ರಾಮ ಪಂಚಾಯತಿಗೊಂದು ಫಾಗಿಂಗ್ ಯಂತ್ರ ಖರೀದಿಸಿ- ರಾಜಶೇಖರ ಹಿಟ್ನಾಳ"
ಕಾಮೆಂಟ್ ಪೋಸ್ಟ್ ಮಾಡಿ